ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಭಾಷಣ ನೇರ ಪ್ರಸಾರ

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಭಾಷಣ ವಿಧಾನಸೌಧದಿಂದ ನೇರ ಪ್ರಸಾರ…

1. ಕರ್ನಾಟಕ ವಿಧಾನ ಸಭೆ ಮತ್ತು ವಿಧಾನ ಪರಿಷತ್ತಿನ ಜಂಟಿ ಸಭೆಯಲ್ಲಿ ಭಾಗವಹಿಸುತ್ತಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ.

2. ಇಲ್ಲಿನ ವಿಧಾನ ಸೌಧ ಕಟ್ಟಡವು ಪ್ರಜಾಪ್ರಭುತ್ವದ ಒಂದು ವಿಶಿಷ್ಟ ಸಂಕೇತವಾಗಿದ್ದು ಅದು ಜನರ ಆಶಯಗಳು ಮತ್ತು ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ. ಈ ಐತಿಹಾಸಿಕ ಕಟ್ಟಡ ಮತ್ತು ಪ್ರಜಾಪ್ರಭುತ್ವದೊಂದಿಗಿನ ಅದರ ಸುಧೀರ್ಘ ಪ್ರಯಾಣವು ನಮಗೆ ಹೊಸ ಸ್ಫೂರ್ತಿಯನ್ನು ನೀಡುತ್ತದೆ.

3. ವಿಧಾನಸೌಧವು ಕರ್ನಾಟಕಕ್ಕೆ ಭೇಟಿ ನೀಡುವ ದೇಶೀಯ ಮತ್ತು ವಿದೇಶಿ ಪ್ರವಾಸಿಗರ ಮೇಲೆ ಪ್ರಮುಖವಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅಳವಡಿಸಿಕೊಳ್ಳುವಲ್ಲಿ ಸ್ಫೂರ್ತಿ ನೀಡುತ್ತದೆ.

4. ಕರ್ನಾಟಕವು ಶ್ರೀಮಂತ ಮತ್ತು ಅದ್ಭುತವಾದ ಇತಿಹಾಸವನ್ನು ಹೊಂದಿದೆ. ಭಗವಾನ್ ಬಸವೇಶ್ವರರ 12 ನೇ ಶತಮಾನದಲ್ಲಿ ನಿರ್ಮಿಸಲಾದ ‘ಅನುಭವ ಮಂಟಪ’ ಪ್ರಸ್ತುತ ಸಂದರ್ಭದಲ್ಲಿ ಜನಪ್ರತಿನಿಧಿಗಳ ಸಂಸತ್ತಿನ ಪ್ರತಿಬಿಂಬವಾಗಿದೆ ರಾಣಿ ಚೆನ್ನಮ್ಮನ ಮಹಾನ್ ಹ್ಯಾಗವು ನಮಗೆ ಸ್ಫೂರ್ತಿ ನೀಡುತ್ತಲೇ ಇದೆ..

5 . ಸ್ನೇಹಿತರೇ, ಕರ್ನಾಟಕ ರಾಜ್ಯದಲ್ಲಿ ಪ್ರಜಾಪ್ರಭುತ್ವದ ಪ್ರಯಾಣವು ರೋಮಾಂಚಕ ಮತ್ತು ಸ್ಫೂರ್ತಿದಾಯಕವಾಗಿದೆ. ಈ ಭವ್ಯವಾದ ಪ್ರಯಾಣಕ್ಕೆ ಕಾರಣರಾದ ರಾಜಕೀಯ ಮುತ್ಸದ್ಧಿಗಳಿಗೆ ನಾನು
ನನ್ನ ಕೃತಜ್ಞತೆಯನ್ನು ಸಲ್ಲಿಸುತ್ತೇನೆ . ನಾವು ಅಂತಹವರಿಂದ ಸ್ಫೂರ್ತಿ ಪಡೆಯಬೇಕು.

ನಾನು ಇಂದು ಒಂದು ಪ್ರಮುಖ ವಿಷಯದ ಬಗ್ಗೆ ನನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸಲಿದ್ದೇನೆ. ನಮ್ಮ ಈ ಏಳು ದಶಕಗಳ ಸ್ವಾತಂತ್ರ್ಯದ ಅವಧಿಯಲ್ಲಿ ನಾವು ಅನುಸರಿಸಿದ ಸಂಸದೀಯ ರೂಪ ಆಡಳಿತ ಮಾರ್ಗದಲ್ಲಿ ನಾವು ಪ್ರಜಾಪ್ರಭುತ್ವ ಮೌಲ್ಯಗಳನ್ನು ಕಾಪಾಡುವಲ್ಲಿ ಮತ್ತು ಪ್ರಜಾಪ್ರಭುತ್ವದ ಸಂಸ್ಥೆಗಳನ್ನು ಹೆಚ್ಚು ಜವಾಬ್ದಾರಿಯುತಗೊಳಿಸುವಲ್ಲಿ ನಾವಲ್ಲ. ಇದುವರೆಗೆ ಎಷ್ಟರ ಮಟ್ಟಿಗೆ ಯಶಸ್ವಿಯಾಗಿದ್ದೇವೆ ಎಂದು ಚಿಂತನೆ ನಡೆಸಬೇಕಿದೆ…

7 ಸಂಸದೀಯ ಪ್ರಜಾಪ್ರಭುತ್ವವನ್ನು ಅತ್ಯುತ್ತಮ ಆಡಳಿತದ ರೂಪವೆಂದು ಸಾರ್ವತ್ರಿಕವಾಗಿ ಒಪ್ಪಿಕೊಳ್ಳಲಾಗಿದೆ. ಈ ಸನ್ನಿವೇಶದಲ್ಲಿ, ನಾವು ಸಂಸದೀಯ ಪ್ರಜಾಪ್ರಭುತ್ವ ಮತ್ತು ಶಾಸಕಾಂಗವನ್ನು ಬಲಪಡಿಸಿದ್ದೇವೆ ಮತ್ತು ಆಡಳಿತದ ವಿವಿಧ ಆಯಾಮಗಳಲ್ಲಿ ಪ್ರಗತಿ ಸಾಧಿಸಿದ್ದೇವೆ.

8 ನಮ್ಮ ಪ್ರಜಾಪ್ರಭುತ್ವ ಯಾವಾಗಲೂ ಜನ ಕೇಂದ್ರಿತವಾಗಿದೆ. ಇದರ ನಿರ್ಮಾತೃಗಳು ಸಂವಿಧಾನವನ್ನು ರೂಪಿಸುವಾಗ ಜನರ ಹಿತಾಸಕ್ತಿಗಳನ್ನು ಮುಖ್ಯಯವಾಗಿ ಗಮನದಲ್ಲಿ ಇಟ್ಟುಕೊಂಡಿದ್ದರು .

