ಪೆಟ್ರೋಲ್, ಡಿಸೇಲ್ ದರ ಏರಿಕೆ‌ ವಿರೋಧಿಸಿ ಸೈಕಲ್ ಏರಲಿದ್ದಾರೆ ಕಾಂಗ್ರೆಸ್ ನಾಯಕರು

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ವಿರೋಧಿಸಿ ಸೈಕಲ್ ಚಳವಳಿ ನಡೆಸಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ.‌

ಪ್ರತಿಭಟನೆಯ ಅಂಗವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ಬೆಳಗ್ಗೆ 9.30ಕ್ಕೆ ತಮ್ಮ ಮನೆಗಳಿಂದ ಪಕ್ಷದ ಕಚೇರಿಗೆ ಸೈಕಲ್ ನಲ್ಲಿ ಬರಲಿದ್ದಾರೆ.

ಬಳಿಕ ಕೇಂದ್ರ ಸರ್ಕಾರದ ಕಚೇರಿ ಎದರು ಪ್ರತಿಭಟನೆ ನಡೆಯಲಿದೆ. ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಏಕ ಕಾಲಕ್ಕೆ ಪ್ರತಿಭಟನೆ ನಡೆಯಲಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಇಂದು ನಡೆದ ಪಕ್ಷದ ಹಿರಿಯ ನಾಯಕರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಕೊರೊನಾ ನಿಯಂತ್ರಣದಲ್ಲಿ ಕೇಂದ್ರ, ರಾಜ್ಯ ಸರ್ಕಾರದ ವೈಫಲ್ಯ, ಭೂ ಸುಧಾರಣೆ ಕಾಯಿದೆ ಹಾಗೂ ಎಪಿಎಂಸಿ ತಿದ್ದುಪಡಿ ಕಾಯಿದೆ ತಿದ್ದುಪಡಿ ವಿರೋಧಿಸಿಯೂ ಚಳವಳಿ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಶಿವಕುಮಾರ್ ಅವರು ಸಭೆಯ ಬಳಿಕ ಸುದ್ದಿಗಾರರಿಗೆ ತಿಳಿಸಿದರು.

ನಾರಾಯಣಪುರ ಬಲದಂಡೆ ಕಾಲುವೆ ಆಧುನೀಕರಣ ಕಾಮಗಾರಿ ಕಳಪೆಯಿಂದ ಕೂಡಿದೆ: ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

ರಾಯಚೂರು: ದೇವದುರ್ಗ ತಾಲೂಕಿನಲ್ಲಿ ಭರದಿಂದ ಸಾಗಿರುವ ನಾರಾಯಣಪುರ ಬಲದಂಡೆ ಕಾಲುವೆ ಆಧುನೀಕರಣ ಕಾಮಗಾರಿ ಕಳಪೆಯಿಂದ ಕೂಡಿದೆ ಅಂತ ಆರೋಪಿಸಿ ಜಿಲ್ಲಾ ಜೆಡಿಎಸ್ ನಿರಂತರ ಪ್ರತಿಭಟನೆ ನಡೆಸುತ್ತಿದೆ. ದೇವದುರ್ಗದ ಕೊತ್ತದೊಡ್ಡಿಯಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಕೂಡಲೇ ಕಾಮಗಾರಿ ನಿಲ್ಲಿಸುವಂತೆ ಆಗ್ರಹಿಸಿದ್ದಾರೆ.

