ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರಸಿಂಗ್ ದೋನಿ ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಅಭ್ಯಾಸ ನಡೆಸಿದರು.
ಎಂ.ಎಸ್.ಧೋನಿ ಅವರಿಗೆ ಥ್ರೋ ಡೌನ್ ಪರಿಣತ ರಾಘವೇಂದ್ರ ಮತ್ತು ಮಧ್ಯಮ ವೇಗದ ಬೌಲರ್ ಶಾರ್ದೂಲ್ ಠಾಕೂರ್ ಬೌಲಿಂಗ್ ಮಾಡಿದರು.
ಭಾರತ ಕ್ರಿಕೆಟ್ ತಂಡ 20–20 ಮತ್ತು ಏಕದಿನ ಸರಣಿಗಳಲ್ಲಿ ಆಟವಾಡಲು ಇದೇ ತಿಂಗಳ ಕೊನೆಯಲ್ಲಿ ಇಂಗ್ಲೆಂಡ್ ಪ್ರವಾಸ ಬೆಳೆಸಲಿದೆ. ಈ ತಂಡದಲ್ಲಿ ದೋನಿ ಆಡಲಿದ್ದಾರೆ. ಆದ್ದರಿಂದ ಬೆಂಗಳೂರಿನ ಎನ್‌ಸಿಎ ಯಲ್ಲಿ ಸುಮಾರು ಎರಡು ಗಂಟೆಗಳ ಕಾಲ ಅಭ್ಯಾಸ ನಡೆಸಿದರು.









