ಉಡುಪಿ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ಬೆಳಿಗ್ಗೆ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ದೇವರ ದರ್ಶನ ಪಡೆದರು.
ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಕರಾವಳಿ ಭಾಗಕ್ಕೆ ಭೇಟಿ ನೀಡಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಮಠದ ಪರ್ಯಾಯ ಮಠಾಧೀಶ ಪಲಿಮಾರು ವಿದ್ಯಾಧೀಶ ತೀರ್ಥ ಸ್ವಾಮಿಗಳ ಆಶೀರ್ವಾದ ಪಡೆದರು.