ಜಲಾಶಯದಿಂದ 95 ಕಿಮೀ ವರೆಗಿನ ಕಾಮಗಾರಿಗೆ 956 ಕೋಟಿ ವೆಚ್ಚದಲ್ಲಿ ಆಧುನೀಕರಣ ಮಾಡಲಾಗುತ್ತಿದ್ದು ಒಂದೇ ಕಂಪನಿಗೆ ಇಡೀ ಕಾಮಗಾರಿ ಗುತ್ತಿಗೆ ನೀಡಲಾಗಿದೆ. ಮಾಜಿ ಪ್ರಧಾನಿ ದೇವೇಗೌಡರ ಅವಧಿಯಲ್ಲಿ ಕಾಲುವೆ ನಿರ್ಮಾಣವಾಗಿತ್ತು. ಆದ್ರೆ, ಈಗ ಆಧುನೀಕರಣ ಹೆಸರಿನಲ್ಲಿ ಕಳಪೆ ಕಾಮಗಾರಿ ನಡೆದಿದೆ ಅಂತ ಜೆಡಿಎಸ್ ಮುಖಂಡರು ಆರೋಪಿಸಿದ್ದಾರೆ.

ಲಕ್ಷ್ಮಣ ಸವದಿಯವರನ್ನ ಜಿಲ್ಲಾ ಉಸ್ತುವಾರಿಯಾಗಿ ಮಾಡಿರುವುದು ನಮ್ಮ ದುರದೃಷ್ಟ. ಜಿಲ್ಲೆಗೆ ಕೇವಲ ಪರ್ಸೆಂಜೇಟ್‌ಗಾಗಿ ಬಂದು ಹೋಗ್ತಾರೆ. ನಾರಾಯಣಪುರ ಬಲದಂಡೆ ಕಾಲುವೆ ಆಧುನೀಕರಣ ಕಳಪೆಯಾಗುತ್ತಿದ್ದರೂ ಸರ್ಕಾರ ಸುಮ್ಮನೆ ಕುಳಿತಿದೆ ಅಂತ ಜೆಡಿಎಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾನಸಿಕ ಅಸ್ವಸ್ಥನಂತೆ ನಟಿಸಿ ಬೈಕ್ ಯಗರಿಸುತ್ತಿದ್ದವನ ಬಂಧನ

ರಾಯಚೂರು: ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಬೈಕ್ ಕದ್ದು ಪರಾರಿಯಾಗುತ್ತಿದ್ದ ಖದೀಮನನ್ನ ಬಂಧಿಸುವಲ್ಲಿ ನೇತಾಜಿ ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯಿಂದ 40 ಸಾವಿರ ಬೆಲೆಯ, 3 ಲಕ್ಷ ಮೌಲ್ಯದ 15 ಬೈಕ್‌ಗಳನ್ನಿ ಜಪ್ತಿ ಮಾಡಲಾಗಿದೆ. ಮಾನಸಿಕ ಅಸ್ವಸ್ಥನಂತೆ ನಟಿಸಿ, ಬೈಕ್ ಮಾಲೀಕರನ್ನ ಹಾಗೂ ಪೊಲೀಸರನ್ನ ಯಾಮಾರಿಸುತ್ತಿದ್ದ ಮಾನ್ವಿ ತಾಲೂಕಿನ ಅರೋಲಿ ಗ್ರಾಮದ ತಾಯಪ್ಪ (23) ಎಂಬ ಚೋರನನ್ನ ನೇತಾಜಿ ನಗರ ಪೊಲೀಸರು ಎಡೆಮುರಿ‌ ಕಟ್ಟಿದ್ದಾರೆ.

ಕಳೆದ ಕೆಲ ತಿಂಗಳುಗಳಿಂದ ಬೈಕ್ ಕಳ್ಳತನ ಪ್ರಕರಣಗಳು ಪೊಲೀಸರಿಗೆ ತಲೆ ನೋವು ತರಿಸಿದ್ದವು. ಈ ಹಿನ್ನೆಲೆಯಲ್ಲಿ ಕಳ್ಳತನ ಭೇದಿಸಲು ಪೂರ್ವ ವಲಯ ಸಿಪಿಐ ಫಸಿಯುದ್ದೀನ್ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ತೀವ್ರ ಕಾರ್ಯಾಚರಣೆಗಿಳಿದ ತಂಡ ಆರೋಪಿ ತಾಯಪ್ಪನನ್ನ ಬಂಧಸಿದ್ದಾರೆ

