ಡಿಸಿಎಂ ಲಕ್ಣ್ಮಣ ಸವದಿಗೆ ಸಾರಿಗೆ ಸಂಸ್ಥೆಯ ನೌಕರರು, ಅಧಿಕಾರಿಗಳಿಂದ ಸನ್ಮಾನ

ಹುಬ್ಬಳ್ಳಿ ಮೇ.26:ಕಳೆದ ಎರಡು ತಿಂಗಳಿನಿಂದ ಸಾರಿಗೆ ನಿಗಮಗಳಲ್ಲಿ ಯಾವುದೇ ಬಸ್ . ಕಾರ್ಯಾಚರಣಿ ಆಗದೇ , ನಿಗಮದ ಆದಾಯ ಸಂಪೂರ್ಣ ಸ್ಥಗಿತಗೊಂಡು. ವೇತನ ನೀಡಲು ಹಣವಿಲ್ಲದಂತಹ ಸ್ಥಿತಿಯಲ್ಲಿದ್ದ ಸಾರಿಗೆ ನಿಗಮಗಳಿಗೆ , ಇದೇ ಮೊದಲ ಬಾರಿಗೆ ಸಾರಿಗೆ ನಿಗಮಗಳ ಇತಿಹಾಸದಲ್ಲಿ ಸರಕಾರವು ಸಾರಿಗೆ ನಿಗಮಗಳ ಸಿಬ್ಬಂದಿಗಳ ವೇತನಕ್ಕೆ ಎಪ್ರೀಲ್ ತಿಂಗಳ ವೇತನಕ್ಕೆ 322 ಕೋಟಿ ರೂ.ಹಣ ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಉಪಮುಖ್ಯ ಮಂತ್ರಿ ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರಿಗೆ ಕೆ ಎಸ್ ಆರ್ ಟಿ ಸಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಅಶೋಕ ಪಾಟೀಲ ಹಾಗೂ ಪ್ರಧಾನ ಕಾರ್ಯದರ್ಶಿ ಪಿ.ವೈ.ನಾಯಕ್ ಸನ್ಮಾನಿಸಿ,ಗೌರವಿಸಿದರು.

ವಾ.ಕ.ರ.ಸಾ.ಸಂಸ್ಥೆ ಅಧ್ಯಕ್ಷರಾದ ವಿ.ಎಸ್.ಪಾಟೀಲ ಅವರು ಕಾಳಜಿ , ಶ್ರಮವಹಿಸಿ ಮತ್ತು ಸಂಬಂಧಪಟ್ಟವರ ಜೊತೆಗೆ ನಿರಂತರ ಮಾತುಕತೆಯಿಂದ ಎಪ್ರಿಲ್ -2020 ರ ತಿಂಗಳ ವೇತನವನ್ನು ಸರಕಾರದಿಂದ ಹಣ ಬಿಡುಗಡೆಯಾಗಿರುತ್ತದೆ . ಮುಖ್ಯ ಮಂತ್ರಿಗಳೊಡನೆ , ನಿರಂತರ ಮಾತುಕತೆ ನಡೆಸಿ , ಪರಿಸ್ಥಿತಿಯನ್ನು ವಿವರಿಸಿ , ವೇತನಕ್ಕೆ ಹಣವನ್ನು ಬಿಡುಗಡೆಗೊಳಿಸಲು ಕಾರಣರಾದ ಮಾನ್ಯ ಉಪಮುಖ್ಯ ಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ, , ಕೆ ಎಸ್ ಆರ್ ಟಿ ಸಿ ವ್ಯವಸ್ಥಾಪಕ ನಿರ್ದೇಶಕರಾದ ಶಿವಯೋಗಿ ಕಳಸದ , ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ. ಶಿಖಾ .ವಾಕರಸಾಸಂ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್ , ಈಕರಸಾಸಂ ಎಂ.ಡಿ. ಝಹೀರಾ ನಾಝಿಮ್ ಅವರಿಗೆ ನಾಲ್ಕು ಸಾರಿಗೆ ಸಂಸ್ಥೆಗಳ ಸಮಸ್ತ ಅಧಿಕಾರಿಗಳು , ಸಿಬ್ಬಂದಿಗಳ ಪರವಾಗಿ ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ಕೃತಜ್ಞತಾ ಪತ್ರದೊಂದಿಗೆ ಕೃತಜ್ಞತೆಗಳನ್ನು ಸಲ್ಲಿಸಲಾಯಿತು .