9 ಈ ಕಾರಣದಿಂದಲೇ ಇದುವರೆಗೆ ದೇಶದಲ್ಲಿ 17 ಸಾರ್ವತ್ರಿಕ ಚುನಾವಣೆಗಳು ಮತ್ತು 300 ಕ್ಕೂ ಹೆಚ್ಚು ವಿಧಾನಸಭಾ ಚುನಾವಣೆಗಳು ಯಶಸ್ವಿಯಾಗಿ ನಡೆದಿವೆ, ಮತದಾರರ ಭಾಗವಹಿಸುವಿಕೆಯಲ್ಲಿ ಗಣನೀಯ ಪ್ರಗತಿಯಾಗಿದೆ. ಚುನಾವಣೆಯ ನಂತರ ಅಧಿಕಾರದ ವರ್ಗಾವಣೆ ಅತೃಯಂತ ಸರಳವಾಗಿ ನಡೆಯುತ್ತಿದೆ. ಇದಕ್ಕೆ ಕಾರಣ ಪ್ರಜಾಪ್ರಭುತ್ವದ ಬಗೆಗಿನ ನಮ್ಮ ಬದ್ಧತೆಯಾಗಿದೆ.

10. ದೇಶದ ಪ್ರಜಾಪ್ರಭುತ್ವ ಸಂಸ್ಥೆಗಳು ಜನರ ಕಲ್ಯಾಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತವೆ. ಶಾಸಕಾಂಗಗಳಲ್ಲಿರುವ ನಾವು ಜನರ ಆಶಯಗಳನ್ನು ಮತ್ತು ಆಕಾಂಕ್ಷೆಗಳನ್ನು ಪೂರೈಸುವ ಮಾಧ್ಯಮವಾಗಿದ್ದು, ಅವುಗಳ ಕಲ್ಯಾಣವನ್ನು ಗುರಿಯಾಗಿಸಿಕೊಂಡು ಕಾನೂನು ರೂಪಿಸುತ್ತೇವೆ.

11. ಆದರೆ ಈಗ ನಾವು ಈ ಪ್ರಯಾಣದ 75 ವರ್ಷಗಳನ್ನು ಪೂರ್ಣಗೊಳಿಸಲಿರುವಾಗ, ಪ್ರಜಾಪ್ರಭುತ್ವ ಸಂಸ್ಥೆಗಳನ್ನು ಜನರಿಗೆ ಇನ್ನಷ್ಟು ಉತ್ತರದಾಯಕರನ್ನಾಗಿ ಮಾಡುವುದು ಹೇಗೆ ಎಂದು ನಾವು ಪರಿಶೀಲಿಸಬೇಕಾಗಿದೆ. ಆಡಳಿತವು ಜನರ ಭಾವನೆಗಳು ಮತ್ತು ಅಕಾಂಕ್ಷೆಗಳೊಂದಿಗೆ ಹೊಂದಿಕೆಯಾಗಿದೆಯ ಎಂದು ಖಚಿತಪಡಿಸಿಕೊಳ್ಳಲು ಮತ್ತು ಅವರ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಪ್ರಜಾಪ್ರಭುತ್ವ ಸಂಸ್ಥೆಗಳನ್ನು ಮತ್ತಷ್ಟು ಬಲಪಡಿಸುವ ಅವಶ್ಯಕತೆಯಿದೆ .

12. ಸಂಸದೀಯ ಪ್ರಜಾಪ್ರಭುತ್ವವು ಚುನಾಯಿತ ಪ್ರತಿನಿಧಿಗಳ ಜವಾಬ್ದಾರಿಯನ್ನು ಆಧರಿಸಿದೆ. ಚುನಾಯಿತ ಪ್ರತಿನಿಧಿಗಳು ಜನರ ಆಶಯಗಳು ಮತ್ತು ಆಕಾಂಕ್ಷೆಗಳಿಗೆ ಸಂವೇದನಾಶೀಲರಾದಾಗ ಮತ್ತು ಶಾಸಕಾಂಗಗಳ ಮೂಲಕ ಅವುಗಳನ್ನು ಪೂರೈಸಲು ಶ್ರಮಿಸಿದಾಗ ಮಾತ್ರ ಸಂಸತ್ತು ಮತ್ತು ಶಾಸಕಾಂಗದ ಪ್ರತಿಷ್ಠೆಯನ್ನು ಹೆಚ್ಚಿಸಬಹುದು.

13 . ನಮ್ಮ ಶಾಸಕಾಂಗಗಳು ಪ್ರಜಾಪ್ರಭುತ್ವದ ಆತ್ಮ, ದೇಶಕ್ಕಾಗಿ ನೀತಿಗಳು ಮತ್ತು ಕಾನೂನುಗಳನ್ನು ರೂಪಿಸುವ ಜವಾಬ್ದಾರಿ ಶಾಸಕಾಂಗಗಳ ಹೆಗಲ ಮೇಲಿದೆ.

14. ಸಾರ್ವಜನಿಕ ಕಲ್ಯಾಣಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ರಚನಾತ್ಮಕ ಚರ್ಚೆ ಮತ್ತು ಚರ್ಚೆಗಳು: ಶಾಸಕಾಂಗಗಳ ಚೌಕಟ್ಟಿ ನೊಳಗೆ ನಡೆಯುವುದನ್ನು ನಾವು ಖಾತ್ರಿಪಡಿಸಿಕೊಂಡಾಗ ಮಾತ್ರ ನಾವು ಶಾಸಕಾಂಗಗಳನ್ನು ಹೆಚ್ಚು ಜವಾಬ್ದಾರಿಯುತವಾಗಿ ಮಾಡಬಹುದು,

15. ನಮ್ಮ ಶಾಸಕಾಂಗ ಸಂಸ್ಥೆಗಳು ಇತ್ತೀಚಿನ ದಿನಗಳಲ್ಲಿ ಜನರ ಕುಂದುಕೊರತೆಗಳಿಗೆ ಧ್ವನಿ ನೀಡಲು ವಿವಿಧ ದೃಷ್ಟಿ ಕೋನಗಳಲ್ಲಿ ಕೆಲಸ ಮಾಡುತ್ತಿವೆ. ಮತ್ತು ಕಾರ್ಯಾಂಗದ ಜವಾಬ್ದಾರಿಯನ್ನು ಸರಿಪಡಿಸಲು ಕೂಡ ಬಹುವಿಧದ ಆಯಾಮದಲ್ಲಿ ಕೆಲಸ ಮಾಡುತ್ತಿವೆ.

16 ಇಂತಹ ಗುರುತರವಾದ ಜವಾಬ್ದಾರಿಗಳನ್ನು ಪೂರೈಸಲು, ಶಾಸಕಾಂಗದ ಸದಸ್ಯರು ಪ್ರಜಾಪ್ರಭುತ್ವದ ತತ್ವಗಳು ಮತ್ತು ಮೌಲ್ಯಗಳನ್ನು ಶ್ರದ್ಧೆಯಿಂದ ಪಾಲಿಸಬೇಕು ಮತ್ತು ಈ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ಜನರಿಗೆ ಹೆಚ್ಚು ಪಾರದರ್ಶಕ ಮತ್ತು ಉತ್ತರದಾಯಕವಾಗಿ ಮಾಡುವಂತ ನೋಡಿಕೊಳ್ಳಬೇಕು.

