ಕಾಂಗ್ರೆಸ್ ಸರ್ಕಾರದ ಪ್ರಮುಖ ಯೋಜನೆಗಳ ಮುಂದುವರಿಕೆ: ಸಿದ್ಧರಾಮಯ್ಯ

0
26

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಮಾಡಿದ ಎಲ್ಲಾ ಪ್ರಮುಖ ಯೋಜನೆಗಳು ಹಾಗೂ ಬಜೆಟ್ ಹಾಗೆಯೇ ಮುಂದುವರಿಯುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು.

ಮೈತ್ರಿ ಸರ್ಕಾರದ ಮೊದಲ ಸಮನ್ವಯ ಸಮಿತಿ ಇಂದು ಕುಮಾರಕೃಪ ಅತಿಥಿ ಗೃಹದಲ್ಲಿ ನಡೆಯಿತು. ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ನೇತ್ರತ್ವದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಶ್ ಅಲಿ, ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಮುಂತಾದವರು ಭಾಗವಹಿಸಿದ್ದರು.

ಸಭೆಯ ನಂತರ ಸುದ್ಧಿಗಾರರೊಂದಿಗೆ ಮಾತನಾಡಿದ ಸಿದ್ಧರಾಮಯ್ಯ, ಸಿಎಂ ಹಾಗೂ ಡಿಸಿಎಂ ಚರ್ಚೆ ಮಾಡಿ ಮೊದಲು 30 ನಿಗಮ ಮಂಡಳಿ ಅಧ್ಯಕ್ಷರನ್ನು ನೇಮಕ ಮಾಡಲಾಗುತ್ತದೆ. ಅತೃಪ್ತ ಶಾಸಕರ ಬಗ್ಗೆ ಕೂಡ ಚರ್ಚೆ ಮಾಡಿದ್ದೇವೆ. ಅದನ್ನು ಈಗ ಹೇಳೋಕೆ ಆಗಲ್ಲ ಎಂದರು.

ಇದೇ ವೇಳೆ ಮಾತನಾಡಿದ ಅವರು, ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೇರಿದಂತೆ ಹಿಂದಿನ ಸರ್ಕಾರದ ಪ್ರಮುಖ ಯೋಜನೆಗಳು ಮುಂದುವರೆಯಲಿವೆ ಎಂದು ಹೇಳಿದರು.

- Call for authors -

LEAVE A REPLY

Please enter your comment!
Please enter your name here