ತುಮಕೂರು: ಕುಣಿಗಲ್‌ನ ಬಿದನಗೆರೆಯಲ್ಲಿ ಶನಿಮಹಾತ್ಮ ದೇವಾಲಯದ ಧರ್ಮದರ್ಶಿಯನ್ನು ಅಡ್ಡಗಟ್ಟಿದ ದರೋಡೆಕೋರರು 20 ಲಕ್ಷ ರೂಪಾಯಿ ಮತ್ತು ಕಾರನ್ನು ದರೋಡೆ ಮಾಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.
ಕಾರಿನಲ್ಲಿ ತೆರಳುತ್ತಿದ್ದ ಧನಂಜಯ ಸ್ವಾಮೀಜಿಯನ್ನು ಅಡ್ಡಗಟ್ಟಿದ 6 ಮಂದಿ ದರೋಡೆಕೋರರು ಕಣ್ಣಿಗೆ ರಾಸಾಯನಿಕ ಸಿಂಪಡಿಸಿ 20 ಲಕ್ಷ ರೂಪಾಯಿ ಹಣ ಮತ್ತು ಕಾರನ್ನು ಎಗರಿಸಿ ಪರಾರಿಯಾಗಿದ್ದಾರೆ.
ಧನಂಜಯ ಸ್ವಾಮೀಜಿಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.









