ಚೆನ್ನೈ : ಡಿಎಂಕೆ ಮುಖ್ಯಸ್ಥ ಎಂ ಕರುಣಾನಿಧಿ ಅವರು ತೀವ್ರ ಅನಾರೋಗ್ಯದಿಂದ ಚೈನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಸಾವನ್ನಿಪ್ಪಿದ್ದು, ಆಸ್ಪತ್ರೆ ಮುಂಭಾಗ ಮತ್ತು ಕರುಣಾನಿಧಿ ಅವರ ನಿವಾಸದ ಎದುರು ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದಾರೆ.
ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ತಮಿಳು ನಾಡು ಪೊಲೀಸ್ ಡಿಜಿಪಿ ರಾಜ್ಯಾದ್ಯಂತ 1 ಲಕ್ಷಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ರಾಜ್ಯದ ಎಲ್ಲ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕಟ್ಟೆಚ್ಚರದಲ್ಲಿ ಮತ್ತು ಸಮವಸ್ತ್ರದಲ್ಲಿ ಇರುವಂತೆ ಫ್ಯಾಕ್ಸ್ ಸಂದೇಶ ರವಾನಿಸಿದ್ದಾರೆ.
ಡಿಎಂಕೆ ಕಾರ್ಯಾಧ್ಯಕ್ಷ ಮತ್ತು ಕರುಣಾನಿಧಿಯವರ ಪುತ್ರ ಎಂ ಕೆ ಸ್ಟಾಲಿನ್ ಮತ್ತು ಅವರ ಕುಟುಂಬ ಸದಸ್ಯರು ತಮಿಳು ನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಅವರನ್ನು ಭೇಟಿಯಾಗಿದ್ದಾರೆ. ಅಲ್ಲದೆ, ಆಸ್ಪತ್ರೆಯ ಇತ್ತೀಚಿನ ವರದಿ ಪ್ರಕಾರ ಕರುಣಾನಿಧಿ ಅವರ ದೇಹಾರೋಗ್ಯ ಅತ್ಯಂತ ಕ್ಷೀಣಿಸಿದೆ.
ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ರಾಜ್ಯದಿಂದ ತಮಿಳುನಾಡಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಗಳನ್ನು ಸ್ಥಗಿತಗೊಳಿಸಲಾಗಿದೆ. ಅಹಿತಕರ ಘಟನೆ ನಡೆಯುವ ಹಿನ್ನೆಲೆ ಬಸ್ ಸಂಚಾರ ಸ್ಥಗಿತಕ್ಕೆ ನಿರ್ಧರಿಸಲಾಗಿದ್ದು, 300 ರಿಂದ 400 ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ಕೆಎಸ್ಸಾರ್ಟಿಸಿ ಮೂಲಗಳ ತಿಳಿಸಿವೆ.









