ಸಚಿವರಾದ ಬಳಿಕ ಮೊದಲ ಬಾರಿ ತವರಿಗೆ ಜಿಟಿ ದೇವೇಗೌಡ ಭೇಟಿ: ಮೈಸೂರಲ್ಲಿ ಟೆಂಪಲ್‌ರನ್

0
550

ಮೈಸೂರು: ಸಚಿವರಾದ ಬಳಿಕ ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡರ ಮೊದಲ ಬಾರಿಗೆ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಿದ್ರು.ತವರು ಜಿಲ್ಲೆ ಮೈಸೂರಿನಲ್ಲಿ ಕುಟುಂಬ ಸಮೇತ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ರು.

ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಕುಟುಂಬ ಸಮೇತ ಭೇಟಿ ನೀಡಿದ ಸಚಿವ ಜಿ.ಟಿ ದೇವೇಗೌಡ, ಆದಿ ದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಹಾಗೆಯೇ ಹುಟ್ಟೂರು ಗುಂಗ್ರಾಲ್ ಛತ್ರದಲ್ಲಿ ಮನೆದೇವರಿಗೆ ಪೂಜೆ ಸಲ್ಲಿಸಿದ ಅವರು ನಂತ್ರ ತ್ರಿಪುರ ಸುಂದರಿ ಉತ್ತನಹಳ್ಳಿ ಮಾರಮ್ಮನ ದರ್ಶನ ಮಾಡಿದ್ರು.

ಇದಾದ ಬಳಿಕ ನಂಜನಗೂಡು ಭೇಟಿ ನೀಡಿ ಅಲ್ಲಿನ ಪ್ರಸಿದ್ಧ ನಂಜುಂಡೇಶ್ವರನಿಗೆ ವಿಶೇಷ ಪೂಜೆ ವಿಶೇಷ ಪೂಜೆ ಸಲ್ಲಿಸಿ ನಂತರ ತಗಡೂರು ಅಂಕನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದು.ಹೀಗೆ ಉನ್ನತ ಶಿಕ್ಷಣ ಸಚಿವರಾದ ಬಳಿಕ ತವರು ಜಿಲ್ಲೆಯಲ್ಲಿ ಜಿಟಿ ದೇವೇಗೌಡ ಟೆಂಪಲ್ ರನ್ ಮಾಡಿದ್ರು.

ಚಾಮುಂಡಿ ಬೆಟ್ಟದಲ್ಲಿ ಮಾತನಾಡಿದ ಸಚಿವ ಜಿ.ಟಿ ದೇವೇಗೌಡರು, ಮೊದಲ ಆಷಾಡ ಶುಕ್ರುವಾರಕ್ಕೆ ಸಿಎಂ ಹೆಚ್.ಡಿ ಕುಮಾರಸ್ವಾಮು ಚಾಮುಂಡೇಶ್ವರಿ ಬೆಟ್ಟಕ್ಕೆ ಬರ್ತಾರೆ. ರಾಜ್ಯದಲ್ಲಿ ಉತ್ತಮ ಮಳೆ ಬೆಳೆಯಾಗಿದ್ದು ನಾಡಿನ ಎಲ್ಲಾ ಜಲಾಶಯಗಳು ಭರ್ತಿಯಾಗಿವೆ. ಈ ಭಾರಿ ಅದ್ದೂರಿ ,ವೈಭವವಾಗಿ ದಸರಾ ಆಚರಣೆಗೆ ನಿರ್ಧಾರ ಮಾಡಲಾಗಿದೆ. ಸಿ ಎಂ ಎಚ್ ಡಿ ಕುಮಾರಸ್ವಾಮಿ ಅವರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ ಎಂದರು.

ಉನ್ನತ ಶಿಕ್ಷಣ ಖಾತೆ ಕೊಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ಜಿ.ಟಿ ದೇವೆಗೌಡ, ಕೊಟ್ಟ ಖಾತೆಯನ್ನ ಉತ್ತಮವಾಗಿ ನಿಭಾಯಿಸುತ್ತೇನೆ. ರಾಜ್ಯಪಾಲರ ಜೊತೆ ಕಾರ್ಯಕ್ರಮ ಮಾಡಿದ್ದೇನೆ. ಹತ್ತು ಸಾವಿರ ಅತಿಥಿ ಉಪನ್ಯಾಸಕರ ನೇಮಕ ಮಾಡ್ತೇನೆ. ಅತೀ ಶೀಘ್ರದಲ್ಲಿ ಮೈಸೂರು ಕುಲಪತಿ ನೇಮಕ ಮಾಡಲಾಗುತ್ತದೆ.
ಇನ್ನು ಕೆ ಎಸ್ ಒಯು ಮಾನ್ಯತೆ ವಿಚಾರ ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆದಿದೆ ಎಂದು ಮಾಹಿತಿ ನೀಡಿದರು.

- Call for authors -

LEAVE A REPLY

Please enter your comment!
Please enter your name here