ಬೆಂಗಳೂರು:ವಿಧಾನ ಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಇಂಚರ ಗೋವಿಂದರಾಜ್ ಅವರು ವಿಧಾನಸೌಧದಲ್ಲಿ ಗುರುವಾರ ನಾಮಪತ್ರ ಸಲ್ಲಿಸಿದರು. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ಬಸವರಾಜ ಹೊರಟ್ಟಿ ಹಾಗೂ ಶಾಸಕ ಶ್ರೀನಿವಾಸ್ ಅವರು ಈ ವೇಳೆ ಹಾಜರಿದ್ದರು.
ನಾಮಪತ್ರ ಸಲ್ಲಿಕೆಯ ನಂತರ ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ,
ನಮ್ಮ ಪಕ್ಷದಿಂದ ಗೋವಿಂದರಾಜು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ, ಕೋಲಾರ ಮೂಲದ ಸಾಮಾನ್ಯ ಕಾರ್ಯಕರ್ತ ಅವರು, ಕೋಲಾರ ಭಾಗದಲ್ಲಿ ಪಕ್ಷದ ಹಿತದೃಷ್ಟಿಯಿಂದ ಅವರಿಗೆ ಟಿಕೆಟ್ ನೀಡಲಾಗಿದೆ,ಚಿಕ್ಕಬಳ್ಳಾಪುರ- ಕೋಲಾರ ಭಾಗದಲ್ಲಿ ಪಕ್ಷ ಸಂಘಟನೆ ಮತ್ತಷ್ಟು ಶಕ್ತಿ ಸಿಗಲಿದೆ
ಪಕ್ಷದ ಹಿತದೃಷ್ಟಿಯಿಂದ ಅವರಿಗೆ ನಾವು ಟಿಕೆಟ್ ನೀಡಿದ್ದೇವೆ ಎಂದರು
ಕಳೆದ ಹಲವು ದಿನಗಳಿಂದ ಗಡಿ ಭಾಗದಲ್ಲಿ ಭಾರತ- ಚೀನಾ ನಡುವೆ ಸಂಘರ್ಷ ಆಗ್ತಿದೆ ನಮ್ಮ ೨೦ ಯೋಧರು ಹುತಾತ್ಮರಾಗಿದ್ದಾರೆ ಭಾರತಕ್ಕೆ ಇದು ಸಂಕಷ್ಟದ ಸಮಯ ಕೊರೊನಾ ದಿಂದ ನಮ್ಮ ದೇಶದ ಆರ್ಥಿಕ ಪರಿಸ್ಥಿತಿ ಸರಿ ಇಲ್ಲ
ಇದು ಯುದ್ಧ ಮಾಡುವ ಸಮಯ ಅಲ್ಲ ಮಾತುಕತೆ ಮುಖಾಂತರ ಶಾಂತಿ ಕಾಪಾಡಬೇಕಿದೆ ಇದು ನನ್ನ ಸಲಹೆ ಎಂದರು.
ಪ್ರಚಾರ ಮಾಡಿಕೊಂಡು ಯಾಕೆ ಮಾಡಬೇಕು? ನಮ್ಮ ಸಾಮರ್ಥ್ಯ ಮೊದಲು ಹೆಚ್ಚಿಸಿಕೊಳ್ಳಬೇಕು ಪ್ರತಿನಿತ್ಯ ಚೀನಾ ವಸ್ತುಗಳ ಮೇಲೆ ಜನರು ಅವಲಂಬಿತರಾಗಿದ್ದಾರೆ
ನಮ್ಮಲ್ಲಿ ವಸ್ತುಗಳ ಉತ್ಪಾದನೆ ಮಾಡಿಕೊಳ್ಳಲು ಮೊದಲು ಗಮನ ಕೊಡಬೇಕು ಪ್ರಚಾರಕ್ಕಾಗಿ ಶೋ ಮಾಡಲು ಗೆಲುವು ಸಾಧ್ಯ ಇಲ್ಲ ಇಂತಹ ವಿಚಾರದಲ್ಲಿ ಸೈಲೆಂಟಾಗಿ ನಮ್ಮ ಸಾಮರ್ಥ್ಯ ಹೆಚ್ಚಿಸಿಕೊಳ್ಳಬೇಕು ಎಂದರು