ಅಮೆಜಾನ್ ಫ್ರೈಮ್ ವಿಡಿಯೋದಲ್ಲಿ ಮೊದಲ ಬಾರಿಗೆ ಕನ್ನಡದ ‘ಲಾ’ ಸಿನಿಮಾ ಜುಲೈ 17 ರಂದು ಬಿಡುಗಡೆ

ಬೆಂಗಳೂರು: ಕನ್ನಡದ ಬಹುನಿರೀಕ್ಷಿತ ‘ಲಾ’ ಸಿನಿಮಾವು ಜುಲೈ 17ರಂದು ಪ್ರದರ್ಶನಗೊಳ್ಳಲಿದೆ ಎಂದು ಅಮೆಜಾನ್ ಫ್ರೈಮ್ ವಿಡಿಯೋ ತಿಳಿಸಿದೆ.

ಇದೊಂದು ಕ್ರೈ ಥಿಲ್ಲರ್ ಆಧರಿಸಿದ ಸಿನಿಮಾವಾಗಿದ್ದು ನಂದಿನಿ ಪಾತ್ರಧಾರಿಯಾಗಿ ರಾಗಿಣಿ ಚಂದ್ರನ್ ಅಭಿನಯಿಸಿದ್ದಾರೆ. ನ್ಯಾಯಕ್ಕಾಗಿ ಅಪರಾಧದ ವಿರುದ್ಧ ಹೋರಾಡುವ ಕತೆ ಇದಾಗಿದ್ದು, ಈ ಚಿತ್ರವು ಮಹಿಳೆಯರ ಮೇಲಿನ ಅನ್ಯಾಯ ಮತ್ತು ಅಪರಾಧದ ವಿರುದ್ಧ ಧ್ವನಿ ಎತ್ತುತ್ತದೆ. ಅಶ್ವಿನಿ ಪುನೀತ್ ರಾಜ್ ಕುಮಾರ್, ಎಂ ಗೋವಿಂದ ನಿರ್ಮಾಣದ ‘ಲಾ’ ಸಿನಿಮಾವನ್ನು ರಘು ಸಮರ್ಥ ಅವರು ನಿರ್ದೇಶಿಸಿದ್ದಾರೆ.

ರಾಗಿಣಿ ಪ್ರಜ್ವಲ್ ಅವರು ಈ ಸಿನಿಮಾದ ಮೂಲಕ ಪ್ರಮುಖ ನಟಿಯಾಗಿ ಸ್ಯಾಂಡಲ್ ವುಡ್ ಪ್ರವೇಶಿಸಿದ್ದಾರೆ. ಮುಖ್ಯಮಂತ್ರಿ ಚಂದ್ರು, ಅಚ್ಯುತ್ ಕುಮಾರ್, ಸುಧಾರಾಣಿ , ಸಿರಿ ಪ್ರಹ್ಲಾದ್ ಮತ್ತಿತರು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ‘ಲಾ’ ಸಿನಿಮಾವು ಸ್ಯಾಂಡಲ್ ವುಡ್ ಇಂಡಸ್ಟ್ರಿಯಿಂದ ಬಿಡುಗಡೆಯಾಗಲಿರುವ ಮೊದಲ ಡಿಜಿಟಲ್ ಚಿತ್ರವಾಗಿದೆ.

ಪುನೀತ್ ರಾಜ್ ಕುಮಾರ್ ಅವರ ಪಿಆರ್ ಕೆ ಪ್ರೊಡೆಕ್ಷನ್ ರಚಿಸಿದ ಈ ಚಿತ್ರವು ಜುಲೈ 17,2020ರಂದು ಅಮೆಜಾನ್ ಫ್ರೈಂ ವಿಡಿಯೋದಲ್ಲಿ ವಿಶ್ವದಾದ್ಯಂತ 200ಕ್ಕೂ ಹೆಚ್ಚು ದೇಶ ಹಾಗೂ ಪ್ರಾಂತ್ರ್ಯದಲ್ಲಿ ಬಿಡುಗಡೆಯಾಗಲಿದೆ.

