ಕೋಲಾರ: ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿದ 15ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಬಂಗಾರಪೇಟೆ ತಾಲ್ಲೂಕಿನ ಡಿ.ಪಿ.ಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಮದ್ಯಾಹ್ನ ಬಿಸಿಯೂಟದ ಸಾಂಬಾರ್ನಲ್ಲಿ ಹಲ್ಲಿ ಬಿದ್ದಿದ್ದು, ಸಾಂಬರ್ ಸೇವಿಸಿದ ನಂತರ 15 ಮಕ್ಕಳು ವಾಂತಿ-ಬೇದಿಯಾಗಿ ಅಸ್ವಸ್ಥಗೊಂಡಿದ್ದಾರೆ. ತಕ್ಷಣವೇ ಶಾಲಾ ಶಿಕ್ಷಕರು ಅಸ್ವಸ್ಥ ಮಕ್ಕಳನ್ನು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ.
ಘಟನೆಗೆ ಅಡುಗೆ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣವೆಂದು ಶಾಲೆಯ ಮುಖ್ಯೋಪದ್ಯಾಯ ವೆಂಕೋಬರಾವ್ ಹಾಗೂ ಅಡುಗೆ ಸಿಬ್ಬಂದಿ ವಿರುದ್ಧ ವಿಧ್ಯಾರ್ಥಿಗಳ ಪೋಷಕರು ಹಾಗೂ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.









