ಮುಂಬಯಿ: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಮಗ ಅರ್ಜುನ್ ತೆಂಡೂಲ್ಕರ್ 19 ವರ್ಷದೊಳಗಿನವರ ಭಾರತ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಗುರುವಾರ ನಡೆದ ಆಯ್ಕೆ ಸಮಿತಿಯಲ್ಲಿ ಅರ್ಜುನ್ ತೆಂಡೂಲ್ಕರ್ ಅವರನ್ನು 19 ವರ್ಷದೊಳಗಿನವರ ಭಾರತ ತಂಡಕ್ಕೆ ಆಯ್ಕೆ ಮಾಡಲಾಗಿದೆ. 18 ವರ್ಷದ ಅರ್ಜುನ್ ತೆಂಡುಲ್ಕರ್ ಆಲ್‌ರೌಂಡರ್ ಆಗಿ ಭರವಸೆ ಮೂಡಿಸಿದ್ದಾರೆ.









