ಚಿಕ್ಕಮಗಳೂರು : ಕಾಂಗ್ರೆಸ್ ಪಕ್ಷ ಸವಾಲಿನ ದಿನಗಳನ್ನು ಎದುರಿಸುತ್ತಿದ್ದು ಇಂತಹ ಸಂದರ್ಭದಲ್ಲಿ ಕೆಪಿಸಿಸಿ ಸಾರಥ್ಯವನ್ನು ಪಕ್ಷ ನನಗೆ ವಹಿಸಿದ್ದು ಸಮರ್ಥವಾಗಿ ಪರಿಸ್ಥಿತಿಯನ್ನು ನಿಭಾಯಿಸುತ್ತೇನೆ ಎಂದು ನೂತನವಾಗಿ ಕೆಪಿಸಿಸಿ ಅಧ್ಯಕ್ಷರಾಗಿ ನಿಯೋಜಿತಗೊಂಡಿರುವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಶಾರದಾ ಪೀಠಕ್ಕೆ ಕುಟುಂಬ ಸದಸ್ಯರೊಂದಿಗೆ ದಿನೇಶ್ ಗುಂಡೂರಾವ್ ಭೇಟಿ ನೀಡಿದರು.ಶಾರದಾಂಬೆಯ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಕೆ ಮಾಡಿದರು. ನಂತರ ಶೃಂಗೇರಿ ಶ್ರೀಗಳಿಂದ ಆಶೀರ್ವಾವದ ಪಡೆದುಕೊಂಡರು
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕೆಪಿಸಿಸಿ ನೂತನ ಸಾರಥಿ ದಿನೇಶ್ ಗುಂಡುರಾವ್,ಇಂತಹ ದೊಡ್ಡ ಜವಬ್ದಾರಿ ಕೊಟ್ಟಿದ್ದಕ್ಕೆ ಕಾಂಗ್ರೆಸ್ ನ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ರಾಜ್ಯ ಮುಖಂಡರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸವಾಲಿನ ದಿನಗಳು.ಸವಾಲಿನ ದಿನಗಳಲ್ಲಿ ಈ ಜವಾಬ್ದಾರಿ ಸಿಕ್ಕಿರುವುದು ಹೆಮ್ಮೆಯ ವಿಚಾರ.ಪಕ್ಷದ ಸಂಘಟನೆಯಲ್ಲಿ ನನ್ನ ಅನುಭವ ಅಧ್ಯಕ್ಷ ಸ್ಥಾನ ಸಿಗಲು ಸಹಕಾರಿಯಾಗಿದೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಇದ್ದು ಮುಂಬರುವ ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಸರ್ಕಾರವನ್ನು ಯಶಸ್ವಿಯಾಗಿ ಕೊಂಡಯ್ಯಬೇಕು.ರಾಜ್ಯದ ಜನರಿಗೆ ಪಕ್ಷದ ಯೋಜನೆಗಳನ್ನು ತಲುಪಿಸಬೇಕು.ನನ್ನ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದರು.









