ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ(93) ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರ ಆರೋಗ್ಯ ಸುಧಾರಣೆಗಾಗಿ ದೇಶಾದ್ಯಂತ ಹೋಮ ಹವನಗಳನ್ನು ನಡೆಸಲಾಗುತ್ತಿದೆ.
ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕಳೆದ ಕೆಲ ದಿನಗಳಿಂದ ಅಟಲ್ ಬಿಹಾರಿ ವಾಜಪೇಯಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ವಾಜಪೇಯಿ ಅವರ ಆರೋಗ್ಯದ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಏಮ್ಸ್, ಕಳೆದ 9 ವಾರಗಳಿಂದ ಚಿಕಿತ್ಸೆ ಪಡೆಯುತ್ತಿರುವ ವಾಜಪೇಯಿ ಅವರ ಆರೋಗ್ಯ ದುರದೃಷ್ಟವಶಾತ್ ಇನ್ನಷ್ಟು ಹದಗೆಟ್ಟಿದೆ, ಆಮ್ಲಜನಕದ ಬೆಂಬಲದಲ್ಲಿ ಅವರು ಉಸಿರಾಡುತ್ತಿದ್ದಾರೆ ಎಂದು ತಿಳಿಸಿದೆ.
ಈಗಾಗಲೇ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೇರಿದಂತೆ ಕೇಂದ್ರ ಸಚಿವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ಏಮ್ಸ್ ಆಸ್ಪತ್ರೆಗೆ ಗಣ್ಯರ ಭೇಟಿ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ.










