ಬೆಂಗಳೂರು: ಕಾಂಗ್ರೆಸ್ ಸಚಿವರಿಗೆ ವೈದ್ಯಕೀಯ ಶಿಕ್ಷಣ ಮತ್ತು ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ತಮ್ಮ ಗೃಹ ಕಚೇರಿಯಲ್ಲಿ ಉಪಹಾರ ಕೂಟ ಏರ್ಪಡಿಸುವ ಮೂಲಕ ಕಾಂಗ್ರೆಸ್‌ನಲ್ಲಿ ತಾವು ಕೂಡ ಒಬ್ಬ ಪ್ರಭಾವಿ ನಾಯಕ ಎಂದು ಶಕ್ತಿ ಪ್ರದರ್ಶನ ಮಾಡಿದ್ದಾರೆ.
ಮೈತ್ರಿ ಸರ್ಕಾರದಲ್ಲಿರುವ ಕಾಂಗ್ರೆಸ್‌ನ ೧೬ ಸಚಿವರನ್ನು ಡಿ.ಕೆ.ಶಿವಕುಮಾರ್ ಉಪಹಾರ ಕೂಟಕ್ಕೆ ಆಹ್ವಾನಿಸಿದ್ದರು. ಬೆಳಗಾವಿ ರಾಜಕಾರಣದ ಅಸಮಾಧಾನದಿಂದ ಸಚಿವ ರಮೇಶ್ ಜಾರಕಿಹೊಳಿ ಹಾಗೂ ವಿದೇಶಿ ಟೂರ್ ನಲ್ಲಿರುವ ಸಚಿವ ರಾಜಶೇಖರ್ ಪಾಟೀಲ್ ಪಾಟೀಲ್ ಹೊರತುಪಡಿಸಿ ಉಳಿದೆಲ್ಲಾ ಸಚಿವರು ಉಪಹಾರ ಕೂಟಕ್ಕೆ ಆಗಮಿಸಿದ್ದರು.
ಸಚಿವರಾದ ಪ್ರಿಯಾಂಕ್ ಖರ್ಗೆ, ಜಮೀರ್ ಅಹಮದ್, ವೆಂಕಟರಮಣಪ್ಪ, ಕೃಷ್ಣ ಭೈರೇಗೌಡ, ಶಿವಶಂಕರ್ ರೆಡ್ಡಿ, ಆರ್.ಶಂಕರ್, ಶಿವಾನಂದ ಪಾಟೀಲ್, ಪುಟ್ಟರಂಗಶೆಟ್ಟಿ, ಕೆ.ಜೆ ಜಾರ್ಜ್, ಆರ್.ವಿ ದೇಶಪಾಂಡೆ, ಜಯಮಾಲಾ, ಪರಮೇಶ್ವರ್, ಯು.ಟಿ ಖಾದರ್ ಉಪಹಾರ ಕೂಟದಲ್ಲಿ ಪಾಲ್ಗೊಂಡಿದ್ದರು.