*ವಿಶೇಷ ರಜೆ ಕೋರಿಕೆ:*
ಕಳೆದ ಮಾ.23 ರಿಂದ ಮೇ 03 ರವರೆಗೆ ಕೋವಿಡ್ ಲಾಕ್ ಡೌನ್ ಅವಧಿಯಲ್ಲಿ ಸಂಸ್ಥೆಯ ಅನುಸೂಚಿಗಳು ಕಾರ್ಯಾಚರಣೆಯಲ್ಲಿರದಿದ್ದರೂ ಅಧಿಕಾರಿಗಳು ಕರ್ತವ್ಯಕ್ಕೆ ಹಾಜರಾಗಿರುತ್ತಾರೆ.ಈ ಅವಧಿಗೆ ಚಾಲನಾ ಸಿಬ್ಬಂದಿಗೆ ಮಾತ್ರ ವಿಶೇಷ ರಜೆ ಪರಿಗಣನೆಯಾಗಿದೆ.ಈ ಸೌಲಭ್ಯವನ್ನು ಅಧಿಕಾರಿಗಳು ಮತ್ತು ಸಿಬ್ಬಂದಿಗೂ ವಿಸ್ತರಿಸಬೇಕು ಎಂದು ಸಚಿವರಿಗೆ ಮನವಿ ಸಲ್ಲಿಸಿದರು.

*ವಿಮಾ ಸೌಲಭ್ಯ ಎಲ್ಲರಿಗೂ ವಿಸ್ತರಿಸಿ:*
ಕರ್ತವ್ಯದ ವೇಳೆಯಲ್ಲಿ ಚಾಲಕರು ಮತ್ತು ನಿರ್ವಾಹಕರು ಕೋವಿಡ್ 19 ಪಿಡುಗಿಗೆ ತುತ್ತಾಗಿ ಮೃತಪಟ್ಟರೆ ಅವರ ಕುಟುಂಬಕ್ಕೆ 30 ಲಕ್ಷ ರೂ.ವಿಮೆ ನೀಡಲಾಗುವುದು ಎಂದು ಈಗಾಗಲೇ ಘೋಷಿಸಿರುತ್ತೀರಿ.ಮೆಕ್ಯಾನಿಕ್ ಗಳು ಸೇರಿದಂತೆ ಸಂಸ್ಥೆಯ ಇತರ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಈ ಸೌಲಭ್ಯ ವಿಸ್ತರಿಸಿ ವಿಮಾ ಮೊತ್ತವನ್ನು 30 ಲಕ್ಷ ರೂ.ಗಳಿಂದ 50 ಲಕ್ಷ ರೂ.ಗಳಿಗೆ ಹೆಚ್ಚಿಸಲು ಕೋರಲಾಯಿತು.

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ವಜಾಕ್ಕೆ ಡಿ.ಕೆ. ಶಿವಕುಮಾರ್ ಆಗ್ರಹ

ಬೆಂಗಳೂರು: ಉತ್ತರ ಪ್ರದೇಶ ಕಾರ್ಮಿಕರು ಅನ್ಯ ರಾಜ್ಯಗಳಿಗೆ ಹೋಗಿ ಕೆಲಸ ಮಾಡುವಂತಿಲ್ಲ ಎಂದು ನಿರ್ದೇಶಿಸುವ ಮೂಲಕ ಈ ದೇಶದ ಒಕ್ಕೂಟ ವ್ಯವಸ್ಥೆ ಹಾಗೂ ಸಂವಿಧಾನದ ಮೂಲ ಆಶಯಕ್ಕೆ ಧಕ್ಕೆ ತಂದಿರುವ ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ವಜಾ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೇಂದ್ರ ಸರಕಾರವನ್ನು ಒತ್ತಾಯಿಸಿದ್ದಾರೆ.

