ನವದೆಹಲಿ: ಅನಾರೋಗ್ಯದ ಕಾರಣದಿಂದ ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಸೋಮವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
93ರ ಹರಯದ ವಾಜಪೇಯಿ ಅವರ ಆರೋಗ್ಯ ಕುರಿತು ದೆಹಲಿ ಏಮ್ಸ್ ನಿರ್ದೇಶಕ ಡಾ.ರಣ್ ದೀಪ್ ಗುಲೇರಿಯಾ ಮಾಹಿತಿ ನೀಡಿದ್ದು, ವಾಜಪೇಯಿಯವರ ಆರೋಗ್ಯದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ, ಇದೊಂದು ನಿಗದಿತ ಆರೋಗ್ಯ ತಪಾಸಣೆ ಎಂದು ಹೇಳಿದ್ದಾರೆ.









