ಬೆಂಗಳೂರು: ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆ ರೂವಾರಿಯಾಗಿರುವ ಸಚಿವ ಡಿ.ಕೆ.ಶಿವಕುಮಾರ್ ಅವರು ಖಾಸಗಿ ಹೊಟೇಲ್ನಲ್ಲಿ ಆಯೋಜಿಸಿದ್ದ ಔತಣ ಕೂಟದಲ್ಲಿ ಹೊಸದುರ್ಗ ಕ್ಷೇತ್ರದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಪಾಲ್ಗೊಂಡು ಎಲ್ಲರ ಕುತೂಹಲಕ್ಕೆ ಕಾರಣರಾಗಿದ್ದಾರೆ.
ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರಿಗಾಗಿ ಡಿ.ಕೆ.ಶಿವಕುಮಾರ್ ಔತಣ ಕೂಟ ಆಯೋಜಿಸಿದ್ದರು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ , ಸಚಿವ ಎಚ್.ಡಿ.ರೇವಣ್ಣ ಸೇರಿದಂತೆ ಮೈತ್ರಿ ಸರ್ಕಾರದ ಹಲವು ಸಚಿವರು, ಕಾಂಗ್ರೆಸ್-ಜೆಡಿಎಸ್ ಶಾಸಕರು ಔತಣ ಕೂಟದಲ್ಲಿ ಭಾಗಿಯಾಗಿದ್ದರು.
ಕಾಂಗ್ರೆಸ್ ಶಾಸಕ ಸುಧಾಕರ್ ಅವರೊಂದಿಗೆ ಗೂಳಿಹಟ್ಟಿ ಶೇಖರ್ ಔತಣ ಕೂಟಕ್ಕೆ ಆಗಮಿಸಿದ್ದರು ಎಂದು ತಿಳಿದುಬಂದಿದೆ.