17 . ಆಡಳಿತದ ಮೂರು ಅಂಗಗಳಾದ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗಗಳ ಅಧಿಕಾರಗಳು ಮತ್ತು ಕರ್ತವ್ಯಗಳನ್ನು ಸಂವಿಧಾನದಲ್ಲಿ ನಿರ್ದಿಷ್ಟಪಡಿಸಲಾಗಿದೆ ಮತ್ತು ಅವುಗಳ ವ್ಯಾಪ್ತಿಯನ್ನು ಕೂಡ ನಿಗದಿಪಡಿಸಲಾಗಿದೆ .

18. ಆದಾಗ್ಯೂ, ಈ ಮೂರರಲ್ಲಿ ಶಾಸಕಾಂಗವು ಪ್ರಮುಖ ಪಾತ್ರವನ್ನು ಹೊಂದಿದ ಏಕಂದರ ಇದು

ಜನರ ನಿರೀಕ್ಷೆಗಳಿಗೆ ಅನುಗುಣವಾಗಿ ಕಾನೂನುಗಳನ್ನು ರೂಪಿಸುವ ಸಂಸ್ಥೆಯಾಗಿದೆ.

19 . ಸಂವಿಧಾನವನ್ನು ರೂಪಿಸುವಾಗ, ನಮ್ಮ ಶಾಸಕರು ನಮ್ಮ ಜನರ ಸಾಮಾಜಿಕ-ಆರ್ಥಿಕ ಪ್ರಗತಿಯನ್ನು ಖಚಿತಪಡಿಸಿಕೊಳ್ಳಲು ನಮ್ಮ ಶಾಸಕಾಂಗವು ಹೆಚ್ಚು ಅರಿವು, ಶ್ರದ್ಧೆ, ಪ್ರಾಮಾಣಿಕತ ಮತ್ತು ಜವಾಬ್ದಾರಿಯುತವಾಗಿರಬೇಕು ಎಂಬ ಚಿಂತನೆಯೊಂದಿಗೆ ಇದರ ನಿರ್ಮಾತೃಗಳು ಕೆಲಸ ಮಾಡಿದರು.

ಅನೇಕರಿಗೆ ತೇಜಸ್ವಿ ಸ್ಪೂರ್ತಿ, ನಾನೂ ಅವರೊಟ್ಟಿಗೆ ಮೀನು ಹಿಡಿಯಲು ಹೋಗುತ್ತಿದ್ದೆ: ಸಿದ್ದರಾಮಯ್ಯ

ಬೆಂಗಳೂರು: ಪೂರ್ಣಚಂದ್ರ ತೇಜಸ್ವಿ ಎಂ.ಎ ಕನ್ನಡ ಮಾಡಿದ್ದರು ಆದರೆ ಕಾಲೇಜಿನಲ್ಲಿ ಪ್ರೊಫೆಸರ್ ಆಗಿರಬಹುದಿತ್ತು ಆದರೆ ಅವರು ಪರಿಸರ ಪ್ರೇಮಿಯಾದರು ಕುವೆಂಪು ಮಗ ಎಂದು ತೇಜಸ್ವಿ ಅನುಕೂಲ ಪಡೆಯಲಿಲ್ಲ ಲೇಖಕನಾಗಿ ವಿಶಿಷ್ಠವಾದ ರೀತಿಯ ಸಾಹಿತ್ಯ ಸೃಷ್ಠಿ ಪ್ರಕೃತಿ ಬಗ್ಗೆ ಸಾಕಷ್ಟು ಲೇಖನ ಬರೆದರು ಈಗಲೂ ಅನೇಕರಿಗೆ ತೇಜಸ್ವಿ ಸ್ಪೂರ್ತಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ರು.

ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಜನ್ಮದಿನದ ಅಂಗವಾಗಿ ಚಿತ್ರಕಲಾ ಪರಿಷತ್ತಿನಲ್ಲಿ ಇಂದು ಆಯೋಜಿಸಿದ್ದ ತೇಜಸ್ವಿ ಜೀವಲೋಕ ಹಾಗೂ ಕುರಿಂಜಿ ಲೋಕ ಸಾಕ್ಷ್ಯಚಿತ್ರ, ಛಾಯಾಚಿತ್ರ ಪ್ರದರ್ಶನದ ಉದ್ಘಾಟನೆಯನ್ನು ಸಿದ್ದರಾಮಯ್ಯ ಅವರು ನೆರವೇರಿಸಿದರು. ನಂತರ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಪೂರ್ಣಚಂದ್ರ ತೇಜಸ್ವಿಗೆ ಮೈಸೂರಿನಲ್ಲಿ ಗೆಳೆಯರಿದ್ದರು, ಕೆ.ರಾಮದಾಸ್ ಮನೆಗೆ ಅವರು ಬರುತ್ತಿದ್ದರು, ಅವರ ಮೂಡಿಗೆರೆಯ ತೋಟದ ಮನೆಗೆ ಒಮ್ಮೆ ಹೋಗಿದ್ದೆ ಅನೇಕ ಸಲ‌ ನನ್ನನ್ನು ಆಹ್ವಾನಿಸಿದ್ದರು. ಬೆಳಗ್ಗೆಯಿಂದ ರಾತ್ರಿಯವರೆಗೂ ನಾನು ತಂಗಿದ್ದೆ ಸಾಹಿತಿ ಮಾತ್ರವಲ್ಲ ಮಹಾನ್ ಪರಿಸರ ಪ್ರೇಮಿ
ಉತ್ತಮ ಛಾಯಾಗ್ರಾಹಕ, ಮೀನು‌ ಹಿಡಿಯುವ ಹವ್ಯಾಸ ಅವರದ್ದು, ಮೀನು ಸಿಗಲಿ, ಸಿಗದಿರಲಿ ಗಂಟೆಗಟ್ಟಲೇ ಕೂತಿರುತ್ತಿದ್ದರು. ನನ್ನನ್ನು ಕೂಡ ಮೀನು ಹಿಡಿಯಲು ಕರೆದುಕೊಂಡು ಹೋಗುತ್ತಿದ್ದರು. ಒಂದು ಮೀನು ಸಿಕ್ಕರೂ ಸಾಕಷ್ಟು ಖುಷಿಪಡುತ್ತಿದ್ದರು ಎಂದ್ರು.

ನಾನು ಕೂಡ ಬಾಟನಿ ಸ್ಟುಡೆಂಟ್.ಬಾಟನಿ, ಜೂವಲಾಜಿ ಸಬ್ಜೆಕ್ಟ್ ನಂದು ನಂತರ ಕಾನೂನು ಅಭ್ಯಾಸ ಮಾಡಿದೆ ಈಗಲೂ SSLCವರೆಗೆ ಮಾತ್ರ ನೆನಪಿದೆ. ಬಿಎಸ್ಸಿ ಬಗ್ಗೆ ಅಷ್ಟೊಂದು ನೆನಪಿಲ್ಲ ನಾನು ಬಾಟನಿ MSc ಓದಬೇಕೆಂದಿದ್ದೆ ಬಾಟನಿ MSc ಸೀಟು ಸಿಗಲಿಲ್ಲ ನಂತರ ರಾಜಕೀಯಕ್ಕೆ ಬಂದುಬಿಟ್ಟೆ ಪ್ರೊ.ನಂಜುಂಡಸ್ವಾಮಿ ಪರಿಚಯ ಆಗಿರದಿದ್ದರೆ ನಾನು ರಾಜಕೀಯಕ್ಕೆ ಬರುತ್ತಿರಲಿಲ್ಲ ಲಾಯರ್ ಆಗಿರುತ್ತಿದ್ದೆ, ಅದೇ ಕೆಲಸ ಮಾಡುತ್ತಿದ್ದೆ ಎಂದ್ರು.

