ಮಾವು ಬೆಳೆಗೆ ಬೆಂಬಲ ಬೆಲೆಗೆ ಚಿಂತನೆ:ಸಿಎಂ

0
38

ಬೆಂಗಳೂರು:ಮಾವು ಬೆಳೆಗಾರರ ಸಮಸ್ಯೆ ಬಗೆಹರಿಸಲು ಮುಂದಾಗಿರುವ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನೆರೆ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಸಿಎಂ ಕಚೇರಿ ಮೂಲಗಳು ತಿಳಿಸಿವೆ.

ನೆರೆ ರಾಜ್ಯದಲ್ಲಿ ಕಾಣಿಸಿಕೊಂಡ ನಿಫಾ ವೈರಸ್‌ ಆತಂಕದಿಂದ ಮಾವಿಗೆ ಬೇಡಿಕೆ ಕುಸಿದು ರೈತರು ಸಂಕಟಕ್ಕೆ ಸಿಲುಕಿದ್ದು, ರೈತರು ಬೆಳೆದ ಟನ್‌ಗಟ್ಟಲೆ ಮಾವು‌ ಕೊಳ್ಳುವವರಿಲ್ಲದೆ ನಷ್ಟಕ್ಕೆ ಸಿಲುಕಿದ್ದಾರೆ.ಮಾವು ಬೆಳೆಗಾರರ ಸಮಸ್ಯೆಯನ್ನು ಮನಗಂಡಿರುವ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮಾವಿಗೆ ಬೆಂಬಲ ಬೆಲೆ ನೀಡುವ ಕುರಿತು ಚಿಂತನೆ ನಡೆಸಿದ್ದಾರೆ.

ಮಾವು ಬೆಳೆಯನ್ನು ಆಂಧ್ರಪ್ರದೇಶ ಹಾಗೂ ಮಹರಾಷ್ಟ್ರ ರಾಜ್ಯಗಳಿಗೆ ರವಾನಿಸಲು ಆಯಾ ರಾಜ್ಯದ ಮುಖ್ಯಮಂತ್ರಿ ಗಳೊಡನೆ ಚರ್ಚೆ ನಡೆಸಿದ್ದಾರೆ. ಮಾವು ಬೆಳೆಗಾರರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ, ಮಾವು ಬೆಳೆಗಾರರ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ದವಾಗಿದೆ ಎಂದು ಮುಖ್ಯಮಂತ್ರಿಗಳು ರೈತರಿಗೆ ಅಭಯ ನೀಡಿದ್ದಾರೆ.

- Call for authors -

LEAVE A REPLY

Please enter your comment!
Please enter your name here