ಬೆಂಗಳೂರು: ಮೀಸಲಾತಿ ಮತ್ತು ಕ್ಷೇತ್ರ ಮರು ವಿಂಗಡಣೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿ ಮೈಸೂರು, ತುಮಕೂರು, ಶಿವಮೊಗ್ಗ ಪಾಲಿಕೆಗಳ ಚುನಾವಣೆಗೆ ಗ್ರೀನ್ ಸಿಗ್ನಲ್ ನೀಡಿದೆ.
ತುಮಕೂರು, ಶಿವಮೊಗ್ಗ ಮೈಸೂರು ಪಾಲಿಕೆಗಳ ಚುನಾವಣೆ ಸಂಬಂಧ ಮೀಸಲಾತಿ ಮತ್ತು ಕ್ಷೇತ್ರ ಮರುವಿಂಗಡಣೆ ಪ್ರಶ್ನಿಸಿ ಹೈಕೋರ್ಟ್ ಗೆ ರಿಟ್ ಸಲ್ಲಿಸಲಾಗಿತ್ತು. ಈ ರಿಟ್ ಅರ್ಜಿ ವಿಚಾರಣೆ ಮುಗಿದ್ದಿದ್ದು ರಿಟ್ ಅರ್ಜಿಯನ್ನ ಹೈಕೋರ್ಟ್ ನ್ಯಾಯಮೂರ್ತಿ ವೀರಪ್ಪ ವಜಾಗೊಳಿಸಿದ್ದಾರೆ. ಈ ಮೂಲಕ ತುಮಕೂರು, ಮೈಸೂರು. ಶಿವಮೊಗ್ಗ ಪಾಲಿಕೆಗೆಳ ಚುನಾವಣೆಗೆ ಇದ್ದ ತೊಡಕು ನಿವಾರಣೆಯಾದಂತಾಗಿದೆ.
ಇತ್ತೀಚೆಗೆ ರಾಜ್ಯ ಚುನಾವಣಾ ಆಯೋಗ ರಾಜ್ಯದ 105 ಸ್ಥಳೀಯ ಸಂಸ್ಥೆಗಳ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದೆ.ಅದರಂತೆ ಆಗಸ್ಟ್ 29ಕ್ಕೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಮತದಾನ ನಡೆಯಲಿದೆ. 29 ನಗರಸಭೆ, 53 ಪುರಸಭೆ, 23 ಪಟ್ಟಣ ಪಂಚಾಯತ್‌ಗಳಿಗೆ ಚುನಾವಣೆ ನಡೆಯಲಿದೆ. ಆಗಸ್ಟ್ 17 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಆಗಸ್ಟ್ 29ಕ್ಕೆ ಮತದಾನ ನಡೆಯಲಿದ್ದು, ಸೆಪ್ಟೆಂಬರ್ 1 ಕ್ಕೆ ಮತ ಎಣಿಕೆ ನಡೆಯಲಿದೆ.
ಈ ನಡುವೆ ಹೈಕೋರ್ಟ್ ನಲ್ಲಿ ಚುನಾವಣೆ ಬಾಕಿ ಇದ್ದ ಹಿನ್ನೆಲೆ ಮೈಸೂರು, ತುಮಕೂರು, ಶಿವಮೊಗ್ಗ ಪಾಲಿಕೆಗಳಿಗೆ ಚುನಾವಣಾ ದಿನಾಂಕ ಘೋಷಿಸಿರಲಿಲ್ಲ.









