LATEST ARTICLES

ದಾವಣಗೆರೆಯಿಂದ ಸಿದ್ದರಾಮೋತ್ಸವ ನೇರಪ್ರಸಾರ

ದಾವಣಗೆರೆಯಿಂದ ಸಿದ್ದರಾಮೋತ್ಸವ ಕಾರ್ಯಕ್ರಮದ ನೇರ ಪ್ರಸಾರ

ಪ್ರಬಲ ಜಾತಿಗಳ ಮೀಸಲಾತಿ ಬೇಡಿಕೆಯ ವಿರುದ್ದ ರಾಜ್ಯಾದ್ಯಂತ ಆಂದೋಲನ: ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಕಾರ್ಯಕಾರಿಣಿ ಸಭೆ ನಿರ್ಧಾರ

ಬೆಂಗಳೂರು ನವೆಂಬರ್‌ 26: ಪ್ರವರ್ಗ 2ಎ ಗೆ ಪ್ರಬಲ ಜಾತಿಗಳನ್ನು ಸೇರಿಸಬೇಕು ಎನ್ನುವ ಬೇಡಿಕೆಯ ವಿರುದ್ದ ರಾಜ್ಯಾದ್ಯಂತ ಆಂದೋಲನ ನಡೆಸುವ ಒಕ್ಕೊರಲಿನ ತೀರ್ಮಾನವನ್ನು ಇಂದು ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯ ಕಾರ್ಯಕಾರಣಿ ಸಭೆಯಲ್ಲಿ ತಗೆದುಕೊಳ್ಳಲಾಗಿದೆ ಎಂದು ಜಾಗೃತಿ ವೇದಿಕೆಯ ಅಧ್ಯಕ್ಷರಾದ ಎಂ.ಸಿ ವೇಣುಗೋಪಾಲ್‌ ತಿಳಿಸಿದರು. ಇಂದು ಶಾಸಕರ ಭವನದ ಸಭಾಂಗಣದಲ್ಲಿ ನಡೆದಂತಹ ಅತಿ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯ ಕಾರ್ಯಕಾರಣಿ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದರು. ಪ್ರಬಲ ಜಾತಿಗಳು 2ಎ ಪ್ರವರ್ಗದಲ್ಲಿರುವ ಜಾತಿಗಳ ಮೀಸಲಾತಿಯನ್ನು ಕಬಳಿಸುವಂತಹ ಕೃತ್ಯಕ್ಕೆ ಮುಂದಾಗಿವೆ. ರಾಜಕೀಯವಾಗಿ, ಸಾಮಾಜಿಕವಾಗಿ ಒತ್ತಡ ಹೇರಲಾಗುತ್ತಿದೆ. ಇದರ ವಿರುದ್ದ ಕಳೆದ ಮಾರ್ಚ್‌ ತಿಂಗಳಿನಿಂದ ಬೆಂಗಳೂರು ನಗರ, ಮುಖ್ಯಮಂತ್ರಿಗಳು ಹಾಗೂ ಹಿಂದುಳಿದ ಆಯೋಗದ ಅಧ್ಯಕ್ಷರಿಗೆ ಹಲವಾರು ಬಾರಿ ಮನವಿಯನ್ನು ಸಲ್ಲಸಿದ್ದೇವೆ. ಆದರೆ, ಇದುವರೆಗೂ ನಮಗೆ ಸಕಾರಾತ್ಮಕವಾದಂತಹ ಪ್ರತಿಕ್ರಿಯೆ ಸಿಕ್ಕಿಲ್ಲ ಎಂದರು. ನ್ಯಾಯಮೂರ್ತಿ ಆಡಿ ನೇತೃತ್ವದ ಸಮಿತಿಯನ್ನು ರದ್ದುಗೊಳಿಸಿ: ಪ್ರಬಲ ಜಾತಿಗಳನ್ನು 2ಎ ಪ್ರವರ್ಗಕ್ಕೆ ಸೇರಿಸುವ ನಿಟ್ಟಿನಲ್ಲಿ ನ್ಯಾಯಮೂರ್ತಿ ಆಡಿ ಅವರ ನೇತೃತ್ವದಲ್ಲಿ ರಚಿಸಲಾಗಿರುವ ಸಮಿತಿಯನ್ನು ರದ್ದುಗೊಳಿಸಬೇಕು. ಈ ಸಮಿತಿಯಲ್ಲಿ ಪ್ರಬಲ ಜಾತಿಗೆ ಸೇರಿದವರನ್ನೇ ಸದಸ್ಯರನ್ನಾಗಿಸಿದ್ದು, ಇವರಿಂದ ನ್ಯಾಯಯುತವಾದಂತಹ ವಿಚಾರಣೆ ಸಾಧ್ಯವಿಲ್ಲ ಎಂದು ಹೇಳಿದರು. ಡಿಸೆಂಬರ್‌ ತಿಂಗಳಲ್ಲಿ ವಿಭಾಗಾವಾರು ಸಮಾವೇಶ: ರಾಜ್ಯಾದ್ಯಂತ ಪ್ರಬಲ ಜಾತಿಗಳ ಮೀಸಲಾತಿ ಹೋರಾಟದ ವಿರುದ್ದ ಜನಜಾಗೃತಿಯನ್ನು ಮೂಡಿಸಲು ಡಿಸೆಂಬರ್‌ ತಿಂಗಳಲ್ಲಿ ವಿಭಾಗಾವಾರು ಸಮಾವೇಶವನ್ನು ಆಯೋಜಿಸಲಾಗುವುದು. ಮೊದಲ ಸಮಾವೇಶ ಗುಲ್ಬರ್ಗಾದಿಂದ ಪ್ರಾರಂಭಮಾಡಲು ಕಾರ್ಯಕಾರಣೀಯಲ್ಲಿ ನಿರ್ಧರಿಸಲಾಗಿದೆ ಎಂದು ಅಧ್ಯಕ್ಷರಾದ ಎಂ.ಸಿ ವೇಣುಗೋಪಾಲ್‌ ತಿಳಿಸಿದರು. ಅತಿಹಿಂದುಳಿದ ವರ್ಗಕ್ಕೆ ಸೇರಿದ ಸ್ವಾಮೀಜಿಗಳ ನೇತೃತ್ವದಲ್ಲಿ ಹೋರಾಟ: ಅತಿ ಹಿಂದುಳಿದ ವರ್ಗಕ್ಕೆ ಸೇರಿದ ಮಠಾಧೀಶರುಗಳ ನೇತೃತ್ವದಲ್ಲಿ ಜನಜಾಗೃತಿಯನ್ನು ಮೂಡಿಸಬೇಕಾಗಿದೆ. ಈ ನಿಟ್ಟಿನಲ್ಲಿ ಮಠಗಳಲ್ಲಿ ಸಭೆಯನ್ನು ಆಯೋಜಿಸಲಾಗುವುದು ಹಾಗೆಯೇ ಮಠಗಳನ್ನು ಶಕ್ತಿಯುತಗೊಳಿಸಲು ಕ್ರಮಗಳನ್ನು ಹಮ್ಮಿಕೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಕಾಂತರಾಜ್‌ ವರದಿಯನ್ನು ಅನುಷ್ಠಾನಗೊಳಿಸಲು ಸರಕಾರದ ಮೇಲೆ ಒತ್ತಡ: ನೂರಾರು ಕೋಟಿ ರೂಪಾಯಿಗಳನ್ನು ವ್ಯಯಿಸಿ ನಡೆಸಿರುವ ಸಮೀಕ್ಷೆಯ ವರದಿಯನ್ನು ಅನುಷ್ಠಾನಗೊಳಿಸಲು ಸರಕಾರದ ಮೇಲೆ ಒತ್ತಡವನ್ನು ಹೇರಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಈಗಾಗಲೇ ಈ ಬಗ್ಗೆ ಹೈಕೋರ್ಟ್‌ನಲ್ಲಿ ದಾವೆಯನ್ನೂ ಹೂಡಿದ್ದು, ಈ ಬಗ್ಗೆ ನ್ಯಾಯಾಲಯದಿಂದ ನಿರ್ದೇಶನ ದೊರೆಯುವ ವಿಶ್ವಾಸವನ್ನು ಸಭೆಯಲ್ಲಿ ವ್ಯಕ್ತಪಡಿಸಲಾಯಿತು. ವೇದಿಕೆಯ ಗೌರವ ಸಲಹೆಗಾರರಾದ ಡಾ. ಸಿ.