ನಮ್ಮ ಸಂವಿಧಾನದ ಪರಿಚ್ಛೇದ 19(1)(ಡಿ) ಮತ್ತು (ಈ) ಪ್ರಕಾರ ದೇಶದ ಪ್ರತಿಯೊಬ್ಬ ನಾಗರೀಕ ಯಾವುದೇ ಜಾಗದಲ್ಲಿ ಹೋಗಿ, ಅಲ್ಲಿ ನೆಲೆಸಿ, ಅಲ್ಲಿ ಕೆಲಸ ಮಾಡುವ ಹಕ್ಕನ್ನು ನೀಡಲಾಗಿದೆ.
ಆದರೆ ಹೊರ ರಾಜ್ಯಗಳಿಂದ ತಮ್ಮ ರಾಜ್ಯಕ್ಕೆ ವಾಪಸ್ಸಾಗುತ್ತಿರುವ ಕಾರ್ಮಿಕರನ್ನು ಸ್ವಾಗತಿಸಿ ಅವರಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ವಿಫಲವಾಗಿರುವ ಯೋಗಿ ಆದಿತ್ಯನಾಥ್ ಈ ರೀತಿಯ ಉದ್ಧಟತನದ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ಟೀಕಿಸಿದ್ದಾರೆ.

ಯೋಗಿ ಆದಿತ್ಯನಾಥ ಅವರಿಗೆ ಈ ದೇಶದ ಸಂವಿಧಾನದ ಬಗ್ಗೆ ಕಿಂಚಿತ್ತೂ ಪರಿಜ್ಞಾನವಿಲ್ಲ. ಇದ್ದಿದ್ದರೆ ಈ ರೀತಿ ಪ್ರಜಾದ್ರೋಹದ ಮಾತುಗಳನ್ನು ಆಡುತ್ತಿರಲಿಲ್ಲ. ಯಾರು ಬೇಕಾದರೂ ಎಲ್ಲಿಗೆ ಬೇಕಾದರೂ ಹೋಗಿ ಕೆಲಸ ಮಾಡುವ ಮೂಲಭೂತ ಹಕ್ಕನ್ನು ನಮ್ಮ ಸಂವಿಧಾನ ನೀಡಿದೆ. ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಹೋಗಿ ಕೆಲಸ ಮಾಡಲು ಯಾರೂ ಪಾಸ್ ಪೋರ್ಟ್ ತೆಗೆದುಕೊಳ್ಳಬೇಕಿಲ್ಲ. ಯೋಗಿ ಆದಿತ್ಯನಾಥ ಅವರ ನಡೆ ಸರ್ವಾಧಿಕಾರಿ ಧೋರಣೆಯದ್ದಾಗಿದ್ದು, ಪ್ರಜಾತಂತ್ರ ವ್ಯವಸ್ಥೆಯ ಭದ್ರಬುನಾದಿಯನ್ನು ಅಲ್ಲಾಡಿಸುವಂಥದ್ದಾಗಿದೆ ಎಂದು ಅವರು ಕಿಡಿ ಕಾರಿದ್ದಾರೆ.

