ಹುಬ್ಬಳ್ಳಿ: ಲೋಕಸಭಾ ಚುನಾವಣೆ ಹತ್ತಿರದಲ್ಲಿದೆ. ಉತ್ತರ ಪ್ರದೇಶದಲ್ಲಿ ಹೆಚ್ಚು ಸ್ಥಾನಗಳಿರುವುದರಿಂದ ಏರ್ ಶೋ ವನ್ನು ಲಕ್ನೋಗೆ ಸ್ಥಳಾಂತರಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿರಬಹುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಹುಬ್ಬಳ್ಳಿಯಲ್ಲಿ ನ್ಯಾಯಾಲಯದ ಸಂಕೀರ್ಣ ಉದ್ಘಾಟನೆಗೆ ಆಗಮಿಸಿದ್ದ ಸಿಎಂ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಹಿಂದೆ ಕರ್ನಾಟಕದಲ್ಲಿ ಏರ್‌ಶೋ ನಡೆಸಲು ಎಲ್ಲಾ ರೀತಿಯ ಮೂಲಸೌಕರ್ಯಗಳನ್ನು ನೀಡಲಾಗಿತ್ತು. ಏರ್ ಶೋ ಇಲ್ಲಿಂದ ಸ್ಥಳಾಂತರಿಸಲಾಗುತ್ತದೆ ಎಂದು ಕೇಳಿದ್ದೇನೆ. ಆದರೆ, ಅಧಿಕೃತವಾಗಿ ನನಗಿನ್ನೂ ಮಾಹಿತಿ ಬಂದಿಲ್ಲ ಎಂದು ತಿಳಿಸಿದರು









