ಬೆಂಗಳೂರು: ಸ್ಕೂಟಿಗೆ ಕಾಂಕ್ರೇಟ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿಯಲ್ಲಿ ತೆರಳುತ್ತಿದ್ದ ಓರ್ವ ಯುವತಿ ಸಾವನ್ನಪ್ಪಿದ್ದು, ಮತ್ತೊಬ್ಬ ಯುವತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಲಾಲ್ ಬಾಗ್ ಬಳಿ ರಸ್ತೆಯಲ್ಲಿ ನಡೆದಿದೆ.
ಬೆಳಗ್ಗೆ ಸಹೋದರಿಯರಿಬ್ಬರು ವಾಕಿಂಗ್ ಹೋಗಿದ್ದಾಗ ಅಪಘಾತ ಸಂಭವಿಸಿದೆ ಪ್ರೀತಿ (19) ಸ್ಥಳದಲ್ಲೇ ಸಾವನ್ನಪ್ಪಿದ್ದು, ಲಾವಣ್ಯ (24) ಗಂಭೀರ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಸಾವನ್ನಪ್ಪಿದ ಯುವತಿಯ ಕಣ್ಣುಗಳನ್ನು ದಾನ ಮಾಡಲಾಗಿದೆ.
ವಿ.ವಿ.ಪುರಂ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.









