ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತ್ರತ್ವದ ಕೆಂದ್ರ ಸರ್ಕಾರ, 2ನೇ ಅವಧಿಯ 1 ವರ್ಷ ಪೂರೈಸಿದ ಹಿನ್ನಲೆಯಲ್ಲಿ, ಕೇಂದ್ರ ಸರ್ಕಾರದ ಜನಪರ ಕಾರ್ಯಕ್ರಮಗಳು ಹಾಗೂ ಪ್ರಧಾನಿಯವರ ಹಸ್ತಕ್ಷರವಿರುವ ಪತ್ರವನ್ನು ಹಿಂದೂ ಧಾರ್ಮಿಕ ದತ್ತಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪುಜಾರಿ ಮನೆಮನೆಗೆ ತಲುಪಿಸುವ ಕಾರ್ಯಕ್ಕೆ ಚಾಲನೆ ನೀಡಿದರು.
ಕೋಡಿ ಕನ್ಯಾನ ಹಾಗೂ ವಡ್ಡರ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮನೆಮನೆಗೆ ಭೇಟಿ ನೀಡಿದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಕರಪತ್ರಗಳನ್ನು ವಿತರಿಸಿದರು.ಈ ವೇಳೆ ಮಾತನಾಡುತ್ತಾ ಭಾರತ ದೇಶದ ಪ್ರತಿಯೊಬ್ಬ ಪ್ರಜೆಯು ಹೆಮ್ಮೆ ಪಡುವಂತಹ ಕೆಲಸವನ್ನು ಮೋದಿಯವರ ಸರ್ಕಾರ ಮಾಡುತ್ತಿದೆ. ಅತೀ ಕಡಿಮೆ ಸಮಯದಲ್ಲಿ ರಾಮ ಜನ್ಮ ಭೂಮಿ ವಿವಾದ, ಆರ್ಟಿಕಲ್ 370 ರದ್ದು ಗೊಳಿಸಿ ಕಾಶ್ಮೀರದ ಜನರಿಗೆ ಬದುಕಲು ಭಾರತೀಯ ನೆಲದಲ್ಲಿ ಅಧಿಕಾರ ನೀಡಿದ್ದು, ವಿಪಕ್ಷಗಳ ವಿರೋಧದ ನಡುವೆಯೂ ಪೌರತ್ವ ತಿದ್ದುಪಡಿ ಕಾಯ್ದೆ ತಂದಿರುವುದು, ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರಿಗೆ ತ್ರಿವಳಿ ತಲಾಖ್ ನಿಂದ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಟ, ಸೇರಿದಂತೆ ಮೋದಿ ಸರ್ಕಾರದ ಸಾಧನೆಗಳ ಪಟ್ಟಿಯನ್ನು ಬಿಚ್ಚಿಡುತ್ತಿವೆ ಎಂದರು.
ಜಗತ್ತನ್ನೇ ಕಾಡಿದ ಕೊರೊನಾ, ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ನಿಯಂತ್ರಣಕ್ಕೆ ತರುವ ರೀತಿ ಹಾಗೂ ಕೊರೊನಾ ವಿರುದ್ಧ ಹೊರಾಡುವ ಕಾರ್ಯಕ್ರಮಗಳು, ಭಾರತದ ಬಗ್ಗೆ ವಿಶ್ವವೇ ಹೆಮ್ಮೆ ಪಡುವಂತೆ ಮಾಡಿದೆ ಎಂದು, ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.









