ಉತ್ತರ ಪ್ರದೇಶ : ಗುಜರಿ ಅಂಗಡಿಯೊಂದರಲ್ಲಿ ಸಂಭವಿಸಿದ ಭೀಕರ ಸ್ಪೋಟಕ್ಕೆ ನಾಲ್ವರು ಬಲಿಯಾಗಿದ್ದು ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಶರ್ವತ್ ರೋಡ್ ಪ್ರದೇಶದಲ್ಲಿನ ಗುಜರಿ ಅಂಗಡಿಯಲ್ಲಿ ಸ್ಫೋಟ ಸಂಭವಿಸಿದ್ದು ಗುಜರಿ ಅಂಗಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ತಜೀಮ್ (50) ಮತ್ತು ಶಝಾದ್ (55) ಹಾಗೂ ದಾರಿಯಲ್ಲಿ ಹೋಗುತ್ತಿದ್ದು ಇಬ್ಬರು ಸೇರಿ ನಾಲ್ವರು ಮೃತಪಟ್ಟಿದ್ದಾರೆ.
ಗಾಯಗೊಂಡಿರುವ ಮೂವರು ಪಾದಚಾರಿಗಳನ್ನು ಆಸ್ಪತ್ರೆಗೆ ಸೇರಿದ್ದಾರೆ. ಅಂಗಡಿಯಲ್ಲಿ ಗುಜರಿ ವಸ್ತುಗಳನ್ನು ಒಡೆಯುತ್ತಿದ್ದ ಸಂದರ್ಭದಲ್ಲಿ ಸ್ಫೋಟ ಸಂಭವಿಸಿರುವುದಾಗಿ ತಿಳಿದು ಬಂದಿದೆ. ಮಾಹಿತಿ ದೊರೆತ ತಕ್ಷಣ ಪೊಲೀಸರು ಮತ್ತು ಅಗ್ನಿ ಶಾಮಕದಳದವರು ಸ್ಥಳಕ್ಕೆ ಬಂದು ರಕ್ಷಣಾ ಕಾರ್ಯ ಕೈಗೊಂಡರು.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದು ಸ್ಪೋಟಕ್ಕೆ ಕಾರಣವಾದ ವಸ್ತುವನ್ನು ಪತ್ತೆ ಹಚ್ಚುತ್ತಿದ್ದಾರೆ.