ಉತ್ತರ ಪ್ರದೇಶ ಕಾರ್ಮಿಕರು ದೇಶದ ಎಲ್ಲೆಡೆ ಕೆಲಸ ಮಾಡಿದ್ದಾರೆ, ಮಾಡುತ್ತಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ ಮತ್ತಿತರ ಕಡೆ ಕೆಲಸ ಮಾಡಿದ್ದಾರೆ. ಅದೇ ರೀತಿ ನಮ್ಮ ಕನ್ನಡಿಗರು ಕೂಡ ಮುಂಬೈ, ದಿಲ್ಲಿ, ಹೈದರಾಬಾದ್, ಉತ್ತರ ಪ್ರದೇಶ ಮತ್ತಿತರ ಕಡೆ ಕೆಲಸ ಮಾಡಿದ್ದಾರೆ, ಈಗಲೂ ಮಾಡುತ್ತಿದ್ದಾರೆ. ಅವರನ್ನು ಯೋಗಿ ಆದಿತ್ಯನಾಥ್ ಅವರಂತೆ ಕಟ್ಟಿಹಾಕಲು ಸಾಧ್ಯವೇ. ಹಾಗೆ ನಿರ್ಬಂಧ ಹೇರಲು ನಮ್ಮ ಸಂವಿಧಾನದಲ್ಲಿ ಅವಕಾಶವಿಲ್ಲ. ಆದಿತ್ಯನಾಥ ಅವರು ಕಾರ್ಮಿಕರನ್ನು ಗುಲಾಮರೆಂದು ಭಾವಿಸಿದ್ದಾರೆಯೇ ಎಂದು ಶಿವಕುಮಾರ್ ಪ್ರಶ್ನಿಸಿದ್ದಾರೆ.

‘ಭಾರತ ಒಕ್ಕೂಟ ವ್ಯವಸ್ಥೆಯಾಗಿದ್ದು, ಅದು ಯಾರಪ್ಪನ ಆಸ್ತಿಯೂ ಅಲ್ಲ. ಈ ದೇಶದ ಪ್ರತಿಯೊಬ್ಬ ನಾಗರೀಕನಿಗೂ ನಮ್ಮ ಸಂವಿಧಾನ ಒಂದಷ್ಟು ಹಕ್ಕುಗಳನ್ನು ನೀಡಿದೆ ಅದನ್ನು ಕಸಿದುಕೊಳ್ಳಲು ಯಾರಿಗೂ ಸಾಧ್ಯವಿಲ್ಲ.

ಆದರೆ ದುರಾದೃಷ್ಟವಶಾತ್ ಕೇಂದ್ರದಲ್ಲಿ ಹಾಗೂ ವಿವಿಧ ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರಗಳು ಸರ್ವಾಧಿಕಾರಿ ಧೋರಣೆ ತೋರುತ್ತಾ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಾಳಿಗೆ ತೂರುತ್ತಿವೆ. ಇದಕ್ಕೆ ಸಣ್ಣ ಉದಾಹರಣೆ ಕಾರ್ಮಿಕರ ವಿಚಾರದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೀಡಿರುವ ಹೇಳಿಕೆ. ಇಂತಹ ಅಸಂವಿಧಾನಿಕ ನಿರ್ಧಾರಗಳನ್ನು ಪ್ರಧಾನ ಮಂತ್ರಿ ಹಾಗೂ ರಾಷ್ಟ್ರಪತಿಗಳು ಖಂಡಿಸಿ, ಸಂವಿಧಾನ, ಪ್ರಜಾಪ್ರಭುತ್ವ ಹಾಗೂ ಒಕ್ಕೂಟ ವ್ಯವಸ್ಥೆಯನ್ನು ಕಾಪಾಡಬೇಕು ಎಂದು ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.