ರಾಜಕಾರಣದ ಬಗ್ಗೆ ಅವರು ಮಾತನಾಡುತ್ತಿರಲಿಲ್ಲ ರಾಜಕಾರಣಿಗಳ ಬಗ್ಗೆ ಅವರಿಗೆ ಒಳ್ಳೆಯ ಅಭಿಪ್ರಾಯ ಇರಲಿಲ್ಲ ಆದರೆ ನನ್ನ ಬಗ್ಗೆ ವೈಯಕ್ತಿಕವಾಗಿ ನನ್ನ ಬಗ್ಗೆ ಪ್ರೀತಿ ಅಭಿಮಾನ ಇತ್ತು, ದೇವನೂರು ಮಹಾದೇವ, ನಾನು ನಂಜುಂಡಸ್ವಾಮಿ ಜೊತೆ ಇದ್ದೆವು ಮಹಾದೇವ ನಾನು ಸಮಕಾಲೀನರು ಯು.ಆರ್.ಅನಂತಮೂರ್ತಿ, ತೇಜಸ್ವಿ, ನಂಜುಂಡಸ್ವಾಮಿ, ಮಲ್ಲೇಶ್, ಶ್ರೀರಾಮ್, ಕೆ.ರಾಮದಾಸ್ ಅವರ ಪ್ರಭಾವ ನನ್ನ ಮೇಲೆ ಬೀರಿತು ಪ್ರತಿ ಸೋಮವಾರ ನಾವೆಲ್ಲ ಎಲ್ಲ ವಿಷಯಗಳ ಬಗ್ಗೆ ಚರ್ಚೆ ಮಾಡುತ್ತಿದ್ದೆವು ಅದು ನನ್ನ ಬದುಕಿಗೆ ಸಾಕಷ್ಟು ಅನುಭವ ನೀಡಿದೆ ಬೆಂಕಿಜ್ವಾಲೆಗಿಂತ ಮನುಷ್ಯನೇ ಪರಿಸರಕ್ಕೆ ಅಪಾಯ ಮನುಷ್ಯನಿಂದ ಪರಿಸರಕ್ಕೆ ರಕ್ಷಣೆ ಸಿಗಬೇಕಿದೆ ಎಂದ್ರು.

ಗಣಪತಿ ಮೂರ್ತಿ 2-4 ಅಡಿ ನಿರ್ಬಂಧ ಹಿಂಪಡೆಯಲು ಸರಕಾರಕ್ಕೆ ಡಿ.ಕೆ. ಶಿವಕುಮಾರ್ ಆಗ್ರಹ

ಬೆಂಗಳೂರು:‘ಗಣೇಶ ಹಬ್ಬಕ್ಕೆ ಕೇವಲ ಮೂರು ದಿನ ಬಾಕಿ ಇರುವಾಗ ರಾಜ್ಯ ಸರಕಾರವು ಮನೆಯಲ್ಲಿ 2 ಅಡಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ 4 ಅಡಿ ಗಣೇಶ ಮೂರ್ತಿ ಇಡಬೇಕೆಂಬ ಅರ್ಥಹೀನ ನಿರ್ಬಂಧ ಹೇರುವ ಮೂಲಕ ಮೂರ್ತಿ ತಯಾರಕರ ಬದುಕಿನ ಜತೆ ಚೆಲ್ಲಾಟವಾಡಿದೆ. ತಕ್ಷಣ ಈ ಆದೇಶ ಹಿಂಪಡೆಯಬೇಕು ಅಥವಾ ಮೂರ್ತಿ ತಯಾರಿಕರಿಗೆ ಪರಿಹಾರ ನೀಡಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ.

‘ಕಳೆದ 2 ತಿಂಗಳಿಂದ ಗಣೇಶ ಮೂರ್ತಿ ತಯಾರಕರು ಲಕ್ಷಾಂತರ ಮೂರ್ತಿಗಳನ್ನು ಮಾಡಿದ್ದಾರೆ. ಸರ್ಕಾರ ಕೊನೆ ಕ್ಷಣದಲ್ಲಿ ಇಂತಹ ನಿರ್ಬಂಧ ಹೇರಿದರೆ ಅವರ ಸ್ಥಿತಿ ಏನಾಗಬೇಕು? ಸರ್ಕಾರ ಇದನ್ನೇ ಎರಡು ಮೂರು ತಿಂಗಳ ಹಿಂದೆಯೇ ಹೇಳಿದ್ದರೆ, ಮೂರ್ತಿ ತಯಾರಕರು ದೊಡ್ಡ ಮೂರ್ತಿಗಳನ್ನು ಮಾಡುತ್ತಲೇ ಇರಲಿಲ್ಲ’ ಎಂದು ಡಿ.ಕೆ. ಶಿವಕುಮಾರ್ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಕೋವಿಡ್ ಸಮಯದಲ್ಲಿ ಆದಾಯವಿಲ್ಲದಿದ್ದ ಗಣೇಶ ಮೂರ್ತಿ ತಯಾರಕರು, ತಮ್ಮ ಬಳಿ ಇದ್ದಬದ್ದ ಹಣ ಹಾಕಿ ಮೂರ್ತಿಗಳನ್ನು ತಯಾರಿಸಿದ್ದಾರೆ. ಕೊನೆ ಗಳಿಗೆಯಲ್ಲಿ ಈ ನಿರ್ಬಂಧ ಹೇರಿದರೆ ಅವರು ಎಲ್ಲಿಗೆ ಹೋಗಬೇಕು? ಸರ್ಕಾರ ಇದುವರೆಗೂ ಇವರಿಗೆ ನಯಾ ಪೈಸೆ ಕೋವಿಡ್ ಪರಿಹಾರ ಕೊಟ್ಟಿಲ್ಲ. ಹೀಗಿರುವಾಗ ಈ ರೀತಿ ನಿರ್ಬಂಧ ಎಷ್ಟು ಸರಿ? ದೇವರ ಮೂರ್ತಿ ಮಾಡಿಕೊಂಡು ಜೀವನ ನಡೆಸುವವರ ಬದುಕಿಗೆ ಸರಕಾರ ಕೊಳ್ಳಿ ಇಟ್ಟಿದೆ ಎಂದು ಆಕ್ರೋಶ ಅವರು ವ್ಯಕ್ತಪಡಿಸಿದ್ದಾರೆ.

