ಜಲಸಮಾಧಿ: ಮಂಡ್ಯದ ಏಳು ಜನರಿಗೆ ಪರಿಹಾರ

0
2

 

ಬೆಂಗಳೂರು, ಜೂನ್ 15: ಮಂಡ್ಯ ಜಿಲ್ಲೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಜೂನ್ 14 ರಂದು ಜಲಸಮಾಧಿಯಾದ ಏಳು ಮಂದಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಒಟ್ಟು 22 ಲಕ್ಷ ರೂ.ಗಳ ಪರಿಹಾರವನ್ನು ಒದಗಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ.

ನಾಗಮಂಗಲ ತಾಲ್ಲೂಕಿನ ಬೀರನಹಳ್ಳಿಯ ಶ್ರೀಮತಿ ಗೀತಾ, ಕು.ಸವಿತಾ ಹಾಗೂ ಕು.ಸೌಮ್ಯ ಅವರಿಗೆ ತಲಾ 5 ಲಕ್ಷ ರೂ.ಗಳು ಹಾಗೂ ಇದೇ ತಾಲೂಕಿನ ಚೋಳಸಂದ್ರ ಗ್ರಾಮದ ಕು.ರಶ್ಮಿ ಮತ್ತು ಕು.ಇಂಚರಾ, ಕೆ.ಆರ್.ಪೇಟೆ ತಾಲ್ಲೂಕಿನ ಹುಳಿ ಗಂಗನಹಳ್ಳಿಯ ಮಾಸ್ಟರ್ ಅಭಿಷೇಕ್ ಮತ್ತು ಆದಿಹಳ್ಳಿಯ ಕುಮಾರ್ ಅವರುಗಳಿಗೆ ತಲಾ 2 ಲಕ್ಷ ರೂ.ಗಳನ್ನು ಪರಿಹಾರ ನಿಧಿಯಿಂದ ತುರ್ತಾಗಿ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.

- Call for authors -

LEAVE A REPLY

Please enter your comment!
Please enter your name here