ಬೆಂಗಳೂರು: ಇತ್ತೀಚೆಗಷ್ಟೇ ಸಾವನ್ನಪ್ಪಿದ್ದ ದಾಂಡೇಲಿಯಾ ವಕೀಲ ಅಜಿತ್ ನಾಯಕ್ ಪ್ರಕರಣದ ತನಿಖೆ ನಡೆಯುತ್ತಿದ್ದು, ನ್ಯಾಯ ಸಿಗದೇ ಹೋದರೆ ವಿಶೇಷ ತನಿಖೆಗೆ ವಹಿಸುವುದಾಗಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು.
ಬೆಂಗಳೂರು ವಕೀಲರ ಘದ ಅಧ್ಯಕ್ಷ ರಂಗನಾಥ್ ನೇತೃತ್ವದಲ್ಲಿ ವಕೀಲರು ವಿಧಾನಸೌಧದಲ್ಲಿ ಗೃಹ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಭೇಟಿ ಮಾಡಿ ಅಜಿತ್ ನಾಯಕ್ ಕೊಲೆ ಪ್ರಕರಣವನ್ನು ಸಿಐಡಿ ಅಥವಾ ವಿಶೇಷ ತನಿಖೆಗೆ ವಹಿಸುವಂತೆ ಮನವಿ ಮಾಡಿದರು.
ಮನವಿ ಸ್ವೀಕರಿಸಿ ಮಾತನಾಡಿದ ಪರಮೇಶ್ವರ್, ಅಜಿತ್ ನಾಯಕ್ ಪ್ರಕರಣದ ತನಿಖೆ ಈಗಾಗಲೇ ನಡೆಯುತ್ತಿದೆ. ಈ ತನಿಖೆಯಲ್ಲಿ ನ್ಯಾಯ ಸಿಗದೇ ಹೋದರೆ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ. ನ್ಯಾಯವಾದಿಗಳಿಗೆ ನ್ಯಾಯ ಕೊಡಿಸುವುದು ನಮ್ಮ ಜವಾಬ್ಧಾರಿ ಎಂದರು.