ಎಸ್‌ ದ್ವಾರಾಕಾನಾಥ್‌ ಮಾತನಾಡಿ, ಸುಪ್ರೀಂ ಕೋರ್ಟ್ ನಿರ್ದೇಶನದ ಮೇಲೆ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಈಗಾಗಲೇ ಅಸ್ತಿತ್ವದಲ್ಲಿ ಇರುವಾಗ ಈಗಿನ ಮೀಸಲಾತಿ ಗೊಂದಲದ ಬಗ್ಗೆ ಮತ್ತೊಂದು “ಉನ್ನತ ಮಟ್ಟದ ಸಮಿತಿ”ಯನ್ನು ಸರ್ಕಾರ ಮಾಡಿರುವುದು ಅನೈತಿಕ ಮತ್ತು ಅನಾವಶ್ಯಕ. ಈಗಿನ ಮೀಸಲಾತಿ ಗೊಂದಲವನ್ನು ಸದರಿ ಆಯೋಗವೇ ಪರಿಹರಿಸಬೇಕೆಂಬುದು ನಮ್ಮ ಆಶಯ. ಈ ಎಲ್ಲಾ ಗೊಂದಲಗಳನ್ನು ಪರಿಹರಿಸುವ ಏಕೈಕ ಮಾರ್ಗ ಸರ್ಕಾರದ ಮುಂದಿರುವುದೆಂದರೆ ಹಿಂದುಳಿದ ವರ್ಗಗಳ ಆಯೋಗ ಮಾಡಿರುವ “ಜಾತೀವಾರು ಸಮೀಕ್ಷೆ” (socio economical & educational survey)ಯನ್ನು ಸ್ವೀಕರಿಸಿ ಸಾರ್ವಜನಿಕ ವಾಗಿ ಚರ್ಚೆಗೆ ಬಿಟ್ಟು ಆಯೋಗ ನೀಡಿರುವ ಅಂಕಿಅಂಶಗಳ ಆಧಾರದ ಮೇಲೆ ಈಗಿರುವ ಪಟ್ಟಿಗಳನ್ನು ಪುನರ್ ಪರಿಶೀಲಿಸಿ ಪರಿಷ್ಕೃತ ಪಟ್ಟಿಗಳನ್ನು ರೂಪಿಸಬೇಕು ಎಂದು ಹೇಳಿದರು. ಕಾರ್ಯಕಾರಿಣಿ ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿ ಎಂ ನಾಗರಾಜ್‌, ಖಜಾಂಚಿ ಮಂಜುನಾಥ್ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

Video-ಭಾರತವನ್ನು ಒಗ್ಗೂಡಿಸುವಲ್ಲಿ ಸಂವಿಧಾನ ಮಹತ್ವದ ಪಾತ್ರ ವಹಿಸಿದೆ : ಸಿಎಂ

ದಾವಣಗೆರೆ, ನವೆಂಬರ್ 26:ಭಾರತವನ್ನು ಒಗ್ಗೂಡಿಸುವಲ್ಲಿ ಸಂವಿಧಾನ ಮಹತ್ವದ ಪಾತ್ರ ವಹಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಸಂವಿಧಾನ ದಿನದ ಅಂಗವಾಗಿ ದಾವಣಗೆರೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾರತ ಸಂವಿಧಾನದ ಪ್ರಸ್ತಾವನೆಯನ್ನು ಓದಿದ ನಂತರ ಮಾತನಾಡಿದರು. ಈ ದಿನ ಸಂವಿಧಾನ ವನ್ನು ಅಂಗೀಕರಿಸಿದ ಮಹತ್ವದ ದಿನ. ಭಾರತದ ಸಂವಿಧಾನ ಇಶ್ವದ ಅತ್ಯಂತ ಶ್ರೇಷ್ಠ ಸಂವಿಧಾನ. ಅಭಿವ್ಯಕ್ತಿ ಸ್ವಾತಂತ್ರ್ಯ, ವಾಕ್ ಸ್ವಾತಂತ್ರ್ಯ, ಸಾಮಾಜಿ, ಆರ್ಥಿಕ, ಧಾರ್ಮಿಕ ಚಟುವಟಿಕೆಗಳಿಗೆ ಸ್ವಾತಂತ್ರ್ಯ ಜೊತೆಗೆ ಸಮಾನತೆ, ಭ್ರಾತೃತ್ವ, ಪರಸ್ಪರ ಪ್ರೀತಿ ವಿಶ್ವಾಸ, ಎಲ್ಲ ಧರ್ಮೀಯರ ಬಗ್ಗೆ ಗೌರವ ಮುಂತಾದ ಅಂಶಗಳನ್ನು ಈ ಸಂವಿಧಾನ ಒಳಗೊಂಡಿದೆ. ದೇಶದ ಉತ್ತಮ ಭವಿಷ್ಯಕ್ಕಾಗಿ ಈ ಸಂವಿಧಾನ. ರಚನೆ ಆಗಿದೆ ಎಂದು ತಿಳಿಸಿದರು. ಮಾನವೀಯ ಗುಣಗಳಿರುವ ಭಾರತ ಸಂವಿಧಾನ : ದೇಶವನ್ನು ಮುನ್ನೆಡೆಸುವ ಬಗೆ, ಕಾನೂನು, ಹಕ್ಕು, ಕರ್ತವ್ಯ ಗಳ ಬಗ್ಗೆ ತೀರ್ಮಾನಿಸಲು ಸಂವಿಧಾನದ ಸಮಿತಿ ರಚನೆಯಾಯಿತು.. ಡಾ. ಅಂಬೇಡ್ಕರ್ ರವರ ನೇತೃತ್ವ ಸಮಿತಿ ನೀಡಿರುವ ಶ್ರೇಷ್ಠ ಸಂವಿಧಾನ. ಒಂದು ಪಕ್ಷ ಸಂವಿಧಾನವಿಲ್ಲದಿದ್ದರೆ ಭಾರತ ದೇಶದ ಐಕ್ಯತೆ, ಅಖಂಡತೆ, ನಾಗರಿಕ ಹಕ್ಕುಗಳು ಯಾವುದು ಕೂಡ ನೋಡಲು ಸಾಧ್ಯವಾಗುತ್ತಿರಲಿಲ್ಲ. ಈ ದೇಶವನ್ನು ಒಗ್ಗೂಡಿಸುವಲ್ಲಿ ಸಂವಿಧಾನ ಮಹತ್ವದ ಪಾತ್ರ ವಹಿಸಿದೆ. ನಮ್ಮನ್ನಾಳಿದ ಬ್ರಿಟೀಷರಿಗೂ ಕೂಡ ಲಿಖಿತ ಸಂವಿಧಾನವಿಲ್ಲ. ಇಂಗ್ಲೆಡಿನಲ್ಲಿರುವ ಇವತ್ತಿನ ವ್ಯಕ್ತಿ ಸ್ವಾತಂತ್ರ್ಯ, ಕಾನೂನುಗಳನ್ನು ನೋಡಿದಾಗ ನಮ್ಮ ದೇಶದ ಕಾನೂನುಗಳು ಅತ್ಯಂತ ಶ್ರೇಷ್ಠವಾಗಿವೆ. ಬದುಕು, ತತ್ವಗಳು ಶಿಕ್ಷಣ, ಆಡಳಿತ, ತಂತ್ರಜ್ಞಾನದಲ್ಲಿಯೂ ಸಾಕಷ್ಟು ಬದಲಾವಣೆಯಾಗುತ್ತದೆ. ಬದಲಾವಣೆಗನುಗುಣವಾಗಿ ಅನುಗುಣವಾಗಿ ಸ್ಪಂದಿಸಲು ತಿದ್ದುಪಡಿಗೆ ಅವಕಾಶ ಮಾಡಿಕೊಟ್ಟು ದೇಶದ ಸಂವಿಧಾನದಲ್ಲಿ ಜೀವಂತಿಕೆಯಿಂದಿದೆ ಎಂದು ತಿಳಿಸಿದರು. ನಾಗರಿಕರು ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನು ಪಾಲಿಸಬೇಕು: ನಾಗರಿಕರು ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನು ನೆನೆಪಿಸಿಕೊಳ್ಳುವುದು ಅವಶ್ಯ. ಯಾವ ದೇಶದಲ್ಲಿ ನಾಗರಿಕ ಕರ್ತವ್ಯಗಳಿರುತ್ತವೆಯೋ ಆ ದೇಶ ಬಲಿಷ್ಠವಾಗಿರುತ್ತದೆ. ನಾಗರೀಕ ಕರ್ತವ್ಯಗಳನ್ನು ಮರೆತಾಗ ಅರಾಜಕತೆ ಬರುತ್ತದೆ. ಭಾರತದಲ್ಲಿ ಪ್ರಜಾಪ್ರಭುತ್ವ ಉಳಿಯಲು ಪ್ರಜೆಗಳು ಜಾಗೃತರಾಗಿರುವ ಜೊತೆಗೆ ಕರ್ತವ್ಯ ಪ್ರಜ್ಞೆಯಿಂದಲೂ ಕೆಲಸ ಮಾಡಬೇಕು ಎಂದರು. ಅಂಬೇಡ್ಕರ್ ಅವರು ಆಧುನಿಕ ಭಾರತದ ಪಿತಾಮಹ : ಅಂಬೇಡ್ಕರ್ ಅವರು ಬಹಳ ದೊಡ್ಡ ಮಾನವತಾವಾದಿ. ಬುದ್ಧ, ಬಸವ ತತ್ವಜ್ಞಾನಿಗಳಿಂದ ಪ್ರಭಾವಿತರಾಗಿ ಅವರ ವಿಚಾರಧಾರೆಗಳುನ್ನು ನಮ್ಮ ಸಂವಿಧಾನದಲ್ಲಿ ಕಾಣಬಹುದಾಗಿದೆ. ಅಂಬೇಡ್ಕರ್ ಅವರು ಆಧುನಿಕ ಭಾರತದ ಪಿತಾಮಹ. 75 ವರ್ಷಗಳಲ್ಲಿ ಜಾಗತೀಕರಣ, ಉದಾರೀಕರಣ, ಖಾಸಗೀಕರಣ ಬಂದರೂ ಕೂಡ ನಮ್ಮ ದೇಶದಲ್ಲಿ ಅಂತ:ಕರಣ ಉಳಿದಿದೆ. ಸಂವಿಧಾನದ ಬಲದಿಂದ ಈ ಅಂತ:ಕರಣ ಉಳಿದಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿ, ಶೋಷಣೆಗೆ ಒಳಗಾದ ವ್ಯಕ್ತಿಯೂ ಕೂಡ ಧ್ವನಿ ಎತ್ತಿ ತನ್ನ ಹಕ್ಕುಗಳನ್ನು ಪ್ರತಿಪಾದಿಸುವ ಅವಕಾಶ ಮಾಡಿಕೊಟ್ಟ ಡಾ.ಅಂಬೇಡ್ಕರ್ ರವರು ಆಧುನಿಕ ಭಾರತದಲ್ಲಿ ಮಾನವೀಯ ಗುಣಗಳನ್ನು ಸಂವಿಧಾನದಲ್ಲಿ ಎತ್ತಿಹಿಡಿದಿದ್ದಾರೆ ಎಂದು ನುಡಿದರು. ಅಂತ:ಕರಣ ಮತ್ತು ತ್ಯಾಗದಿಂದ ಸಂವಿಧಾನ ಯಶಸ್ವಿ: ಅಂತ:ಕರಣ ಮತ್ತು ತ್ಯಾಗ ಗುಣಗಳಿಂದ ವಿವಿಧ ಭಾಷೆ, ಸಂಸ್ಕೃತಿಗಳನ್ನು ಹೊಂದಿರುವ ಭಾರತದಲ್ಲಿ ಸಂವಿಧಾನ ಯಶಸ್ವಿಯಾಗಿದೆ. ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರುವವರು ಈ ಸಂವಿಧಾನವನ್ನು ಶತಪ್ರತಿಶತ ಪರಿಪಾಲನೆ ಮಾಡುವ ಅವಶ್ಯಕತೆ ಇದೆ. ಸಂವಿಧಾನದ ಮೂಲಕ ರಾಜ್ಯ ಹಾಗೂ ನಮ್ಮೂರ ಬದುಕಿನ ಕಾಣಬೇಕಾಗಿದೆ. ವ್ಯಕ್ತಿಯ ಆರ್ಥಿಕ, ಸಾಮಾಜಿಕ ಅಭಿವೃದ್ಧಿಯ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ತಿಳಿಸಿದರು. ಸಂವಿಧಾನ ದಿನದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಭಾರತ ಸಂವಿಧಾನದ ಪ್ರಸ್ತಾವನೆಯನ್ನು ಓದಿದರು.ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ, ಸಂಸದ ಜಿ.ಎಂ ಸಿದ್ದೇಶ್ವರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Video-ರಾಜ್ಯಪಾಲರಿಗೆ ವಿಪಕ್ಷಗಳ ದೂರು ಹಾಸ್ಯಾಸ್ಪದ,ಕಾಂಗ್ರೆಸ್ ಅವಧಿಯ ಟೆಂಡರ್ ಕಾಮಗಾರಿಗಳ ಬಗ್ಗೆಯೂ ತನಿಖೆ:ಸಿಎಂ 

ದಾವಣಗೆರೆ, ನವೆಂಬರ್ 26: ಸರ್ಕಾರ ವಜಾ ಮಾಡುವ ಬಗ್ಗೆ ರಾಜ್ಯಪಾಲರಿಗೆ ವಿಪಕ್ಷಗಳು ದೂರು ಸಲ್ಲಿಸಿರುವವುದು ಹಾಸ್ಯಾಸ್ಪದ. ಕಾಮಗಾರಿಗಳ ಪರ್ಸಂಟೇಜ್ ವಿಚಾರದಲ್ಲಿ ಕಾಂಗ್ರೆಸ್ ಬಹಳ ಆಸಕ್ತಿ ವಹಿಸಿರುವುದರಿಂದ ಅವರ ಕಾಲದ ಟೆಂಡರ್ ಕಾಮಗಾರಿಗಳನ್ನು ತನಿಖೆಗೊಳಪಡಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ದಾವಣಗೆರೆಯಲ್ಲಿಸಂವಿಧಾನ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿ ಈ ವಿಷಯ ತಿಳಿಸಿದರು. