ಬೆಂಗಳೂರು:ವಿಧಾನಸಭೆಯಿಂದ ವಿಧಾನಪರಿಷತ್ ಗೆ
ನಡೆಯುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳಾಗಿ ಪ್ರತಾಪ್ ಸಿಂಹ ನಾಯಕ್,ಆರ್.ಶಂಕರ್, ಎಂಟಿಬಿ ನಾಗರಾಜ್ ಹಾಗೂ ಸುನಿಲ್ ವಲ್ಯಾಪುರೆಯವರು ನಾಮಪತ್ರ ಸಲ್ಲಿಸಿರು.
ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ ಅಭ್ಯರ್ಥಿಗಳು ಸಿಎಂಗೆ ಅಭಿನಂದನೆ ಸಲ್ಲಿಸಿದರು ನಂತರ ಬಿಜೆಪಿ ಕಚೇರಿಗೆ ತೆರಳಿ ಬಿ ಫಾರಂ ಪಡೆದರು ಅಲ್ಲಿಂದ ವಿಧಾನಸೌಧಕ್ಕೆ ತೆರಳಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ರಾಜ್ಯಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಭೈರತಿ ಬಸವರಾಜು ಮತ್ತು ಎಸ್.ಟಿ.ಸೋಮಶೇಖರ್ ಉಪಸ್ಥಿತರಿದ್ದರು.