ಆದಿತ್ಯನಾಥ ಅವರನ್ನು ಸಿಎಂ ಸ್ಥಾನದಿಂದ ವಜಾ ಮಾಡಬೇಕು. ಇಲ್ಲದಿದ್ದರೆ ಇಡೀ ದೇಶಾದ್ಯಾಂತ ಉಗ್ರ ಹೋರಾಟ ರೂಪಿಸುವುದು ಅನಿವಾರ್ಯವಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ಆಯುಷ್ ಇಲಾಖೆ ವೈದ್ಯರು ಮತ್ತು ಸಿಬ್ಬಂದಿ ವರ್ಗದ ಸಭೆ ಯಶಸ್ವಿ

ಬೆಂಗಳೂರು,ಮೇ-26:ರಾಜ್ಯಾದ್ಯಂತ ಮುಷ್ಕರ ನಡೆಸುತ್ತಿದ್ದ ಆಯುಷ್ ಇಲಾಖೆ ವೈದ್ಯರು ಮತ್ತು ಸಿಬ್ಬಂದಿ ವರ್ಗದ ಕುಂದು ಕೊರತೆ ಹಾಗೂ ಸಮಸ್ಯೆಗಳ ಬಗ್ಗೆ ಚರ್ಚಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ಅವರು ಕರೆದಿದ್ದ ಸಭೆ ಯಶಸ್ವಿ ಆಗಿದೆ.

ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಆಯುಷ್ ಇಲಾಖೆ ವೈದ್ಯರು ಮತ್ತು ಸಿಬ್ಬಂದಿ ವರ್ಗದ ಕುಂದು ಕೊರತೆ ಹಾಗೂ ಸಮಸ್ಯೆಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಯಿತು. ಕೊನೆಗೆ
ವೈದರು ಮತ್ತು ಸಿಬ್ಬಂದಿಗಳ ಬೇಡಿಕೆಗೆ ಸ್ಪಂದಿಸುವ ಭರವಸೆ ನೀಡಿ ಪ್ರತಿಭಟನೆ ಹಿಂದಕ್ಕೆ ಪಡೆಯಲು ಸಚಿವ ಶ್ರೀ ರಾಮುಲು ವಿನಂತಿಸಿದರು.

ಸಚಿವರು ನೀಡಿದ ಭರವಸೆಗಳು:

ಅಲೋಪತಿ ಗುತ್ತಿಗೆ ವೈದರಿಗೆ ಯಾವ ಆಧಾರದ ಮೇಲೆ ವೇತನ ಹೆಚ್ಚಿಸಲಾಗಿದೆಯೋ ಅದೇ ಮಾನದಂಡ ದ ಆಧಾರದ ಮೇಲೆ ಆಯುಷ್ ವೈದ್ಯರಿಗೆ ಸಹ ವೇತನ ಹೆಚ್ಚಿಸಲು ನಿರ್ಧರಿಸಲಾಗಿದೆ.

NHM , RBSK ವೈದ್ಯರಿಗೆ ರಾಜ್ಯ ಸರ್ಕಾರ top up ವೇತನ ಕೊಡಲು ಆರ್ಥಿಕ ಇಲಾಖೆಗೆ ತಕ್ಷಣ ಕಡತ ಸಲ್ಲಿಸಲು ಸೂಚಿಸಲಾಗಿದೆ.

NHM , RBSK ವೈದ್ಯರಿಗೆ ವೇತನ ಹೆಚ್ಚಿಸಲು ಇದೇ ವರ್ಷದ PIP ಯಲ್ಲಿ ಅನುಷ್ಠಾನ ಗಳಿಸಲು ಕೇಂದ್ರದ ಅನುಮತಿ ಪಡೆಯಲು ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಆಯುಷ್ ಯುಜಿ ಮತ್ತು ಪಿಜಿ ವಿದ್ಯಾರ್ಥಿಗಳಿಗೆ scholarship
ಹೆಚ್ಚಿಸಲು ಆರ್ಥಿಕ ಇಲಾಖೆಗೆ ಕಡತ ಕಳಿಸಲು ತೀರ್ಮಾನಿಸಲಾಗಿದೆ.

