ಬೆಂಗಳೂರು: ಮಾಜಿ ಪ್ರಧಾನಿ ಎಚ್,ಡಿ. ದೇವೇಗೌಡ ಅವರು ಇಂದು ಆಂದ್ರಪ್ರದೇಶದಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರನ್ನು ಭೇಟಿ ಮಾಡಿ ಚರ್ಚಿ ನಡೆಸಿದ್ದಾರೆ.
ಖಾಸಗಿ ಕಾರ್ಯಕ್ರಮಕ್ಕಾಗಿ ಹೈದ್ರಾಬಾದ್‌ಗೆ ತೆರಳಿರುವ ದೇವೇಗೌಡರು, ಚಂದ್ರಶೇಖರ್ ರಾವ್ ಅವರ ನಿವಾಸಕ್ಕೆ ತೆರಳಿ ಭೇಟಿ ಮಾಡಿದ್ದು, ಕೆಲಕಾಲ ಮಾತುಕತೆ ನಡೆಸಿದ್ದಾರೆ. ದೇವೇಗೌಡರು ಹೈದರಾಬಾದ್ ಬಾದ್‌ಗೆ ತೆರಳಿದ್ದ ಕಾರಣ ಚಂದ್ರಶೇಖರ್ ರಾವ್ ಅವರನ್ನು ಭೇಟಿ ಮಾಡಿದ್ದಾರೆ ಭೇಟಿಯ ಹಿಂದೆ ಯಾವುದೇ ಉದ್ದೇಶವಿಲ್ಲ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ದೇಶದಲ್ಲಿ ತೃತೀಯ ರಂಗ ರಚನೆಯ ಅಗತ್ಯದ ಬಗ್ಗೆ ಚರ್ಚೆ ನಡೆಯುತ್ತಿರುವ ಈ ಸಂದರ್ಭದಲ್ಲಿ ಇಬ್ಬರು ನಾಯಕರ ಭೇಟಿ ಕುತೂಹಲ ಮೂಡಿಸಿದೆ. ರಾಷ್ಟ್ರ ರಾಜಕಾರಣದಲ್ಲಿ ಮಹಾಘಟಬಂಧನ್ ರಚಿಸುವ ಯತ್ನ ನಡೆದಿದ್ದು, ಅದಕ್ಕೆ ಈ ಭೇಟಿ ಇನ್ನಷ್ಟು ಪುಷ್ಠಿ ನೀಡಿದೆ.