‘ರಾಜ್ಯ ಸರ್ಕಾರ ಗಣಪತಿ ಉತ್ಸವಕ್ಕೆ ಕಡಿವಾಣ ಹಾಕುವ ಭರದಲ್ಲಿ ಭಕ್ತ ಹಾಗೂ ಭಗವಂತನ ನಡುವೆ ಕಂದಕ ನಿರ್ಮಿಸಿರುವುದು ದುರಾದೃಷ್ಟಕರ ಸಂಗತಿ. ಗಣೇಶ ಪ್ರತಿಮೆಯನ್ನು ಮನೆಯಲ್ಲಿ 2 ಅಡಿ, ಸಾರ್ವಜನಿಕ ಪ್ರದೇಶದಲ್ಲಿ 4 ಅಡಿಗೆ ಸೀಮಿತಗೊಳಿಸಿ, ದೇವರಿಗೂ ನೀನು ಇಷ್ಟೇ ಎತ್ತರ ಇರಬೇಕು ಎಂದು ನಿಯಂತ್ರಣ ಹೇರುತ್ತಿದ್ದಾರೆ’ ಎಂದು ಕುಟುಕಿದ್ದಾರೆ.

‘ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚು ಜನ ಸೇರಬಾರದು, ಮೆರವಣಿಗೆ ಮಾಡಬಾರದು ಎಂಬುದನ್ನು ಒಪ್ಪುತ್ತೇವೆ. ಆದರೆ ಗಣೇಶನ ಪ್ರತಿಮೆ 2-4 ಅಡಿಯೇ ಇರಬೇಕು ಎಂಬ ನಿರ್ಬಂಧದ ಹಿಂದೆ ಯಾವ ತರ್ಕ ಇದೆ? ಹಿಂದೂ ಸಂಸ್ಕೃತಿ ವಕ್ತಾರರು ಎಂದು ಹೇಳಿಕೊಳ್ಳುವವರು ಮಾಡುವ ಕೆಲಸ ಇದೇನಾ?’ ಎಂದು ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.

‘ಸರ್ಕಾರ ಅಂತಿಮ ಗಳಿಗೆಯಲ್ಲಿ ಈ ನಿರ್ಧಾರ ತೆಗೆದುಕೊಂಡರೆ, ಈಗ ಮಾಡಿರುವ ಮೂರ್ತಿಗಳನ್ನು ನಿರ್ಧಾರ ಪ್ರಕಟಿಸಿರುವವರ ಮನೆ ಮುಂದೆ ಇಡಬೇಕಾ? ನಿರ್ಧಾರ ಪ್ರಕಟಿಸಿರುವವರೇ ಇವುಗಳನ್ನು ಖರೀದಿಸಲಿ ಎಂದು ಒತ್ತಾಯಿಸಿದ್ದಾರೆ.

ಸರಕಾರದ ಈ ತಿಕ್ಕಲುತನದ ನಿರ್ಧಾರ “ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ” ಎಂಬಂತಿದೆ ಎಂದು ಅವರು ಟೀಕಿಸಿದ್ದಾರೆ.

ನಾವು ಕೋವಿಡ್ ನಿಯಮದ ಬಗ್ಗೆ ಪ್ರಶ್ನೆ ಮಾಡುತ್ತಿಲ್ಲ, ಸರ್ಕಾರದ ಅವೈಜ್ಞಾನಿಕ ತೀರ್ಮಾನ ಪ್ರಶ್ನಿಸುತ್ತಿದ್ದೇವೆ. ಈ ವೃತ್ತಿ ಅವಲಂಬಿಸಿರುವವರ ಬದುಕು ಬೀದಿ ಪಾಲಾಗಬಾರದು. ಗಣೇಶ ಹಬ್ಬಕ್ಕೆ ಇನ್ನು ಎರಡು ದಿನ ಕಾಲಾವಕಾಶ ಇದೆ. ಸರ್ಕಾರ ಈ ಅರ್ಥಹೀನ ನಿರ್ಬಂಧ ವಾಪಸ್ ಪಡೆಯಬೇಕು ಅಥವಾ ಮೂರ್ತಿ ತಯಾರಕರಿಗೆ ಪರಿಹಾರ ನೀಡಬೇಕು’ ಎಂದು ಶಿವಕುಮಾರ್ ಅವರು ಆಗ್ರಹಿಸಿದ್ದಾರೆ.

Video-ಮುಖ್ಯಮಂತ್ರಿಗಳು ಇಂದು ದೆಹಲಿಗೆ: ಕೇಂದ್ರ ಸಚಿವರ ಭೇಟಿ

ಬೆಂಗಳೂರು, ಸೆಪ್ಟೆಂಬರ್ 07:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದೆಹಲಿಗೆ ಭೇಟಿ ನೀಡಲಿದ್ದು, ನೀಡಿ ಹಣಕಾಸು, ಲೋಕೋಪಯೋಗಿ ಸಚಿವರನ್ನು ಭೇಟಿಯಾಗಲಿರುವುದಾಗಿ ತಿಳಿಸಿದರು.

ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಲೋಕೋಪಯೋಗಿ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಸ್ತಾವನೆಗಳ ಬಗ್ಗೆ ಚರ್ಚೆ ನಡೆಸಲಿರುವುದಾಗಿ ತಿಳಿಸಿದರು.

ವಸತಿ ಹಾಗೂ ನಗರಾಭಿವೃದ್ಧಿ ಸಚಿವರನ್ನೂ ಭೇಟಿಯಾಗಲಿದ್ದು, ರಾಜ್ಯದ ವಿವಿಧ ಪ್ರಸ್ತಾವನೆಗಳ ಬಗ್ಗೆ ಚರ್ಚೆ ನಡೆಸಿದ್ದೇನೆ. ಹಣಕಾಸಿನ ಸಚಿವರ ಬಳಿ ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಅನುದಾನ ಬಿಡುಗಡೆ ಸಲುವಾಗಿ ದೆಹಲಿಗೆ ತೆರಳಲಿರುವುದಾಗಿ ಹೇಳಿದರು.

ವಸತಿ ಮತ್ತು ನಗರಾಭಿವೃದ್ಧಿ ಸಂಬಂಧಿಸಿದಂತೆ ಕೇಂದ್ರ ಸಚಿವರು ಬೆಂಗಳೂರಿಗೆ ಬಂದಾಗ ಹಲವಾರು ಯೋಜನೆಗಳ ಬಗ್ಗೆ ಚರ್ಚೆಯಾಗಿತ್ತು.ನಗರ ವಸತಿ ಹಾಗೂ ಮೆಟ್ರೋ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಾಗುವುದು ಎಂದರು.

ನಿಫಾ ವೈರಾಣು ಕುರಿತು ಸಂಪೂರ್ಣ ಮಾಹಿತಿ ಪಡೆಯಲು ತಜ್ಞರಿಗೆ ಸೂಚಿಸಲಾಗಿದೆ. ಕೇರಳ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ನಿಗಾ ಇಡಲಾಗಿದೆ ಎಂದರು.

ಬೆಂಗಳೂರು ನಗರದಲ್ಲಿ ಗುಂಡಿಗಳನ್ನು ಮುಚ್ಚುವ ಸಂಬಂಧ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಲು ಬಿ.ಬಿ.ಎಂ.ಪಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಮೈತ್ರಿ ಕುರಿತು ಬಿಜೆಪಿಯವರು ನನ್ನೊಂದಿಗೆ ಮಾತನಾಡಿಲ್ಲ: ದೇವೇಗೌಡ

ಬೆಂಗಳೂರು: ಕಲ್ಬುರ್ಗಿ ಮಹಾನಗರ ಪಾಲಿಕೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಕುಮಾರಸ್ವಾಮಿ ಜೊತೆ ಮಾತಾಡಿರಬಹುದು, ನನ್ನ ಜೊತೆ ಬಿಜೆಪಿಯಾ ಯಾವ ನಾಯಕರು ಮಾತನಾಡಿಲ್ಲ ಎಂದು ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ ದೇಚೇಗೌಡ ಹೇಳಿದ್ರು.

