ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ಮತ್ತೊಬ್ಬ ಶಂಕಿತ ಆರೋಪಿಯನ್ನು ಬಂಧಿಸಿದ್ದು ಬಂಧಿತರ ಸಂಖ್ಯೆ ಎಂಟಕ್ಕೆ ಏರಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಸಂಪಾಜೆ ನಿವಾಸಿ ಮೋಹನ್ ನಾಯ್ಕ್‌ನನ್ನು ಪೊಲೀಸರು ಬಂದಿಸಿದ್ದು ಈತ ಆರೋಪಿ ಅಮೋಲ್ ಕಾಳೆಗೆ ಸುಂಕದಕಟ್ಟೆಯಲ್ಲಿ ಬಾಡಿಗೆ ಮನೆ ಮಾಡಿಕೊಟ್ಟಿದ್ದ ಆರೋಪ ಎದುರಿಸುತ್ತಿದ್ದಾನೆ.
ಮೋಹನ್ ನಾಯ್ಕ್‌ನನ್ನು ಬಂಧಿಸಿರುವ ಎಸ್‌ಐಟಿ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿ ಜುಲೈ 24 ರ ವರೆಗೆ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದು,
ಆರೋಪಿಯನ್ನ ತೀವ್ರ ತನಿಖೆಗೆ ಒಳಪಡಿಸಿದ್ದಾರೆ.









