ಕಲಬುರ್ಗಿ:ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಇಂದು ಜಿಲ್ಲಾ ಪ್ರವಾಸದಲ್ಲಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮತ್ತು ಸಂಸತ್ ಸದಸ್ಯ ಉಮೇಶ್ ಜಾಧವ್ ಅವರು ಕಲಬುರ್ಗಿಯ ಜಿಮ್ಸ್ ನಲ್ಲಿ ರಕ್ತದಾನ ಮಾಡುವ ಮೂಲಕ ಸಾರ್ಥಕವಾಗಿ ಆಚರಿಸಿದರು.
ಕೋವಿಡ್ ವಿರುದ್ಧ ಹೋರಾಟ ನಡೆಯುತ್ತಿರುವ ಈ ದಿನಗಳಲ್ಲಿ ರಕ್ತನಿಧಿಗಳು ದಾನಿಗಳ ಕೊರತೆ ಎದುರಿಸುತ್ತಿವೆ. ಇಂತಹ ಸಂದರ್ಭದಲ್ಲಿ ನಾನು ರಕ್ತದಾನ ಮಾಡಿದ್ದು ಸಾರ್ಥಕ ಭಾವ ಮೂಡಿಸಿದೆ. ಇಂತಹ ಸಂಕಷ್ಟ ಸಂದರ್ಭದಲ್ಲಿ ರಕ್ತದಾನ ಮಾಡುವುದು ಅತ್ಯಂತ ಶ್ರೇಷ್ಟ ಕಾರ್ಯ. ಪ್ರತಿಯೊಬ್ಬರು ರಕ್ತದಾನ ಮಾಡುವ ಮೂಲಕ ಜನಪರವಾದ ಧೋರಣೆ ತಾಳಬೇಕು ಎಂದು ಸಚಿವ ಸುಧಾಕರ್ ಪ್ರತಿಕ್ರಿಯೆ ನೀಡಿದರು.