ಇಂದು ಜೆಪಿ ಭವನದಲ್ಲಿ ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ.ದೇವೇಗೌಡ ಮಾತನಾಡಿ ಕಲಬುರಗಿ ಪಾಲಿಕೆಯಲ್ಲಿ ನಾಲ್ಕು ಸೀಟ್ ಬಂದಿದೆ ನಾಲ್ಕು ಸೀಟ್ ಬರುತ್ತೆ ಅಂತಾ ನಾನು ಅಂದುಕೊಂಡಿರಲಿಲ್ಲ ಹೆಚ್ ಡಿಕೆ ಹೋಗಿ ಪ್ರಚಾರ ಮಾಡಿದ್ರು
ಎಲ್ಲಿಯೂ ಇಲ್ಲವೇ ಇಲ್ಲ ಅನ್ನುವ ಸ್ಥಿತಿ ಇಲ್ಲ
ಸದ್ಯದ ಪರಿಸ್ಥಿತಿಯಲ್ಲಿ ಬೆಳಗಾವಿಯಲ್ಲಿ ನಮ್ಮ ಸ್ಥಿತಿ ಚೆನ್ನಾಗಿ ಇರಲಿಲ್ಲ ಅಲ್ಲಿ ಬಿಜೆಪಿ ಸ್ವೀಪ್ ಮಾಡಿದೆ, ಕಾಂಗ್ರೆಸ್ ಬಗ್ಗೆ ಮಾತಾಡಲು ಹೋಗಲ್ಲ , ಹುಬ್ಬಳ್ಳಿ ಧಾರವಾಡದಲ್ಲಿ ಮೂರ್ನಾಲ್ಕು ಸೀಟ್ ನಿರೀಕ್ಷೆ ಮಾಡಿದ್ದೇವು, ಒಂದು ಸೀಟ್ ಬಂದಿದೆ , ರಾಜ್ಯಾದ್ಯಂತ ಸ್ಥಳೀಯ ಸಂಸ್ಥೆಗಳಲ್ಲಿ ಕೆಲ ಕಡೆ ಪೈಪೋಟಿ ಕೊಟ್ಟಿದ್ದೇವೆ ಎಂದ್ರು.

ಯಾರೂ ನಿರಾಶೆಯಾಗಬೇಕಿಲ್ಲ, ನಾವು ಹೆಚ್ಚಿನ ಸದಸ್ಯತ್ವ ನೋಂದಣಿ ಬಗ್ಗೆ ಗಮನ ಕೊಡುತ್ತೇವೆ.ಪಕ್ಷ ಕಟ್ಟುವ ಕಡೆ ಹೆಚ್ಚು ಗಮನ ಕೊಡುತ್ತೇವೆ.ನಾನು ಮತ್ತು ಪಕ್ಷದ ಎಲ್ಲಾ ನಾಯಕರು ಒಳಗೊಂಡಂತೆ ಪಕ್ಷ ಕಟ್ಟುವ ಕೆಲಸಕ್ಕೆ ಆದ್ಯತೆ ಕೊಡುತ್ತೇವೆ
ಒಟ್ಟಾಗಿ ಐಕ್ಯತೆಯಿಂದ ಪಕ್ಷ ಸಂಘಟನೆ ಮಾಡ್ತೀವಿ ಎಂದ್ರು.

ಸೋಲು- ಗೆಲುವು ಅಂತಾ ನೋಡಿ ಕುಳಿತುಕೊಳ್ಳಲು ಆಗಲ್ಲ
ಸೋಲು-ಗೆಲುವು, ಸಿಹಿ-ಕಹಿ ನೋಡಿದ್ದೇವೆ ನಾವು. ಜಿ.ಟಿ.ದೇವೇಗೌಡ ದೂರ ಇದ್ದಾರೆ, ಆದ್ರೆ ಪಕ್ಷಕ್ಕೆ ಡ್ಯಾಮೇಜ್ ಆಗುವ ಹೇಳಿಕೆ ಕೊಟ್ಟಿಲ್ಲ , ನನಗೂ ಮಗನಿಗೂ ಟಿಕೆಟ್ ಕೊಡುವ ವಿಚಾರವಾಗಿ ಸಿದ್ದರಾಮಯ್ಯ ಹತ್ರ ಮಾತಾನಾಡಿದ್ದೀನಿ ಅಂತ ಹೇಳಿಕೊಂಡಿದ್ದಾರೆ
ಸಿದ್ದರಾಮಯ್ಯ ಹೈಕಮಾಂಡ್ ಗಮನಕ್ಕೆ ತರುವುದಾಗಿ ಹೇಳಿದ್ದಾರೆ ಅಂತ ಕೂಡ ಹೇಳಿದ್ದಾರೆ.ಆದ್ರೆ ಜೆಡಿಎಸ್ ಪಕ್ಷಕ್ಕೆ ಡ್ಯಾಮೇಜ್ ಆಗುವ ಹೇಳಿಕೆ ಕೊಟ್ಟಿಲ್ಲ, ಹಾಗಾಗಿ ಕ್ರಮ ಕೈಗೊಂಡಿಲ್ಲ ಎಂದ್ರು.

ಜಿ.ಟಿ.ದೇವೇಗೌಡ ಜೊತೆ ನಾನು ರಾಜಕೀಯ ಮಾತನಾಡಿಲ್ಲ
ತಿರುಪತಿಗೆ ಹೋಗಿದ್ದಾಗ ಜಿ.ಟಿ.ದೇವೇಗೌಡ ಸಿಕ್ಕಿದ್ದರು
ಆಗ ನಾನೇ ನೋಡಿ ಕರೆದು ತಮಾಷೆ ಮಾಡಿದ್ದೆ
ನಿನ್ನ ದರ್ಶನ ಇಲ್ಲಿ ಆಯ್ತಲ್ಲಪ್ಪಾ ಎಂದಿದ್ದೆ, ಆಗ ನಿಮ್ಮ ದರ್ಶನ ಆಗಿದ್ದು ಖುಷಿ ಆಯ್ತು ಸರ್ ಅಂದಿದ್ರು ಅಷ್ಟೇ
ಯಾವುದೇ ರಾಜಕೀಯ ಮಾತುಕತೆ ಆಗಿಲ್ಲ ಎಂದ್ರು.

