ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಸಾರ್ವಕಾಲಿಕ ಉನ್ನತ ಬೆದರಿಕೆ ಇರುವ ಹಿನ್ನೆಲೆಯಲ್ಲಿ
ಗೃಹ ಸಚಿವಾಲಯ ರಾಜ್ಯಗಳಿಗೆ ಹೊಸ ಭದ್ರತಾ ಮಾರ್ಗಸೂಚಿಯನ್ನು ಹೊರಡಿಸಿದೆ. ಸಚಿವರು ಮತ್ತು ಅಧಿಕಾರಿಗಳು ಸಹ ಪ್ರಧಾನಮಂತ್ರಿಗೆ ತುಂಬಾ ಹತ್ತಿರ ಬರದಂತೆ ಎಚ್ಚರವಹಿಸಲು ಎಸ್‌ಪಿಜಿಗೆ ಸೂಚನೆ ನೀಡಲಾಗಿದೆ.
ಪ್ರಧಾನಮಂತ್ರಿಗಳಿಗೆ ಸಾರ್ವಕಾಲಿಕವಾಗಿ ಹೆಚ್ಚಿನ ಬೆದರಿಕೆ ಇದ್ದು 2019 ರ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಮೋದಿಯವರೆ ಅತ್ಯಮೂಲ್ಯ ವ್ಯಕ್ತಿಯಾಗಿದ್ದಾರೆ. ವಿಶೇಷ ಭದ್ರತೆಯ ಹೊರತು ಸಚಿವರು ಮತ್ತು ಅಧಿಕಾರಿಗಳು ಕೂಡ ಪ್ರಧಾನ ಮಂತ್ರಿಗೆ ಹತ್ತಿರ ಬರಲು ಅನುಮತಿ ನೀಡಬಾರದು ಎಂದು ಗೃಹ ಸಚಿವಾಲಯ ಹೇಳಿದೆ.
2019 ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ರೋಡ್ ಶೋ ಗಳನ್ನು ಕಡಿತಗೊಳಿಸುವಂತೆ ಪ್ರಧಾನಿ ಮೋದಿಗೆ ಸಲಹೆ ನೀಡಿದ್ದು, ರೋಡ್ ಶೋಗಳಿಗೆ ಬದಲಾಗಿ ಸಾರ್ವಜನಿಕ ಸಭೆಗಳನ್ನು ನಡೆಸಿದರೆ ಭದ್ರತೆ ಒದಗಿಸುವುದು ಸುಲಭವಾಗುತ್ತದೆ ಎಂದು ಗೃಹ ಸಚಿವಾಲಯ ಸಲಹೆ ನೀಡಿದೆ ಎಂದು ತಿಳಿದು ಬಂದಿದೆ.
ಇತ್ತೀಚೆಗೆ ಮಾವೋವಾದಿಗಳು ಪ್ರಧಾನಮಂತ್ರಿಗಳ ಹತ್ಯೆಗೆ ಸಂಚು ರೂಪಿಸಿದ್ದಾರೆ ಎನ್ನಲಾಗಿದ್ದ ಪತ್ರವನ್ನು ದೆಹಲಿಯ ಮನೆಯೊಂದರಲ್ಲಿ ವಶಪಡಿಸಿಕೊಂಡಿದ್ದರು.
ಪ್ರಧಾನಿ ಮೋದಿಯವರನ್ನು ರಾಜೀವ್ ಗಾಂಧಿ ಹತ್ಯೆ ರೀತಿಯ ಹತ್ಯೆ ಮಾಡಲು ಯೋಜನೆಯನ್ನು ರೂಪಿಸಲಾಗಿದೆ ಎಂದು ತಿಳಿದುಬಂದಿತ್ತು.
ಅಲ್ಲದೆ, ಇತ್ತೀಚೆಗೆ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ ಪ್ರಧಾನ ಮಂತ್ರಿಗಳ ಪಾದಗಳನ್ನು ಸ್ಪರ್ಶಿಸಲು ವ್ಯಕ್ತಿಯೊಬ್ಬ ಆರು ಭದ್ರತಾ ಹಂತಗಳ ಮುರಿದು ಬಂದಿದ್ದ.
ಈ ಎರಡು ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಾಲ್, ಕೇಂದ್ರ ಗೃಹ ಕಾರ್ಯದರ್ಶಿ ರಾಜೀವ್ ಗೌಬ ಮತ್ತು ನಿರ್ದೇಶಕ ಗುಪ್ತಚರ ಬ್ಯೂರೋ ರಾಜೀವ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.
ಆ ಸಭೆಯಲ್ಲಿ, ಪ್ರಧಾನ ಮಂತ್ರಿಯ ಭದ್ರತಾ ವ್ಯವಸ್ಥೆಗಳನ್ನು ಸೂಕ್ತವಾಗಿ ಬಲಪಡಿಸಲು ಇತರ ಏಜೆನ್ಸಿಗಳೊಂದಿಗೆ ಸಮಾಲೋಚಿಸಿ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಗೃಹ ಸಚಿವರು ನಿರ್ದೇಶಿಸಿದ್ದರು.
ಛತ್ತೀಸ್‌ಗಢ, ಜಾರ್ಖಂಡ್, ಮಧ್ಯಪ್ರದೇಶ, ಒಡಿಶಾ, ಪಶ್ಚಿಮ ಬಂಗಾಳದಂತಹ ಮಾವೊವಾದಿ ರಾಜ್ಯಗಳಿಗೆ
ಪ್ರಧಾನಿ ಮಂತ್ರಿಗಳು ತಮ್ಮ ರಾಜ್ಯಗಳಿಗೆ ಭೇಟಿ ನೀಡಿದಾಗ ಹೆಚ್ಚಿನ ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕೆಂದು ಗೃಹ ಸಚಿವಾಲಯ ಸೂಚನೆ ನೀಡಿದೆ.









