ಬೆಂಗಳೂರು: ಯುಬಿ ಸಿಟಿಯ ಫರ್ಜಿ ಕೆಫೆಯಲ್ಲಿ ಉದ್ಯಮಿ ಪುತ್ರ ವಿದ್ವತ್ ಮೇಲೆ ಹಲ್ಲೆ ನಡೆಸಿದ್ದ ಮೊಹಮ್ಮದ್ ನಲಪಾಡ್ ಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಇಬ್ಬರು ವ್ಯಕ್ತಿಗಳು ಹಾಗೂ ಎರಡು ಲಕ್ಷ ರೂ. ಮೌಲ್ಯದ ಬಾಂಡ್ ಭದ್ರತೆ ಪಡೆದು ಆರೋಪಿಗೆ ಜಾಮೀನು ನೀಡಲಾಗಿದೆ. ಅದೇ ರೀತಿ ನ್ಯಾಯಾಲಯದ ಅನುಮತಿ ಇಲ್ಲದೆ ಬೆಂಗಳೂರು ಬಿಟ್ಟು ಎಲ್ಲಿಯೂ ಹೋಗುವಂತಿಲ್ಲ ಮತ್ತು ನ್ಯಾಯಾಲಯದ ವಿಚಾರಣೆಗೆ ಕಡ್ಡಾಯವಾಗಿ ಹಾಜರಾಗಬೇಕು ಎಂಬ ಷರತ್ತುಗಳನ್ನು ವಿಧಿಸಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಫೆಬ್ರವರಿ 17 ರ ರಾತ್ರಿ 11 ಗಂಟೆ ಸುಮಾರಿಗೆ ಬೆಂಬಲಿಗರ ಜತೆ ಸೇರಿ ವಿದ್ವತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ನಲಪಾಡ್ ಕಳೆದ 3 ತಿಂಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ.









