ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದು, ಮಾಜಿ ರಾಜ್ಯಸಭಾ ಸದಸ್ಯ ಬಿ.ಕೆ ಹರಿಪ್ರಸಾದ್ ಹಾಗು ಹಾಲಿ ಪರಿಷತ್ ಸದಸ್ಯ ನಾಸೀರ್ ಅಹ್ಮದ್ ಗೆ ಟಿಕೆಟ್ ಘೋಷಿಸಿದೆ.
ನಾಮಪತ್ರ ಸಲ್ಲಿಕೆಗೆ ನಾಳೆ ಕಡೆಯ ದಿನವಾಗಿದ್ದು, ಇಂದು ಸಂಜೆ ಅಭ್ಯರ್ಥಿಗಳ ಹೆಸರು ಪ್ರಕಟಿಸಿ ನಾಮಪತ್ರ ಸಲ್ಲಿಕೆಗೆ ಸಿದ್ದತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದೆ.
ಇನ್ನುಳಿದಂತೆ ಜೆಡಿಎಸ್ ತನ್ನ ಒಂದು ಸ್ಥಾನಕ್ಕೆ ಹೆಸರು ಪ್ರಕಟಿಸಿದ್ದು, ಬಿಜೆಪಿ ತನ್ನ ಪಾಲಿನ ನಾಲ್ಕು ಸ್ಥಾನಕ್ಕೆ ಅಭ್ಯರ್ಥಿಗಳ ಹೆಸರು ಪ್ರಕಟಿಸಬೇಕಿದೆ, ಕೊನೆ ಹಂತದ ಕಸರತ್ತು ಬಿಜೆಪಿಯಲ್ಲಿ ನಡೆಯುತ್ತಿದೆ.










