ಬೆಂಗಳೂರು, ಜೂ-9: ರಾಜ್ಯಸಭಾ ಚುನಾವಣೆಗೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ನಾಮ ಪತ್ರ ಸಲ್ಲಿಕೆ ಮಾಡಿದ್ದಾರೆ. ಬಿಜೆಪಿಯಿಂದಲೂ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು ಪಕ್ಷೇತರ ಅಭ್ಯರ್ಥಿ ಸೇರಿ ಐವರು ಕಣದಲ್ಲಿದ್ದಾರೆ.
ಕಾಂಗ್ರೆಸ್ ನಿಂದ ಮಲ್ಲಿಕಾರ್ಜುನ ಖರ್ಗೆ ನಿನ್ನೆ ನಾಮ ಪತ್ರ ಸಲ್ಲಿಸಿದ ಬೆನ್ನಲ್ಲೇ ಕಾಂಗ್ರೆಸ್ ಬೆಂಬಲದೊಂದಿಗೆ ದೊಡ್ಡಗೌಡರು ಇಂದು ಅಖಾಡಕ್ಕಿಳಿದರು.ವಿಧಾನಸೌಧ ಸೌಧಕ್ಕೆ ತೆರಳಿ 12.30 ಕ್ಕೆ ನಾಮಪತ್ರ ಸಲ್ಲಿಸಿದರು.
ದೇವೇಗೌಡರು ನಾಮಪತ್ರ ಸಲ್ಲಿಸಿದ ನಂತರ 1 ಗಂಟೆಗೆ ಬಿಜೆಪಿ ಅಭ್ಯರ್ಥಿಗಳಾದ ಈರಣ್ಣ ಕಡಾಡಿ ಹಾಗೂ ಅಶೋಕ್ ಗಸ್ತಿಗಸ್ತಿ ಸಿಎಂ ಯಡಿಯೂರಪ್ಪ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು.
ಜೆಡಿಎಸ್ ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ನಂತರ ಪಕ್ಷೇತರ ಅಭ್ಯರ್ಥಿಯಾಗಿ ಸಂಗಮೇಶ್ ಚಿಕ್ಕನರಗುಂದ ಎನ್ನುವವರು ನಾಮಪತ್ರ ಸಲ್ಲಿಕೆ ಮಾಡಿದರು.
ಪಕ್ಷೇತರ ಅಭ್ಯರ್ಥಿಗೆ ಸೂಚಕರು ಇಲ್ಲದ್ದರಿಂದ ಅವರ ನಾಮ ಪತ್ರ ತಿರಸ್ಕಾರ ಖಚಿತವಾಗಿದ್ದು,ಉಳಿದ ನಾಲ್ವರ ಅವಿರೋಧ ಆಯ್ಕೆ ಸ್ಪಷ್ಟವಾಗಿದೆ.









