ಬೆಂಗಳೂರು: ಎರಡು ಲಕ್ಷ ರೂಪಾಯಿವರೆಗೆ ರೈತರ ಬೆಳೆ ಸಾಲ ಮನ್ನಾ ಮಾಡುವ ಮೂಲಕ ರೈತರಿಗೆ ಸಿಎಂ ಕುಮಾರಸ್ವಾಮಿ ಬಜೆಟ್‌ನಲ್ಲಿ ಬಂಪರ್ ಗಿಫ್ಟ್ ನೀಡಿದ್ದಾರೆ.
ಚುನಾವಣೆ ವೇಳೆ ರೈತರ ಸಂಪೂರ್ಣ ಸಾಲ ಮನ್ನಾ ಮಾಟುವುದಾಗಿ ಜೆಡಿಎಸ್ ಪಕ್ಷ ಭರವಸೆ ನೀಡಿತ್ತು. ಆದರೆ, ಮುಖ್ಯಮಂತ್ರಿಯಾದ ನಂತರ ಹಣಕಾಸಿನ ತೊಂದರೆಯಿಂದ ಹಂತ ಹಂತವಾಗಿ ಸಾಲ ಮನ್ನಾ ಮಾಡುವ ಸುಳಿವನ್ನು ಸಿಎಂ ನೀಡಿದ್ದರು. ಅದರಂತೆ ಇದೀಗ 2 ಲಕ್ಷ ರೂಪಾಯಿವರೆಗಿನ ಬೆಳೆ ಸಾಲ ಮನ್ನಾ ಮಾಡಲಾಗಿದೆ.
ಬಜೆಟ್ ನಲ್ಲಿ 31-12-2017 ರವರೆಗೆ ರೈತರು ಮಾಡಿದ ೨ ಲಕ್ಷ ರೂ.ವರೆಗಿನ ಸುಸ್ತಿ ಬೆಳೆ ಸಾಲ ಮನ್ನಾ ಘೋಷಣೆ ಮಾಡಲಾಗಿದ್ದು, ೪೦ ಲಕ್ಷ ರೈತರಿಗೆ ಇದರಿಂದ ಅನುಕೂಲವಾಗಲಿದೆ. ಆದಾಯ ತೆರಿಗೆ ಪಾವತಿ ಮಾಡಿರುವ ರೈತರಿಗೆ ಈ ಸಾಲ ಮನ್ನಾ ಅನ್ವಯವಾಗುವುದಿಲ್ಲ. ಒಟ್ಟು ೩೪ ಸಾವಿರ ಕೋಟಿ ರೈತರ ಸಾಲ ಮನ್ನಾ ಘೋಷಣೆ ಮಾಡಲಾಗಿದೆ.









