ಫೋಟೋ ಕೃಪೆ: ಟ್ವಿಟ್ಟರ್
ಬೆಂಗಳೂರು:ಉಜಿರೆಯ ಶ್ರೀ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಆರೋಗ್ಯ ಸುಧಾರಣೆ ಮಾಡಿಕೊಂಡ ನಂತರ, ರಾಜಕೀಯದಲ್ಲಿ ಇನ್ನಷ್ಟು ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳಲು ದೇಹ ಮತ್ತು ಮನಸ್ಸು ಸಜ್ಜಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಉಜಿರೆ ಪ್ರಕೃತಿ ಚಿಕಿತ್ಸಾ ಕೇಂದ್ರ ಹನ್ನೆರಡು ದಿನ ನನ್ನ ಮನೆಯಾಗಿತ್ತು ಡಾ. ಪ್ರಶಾಂತ್ ಶೆಟ್ಟಿ ನೇತೃತ್ವದ ವೈದ್ಯರ ತಂಡ ತಮ್ಮ ಕುಟುಂಬದ ಸದಸ್ಯನಂತೆ ನನ್ನ ಪಾಲನೆ ಮಾಡಿದ್ದಾರೆ. ಅವರ ಸೇವಾ ಬದ್ಧತೆ ಮತ್ತು ತೋರಿಸಿದ್ದ ಕಾಳಜಿಗೆ ತುಂಬುಹೃದಯದ ಕೃತಜ್ಞತೆಗಳು.ಎಲ್ಲರಿಗೂ ವೃತ್ತಿಯಲ್ಲಿ ಇನ್ನಷ್ಟು ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ ಎಂದು ಟ್ವೀಟಿಸಿದ್ದಾರೆ.
ಉಜಿರೆಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಚಿಕಿತ್ಸೆ ಪಡೆದು ಕಳೆದ ರಾತ್ರಿ ಬೆಂಗಳೂರಿಗೆ ಹಿಂದಿರುಗಿದ್ದೇನೆ. ಚುನಾವಣಾ ಕಾಲದ ಕಾರ್ಯದೊತ್ತಡದಿಂದ ಬಳಲಿದ್ದ ದೇಹ ಮತ್ತು ಮನಸ್ಸು ಸುಧಾರಿಸಿ ಉಲ್ಲಸಿತನಾಗಿದ್ದೇನೆ ಎಂದು ತಮ್ಮ ಅನುಭವವನ್ನು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.