ದೇಶದಲ್ಲಿ 5 ಲಕ್ಷದ ಗಡಿ ದಾಟಿದ ಕೊರೋನಾ!

ಬೆಂಗಳೂರು: ದೇಶದಲ್ಲಿ ಕೊರೋನಾದ ಮಹಾ ಸ್ಪೋಟ ಸಂಭವಿಸಿದೆ. ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಬರೋಬ್ಬರಿ 5 ಲಕ್ಷದ ಗಡಿ ದಾಟಿ ಮತ್ತಷ್ಟು ಏರಿಕೆಯಾಗುತ್ತಲೇ ಇದೆ. ಒಂದೇ ದಿನ ದಾಖಲೆಯ 18552 ಹೊಸ ಕೇಸ್ ದಾಖಲಾಗಿದ್ದು, 384 ಸೋಂಕಿತರು ಬಲಿಯಾಗಿ ಸಾವನ್ನಪ್ಪಿದ್ದಾರೆ.

ದೇಶದಲ್ಲಿ ಕೊರೋನಾ ಸೋಂಕು ಯಾರನ್ನ ಎಲ್ಲಿ ಹೇಗೆ ವಕ್ಕರಿಸುತ್ತೋ ಸಣ್ಣ ಸುಳಿವೂ ಕೂಡ ಸಿಗುತ್ತಿಲ್ಲ. ಕಣ್ಣಿಗೆ ಕಾಣದ ಡೆಡ್ಲಿ ವೈರಸ್ ಜನರ ಮೈಗಂಟಿಕೊಳ್ಳುತ್ತಲೇ ಇದೆ. ದಿನಕ್ಕೆ ನೂರಾರು ಜನರನ್ನು ಉಸಿರು ಬಿಗಿದು ಕೊಲ್ಲುತ್ತಲೇ ಇದೆ. ಹೌದು ದೇಶವನ್ನು ತನ್ನ ಕಪಿಮುಷ್ಠಿಗೆ ತೆಗೆದುಕೊಂಡಿರುವ ಮಹಾಮಾರಿ ಇಡೀ ಭಾರತವನ್ನು ಕೊರೋನಾ ಭಾರತವನ್ನಾಗಿ ಪರಿವರ್ತಿಸುತ್ತಿದೆ.

ಒಂದೇ ದಿನದಲ್ಲಿ 18,552 ಹೊಸ ಪ್ರಕರಣಗಳು ಪತ್ತೆಯಾಗಿದ್ದಲ್ಲದೇ 384 ಸೋಂಕಿತರನ್ನು ಕೇವಲ 24 ಗಂಟೆಗಳಲ್ಲಿ ಬಲಿ ಪಡೆದಿದೆ. ಆ ಮೂಲಕ ಕೊರೋನಾ ಭಾರತದಲ್ಲಿ ಸೋಂಕಿತರ ಸಂಖ್ಯೆ ಒಟ್ಟು 5 ಲಕ್ಷದ ಗಡಿ ದಾಟಿ ಮುಂದೋಗಿದೆ. ದೇಶದಲ್ಲಿ ಒಟ್ಟು 15,685 ಸೋಂಕಿತರು ಮೃತಪಟ್ಟಿದ್ದಾರೆ.

ಜುಲೈನಿಂದ ಪ್ರತಿ ಭಾನುವಾರ ಲಾಕ್ ಡೌನ್ ಜಾರಿ: ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಜುಲೈ 5ನೇ ತಾರೀಖಿನಿಂದ ಮುಂದಿನ ಆದೇಶದವರೆಗೆ ಪ್ರತಿ ಭಾನುವಾರ ರಾಜ್ಯಾದ್ಯಂತ ಲಾಕ್‍ಡೌನ್ ಮಾಡುವ ಮಹತ್ವದ ನಿರ್ಧಾರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೆಗೆದುಕೊಂಡಿದ್ದಾರೆ.

ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಕೋವಿಡ್ ವಿಚಾರವಾಗಿ ಉನ್ನತ ಮಟ್ಟದ ಅಧಿಕಾರಿಗಳ ಸಭೆಯನ್ನು‌‌ ನಡೆಸಲಾಯಿತು ಸಭೆಯಲ್ಲಿ ಕಂದಾಯ ಸಚಿವ ಆರ್ ಅಶೋಕ್ ಗೃಹ ಸಚಿವ ಬೊಮ್ಮಾಯಿ ರಾಜಕೀಯ ಕಾರ್ಯದರ್ಶಿಗಳಾದ ವಿಶ್ವನಾಥ್ ಮುಖ್ಯ ಕಾರ್ಯದರ್ಶಿಗಳಾದ ವಿಜಯ್ ಭಾಸ್ಕರ್ ಅಪರ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಬಿಬಿಎಂಪಿ ಕಮಿಷನರ್ ಅನಿಲ್ ಕುಮಾರ್ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಉಪಸ್ಥಿತರಿದ್ದರು

ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು.

 ಜುಲೈ 5ನೇ ತಾರೀಖಿನಿಂದ ಮುಂದಿನ ಆದೇಶದವರೆಗೆ ಪ್ರತಿ ಭಾನುವಾರ ರಾಜ್ಯಾದ್ಯಂತ ಲಾಕ್‍ಡೌನ್ ಮಾಡಲಾಗುವುದು. (ವಸ್ತುಗಳ ಸಾಗಾಣಿಕೆಗೆ ನಿರ್ಬಂದವಿಲ್ಲ).

 ಜುಲೈ 10ನೇ ತಾರಿಖಿನಿಂದ ಒಂದು ತಿಂಗಳ ಕಾಲ ಈಗಾಗಲೇ ರಜೆಯಿರುವ 2ನೇ ಹಾಗೂ 4ನೇ ಶನಿವಾರದ ಜೊತೆಗೆ ಉಳಿದ ಶನಿವಾರದಂದು ಎಲ್ಲಾ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯಕ್ಕೊಳಪಡುವ ಎಲ್ಲಾ ಕಛೇರಿಗಳಿಗೆ ರಜೆ ಘೋಷಿಸಲು ತೀರ್ಮಾನಿಸಲಾಯಿತು.

 ಪ್ರತಿ ದಿನ ರಾತ್ರಿ 9.00 ಗಂಟೆಯಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಈಗಾಗಲೇ ಇರುವ ಕಫ್ರ್ಯೂ ಅವಧಿಯ ಬದಲಾಗಿ ರಾತ್ರಿ 8.00 ಗಂಟೆಯಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಕಫ್ರ್ಯೂ ಅವಧಿಯನ್ನು ಬದಲಾಯಿಸಲು ತೀರ್ಮಾನಿಸಲಾಯಿತು.

 ಬೆಂಗಳೂರಿನಲ್ಲಿರುವ ಬೃಹತ್ ಹೋಲ್‍ಸೇಲ್ ತರಕಾರಿ ಮಾರುಕಟ್ಟೆಗಳಲ್ಲಿ ಆಗುವ ಜನದಟ್ಟಣೆಯನ್ನು ತಪ್ಪಿಸುವ ಉದ್ದೇಶದಿಂದ ಹೆಚ್ಚಿನ ಹೋಲ್‍ಸೇಲ್ ತರಕಾರಿ ಮಾರುಕಟ್ಟೆಗಳನ್ನು ತೆರೆಯಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಿಗೆ ಸೂಚಿಸಲಾಯಿತು.