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇದ್ದ ಅವಧಿಯಲ್ಲಿನ ಗುತ್ತಿಗೆದಾರರ ಪರ್ಸೆಂಟೇಜ್ ಅನುಭವವನ್ನು ಪತ್ರದಲ್ಲಿ ಬರೆದಿದ್ದಾರೆ. ಪರ್ಸೆಂಟೇಜ್ ಜನಕರೇ ಕಾಂಗ್ರೆಸ್ ನವರು. ಪ್ರತಿಬಾರಿ ಅದನ್ನು ಹೆಚ್ಚು ಮಾಡಿಕೊಂಡು ಬಂದಿರುವುದು ಅವರೇ. ಹಾಗೂ ಇಬ್ಬರೂ ಕಾಂಗ್ರೆಸ್ ನಾಯಕರು ಪಿಸುಮಾತಿನಲ್ಲಿ ಈ ಬಗ್ಗೆ ಮಾತನಾಡಿರುವುದನ್ನು ಮಾಧ್ಯಮಗಳೇ ಚಿತ್ರೀಕರಿಸಿವೆ. ಅವರೇ ಪ್ರಾರಂಭಿಸಿ ಅವರೇ ದೂರು ಕೊಟ್ಟಿರುವುದು ನಿಜಕ್ಕೂ ಹಾಸ್ಯಾಸ್ಪದ. ಪತ್ರದಲ್ಲಿ ಯಾವುದೇ ನಿರ್ದಿಷ್ಟ ಕಾಮಗಾರಿ ಅಥವಾ ಇಲಾಖೆ ಬಗ್ಗೆ ಸ್ಪಷ್ಟವಾಗಿ ಹೇಳಿಲ್ಲ. ಸಾಮಾನ್ಯವಾಗಿ ಪತ್ರ ಬರೆದಿದ್ದಾರೆ. ಆದರೂ ತನಿಖೆ ಮಾಡಲಾಗುವುದು. ಈ ಪರ್ಸಂಟೇಜ್ ವಿಚಾರದಲ್ಲಿ ಕಾಂಗ್ರೆಸ್ ಬಹಳ ಆಸಕ್ತಿ ವಹಿಸಿರುವುದರಿಂದ ಅವರ ಕಾಲದ ಟೆಂಡರ ಕಾಮಗಾರಿಗಳ ಬಗ್ಗೆಯೂ ತನಿಖೆಗೆ ಒಳಪಡಿಸಲಾಗುವುದು ಎಂದು ಸಿಎಂ ಹೇಳಿದರು. ಲಖನ್ ಜಾರಕಿಹೊಳಿ ಅವರು ನಾಮಪತ್ರ ವಾಪಸ್ ಪಡೆಯಲಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಲಖನ್ ಜಾರಕಿಹೊಳಿ ಅವರೊಂದಿಗೆ ಮಾತನಾಡಿದ್ದು, ಯಾವುದೇ ಕಾರಣಕ್ಕೂ ನಮ್ಮ ಅಧಿಕೃತ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಅವರಿಗೆ ಸಂಪೂರ್ಣ ಬೆಂಬಲ ದೊರಕಬೇಕು ಎನ್ನುವ ವಿಚಾರಗಳನ್ನು ತಿಳಿಸಲಾಗಿದೆ. ಅವರು ಈ ಬಗ್ಗೆ ಚರ್ಚೆ ಮಾಡಿ ಅಂತಿಮ ತೀರ್ಮಾನ ಕೈಗೊಳ್ಳುತ್ತಾರೆ ಎಂದರು. ಜೆ.ಡಿ.ಎಸ್ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಕುರಿತಂತೆ ಸುದ್ದಿಗಾರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಅಧಿಕೃತವಾಗಿ ಪಕ್ಷದಲ್ಲಿ ಈ ರೀತಿಯ ತೀರ್ಮಾನವಾಗಿಲ್ಲ. ನಮ್ಮ ಹಿರಿಯ ನಾಯಕರಾದ ಬಿ.ಎಸ್.ಯಡಿಯೂರಪ್ಪ ಅವರು ಬೆಂಬಲ ಪಡೆಯುತ್ತೇವೆ ಎಂಬ ಮಾತನ್ನು ಮಾತ್ರ ಹೇಳಿದ್ದಾರೆ. ನಾವು ಎಲ್ಲೆಡೆ ಸ್ಪರ್ಧೆ ಮಾಡಿದ್ದೇವೆ. ಹಿರಿಯ ನಾಯಕರು ತಮ್ಮ 40 ವರ್ಷದ ಅನುಭವದಲ್ಲಿ ಎಲ್ಲಿ ಬೆಂಬಲ ಪಡೆಯಲು ಸಾಧ್ಯವಿದೆಯೋ ಅಲ್ಲಿ ಪಡೆಯಲಾಗುವುದು ಎಂಬ ಮಾತನ್ನು ಹೇಳಿದ್ದಾರೆ ಎಂದರು. ಬೆಳೆ ಹಾನಿಗೆ ಪರಿಹಾರ: ಈಗಾಗಲೇ ಪ್ರತಿಯೊಂದು ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ, ಕಂದಾಯ ಹಾಗೂ ಯೋಜನಾ ಇಲಾಖೆಗಳು ಜಂಟಿ ಸಮೀಕ್ಷೆ ಮಾಡಿದ್ದು, ಉತ್ತರ ಕರ್ನಾಟಕದಲ್ಲಿ ಭತ್ತ, ಮೆಕ್ಕೆ ಜೋಳ, ದಕ್ಷಿಣ ಕರ್ನಾಟಕದಲ್ಲಿ ರಾಗಿ, ಭತ್ತ, ತರಕಾರಿ ಎಲ್ಲೇ ಪೈರುಗಳು ನೆಲಕಚ್ಚಿ ಮೊಳಕೆಯೊಡೆದು ನಾಶವಾಗಿವೆ. ಇದರ ಸಂಪೂರ್ಣ ಸಮೀಕ್ಷೆ ಮಾಡಲು ಸೂಚಿಸಿದೆ. ಹಿಂದೆ ವಿವರವಾದ ಸಮೀಕ್ಷೆ ಆಗಿ ವರದಿ ಸಲ್ಲಿಸುವುದು ತಡವಾಗುತ್ತಿತು. ಸಮೀಕ್ಷೆಯಾದ 2-3 ತಿಂಗಳಲ್ಲಿ ಪರಿಹಾರ ನೀಡಲಾಗುತ್ತಿತ್ತು. ಈಗ ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಪ್ರಕೃತಿ ವಿಕೋಪ ನಿರ್ವಹಣೆ ಕಾರ್ಯದರ್ಶಿಯವರಿಗೆ ಪತ್ರವನ್ನು ಬರೆದಿದ್ದು, ದಿನನಿತ್ಯದ ಸಮೀಕ್ಷೆಯ ವರದಿ ಆಧರಿಸಿ , ಪರಿಹಾರ ಆಪ್ ನಲ್ಲಿ ಅಪ್ ಲೋಡ್ ಆದ ಕೂಡಲೇ 24 ಗಂಟೆಯಲ್ಲಿ ಪರಿಹಾರ ನೀಡಲು ಕೋರಿದೆ ಎಂದರು. ಸಮಗ್ರ ವರದಿ ಬಂದ ನಂತರ ಕೇಂದ್ರಕ್ಕೆ ಮನವಿ ಸಲ್ಲಿಸಲಾಗುವುದು. ದಾವಣಗೆರೆಯಲ್ಲಿ ಕಣ್ಣಳತೆ (eyesight) ಸಮೀಕ್ಷೆಯಲ್ಲಿ 9800 ಹೆಕ್ಟೇರ್ ಕೃಷಿ ಬೆಳೆ, 2147 ತೋಟಗಾರಿಕೆ ಬೆಳೆ ನಷ್ಟವಾಗಿದೆ. ಈ ಬಗ್ಗೆಯೂ ಸಮೀಕ್ಷೆ ಮಾಡಲು ತಿಳಿಸಲಾಗಿದೆ ಎಂದರು. ಭ್ರಷ್ಟಾಚಾರ: ಎ.ಸಿ.ಬಿಗೆ ಮುಕ್ತವಾದ ಸ್ವಾತಂತ್ರ್ಯ ನೀಡಿರುವುದರಿಂದ ದೊಡ್ಡ ಪ್ರಮಾಣದ ದಾಳಿಯಾಗಿದೆ. ಭ್ರಷ್ಟರನ್ನು ಬಯಲಿಗೆಳೆದು ಶಿಕ್ಷೆಗೊಳಪಡಿಸಲಾಗುವುದು. ವ್ಯವಸ್ಥೆಯ ಶುದ್ದೀಕರಣ ಮಾಡುವುದು ನಮ್ಮ ಉದ್ದೇಶವಾಗಿದ್ದು, ದಾಳಿಯಿಂದ ಈ ಕೆಲಸ ಪ್ರಾರಂಭವಾಗಿದೆ ಎಂದರು.

