ನೂತನ ಮುಖ್ಯ ಕಾರ್ಯದರ್ಶಿಯಾಗಿ ಟಿ.ಎಂ. ವಿಜಯಭಾಸ್ಕರ್!

0
38

ಬೆಂಗಳೂರು: ರತ್ನಪ್ರಭಾ ಅವರ ನಿವೃತ್ತಿಯಿಂದ ತೆರವಾಗುತ್ತಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಹಿರಿಯ ಐಎಎಸ್ ಅಧಿಕಾರಿ ಟಿ.ಎಂ ವಿಜಯಭಾಸ್ಕರ್ ನೇಮಕ ಮಾಡಲಾಗುತ್ತದೆ ಎಂದು ಸಿಎಂ ಕಚೇರಿ ಮೂಲಗಳು ಖಚಿತಪಡಿಸಿವೆ.

ಹಾಲಿ ಸಿಎಸ್ ರತ್ನಪ್ರಭಾ ಅವರ ವಿಸ್ತರಿತ ಅವಧಿ ಜೂನ್ 30 ಕ್ಕೆ ಅಂತ್ಯಗೊಳ್ಳಲಿದ್ದು ಸೇವಾ ಹಿರಿತನದ ಆಧಾರದಲ್ಲಿ ಟಿ.ಎಂ ವಿಜಯಭಾಸ್ಕರ್ ಅವರನ್ನು ನೂತನ ಸಿಎಸ್ ಆಗಿ ನೇಮಿಸಲು ಮುಖ್ಯಮಂತ್ರಿ ಕುಮಾರಸ್ವಾಮಿ ನಿರ್ಧರಿಸಿದ್ದು ನಾಳೆಯೇ ಅಧಿಕಾರ ಸ್ವೀಕಾರ ಮಾಡಲಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ.

ವಿಜಯಭಾಸ್ಕರ್ ಅವರು 1983ನೇ ಬ್ಯಾಚ್ ಐಎಎಸ್ ಅಧಿಕಾರಿಯಾಗಿದ್ದು,ಬಿಬಿಎಂಪಿ ಆಯುಕ್ತರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ. ಸಧ್ಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದು ನಾಳೆ ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

- Call for authors -

LEAVE A REPLY

Please enter your comment!
Please enter your name here