 ಕೋವಿಡ್-19 ಸೋಂಕಿತ ರೋಗಿಗಳನ್ನು ಶೀಘ್ರವಾಗಿ ಕೋವಿಡ್ ಆಸ್ಪತ್ರೆಗಳಿಗೆ ಸೇರಿಸಲು (ಸೆಂಟ್ರಲೈಜ್ ಬೆಡ್ ಅಲೋಕೇಷನ್ ಸಿಸ್ಟಮ್) ತಂತ್ರಾಂಶದ ಮೂಲಕ ಜಾರಿಗೊಳಿಸಲಾಗುವುದು.

 ಬೆಂಗಳೂರಿನಲ್ಲಿ ಕೋವಿಡ್ ಸೋಂಕಿತ ವ್ಯಕ್ತಿಗಳನ್ನು ಆಸ್ಪತ್ರೆಗೆ ಸಾಗಿಸಲು ಅಂಬ್ಯೂಲೆನ್ಸ್ ಸಂಖ್ಯೆಗಳನ್ನು 250ಕ್ಕೆ ಹೆಚ್ಚಿಸಲು ಮತ್ತು ಕೋವಿಡ್‍ನಿಂದ ಮೃತರಾದ ದೇಹಗಳನ್ನು ಸಾಗಿಸಲು ಪ್ರತ್ಯೇಕ ಅಂಬ್ಯೂಲೆನ್ಸ್ ವ್ಯವಸ್ಥೆ ಮಾಡಲಾಗುವುದು. ಅಂಬ್ಯೂಲೆನ್ಸ್ ಇರುವ ಸ್ಥಳವನ್ನು ಗುರುತಿಸಲು ಮತ್ತು ಅವುಗಳ ಸರಳ ಚಲನವಲನಗಳ ಸಲುವಾಗಿ ಪೊಲೀಸ್ ಕಂಟ್ರೋಲ್ ರೂಂ ವೈರ್‍ಲೆಸ್ ಸೇವೆಯನ್ನು ಬಳಸಿಕೊಳ್ಳಲು ಸೂಚಿಸಲಾಗಿದೆ.

 ಕೋವಿಡ್-19 ರ ನಿಯಂತ್ರಣದಲ್ಲಿ ಕೆಲಸ ಮಾಡುವ ಎಲ್ಲಾ ನೋಡಲ್ ಅಧಿಕಾರಿಗಳ ವಿವರಗಳನ್ನು ಪತ್ರಿಕೆಗಳ ಜಾಹಿರಾತು ಮುಖಾಂತರ ಸಾರ್ವಜನಿಕರಿಗೆ ಪ್ರಚುರಪಡಿಸಲು ಕ್ರಮ ಕೈಗೊಳ್ಳಲು ಸೂಚಿಸಲಾಯಿತು.

 ಬಿ.ಬಿ.ಎಂ.ಪಿ ಕೇಂದ್ರ ಕಛೇರಿ ಹಾಗೂ ಆಯುಕ್ತರ ಮೇಲೆ ಇರುವ ಕೆಲಸದ ಹೊರೆಯನ್ನು ಕಡಿಮೆಗೊಳಿಸಲು ಬಿ.ಬಿ.ಎಂ.ಪಿ ಯಲ್ಲಿನ 08 ವಲಯಗಳ ಜಂಟಿ ಆಯುಕ್ತರಿಗೆ ಹೆಚ್ಚಿನ ಜವಾಬ್ದಾರಿ ಹಾಗೂ ಕೆಲಸಗಳನ್ನು ನೀಡಲು ಮತ್ತು ಅವರ ಜೊತೆಗೆ ಕೆಲಸ ಮಾಡಲು ಕೆ.ಎ.ಎಸ್ ಅಧಿಕಾರಿಗಳನ್ನು ನಿಯೋಜಿಸಲು ತೀರ್ಮಾನಿಸಲಾಯಿತು.

