ಬೆಂಗಳೂರು: ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಪೊಲೀಸ್ ಲಿಖಿತ ಪರೀಕ್ಷೆಗಳನ್ನು ಮುಂದೂಡಿರುವುದಾಗಿ ನೇಮಕಾತಿ ವಿಭಾಗದ ಅಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದು, ಮುಂದಿನ ಪರೀಕ್ಷಾ ದಿನಾಂಕವನ್ನು ಇನ್ನು ತಿಳಿಸಿಲ್ಲ.
ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆಯನ್ನು ಇದೇ ತಿಂಗಳ 19ರಂದು ನಿಗಧಿ ಪಡಿಸಲಾಗಿತ್ತು. ಆದರೆ, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯ ಕಾರಣದಿಂದ ಪ್ರವಾಹ ಅಧಿಕವಾಗಿರುವ ಹಿನ್ನೆಲೆಯಲ್ಲಿ ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಅಡಚಣೆ ಉಂಟಾಗುವುದರಿಂದ ಲಿಖಿತ ಪರೀಕ್ಷೆಯನ್ನು ಮುಂದೂಡಲಾಗಿದೆ.
ಮುಂದಿನ ಲಿಖಿತ ಪರೀಕ್ಷೆಯ ದಿನಾಂಕವನ್ನು ಇನ್ನು ತಿಳಿಸಿಲ್ಲ. ಪರೀಕ್ಷೆ ಮುಂದೂಡಿರುವ ಕುರಿತು ಅಭ್ಯರ್ಥಿಗಳಿಗೆ ಎಸ್.ಎಂ.ಎಸ್ ಮೂಲಕ ಮಾಹಿತಿ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.