Video-ಮುಖ್ಯಮಂತ್ರಿಗಳೇ, ರೈತರ ಹೊಲ, ಗದ್ದೆಗೂ ಎಕರೆಗೆ 10 ಸಾವಿರ ಪರಿಹಾರ ಘೋಷಿಸಿ:ಡಿಕೆಶಿ

ಬೆಂಗಳೂರು: ಬಿಜೆಪಿ ಆಡಳಿತದಲ್ಲಿ ರಾಜ್ಯದ ಅನ್ನದಾತ ಅನಾಥನಾಗಿದ್ದಾನೆ ಎಂದು ಟೀಕಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮುಖ್ಯಮಂತ್ರಿಗಳೇ, ರೈತರ ಹೊಲ, ಗದ್ದೆಗೂ ಎಕರೆಗೆ 10 ಸಾವಿರ ಪರಿಹಾರ ಘೋಷಿಸಿ ಎಂದು ಆಗ್ರಹಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿದ ಡಿಕೆ ಶಿವಕುಮಾರ್, ಕೋವಿಡ್ ಸಮಯದಲ್ಲಿ ಬೆಳೆಗೆ ಮಾರುಕಟ್ಟೆ ಕಲ್ಪಿಸದ ಬಿಜೆಪಿ ಸರ್ಕಾರ ರೈತರನ್ನು ನಡುನೀರಲ್ಲಿ ಕೈಬಿಟ್ಟಿತ್ತು.ಬರೀ ಬಾಯಿ ಮಾತಲ್ಲಿ ಪರಿಹಾರ ಘೋಷಿಸಿ ಅದು ರೈತರ ಕೈ ಸೇರದಂತೆ ಮಾಡಿದೆ. ಕಳೆದ ಮೂರು ವರ್ಷಗಳಿಂದ ನಿರಂತರ ನೆರೆ ಬಂದರೂ ಸರಿಯಾಗಿ ಪರಿಹಾರ ನೀಡದೆ ರೈತರ ಜೀವ ಹಿಂಡುತ್ತಿದೆ ಎಂದು ಟೀಕಿಸಿದ್ದಾರೆ. ಈ ವರ್ಷ ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಲ್ಲಿ ದಾಖಲೆ ಪ್ರಮಾಣದಲ್ಲಿ ಮಳೆಯಾಗಿದ್ದು, ರೈತರ ಬೆಳೆ ಜಮೀನಿನಲ್ಲೇ ನೀರು ಪಾಲಾಗಿದೆ. ಲಕ್ಷಾಂತರ ಹೆಕ್ಟೇರ್ ನಲ್ಲಿ ಬೆಳೆದ ಭತ್ತ, ರಾಗಿ, ಮೆಕ್ಕೆಜೋಳ, ತರಕಾರಿ, ಹಣ್ಣು, ಕಾಫಿ ಮತ್ತಿತರ ಬೆಳೆಗಳು ಕಟಾವಿನ ಸಮಯದಲ್ಲಿ ಮಳೆಯಿಂದಾಗಿ ಕೊಳೆಯುತ್ತಿವೆ. ಈ ವರ್ಷ ಮುಂಗಾರು ವೇಳೆ ಬಂದ ನೆರೆಗೆ ಹಾನಿಯಾದ ಬೆಳೆಗೆ ಸರ್ಕಾರ ಘೋಷಿಸಿದ ಪರಿಹಾರ ಇನ್ನೂ ರೈತರಿಗೆ ಸಿಕ್ಕಿಲ್ಲ ಎಂದು ಆರೋಪಿಸಿದ್ರು. ಫಸಲ್ ಭೀಮಾದಿಂದ ರೈತರಿಗೆ ಅನ್ಯಾಯ: ಪ್ರಕೃತಿ ವಿಕೋಪದಿಂದ ಬೆಳೆ ಹಾನಿಯಾದರೆ ರೈತರಿಗೆ ನೆರವಾಗಲು ಫಸಲ್ ಭಿಮಾ ಯೋಜನೆ ಜಾರಿಗೆ ತಂದಿದ್ದು, ಅದು ರೈತರಿಗೆ ನ್ಯಾಯ ಒದಗಿಸುವ ಬದಲು ಅನ್ಯಾಯ ಮಾಡುತ್ತಿದೆ.ಈ ಯೋಜನೆಯಲ್ಲಿ ರೈತ ಬೆಳೆ ವಿಮೆ ನೋಂದಣಿಗೆ ಕಾಲಮಿತಿ ನಿಗದಿ ಮಾಡಲಾಗಿದೆ. ಆದರೆ ರೈತರಿಗೆ ಬೆಳೆ ವಿಮೆ ಪರಿಹಾರ ನೀಡಲು ಈ ಕಾಲಮಿತಿ ಅನ್ವಯ ಆಗುತ್ತಿಲ್ಲ.ರೈತರು ಸರಿಯಾದ ಸಮಯದಲ್ಲಿ ಬೆಳೆ ವಿಮೆ ಕಂತು ಕಟ್ಟಿದರೂ, ಅವರಿಗೆ ಪರಿಹಾರ ಸಿಗುತ್ತಿಲ್ಲ. 45 ದಿನಗಳ ಒಳಗೆ ಪರಿಹಾರ ಸಿಗಬೇಕು. ಆದರೆ ಬೆಳೆ, ಪಹಣಿ, ಆಧಾರ್ ಸಂಖ್ಯೆ ಹೊಂದಾಣಿಕೆ ಇಲ್ಲ ಎಂಬ ತಾಂತ್ರಿಕ ಅಂಶಗಳ ನೆಪವೊಡ್ಡಿ ಪರಿಹಾರ ನಿರಾಕರಿಸಲಾಗುತ್ತಿದೆ.ಸಾಲ ಮಾಡಿ ಬೆಳೆದ ಬೆಳೆ ಕೈ ಸೇರುವ ಹೊತ್ತಲ್ಲಿ ನಾಶವಾದರೆ ರೈತನ ಪರಿಸ್ಥಿತಿ ಏನಾಗಬೇಕು? ಅವನು ಎಲ್ಲಿಗೆ ಹೋಗಬೇಕು? ಎಂದು ಪ್ರಶ್ನಿಸಿದ್ರು. ಎಕರೆ ಹೊಲ, ಗದ್ದೆಗೆ 10 ಸಾವಿರ ಪರಿಹಾರ ಕೊಡಿ: ಮುಖ್ಯಮಂತ್ರಿಗಳು ಇತ್ತೀಚೆಗೆ ಬೆಂಗಳೂರಿನಲ್ಲಿ ಮನೆಗಳಿಗೆ ನೀರು ನುಗ್ಗಿದರೆ 10 ಸಾವಿರ, ಮನೆ ಬಿದ್ದುಹೋದರೆ 5 ಲಕ್ಷ ಪರಿಹಾರ ಘೋಷಿಸಿದ್ದಾರೆ. ಬಹಳ ಸಂತೋಷ. ಅದೇ ರೀತಿ ನೀರು ನುಗ್ಗಿರುವ ರೈತರ ಹೊಲ, ಗದ್ದೆಗಳಿಗೂ ಎಕರೆಗೆ ತಲಾ 10 ಸಾವಿರ ರು. ಪರಿಹಾರವನ್ನು ಸಿಎಂ ಬೊಮ್ಮಾಯಿಯವರು ತಕ್ಷಣ ಘೋಷಿಸಬೇಕು.ಸರ್ಕಾರ ಬೆಳೆ ನಾಶ ಸಮೀಕ್ಷೆ, ಅಧ್ಯಯನ, ಸಭೆ ನಂತರ ಪರಿಹಾರ ಅಂತ ಕಾಲಹರಣ ಮಾಡಬಾರದು.ಬೆಳೆ ಹಾನಿ ಬಗ್ಗೆ ತಕ್ಷಣ ರೈತರಿಂದ ಅರ್ಜಿ ಆಹ್ವಾನಿಸಬೇಕು‌. ತಹಶೀಲ್ದಾರ್ ಮೂಲಕ ಸ್ವೀಕರಿಸಬೇಕು. ಅಧಿಕಾರಿಗಳನ್ನು ಕೂಡಲೇ ಸ್ಥಳಕ್ಕೆ ಕಳುಹಿಸಿ, ವಿಡಿಯೋ, ಫೋಟೋ ತೆಗೆಸಿ, 30 ದಿನದೊಳಗೆ ಸೂಕ್ತ ಪರಿಹಾರ ಕೊಡಿಸಬೇಕು ಎಂದ್ರು. ರಾಜ್ಯಾದ್ಯಂತ ನಮ್ಮ‌ ಪಕ್ಷದ ಕಾರ್ಯಕರ್ತರು ಬೆಳೆ ಹಾನಿ ಅರ್ಜಿ ಸಲ್ಲಿಸಲು ರೈತರಿಗೆ ನೆರವಾಗಬೇಕು. ಅವರ ಪರವಾಗಿ ಫೋಟೋ ತೆಗೆದು ತಹಶೀಲ್ದಾರ್ ಅವರಿಗೆ ಕಳುಹಿಸಿಕೊಡಿ. ರೈತರಿಗೆ ಪರಿಹಾರ ಸಿಗಲು ಶ್ರಮಿಸಿ ಎಂದು ಕರೆ ನೀಡಿದ ಡಿಕೆಶಿ ಸಂಪೂರ್ಣವಾಗಿ ಮನೆ ಕಳೆದುಕೊಂಡವರಿಗೆ ಪುನರ್ವಸತಿ ಕೇಂದ್ರಗಳನ್ನು ಸ್ಥಾಪಿಸಿ, ಅವರಿಗೆ ಊಟ, ವಸತಿ ಸೌಲಭ್ಯ ಕಲ್ಪಿಸಬೇಕು ಎಂದ್ರು. ಇನ್ಸೂರೆನ್ಸ್ ಕಂಪನಿಗಳ ಜತೆ ಸರಕಾರ ಷಾಮೀಲು: ಸರಕಾರ ಇನ್ಸೂರೆನ್ಸ್ ಕಂಪನಿಗಳ ಜತೆ ಷಾಮೀಲಾಗಿದೆ. ರೈತರ ಬದಲು ಇನ್ಸೂರೆನ್ಸ್ ಕಂಪನಿಗಳಿಗೆ ನೆರವಾಗುತ್ತಿದೆ.