 ಡಾಕ್ಟರ್‍ಗಳ ಕೊರತೆಯನ್ನು ನೀಗಿಸಲು ಕಾರ್ಮಿಕ ಇಲಾಖೆಯಿಂದ ನೇಮಕವಾಗಿರುವ 180 ಎ.ಎಸ್.ಐ ಡಾಕ್ಟರ್‍ಗಳನ್ನು ಕೋವಿಡ್ ಕರ್ತವ್ಯಕ್ಕೆ ಬಳಸಿಕೊಳ್ಳಲು ಮತ್ತು ಪರೀಕ್ಷಾರ್ತಿ ತಹಶೀಲ್ದಾರ್‍ಗಳನ್ನು ಕೋವಿಡ್ ಆಸ್ಪತ್ರೆಗಳು/ಕೇರ್ ಸೆಂಟರ್‍ಗಳಿಗೆ ನೋಡಲ್ ಅಧಿಕಾರಿಗಳನ್ನಾಗಿ ಹಾಕಲು ಸೂಚಿಸಲಾಯಿತು.

 ಬೆಂಗಳೂರಿನಲ್ಲಿ ಲಭ್ಯವಿರುವ ಕಲ್ಯಾಣ ಮಂಟಪಗಳು, ಹಾಸ್ಟೆಲ್‍ಗಳು ಹಾಗೂ ಇನ್ನಿತರೆ ಸಂಸ್ಥೆಗಳನ್ನು ಕೋವಿಡ್ ಕೇರ್ ಸೆಂಟರ್‍ಗಳಿಗೆ ಮೀಸಲಿಡಲು ಹಾಗೂ ರೈಲ್ವೆ ಇಲಾಖೆಯಿಂದ ಬೆಡ್‍ಗಳ ಕೋಚ್‍ನ್ನು ಪಡೆಯಲು ಅವಶ್ಯ ಕ್ರಮ ಜರುಗಿಸಲು ಸೂಚಿಸಲಾಯಿತು.

 ಕೋವಿಡ್‍ನಿಂದ ಮೃತರಾದ ದೇಹಗಳ ಅಂತ್ಯಕ್ರಿಯೆಯನ್ನು ಜರುಗಿಸಲು ಪ್ರತ್ಯೇಕ ತಂಡಗಳನ್ನು ರಚಿಸುವುದು ಹಾಗೂ ದೇಹಗಳ ಅಂತ್ಯಕ್ರಿಯೆಯ ಸಲುವಾಗಿ ಇನ್ನೂ ಹೆಚ್ಚಿನ ಜಾಗಗಳÀನ್ನು ಗುರುತಿಸಲು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಸೂಚಿಸಲು ತೀರ್ಮಾನಿಸಲಾಯಿತು.

 ಮೆಡಿಕಲ್ ಕಾಲೇಜ್ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಬೆಡ್‍ಗಳ ಪೈಕಿ ಶೇ.50 ರಷ್ಟನ್ನು ಕೋವಿಡ್ ರೋಗಿಗಳ ಸಲುವಾಗಿ ಮೀಸಲಿಡಲು ಬಿ.ಬಿ.ಎಂ.ಪಿ ಆಯುಕ್ತರಿಗೆ ಸೂಚಿಸಲಾಯಿತು.

 ಆಸ್ಪತ್ರೆಗಳಲ್ಲಿ ಬೆಡ್‍ಗಳು ಪೂರ್ತಿಯಾದ ನಂತರ ರೋಗಿಗಳನ್ನು ಹೋಟೆಲ್‍ಗಳ ಕೊಠಡಿಗಳನ್ನು ಚಿಕಿತ್ಸೆಗಾಗಿ ಬಳಸಿಕೊಳ್ಳುವ ಉದ್ದೇಶದಿಂದ ಹೋಟೆಲ್‍ಗಳನ್ನು ಆಸ್ಪತ್ರೆಗಳಿಗೆ ಟೈಯಪ್ ಮಾಡಲು ಸೂಕ್ತ ಕ್ರಮ ಕೈಗೊಳ್ಳಲು ಬಿ.ಬಿ.ಎಂ.ಪಿ ಆಯುಕ್ತರಿಗೆ ಸೂಚಿಸಲಾಯಿತು.