ಕೋಲಾರ ಶಾಸಕ ಶ್ರೀನಿವಾಸ್ ಗೌಡ ಕಾಂಗ್ರೆಸ್ ಜೊತೆ ಸೇರಿ ಪಕ್ಷಕ್ಕೆ ಡ್ಯಾಮೇಜ್ ಆಗುವ ರೀತಿ ಮಾತಾಡಿದ್ದರೆ
ಅವರ ವಿರುದ್ಧ ರಾಜ್ಯಾಧ್ಯಕ್ಷರು ಕ್ರಮ ತೆಗೆದುಕೊಳ್ತಾರೆ
ಕೋಲಾರ ವಿಚಾರದಲ್ಲಿ ಸಹಿಸಲು ಆಗಲ್ಲ ಕೀಳಾಗಿ ಮಾತನಾಡಿದ್ದರೆ ಕ್ರಮ ಅನಿವಾರ್ಯವಾಗಿದೆ, ಕ್ರಮ ತೆಗೆದುಕೊಳ್ತಾರೆ ಎಂದ್ರು.

ಕಲಬುರಗಿ ಪಾಲಿಕೆಯಲ್ಲಿ ಅಧಿಕಾರ ಹಿಡಿಯುವ ವಿಚಾರ
ಮಲ್ಲಿಕಾರ್ಜುನ ಖರ್ಗೆ ನನ್ನ ಬಳಿ ಮಾತಾಡಿದ್ದಾರೆ, ಕುಮಾರಸ್ವಾಮಿ ಹತ್ರವೂ ಮಾತಾಡಿದ್ದಾರೆ. ಆದ್ರೆ ಸ್ಥಳೀಯ ಮುಖಂಡರ ಅಭಿಪ್ರಾಯ ಪಡೆಯದೇ ನಾವೇ ತೀರ್ಮಾನ ಮಾಡಬಾರದು ಎಂದು ಕುಮಾರಸ್ವಾಮಿಗೆ ಸೂಚಿಸಿದ್ದೇನೆ ಬಿಜೆಪಿ ಅವರು ನನ್ನ ಜೊತೆ ಯಾರೂ ಮಾತಾನಾಡಿಲ್ಲ ಖರ್ಗೆ ಅವರು ಪಕ್ಷದವರನ್ನೇ ಸಂಪರ್ಕಿಸಿ‌ ಮಾತಾಡಿದ್ದಾರೆ ಅನ್ಸುತ್ತೆ , ಸಿದ್ದರಾಮಯ್ಯ, ಡಿಕೆಶಿ, ಖರ್ಗೆ ಅವರು ಕೂತು ಮಾತಾಡ್ತಾರೆ ನೋಡೋಣ ಎಂದ್ರು.

ಮೈಸೂರು ರಸ್ತೆಯಿಂದ ಕೆಂಗೇರಿವರೆಗೆ ನಮ್ಮ ಮೆಟ್ರೋ ರೈಲು ಸಂಚಾರಕ್ಕೆ ಹಸಿರು ನಿಶಾನೆ

ಬೆಂಗಳೂರು, ಆಗಸ್ಟ್ 29: ಮೈಸೂರು ರಸ್ತೆಯಿಂದ ಕೆಂಗೇರಿ ಮೆಟ್ರೋ ನಿಲ್ದಾದಣದವರೆಗೆ 7.5 ಕಿ.ಮೀ ಉದ್ದದ ಮೆಟ್ರೋ ನೇರಳೆ ಮಾರ್ಗಕ್ಕೆ ಕೇಂದ್ರ ವಸತಿ, ನಗರ ವ್ಯವಹಾರ ಮತ್ತು ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವ ಹರದೀಪ್ ಸಿಂಗ್ ಪುರಿ ಹಾಗೂ ಮುಖ್ಯಮಂತಿ ಬಸವರಾಜ ಬೊಮ್ಮಾಯಿ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ನಂತರ ಮಾತನಾಡಿದ ಮುಖ್ಯಮಂತ್ರಿಗಳು, ಬೆಂಗಳೂರನ್ನು ನಿಜವಾದ ಅಂತರರಾಷ್ಟ್ರೀಯ ಕೇಂದ್ರವನ್ನಾಗಿಸಲು ಸರ್ಕಾರ ಸರ್ವ ಪ್ರಯತ್ನ ಮಾಡಲಿದೆ. ಮೆಟ್ರೋ ಇನ್ನಷ್ಟು ಜನರನ್ನು ಸಾಗಿಸುವ ಸಾಮರ್ಥ್ಯ ಹೊಂದಬೇಕು. ಒಟ್ಟು 317 ಕಿ.ಮೀ ಉದ್ದದ ಮಾರ್ಗ ನಿರ್ಮಾಣ ಗುರಿ ಇದೆ ಎಂದರು.

ಡ್ಯಾಷ್ ಬೋರ್ಡ್

ಮುಖ್ಯಮಂತ್ರಿ ಕಚೇರಿಯ ಡ್ಯಾಷ್ ಬೋರ್ಡ್ ನಿರ್ಮಾಣ ಮಾಡಲಾಗುತ್ತಿದೆ. ಮುಂದಿನ 20 ದಿನಗಳಲ್ಲಿ ಡ್ಯಾಷ್‌ಬೋರ್ಡ್ ಸಿದ್ಧಪಡಿಸಲಾಗುವುದು. ಪ್ರತಿದಿನದ ಅಪ್‌ಡೇಟ್‌ಗಳನ್ನು ಪರಿಶೀಲಿಸಲಾಗುವುದು ಹಾಗೂ ದಿನದ ಮೊದಲ ಗಂಟೆಯನ್ನು ಬೆಂಗಳೂರಿನ ಮೆಗಾ ಯೋಜನೆಗಳಾದ ಮೆಟ್ರೋ, ಹೊರ ವರ್ತುಲ ರಸ್ತೆ ಹಾಗೂ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಹೈ ಸ್ಪೀಡ್ ರೈಲು ಮತ್ತು ರಸ್ತೆ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಲು ಮೀಸಲಿರಿಸಲಾಗುವುದು ಎಂದರು.

ಇಂದು ನಗರದ ಪ್ರಮುಖ ಮೆಟ್ರೋ ಮಾರ್ಗವನ್ನು ಉದ್ಘಾಟಿಸಲಾಗಿದೆ. ಜನಸಂದಣಿ ಹೆಚ್ಚಿರುವ ಕಡೆ ಮೆಟ್ರೋ ಸೌಲಭ್ಯವ ಕಲ್ಪಿಸಲಾಗಿದೆ. ದೂರದ ಪ್ರದೇಶಗಳಿಗೆ ಅತ್ಯಲ್ಪ ಸಮಯದಲ್ಲಿ ತಲುಪಲು ಮೆಟ್ರೋದಿಂದ ಸಾಧ್ಯ. ಈ 7.5ಕಿ.ಮೀ ಮಾರ್ಗದಲ್ಲಿ ಅತ್ಯಂತ ಹೆಚ್ಚು ಜನಸಂದಣಿ ಇದೆ.‌ ಹೀಗಾಗಿ ಈ ಭಾಗದ ಬಹಳಷ್ಟು ಜನರಿಗೆ ಮೆಟ್ರೋ ರೈಲು ಉಪಯುಕ್ತವಾಗಲಿದೆ. ಇದನ್ನು ಕಾರ್ಯಗತ ಮಾಡಿರುವ ಎಲ್ಲಾ ಅಧಿಕಾರಿಗಳಿಗೆ ಅಭಿನಂದನೆಗಳು ಎಂದು ಸಿಎಂ ಹೇಳಿದರು.