ರೈತರಿಗೆ ಮಧ್ಯಂತರ ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ (NDRF) ಸರಿಯಾದ ಪ್ರಯೋಜನ ಇಲ್ಲ. ಅದರಿಂದ ಬಂದಷ್ಟು ಬರಲಿ. ಆದರೆ ರಾಜ್ಯ ಸರಕಾರದಿಂದ ಪೂರ್ಣ ಪ್ರಮಾಣದ ಪರಿಹಾರ ಸಿಗಬೇಕು.ಹಿಂದೆ ಯಡಿಯೂರಪ್ಪನವರು ನುಡಿದಂತೆ ಪರಿಹಾರ ಕೊಡಲಿಲ್ಲ. ನೆರೆಪೀಡಿತರು, ಕೋವಿಡ್ ಪೀಡಿತರು ಬಹಳ ಸಂಕಷ್ಟ ಅನುಭವಿಸಿದರು.ಈಗ ಬೆಳೆ, ಜಮೀನು ಹಾನಿ ಆಗಿರುವ ರೈತರಿಗೆ ಕಂದಾಯ ಮನ್ನಾ ಮಾಡಬೇಕು. ಪರಿಹಾರ ಕೊಡದ ಇನ್ಸೂರೆನ್ಸ್ ಕಂಪನಿಗಳನ್ನು ಬ್ಲಾಕ್ ಲಿಸ್ಟ್ ಮಾಡಿ ರಾಜ್ಯದಿಂದ ಹೊರಗೆ ಕಳುಹಿಸಬೇಕು.ಸರಕಾರದ ಘೋಷಣೆಗಳು ಕಾಗದದ ಮೇಲಷ್ಟೇ ಉಳಿದಿವೆ. ಪೂರ್ತಿ ಮನೆ ಬಿದ್ದವರಿಗೆ 5 ಲಕ್ಷ ರು., ಅರ್ಧ ಮನೆ ಬಿದ್ದವರಿಗೆ ಒಂದು ಲಕ್ಷ ಪರಿಹಾರ ಅಂದರು. ಯಾರಿಗೆ ಕೊಟ್ಟಿದ್ದಾರೆ ಈ ಪರಿಹಾರ? ಎಂದಿದ್ದಾರೆ. 25 ಸಂಸದರಿಂದ ರಾಜ್ಯಕ್ಕೆ ಅನ್ಯಾಯ: ಹಿಂದೆ ಮಳೆ, ನೆರೆ ಹಾನಿಯಿಂದ ಆದ ನಷ್ಟ 60 ಸಾವಿರ ಕೋಟಿ ಅಂದರು. ನಾವು ಲಕ್ಷ ಕೋಟಿ ರು. ನಷ್ಟ ಎಂದೆವು. ರಾಜ್ಯಕ್ಕೆ ಕೇಂದ್ರದಿಂದ ನಿರಂತರ ಅನ್ಯಾಯ ಆಗುತ್ತಿದೆ. ಕೇಂದ್ರ ಹಾಗೂ ರಾಜ್ಯ ಬಿಜೆಪಿ ಎರಡರಿಂದಲೂ ಅನ್ಯಾಯವಾಗುತ್ತಿದೆ. ಈಗ ಆಗಿರುವ ಅನಾಹುತ ಹೊಸ ಸೇರ್ಪಡೆ. ರಾಜ್ಯದ 25 ಸಂಸದರು ಬಾಯಿಗೆ ಬೀಗ ಜಡಿದುಕೊಂಡಿದ್ದಾರೆ. ಅವರಿಂದ ನಮ್ಮ ರಾಜ್ಯಕ್ಕೆ ಬಹಳ ಅನ್ಯಾಯವಾಗುತ್ತಿದೆ. ರಾಜ್ಯದ ಪರವಾಗಿ ಕೇಂದ್ರಕ್ಕೆ ಅವರು ಒಂದೇ ಒಂದು ಅರ್ಜಿ ಕೊಟ್ಟಿಲ್ಲ ಎಂದ್ರು. ಬಿಜೆಪಿ ಮುಗಿಸಲು ಸಿ.ಟಿ. ರವಿ ಸಾಕು: ಸಿ.ಟಿ. ರವಿ ದೇಶದ ಇಮೇಜ್ ಗೆ ಧಕ್ಕೆ ತರುತ್ತಿದ್ದಾರೆ. ಅವರನ್ನು ಬಿಜೆಪಿ ಯಾಕೆ ಇಟ್ಟುಕೊಂಡಿದೆಯೋ ಗೊತ್ತಿಲ್ಲ. ಬಿಜೆಪಿ ಮುಗಿಸೋಕೆ ಅವರೊಬ್ಬರೇ ಸಾಕು. ಅವರು ಬಹಳ ಒಳ್ಳೊಳ್ಳೆ ದೇಶಪ್ರೇಮಿ ಸ್ಟೇಟ್ ಮೆಂಟ್ ಕೊಡ್ತಿದ್ದಾರೆ. ಅದರಿಂದ ಬಿಜೆಪಿಗೂ ಡ್ಯಾಮೇಜ್ ಆಗ್ತಿದೆ. ಅದಕ್ಕೆ ನಾವೂ ಸುಮ್ನೆ ಇದ್ದೇವೆ.

ಜನವರಿ ಅಂತ್ಯಕ್ಕೆ 30 ಕಿ.ಮೀ ರಾಜಕಾಲುವೆ ಕಾಮಗಾರಿ ಪೂರ್ಣಗೊಳಿಸಲು ಸೂಚನೆ: ಸಿಎಂ

ಬೆಂಗಳೂರು, ನವೆಂಬರ್ 24: 30 ಕಿ.ಮೀ ರಾಜಕಾಲುವೆ ಕಾಮಗಾರಿಯನ್ನು ಜನವರಿ ಅಂತ್ಯಕ್ಕೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ನಗರದಲ್ಲಿ ಬೃಹತ್ ಕಾಲುವೆಗಳ ಕುರಿತಂತೆ ಬಿಬಿಎಂಪಿಯಲ್ಲಿ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ನಗರದಲ್ಲಿ ಅತಿ ಹೆಚ್ಚು ಮಳೆಯಾಗಿರುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳಲ್ಲಿ ನೀರು ಮನೆಗಳಿಗೆ ನುಗ್ಗಿದೆ. ಕೆರೆ ಕೆಳಗೆ ಇರುವ ರಾಜಕಾಲುವೆಗಳನ್ನು ದುರಸ್ತಿ ಮಾಡಿ, ಅದರ ನೀರಿನ ಸಾಗಣೆ ಸಾಮರ್ಥ್ಯವನ್ನು ಹೆಚ್ಚಿಸಬೇಕು ಎನ್ನುವ ವಿಚಾರದ ಬಗ್ಗೆ ಇಂದು ಸಭೆಯಲ್ಲಿ ಚರ್ಚಿಸಲಾಗಿದೆ. ನಗರದೊಳಗಿನ ರಾಜಕಾಲುವೆಗಳ ಕಲ್ಲಿನ ಕಟ್ಟಡಗಳನ್ನು ಆರ್.ಸಿ.ಸಿ ಕಟ್ಟಡಗಳಿಗೆ ಪರಿವರ್ತಿಸಬೇಕು. ಹೊರವಲಯದ ಗ್ರಾಮೀಣ ಪ್ರದೇಶಗಳಲ್ಲಿ ಮಣ್ಣಿನ ಕಾಲುವೆಗಳಿವೆ. 110 ಗ್ರಾಮಗಳಲ್ಲಿ ಆರ್.ಸಿ.