ತುಮಕೂರು: ಸಿದ್ದಗಂಗಾ ಮಠದ ಶತಾಯುಷಿ ಡಾ.ಶಿವಕುಮಾರ ಸ್ವಾಮೀಜಿಯವರು ಆರೋಗ್ಯವಾಗಿದ್ದು,ಭಕ್ತ ಸಮೂಹ ಯಾವುದೇ ರೀತಿಯ ಆತಂಕಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು.
ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಭೇಟಿ ನೀಡಿದರು.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಡಾ.ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯ ವಿಚಾರಿಸಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ,
ಶ್ರೀಗಳ ಆರೋಗ್ಯ ಸುಧಾರಣೆಗಾಗಿ ವೈದ್ಯರು ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ.ವೈದ್ಯರ ತಂಡಕ್ಕೆ ಭಕ್ತರ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ಶಿವಕುಮಾರ ಶ್ರೀಗಳು ಇಳಿ ವಯಸ್ಸಿನಲ್ಲಿ ಚಿಕಿತ್ಸೆ ಸ್ಪಂದಿಸುತ್ತಿರುವುದು ವೈದ್ಯಕೀಯ ಲೋಕಕ್ಕೆ ಅಚ್ಚರಿ ಮತ್ತು ಪವಾಡ ಸದೃಶವಾಗಿದೆ ಎಂದರು.ಭಕ್ತರು ಶ್ರೀಗಳ ಆರೋಗ್ಯ ದೃಷ್ಠಿಯಿಂದ ಭೇಟಿ ಮಾಡಬಾರದು ಎಂದು ಮನವಿ ಮಾಡುತ್ತೇನೆ ಎಂದರು.ನಾನೂ ಕೂಡಾ ಬಂದರೆ ತೊಂದರೆ ಆಗುತ್ತದೆ ಎಂದು ಕೊಂಡೆ. ಕಿರಿಯ ಶ್ರೀಗಳ ಅನುಮತಿ ಪಡೆದು ಭೇಟಿ ನೀಡಿದ್ದೇನೆ ಎಂದರು.
ಧಾರವಾಡ ಸಾಹಿತ್ಯ ಸಮ್ಮೇಳನಕ್ಕೆ ತೆರಳುವ ಮಾರ್ಗ ಮಧ್ಯೆ ಶ್ರೀಗಳ ಆರೋಗ್ಯ ವಿಚಾರಿಸಿ ಆಶೀರ್ವಾದ ಪಡೆದು ತೆರಳೋಣ ಅಂತ ಬಂದಿದ್ದೇನೆ ಎಂದು ಹೇಳಿದರು.
ಸಿಎಂ ಜೊತೆ ಸಚಿವ ಎಸ್.ಆರ್. ಶ್ರೀನಿವಾಸ, ಶಾಸಕ ಜಿ.ಬಿ. ಜ್ಯೋತಿಗಣೇಶ, ಮಾಜಿ ಸಚಿವ ಸೊಗಡು ಶಿವಣ್ಣ, ಮಾಜಿ ಶಾಸಕ ನಿಂಗಪ್ಪ ಇದ್ದರು.









