ನೆಲಮಂಗಲ: ಬೆಳ್ಳಂ ಬೆಳಗ್ಗೆ ಜವರಾಯನ ಹಟ್ಟಹಾಸಕ್ಕೆ ಇಬ್ಬರು ಬಲಿಯಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿಯ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದ ಕಾರು ಸರ್ವಿಸ್ ರಸ್ತೆಯಿಂದ ಹೊರಹೋಗಿ ಪಲ್ಟಿಯಾದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ.
ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಯಂಟಗಾನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಈ ಘಟನೆ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಕ್ಯಾಬ್ ಚಾಲಕ ಶ್ರೀಧರ್ ಮತ್ತು ಪುನೀತ್ ಮೃತ ದುರ್ದೈವಿಗಳಾಗಿದ್ದು, ಮೃತರು ಹಾಸನ ಹೊಳೆನರಸಿಪುರ ತಾಲೂಕಿನ ಗೊಂದಮಲೇನಹಳ್ಳಿಯವರು ಎಂದು ತಿಳಿದು ಬಂದಿದೆ.
ಇನ್ನು ಅಪಘಾತದ ತೀವ್ರತೆಗೆ ಮೃತರ ಇಬ್ಬರ ಮೆದಳು ಛಿದ್ರವಾಗಿದೆ, ಅಪಘಾತದಲ್ಲಿ ಮತ್ತೊಬ್ಬ ಪ್ರಯಾಣಿಕ ಸುಮನ್ ಗೆ ಗಂಭೀರ ಗಾಯವಾಗಿದ್ದು ಅಸ್ಪತ್ರೆಗೆ ದಾಖಲಿಸಲಾಗಿದೆ. ಈ ಭೀಕರ ಅಪಘಾತಕ್ಕೆ ಕಾರಿನ ಅತೀಯಾದ ವೇಗ ಹಾಗೂ ಚಾಲಕನ ನಿಯಂತ್ರಣ ತಪ್ಪಿದ್ದೆ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ಈ ಸಂಬಂದ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.









