ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ವರಿಷ್ಠ ಎಂ.ಕರುಣಾ ನಿಧಿ ಅವರ ಆರೋಗ್ಯ ಸ್ಥಿತಿ ಗಂಬೀರವಾಗಿದ್ದು ಉಪ ಮುಖ್ಯಮಂತ್ರಿ ಓ.ಪನ್ನೀರ್ ಸೆಲ್ವಂ, ಕಮಲ್ ಹಾಸನ್ ಸೇರಿದಂತೆ ಹಲವು ಮುಖಂಡರು ಕರುಣಾ ನಿಧಿ ಅವರ ನಿವಾಸಕ್ಕೆ ದೌಡಾಯಿಸಿದ್ದಾರೆ.
ಕರುಣಾ ನಿಧಿ ಅವರ ಆರೋಗ್ಯ ಪರಿಸ್ಥಿತಿಯ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಅವರ ಚಿಕಿತ್ಸೆಗೆ ಅಗತ್ಯವಿರುವ ಎಲ್ಲ ನೆರವು ನೀಡುವುದಾಗಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಇಂದು ಡಿಎಂಕೆ ನಾಯಕ ಎಂ.ಕೆ.ಸ್ಟಾಲಿನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ, ಡಿಎಂಕೆ ನಾಯಕ ಕರುಣಾನಿಧಿಯವರ ಆರೋಗ್ಯದ ಸ್ಥಿತಿಗತಿ ಕುರಿತು ವಿಚಾರಿಸಿದ್ದು, ಅವರು ಶೀಘ್ರವಾಗಿ ಗುಣಮುಖರಾಗಲೆಂದು ಮುಖ್ಯಮಂತ್ರಿಗಳು ಹಾರೈಸಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಹಲವು ನಾಯಕರು ಕರುಣಾನಿಧಿ ಅವರ ಮಕ್ಕಳಾದ ಎಂ.ಕೆ ಸ್ಟಾಲಿನ್ ಹಾಗೂ ಕನಿಮೋಳಿ ಅವರನ್ನು ಕುರಿತು ಟ್ವೀಟ್ ಮಾಡಿದ್ದು ಕರುಣಾನಿಧಿಯವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.