ಸಿ ಕಾಲುವೆಗಳನ್ನು ನಿರ್ಮಿಸಿ, ಅವುಗಳ ಅಗಲ ವಿಸ್ತರಿಸಬೇಕು. ಅಲ್ಲಲ್ಲಿ ಇರುವ ಅಡಚಣೆಗಳನ್ನು ತೆಗೆಯಲು ವಿಶೇಷ ಕ್ರಮ ಕೈಗೊಳ್ಳಬೇಕಿದೆ. ಈ ಬಗ್ಗೆ ಇಂದಿನ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಗಿದೆ ಎಂದರು. ಪ್ರತಿಯೊಬ್ಬ ಕಾರ್ಯನಿರ್ವಾಹಕ ಅಭಿಯಂತರರು ಅವರವರ ವ್ಯಾಪ್ತಿಗೆ ಬರುವ ವಿಚಾರಗಳಿಂದ ಮಾಹಿತಿ ಪಡೆದುಕೊಂಡು, ಕಟ್ಟುನಿಟ್ಟಿನ ಆದೇಶವನ್ನು ನೀಡಲಾಗಿದೆ. ವೃಷಭಾವತಿ, ಹೆಬ್ಬಾಳ, ಚಲ್ಲಘಟ್ಟ ಮತ್ತು ಕೋರಮಂಗಲ ನಗರದ ನಾಲ್ಕು ವ್ಯಾಲಿಗಳಿಗೆ 842 ರಾಜಕಾಲುವೆ ಇವೆ. ಈ ಪೈಕಿ 415 ಕಿ.ಮೀ ಈಗಾಗಲೇ ಪೂರ್ಣಗೊಂಡಿದೆ. 2019 -20 ರಲ್ಲಿ 75 ಕಿ.ಮೀ ರಾಜಕಾಲುವೆ ನಿರ್ಮಾಣಕ್ಕೆ ಅನುಮತಿ ನೀಡಲಾಗಿದ್ದು, ಅದರಲ್ಲಿ 40 ಕಿ.ಮೀ ಕಾಮಗಾರಿ ಪೂರ್ಣಗೊಂಡಿದೆ. ಹಲವು ಗಂಭೀರ ಸ್ಥಳಗಳನ್ನು ಗುರುತಿಸಲಾಗಿದ್ದು, ಅವುಗಳಲ್ಲಿ ಸುಮಾರು 94 ಗಂಭೀರ ಸ್ಥಳಗಳಿವೆ. ಅವುಗಳ ವಿವರಗಳನ್ನು ಪಡೆದಿದ್ದೇನೆ. ಅವುಗಳನ್ನು ಇನ್ನು 2 ತಿಂಗೊಳಗೆ ಪೂರ್ಣಗೊಳಿಸಲು ಸೂಚನೆ ನೀಡಿದ್ದೇನೆ ಎಂದರು. ಚಲ್ಲಘಟ್ಟ ಮತ್ತು ವೃಷಭಾವತಿಯಲ್ಲಿಯೂ ಇಂತಹ ಗಂಭೀರ ಸ್ಥಳಗಳಿವೆ ಎಂಬ ಮಾಹಿತಿಯನ್ನು ಪಡೆದಿದ್ದೇನೆ. ಸುಮಾರು 51 ಕಿ.ಮೀ ಪ್ರಾಥಮಿಕ ಬೃಹತ್ ನೀರುಗಾಲುವೆಗಳು ಕೂಡಲೇ ಆಗಬೇಕಿವೆ. ಉಳಿದ 38 ಕಿ.ಮೀ ದ್ವಿತೀಯ ಚರಂಡಿಗಳ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕಿದೆ. ಈ ಹಿನ್ನೆಲೆಯಲ್ಲಿ ಸುಮಾರು 900 ಕೋಟಿ ರೂ.ಗಳ ವೆಚ್ಚಲ್ಲಿ ಪ್ರಾಥಮಿಕ ಮತ್ತು ದ್ವಿತೀಯ ಚರಂಡಿಗಳ ನಿರ್ಮಾಣಕ್ಕೆ ಡಿ.ಪಿ.ಆರ್ ಸಿದ್ಧಪಡಿಸುವಂತೆ ಮುಖ್ಯ ಆಯುಕ್ತರಿಗೆ ಸೂಚನೆ ನೀಡಿದ್ದು, ಕೂಡಲೇ ವಿಶೇಷ ಅನುದಾನವನ್ನು ಬಿಡುಗಡೆ ಮಾಡಲಾಗುವುದು. ನಿಗದಿತ ಸಮಯದೊಳಗೆ ಪೂರ್ಣಗೊಂಡು ಜನರಿಗೆ ತೊಂದರೆಯಾಗಬಾರದು ಎನ್ನುವ ಸೂಚನೆ ನೀಡಲಾಗಿದೆ ಎಂದರು. ಹಲವಾರು ಬಡಾವಣೆಗಳಲ್ಲಿ ಯುಜಿಡಿ ಲೈನ್ ಪೂರ್ಣಗೊಳ್ಳಬೇಕಿದ್ದು ಅದನ್ನು ಪೂರ್ಣಗೊಳಿಸುವಂತೆ ಬಿಡಬ್ಲ್ಯೂಎಸ್ಎಸ್ ಬಿ ಅಧ್ಯಕ್ಷರಿಗೆ ಸೂಚಿಸಲಾಗಿದೆ. ಶಾಶ್ವತ ಪರಿಹಾರ ನೀಡಬೇಕೆಂಬ ಉದ್ದೇಶದಿಂದ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಇದಲ್ಲದೆ, ಬಡಾವಣೆ-ಓಣಿಯಲ್ಲಿರುವ ಒಳಚರಂಡಿಗಳಲ್ಲಿ ಹೂಳು ತೆಗೆಯಲು ಬಿಬಿಎಂಪಿ ಗೆ ಸೂಚನೆ ನೀಡಿದೆ ಹಾಗೂ ಪ್ರಾಥಮಿಕ ಚರಂಡಿಗಳಲ್ಲಿಯೂ ಹೂಳು ತೆಗೆಯಲು ಸೂಚಿಸಲಾಗಿದೆ. ಒಟ್ಟು ನಾಲ್ಕು ವ್ಯಾಲಿಗಳಲ್ಲಿ ಉಳಿದಿರುವ ಕೆಲಸಗಳ ಬಗ್ಗೆ ಇಂದಿನ ಸ್ಥಿತಿಗತಿಗಳನ್ನು ಆಧರಿಸಿ ಸಮಗ್ರ ಯೋಜನೆಯನ್ನು ಸಿದ್ಧಪಡಿಸಲು ಸೂಚಿಸಿದ್ದು, ಜಟಿಲವಾದ ಸವಾಲಿನಲ್ಲಿ ಶಾಶ್ವತ ಪರಿಹಾರ ನೀಡಲು ಅಗತ್ಯ ಕ್ರಮ ಕೈಗೊಳ್ಳಲು ಆದೇಶ ನೀಡಿದ್ದು, ಸರ್ಕಾರ ಅದನ್ನು ಗಂಭೀರವಾಗಿ ಪರಿಗಣಿಸಿದೆ ಎಂಬ ಸಂದೇಶವನ್ನು ಬಿಬಿಎಂಪಿಗೆ ತಿಳಿಸಲು ಇಂದು ಇಲ್ಲಿಯೇ ಸಭೆ ನಡೆಸಿದ್ದಾಗಿ ತಿಳಿಸಿದರು. ಸಚಿವರು ಸಹ ಭಾಗವಹಿಸಿ ತಮ್ಮ ಅನುಭವಗಳ ಆಧಾರದ ಮೇಲೆ ಕೆಲವು ಆದೇಶಗಳನ್ನು ನೀಡಿದ್ದಾರೆ. ಶಾಶ್ವತ ಪರಿಹಾರ ನೀಡುವ ದಿಕ್ಕಿನಲ್ಲಿ ಪ್ರಥಮ ಬಾರಿಗೆ ಕೆಲಸಗಳು ಪ್ರಾರಂಭವಾಗಿವೆ ಎಂದರು. ಒತ್ತುವರಿ: 2626 ಒತ್ತುವರಿಯಾಗಿರುವ ರಾಜಕಾಲುವೆಗಳನ್ನು ಗುರುತಿಸಿದ್ದು, ಅದರಲ್ಲಿ 1480 ತೆರವುಗೊಳಿಸಿದ್ದಾರೆ, ಇನ್ನು 714 ನ್ನು ತೆರೆವುಗೊಳಿಸಲು ಕಾನೂನಾತ್ಮಕವಾಗಿ ಕ್ರಮ ಜರುಗಿಸುತ್ತೇವೆ/ ಬಡವರಿಗೆ ತೊಂದರೆ ಕೊಡಬೇಡಿ ಅವರಿಗೆ ಸ್ಥಳಾಂತರಕ್ಕೆ ಸಮಯ ನೀಡುವಂತೆ ಸೂಚಿಸಲಾಗಿದೆ. ದೊಡ್ಡ ಬಿಲ್ಡರ್ ಗಳು ಒತ್ತುವರಿ ಮಾಡಿದ್ದರೆ ಕೂಡಲೇ ಅದನ್ನು ತೆಗೆಯಲು ಸ್ಪಷ್ಟ ಆದೇಶ ನೀಡಲಾಗಿದೆ. ನೇಮಕಾತಿ: 130 ಇಂಜಿನಿಯರ್ ಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಕೊಳ್ಳಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಕಂದಾಯ ಸಚಿವರು ಸಭೆಗೆ ಹಾಜರಾಗದಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸುತ್ತಾ ಪೂರ್ವನಿಗದಿತ ಕಾರ್ಯಕ್ರಮಗಳಂತೆ ಪ್ರವಾಹ ಉಂಟಾಗಿರುವ ಹಾಸನ ಮತ್ತಿತರೆಡೆ ಪ್ರವಾಸಕ್ಕೆ ತೆರಳಿದ್ದಾರೆ ಎಂದರು. ರಸ್ತೆಗುಂಡಿಗಳನ್ನು ಮುಚ್ಚುವ ಕುರಿತ ಪ್ರಶ್ನೆಗೆ ಮಾಹಿತಿ ನೀಡಿದ ಮುಖ್ಯಮಂತ್ರಿಗಳು, ಮಳೆ ನಿಂತ ಕೂಡಲೇ ರಸ್ತೆ ಗುಂಡಿಗಳನ್ನು ಮುಚ್ಛಲು ಈಗಾಗಲೇ ಸೂಚಿಸಿದ್ದು, ಒಂದು ಅಡಿಗಿಂತ ಕೆಳಗಿರುವುದಕ್ಕೆ ಪ್ರಥಮ ಆದ್ಯತೆ ನೀಡಲು ತಿಳಿಸಿದ್ದು, ಅರ್ಧ ಕಿ.ಮೀ ಗಿಂತ ಹೆಚ್ಚು ಹಾಳಾಗಿರುವ ರಸ್ತೆಗಳಿಗೆ ಡಾಂಬರು ಹಾಕಲು ಸೂಚನೆ ನೀಡಲಾಗಿದೆ ಎಂದರು. ಬಿ.ಬಿ.ಎಂ.ಪಿ ಕಚೇರಿಯಲ್ಲಿ ಬೃಹತ್ ನೀರುಗಾಲುವೆಗಳ ನಿರ್ಮಾಣಕ್ಕೆ ಸಂಬಂಧಿಸಿದ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೀಡಿರುವ ಸೂಚನೆಗಳು ಇಂತಿವೆ _ 1. ಬೆಂಗಳೂರಿನ ಅಭಿವೃದ್ಧಿಗೆ ಪ್ರಾಥಮಿಕ ಮಳೆ ನೀರು ಚರಂಡಿ ಕಾಮಗಾರಿಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಸೂಚನೆ ನೀಡಲಾಯಿತು. 2. ರಸ್ತೆಗಳಲ್ಲಿ ಹಾಗೂ ಮನೆಗಳಿಗೆ ನೀರು ನುಗ್ಗದಂತೆ ತುರ್ತು ಪರಿಹಾರ ಮತ್ತು ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಬೇಕು. 3. ಎನ್.ಡಿ.ಆರ್.ಎಫ್ ಹಾಗೂ ಎಸ್.ಡಿ.ಆರ್.ಎಫ್ ಅಡಿಯಲ್ಲಿ ವಿಳಂಬ ಮಾಡದೆ ಕಾಮಗಾರಿ ಕೈಗೊಳ್ಳುವುದು ಹಾಗೂ ಅಗತ್ಯವಿದ್ದಲ್ಲಿ ಇತರೆ ಪ್ರಾಧಿಕಾರದವರೊಂದಿಗೆ ಮಾತನಾಡಿ ಕಾಮಗಾರಿಯನ್ನು ಜನವರಿಯೊಳಗೆ ಪ್ರಾರಂಭಿಸಬೇಕು. 4. ಪ್ರತಿ 15 ದಿನಗಳಿಗೊಮ್ಮೆ ಪ್ರಾಥಮಿಕ ಚರಂಡಿಗಳ ಕಾಮಗಾರಿಗಳನ್ನು ಸಿಎಂ ಡ್ಯಾಶ್ ಬೋರ್ಡ್ ನಲ್ಲಿ ಖುದ್ದು ಪರಿಶೀಲಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು. 5. ಕಾಮಗಾರಿ ಪ್ರಗತಿ ಬಗ್ಗೆ ಇಂಜಿನಿಯರುಗಳಿಗೆ ಖುದ್ದು ಕರೆ ಮಾಡಿ ಮುಖ್ಯಮಂತ್ರಿಗಳು ವಿಚಾರಿಸುವುದಾಗಿ ತಿಳಿಸಿ ಕರ್ತವ್ಯದಲ್ಲಿ ನಿರ್ಲಕ್ಷ್ಯ ಕಂಡುಬಂದರೆ ಮುಲಾಜಿಲ್ಲದೆ ಅಮಾನತು ಮಾಡಲಾಗುವುದು ಎಂದು ಎಚ್ಚರಿಕೆ ನೀಡಲಾಯಿತು. 6. ಒತ್ತುವರಿ ಆಗಿರುವಲ್ಲಿ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಯಿತು. 7. ಇಂದಿನ ವಸ್ತುಸ್ಥಿತಿಯ ಆಧಾರದ ಮೇಲೆ ಸಮಗ್ರವಾದ ಯೋಜನೆ ಸಿದ್ಧಪಡಿಸಿ ಪ್ರಸ್ತಾವನೆ ಸಲ್ಲಿಸಿದ ನಂತರ ಕಾಮಗಾರಿ ಕೈಗೊಳ್ಳಲು ಅನುಮೋದನೆಯನ್ನು ತಕ್ಷಣವೇ ನೀಡಲಾಗುವುದು. 8. ಒಂದೂವರೆ ವರ್ಷದೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಸೂಚಿಸಲಾಯಿತು. 9. ನಗರದ ಮುಖ್ಯ ಚರಂಡಿಗಳ ದುರ್ಬಲ ಸ್ಥಳಗಳನ್ನು ಗುರುತಿಸಿ, ಕಲ್ಲು ಕಟ್ಟಡಗಳನ್ನು ಆರ್.ಸಿ.ಸಿ ಕಟ್ಟಡಗಳನ್ನಾಗಿ ಪರಿವರ್ತಿಸಬೇಕು ಹಾಗೂ ಒತ್ತುವರಿಯನ್ನು ತೆರವುಗೊಳಿಸಬೇಕು. 10. ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಬೇಕು. ಇಂಜಿನಿಯರುಗಳಿಗೆ ಕೆಲಸವನ್ನು ಮರುಹಂಚಿಕೆ ಮಾಡಲಾಗುವುದು. 11. ಕಾಮಗಾರಿಯನ್ನು ಶೀಘ್ರವಾಗಿ ಅನುಷ್ಠಾನಕ್ಕೆ ತರಲು 197 ಕ್ಷೇತ್ರ ಇಂಜಿನಿಯರ್ ಗಳನ್ನು ಗುತ್ತಿಗೆ ಆಧಾರದ ಮೇಲೆ ಪಡೆಯಲು ಅನುಮೋದನೆ ನೀಡಲಾಗಿದೆ. 12. ಮಳೆ ನೀರು ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿದುಹೋಗಲು ಅಗತ್ಯ ವ್ಯವಸ್ಥೆ ಕೈಗೊಳ್ಳಬೇಕು. 13. ಸಂಸ್ಕರಿಸದ ನೀರನ್ನು ಮಳೆ ನೀರು ಚರಂಡಿಗೆ ಕಡ್ಡಾಯವಾಗಿ ಹರಿಸಬಾರದು. ಅದಕ್ಕಾಗಿ ಎಸ್.ಟಿ.ಪಿಗಳನ್ನು ಸರಿಪಡಿಸುವುದು. 14. ಬಿಡಿಎ ಬಡಾವಣೆಗಳಲ್ಲಿ ವಿದ್ಯುಚ್ಚಕ್ತಿ, ಚರಂಡಿ ಹಾಗೂ ನೀರಿನ ವ್ಯವಸ್ಥೆ ಮಾಡುವ ಬಗ್ಗೆ ಪ್ರತ್ಯೇಕ ಸಭೆ ನಡೆಸಲಾಗುವುದು.