ಬೆಂಗಳೂರು: ಕುಮಾರಸ್ವಾಮಿ ಅವರು ಈ ಹಿಂದೆ ಮಾತ್ರ ನನ್ನ ಸ್ನೇಹಿತರಾಗಿರಲಿಲ್ಲ. ಈಗಲೂ ಅವರು ನನ್ನ ದೋಸ್ತಿಯೇ. ಮುಂದೆಯೂ ಇರುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ರು.
ಬೆಂಗಳೂರಿನಲ್ಲಿಂದು ಸುದ್ಧಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಮಾಧ್ಯಮದವರು ಯಾವ ಆಧಾರದ ಮೇಲೆ ಡಿಕೆಶಿ-ಎಚ್ಡಿಕೆ ಹಳೇ ದೋಸ್ತಿ ಅಂತಾ ಹೇಳುತ್ತೀರಿ? ನೀವು ಇಬ್ಬರ ಮಧ್ಯೆ ದ್ವೇಷ ಇದೆ ಅಂತೀರಿ? ನಾನು ದ್ವೇಷ ಮಾಡುವ ಕಾಲ ಹೋಯ್ತು ಎಂದರು.
ಜೆಡಿಎಸ್ ಕೂಡ ಒಂದು ಪಕ್ಷ. ಅದರದೇ ಆದ ಸಂವಿಧಾನ, ಸಿದ್ಧಾಂತ ಇದೆ. ಅವರು ಹಾಗೂ ಬಿಜೆಪಿ ಹೇಗೆ ಒಪ್ಪಂದ ಮಾಡಿಕೊಳ್ಳುತ್ತಾರೋ ಅದು ಅವರಿಗೆ ಬಿಟ್ಟದ್ದು. ಬಿಜೆಪಿಯವರು ಅವರನ್ನು ಯಾವ ರೀತಿ ನೋಡುತ್ತಾರೋ ಗೊತ್ತಿಲ್ಲ. ನಾವಂತೂ ಆ ಪಕ್ಷವನ್ನು ಗೌರವದಿಂದ ನೋಡುತ್ತೇವೆ. ನಾನು ಬೇರೆ ಪಕ್ಷಗಳ ಬಗ್ಗೆ ಮಾತನಾಡಲ್ಲ. ಅವರು ಅನೇಕ ಬಾರಿ ಸರ್ಕಾರ ಮಾಡಿದ್ದಾರೆ. ನಾವು ಅವರ ಜತೆ ಸರ್ಕಾರ ಮಾಡಿದ್ದೇವೆ. ಅವರ ಬಗ್ಗೆ ಕೀಳಾಗಿ ಮಾತನಾಡಲು ನಾನು ಇಚ್ಚಿಸುವುದಿಲ್ಲ.