ಬೆಂಗಳೂರು ಅಂತರರಾಷ್ಟ್ರೀಯ ನಗರ. ಯಾವುದೇ ಅಂತರರಾಷ್ಟ್ರೀಯ ನಗರ ಮೆಟ್ರೋ ಇಲ್ಲದೆ ಅಪೂರ್ಣ. ಮೆಟ್ರೋ ಬೆಂಗಳೂರಿನ ಜೀವನಾಡಿ ಮಾತ್ರವಲ್ಲ ಬೆಂಗಳೂರಿನ ಭವಿಷ್ಯ ರೇಖೆಯೂ ಆಗಬೇಕು ಎಂದರು. ಜನರಿಗೆ ಸಂಪರ್ಕ ವ್ಯವಸ್ಥೆ ಹಾಗೂ ಸುಖಕರ ಪ್ರಯಾಣ ಬೆಂಗಳೂರಿನಂತಹ ಮೆಟ್ರೋಪಾಲಿಟನ್ ನಗರದಲ್ಲಿ ಅವಶ್ಯಕ ವಾಗಿದೆ‌.‌ ವಿದೇಶಿ ಗಣ್ಯರು, ವಿಜ್ಞಾನಿಗಳು ಭೇಟಿ ನೀಡುವ ಕೇಂದ್ರ ಬೆಂಗಳೂರು. ಹೀಗಾಗಿ ಕಾಲ ಮಿತಿಯೊಳಗೆ ಯೋಜನೆಗಳನ್ನು ಅನುಷ್ಠಾನಗೊಳಿಸುವುದು ಮುಖ್ಯ. ಅದರ ಜತೆ ಯೋಜನೆಗಳಲ್ಲಿ ಉತ್ತರದಾಯಿತ್ವ ಅತಿ ಮುಖ್ಯ ಎಂದು ತಿಳಿಸಿದರು.

ಬೆಂಗಳೂರು ವಿಮಾನ ನಿಲ್ದಾಣ ವಿಶ್ವದಲ್ಲಿಯೇ ವಿಶಿಷ್ಟ ವಿಮಾನ ನಿಲ್ದಾಣ. ಮುಂಬರುವ ದಿನಗಳಲ್ಲಿ, ವಿಮಾನ ನಿಲ್ದಾಣಕ್ಕೆ ಮೆಟ್ರೋ ಸಂಪರ್ಕ ಒದಗಿಸಲಾಗುವುದು. ಮೂರು ವಿಧದ ಸಂಪರ್ಕವನ್ನು ಒದಗಿಸಲಾಗುವುದು. ಈ ಕನಸನ್ನು ನನಸಾಗಿಸುವತ್ತ ಅಗತ್ಯವಿರುವ ಎಲ್ಲಾ ತಯಾರಿಗಳನ್ನು ನಾವು ಮಾಡುತ್ತಿದ್ದೇವೆ ಎಂದರು. ನಗರದಲ್ಲಿ ದುಡಿಯುವ ವರ್ಗ ಬಹಳ ದೊಡ್ಡದಿದೆ. ಅವರ ಅಭಿವೃದ್ಧಿಯನ್ನೂ ಗಮನದಲ್ಲಿರಿಸಿಕೊಂಡಿದ್ದೇವೆ. 75 ಕೊಳಗೇರಿಗಳ ಸಂಪೂರ್ಣ ಅಭಿವೃದ್ಧಿಯನ್ನು ಮಾಡುವುದಾಗಿ 75 ನೇ ಸ್ವಾತಂತ್ರ್ಯೋತ್ಸವ ದಿನದಂದು ಘೋಷಿಸಲಾಗಿದೆ. ಆರೋಗ್ಯ ಮೂಲಸೌಕರ್ಯ ವೃದ್ಧಿಗೆ ವಿಶೇಷ ಕಾರ್ಯಕ್ರಮ, ಬೆಂಗಳೂರು ಸಂಚಾರ ದಟ್ಟಣೆಯನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ 12 ಹೆಚ್ಚು ರಸ್ತೆಗಳನ್ನು ಗುರುತಿಸಿ ಅಡೆತಡೆ ಇಲ್ಲದೆ ವಾಹನ ಸಂಚಾರ, ಕೃತಕ ಬುದ್ದಿಮತ್ತೆ ಬಳಕೆಯಿಂದ ಸಿಗ್ನಲ್ ವ್ಯವಸ್ಥೆಗೆ ಕ್ರಮ ಜರುಗಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ವಾಜಪೇಯಿ ಸ್ಮರಣೆ:

ಬೆಂಗಳೂರು ಮೆಟ್ರೋ ಯೋಜನೆಗೆ ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅನುಮೋದನೆ ನೀಡಿದ್ದರು. ಅವರ ಸಹಾಯವನ್ನು ನಾವು ಮರೆಯಬಾರದು. ಅವರು ದೂರದೃಷ್ಟಿಯನ್ನು ಹೊಂದಿದ್ದರು ಎಂದು ಸಿಎಂ ವಾಜಪೇಯಿ ಅವರನ್ನು ಸಿಎಂ ಸ್ಮರಿಸಿದರು.

2024ಕ್ಕೆ ಮೆಟ್ರೋ ಕೆಲಸ ಪೂರ್ಣ:

ಎರಡನೇ ಹಂತದ ಮೆಟ್ರೋ ಯೋಜನೆಯ ಕಾಮಗಾರಿ 2025 ಕ್ಕೆ ಮುಗಿಯಲಿದೆ. ಆದರೆ ಆ ಕಾಮಗಾರಿಯನ್ನು 2024 ಕ್ಕೆ ಮುಗಿಸುವಂತೆ ಸೂಚಿಸಿದ್ದೇನೆ. ಏಕೆಂದರೆ ಇತ್ತೀಚೆಗಿನ ನವದೆಹಲಿ ಭೇಟಿ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಮೆಟ್ರೋ ಯೋಜನೆಗೆ ಹಣಕಾಸಿನ ತೊಂದರೆ ಆಗುವುದಿಲ್ಲ. ಆದರೆ ಕೆಲಸದ ವೇಗವನ್ನು ಹೆಚ್ವಿಸಿ ಎಂದು ಸೂಚಿಸಿದ್ದಾರೆ. ಹೀಗಾಗಿ ಕಷ್ಟ ಪಟ್ಟು ಕೆಲಸ ಮಾಡಿ. ಆಗ ಕಷ್ಟ ಕಡಿಮೆ ಆಗುತ್ತದೆ ಎಂದು ಅಧಿಕಾರಿಗಳಿಗೆ ಸೂಚನೆ ಕಿವಿಮಾತು ಹೇಳಿದರು.

ಸಚಿವರಾದ ವಿ.ಸೋಮಣ್ಣ, ಆರ್.ಅಶೋಕ್, ಎಸ್.ಟಿ.ಸೋಮಶೇಖರ್, ವಿ.ಮುನಿರತ್ನ, ಎಂ.ಟಿ.ಬಿ. ನಾಗರಾಜ್ ಕೆ.ಗೋಪಾಲಯ್ಯ, ಸಂಸದರಾದ ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ ಉಪಸ್ಥಿತರಿದ್ದರು.