ಬೆಳಗಾವಿ:ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್‌ಟಿಸಿ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರ ದುರ್ಮರಣಗೊಂಡ ಘಟನೆ ಬಡೆಕೊಳ್ಳ ಗ್ರಾಮದ ಸಮೀಪ ನಡೆದಿದೆ.
ಬೆಳಗಾವಿಯಿಂದ ಉಡುಪಿಗೆ ತೆರಳುತ್ತಿದ್ದ ಬಸ್ ಬೆಳಗಾವಿ ತಾಲೂಕಿನ ಬಡೆಕೊಳ್ಳ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ ೪ ರಲ್ಲಿ ಪಲ್ಟಿಯಾಗಿದೆ.ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದು ಗಾಯಗೊಂಡ ಮೂವರು ಪ್ರಯಾಣಿಕರನ್ನು ಬಾಗೇವಾಡಿ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅಪಘಾತದಿಂದ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದ್ದು
ಸ್ಥಳಕ್ಕೆ ಹಿರೆ ಬಾಗೆವಾಡಿ ಪೋಲಿಸರು ಭೇಟಿ ಪರಿಶೀಲನೆ ನಡೆಸಿದ್ದು ಬಸ್ ತೆರವುಗೊಳಿಸಿ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು.ಈ ಸಂಬಂಧ ಹಿರೇಬಾಗೆವಾಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
ಬೆಳಗ್ಗೆ 6.45 ಕ್ಕೆ ಘಟನೆ ನಡೆದಿದ್ದು,7.10 ಕ್ಕೆ ಮಾಹಿತಿ ಕೆಎಸ್ಆರ್‌ಟಿಸಿ ಕಚೇರಿಗೆ ತಲುಪಿದೆ.ಕೂಡಲೇ ಸ್ಥಳಕ್ಕೆ ಕೆಎಸ್ಆರ್‌ಟಿಸಿ ಬೆಳಗಾವಿ ವಿಭಾಗದ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.









