ಮುಂಬೈ: ಮಹಾನಗರಿ ಮುಂಬೈನಲ್ಲಿ ಭಾನುವಾರ ತಡರಾತ್ರಿ ಧಾರಾಕಾರ ಮಳೆಯಾಗಿದೆ. ಭೂಕುಸಿತವೂ ಸಂಭವಿಸಿದ್ದು ಪ್ರತ್ಯೇಕ ಕಡೆಗಳಲ್ಲಿ ಮೂರು ಸಾವು ಸಂಭವಿಸಿವೆ.
ಮೆಟ್ರೋ ಸಿನಿಮಾ ಸಮೀಪ ಮರವೊಂದು ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಬಾಂದ್ರಾ, ವಿಲೇ ಪಾರ್ಲೆ, ಧರವಿ ಹಾಗೂ ಸಿಯಾನ್ ಪ್ರದೇಶಗಳು ಸೇರಿದಂತೆ ಹಲವೆಡೆ ಮಳೆಯಾಗಿದೆ. ಭಾರೀ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡಿದ್ದು, ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದೆ.
ಮುಂಬೈನ ವಾಡಾಲಾ ಪೂರ್ವದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಕೆಳಗಿನ ನೆಲ ಕುಸಿದು ರಸ್ತೆಯಲ್ಲಿ ಸಂಚರಿಸುತ್ತಿದ್ದ ಹಲವಾರು ಕಾರುಗಳು ಅದರಡಿ ಹೂತು ಹೋಗಿವೆ. ಅವಶೇಷಗಳಡಿ ಸಿಲುಕಿದ್ದ ಜನರನ್ನು ಪಾರು ಮಾಡಲಾಗಿದ್ದು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಭಾರತೀಯ ಹವಾಮಾನ ಇಲಾಖೆಯ ಪ್ರಕಾರ ಮುಂಬೈ ಮಹಾನಗರದಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆಯಾಗಲಿದ್ದು. ಸಮದ್ರದಲ್ಲಿ ಸುಮಾರು 4 ಮೀಟರ್ ಎತ್ತರದ ಅಲೆಗಳು ಏಳಲಿವೆ ಎಂದು ಮುನ್ನೆಚ್ಚರಿಕೆ ನೀಡಿದೆ.