Special Recruitment cell ಮುಖಾಂತರ 2000 MBBS ವೈದ್ಯರನ್ನು ನೇಮಕಾತಿ ಮಾಡಿಕೊಳ್ಳುವ ಮಾದರಿಯಲ್ಲಿ ಆಯುಷ್ ವೈದ್ಯರನ್ನು ಸಹ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ.

ರಾಜ್ಯದಲ್ಲಿ ಇಂದು ಶತಕ ಬಾರಿಸಿದ ಕೋವಿಡ್: 2281 ತಲುಪಿದ ಸೋಂಕಿತರ ಸಂಖ್ಯೆ

ಬೆಂಗಳೂರು,ಮೇ-26: ರಾಜ್ಯದಲ್ಲಿ ಕೋವಿಡ್ ಇಂದು ಶತಕ ಬಾರಿಸಿದ್ದು 101 ಜನರಿಗೆ ಹೊಸದಾಗಿ ಸೋಂಕು ದೃಢವಾಗುವ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2283 ಕ್ಕೆ ತಲುಪಿದೆ.

ಇಂದು ಕೋವಿಡ್ ಹಿನ್ನಲೆಯಲ್ಲಿ ಇಬ್ಬರು ಮೃತರಾಗಿದ್ದು ಅಸುನೀಗಿದವರ ಸಂಖ್ಯೆ 44 ಆಗಿದೆ. ಇಂದು 43 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಗುಣಮುಖರಾದವರ ಸಂಖ್ಯೆ 748 ಆಗಿದೆ.

ಇಂದಿನ ಪಾಸಿಟಿವ್ ಪ್ರಕರಣದಲ್ಲಿ ಮಹಾರಾಷ್ಟ್ರ, ತಮಿಳುನಾಡು,ಜಾರ್ಖಂಡ್ ರಾಜ್ಯಗಳಿಂದ ಬಂದವರದ್ದೇ ದೊಡ್ಡ ಸಂಖ್ಯೆಯಾಗಿದೆ.ವಲಸೆ ಕಾರ್ಮಿಕರೇ ಹೆಚ್ಚಾಗಿ ಇರುವ ಕಾರಣ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

 

ಕೋವಿಡ್ ನಿಯಂತ್ರಣದಲ್ಲಿ ರಾಜ್ಯ ಯಶಸ್ಸು ಕಂಡಿದೆ: ಸದಾನಂದಗೌಡ

ಬೆಂಗಳೂರು:ಕೊರೋನ ಫಾರ್ಮಸಿ ಸಚಿವನಾಗಿ ನನ್ನ ಜವಾಬ್ದಾರಿ ಹೆಚ್ಚಿದೆ. ದಿಲ್ಲಿಯಿಂದಲೇ ರಾಜ್ಯದ ಪರಿಸ್ಥಿತಿಯ ಮಾಹಿತಿ ಪಡೆಯುತ್ತಿದ್ದೆ ವಸ್ತುಸ್ಥಿತಿ ಅರಿಯಲು ಸ್ವತಃ ಸಭೆ ನಡೆಸಿದ್ದೇನೆ ಕರೋನ ನಿಯಂತ್ರಣ ಮಾಡುವಲ್ಲಿ ಕರ್ನಾಟಕ ಯಶಸ್ಸು ಕಂಡಿದೆ ಅದ್ಭುತ ಪ್ರಯತ್ನ ನಮ್ಮಲ್ಲಿ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ತಿಳಿಸಿದ್ದಾರೆ.

ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ (ಫಾರ್ಮಸಿ ಒಳಗೊಂಡಂತೆ) ಡಿ ವಿ ಸದಾನಂದ ಗೌಡ ಅವರು ಕೋವಿಡ್-19ಕ್ಕೆ ಸಂಬಂಧಿಸಿದಂತೆರಾಜ್ಯದ ಸಚಿವರುಗಳು, ಶಾಸಕರು, ಅಧಿಕಾರಿಗಳ ಜತೆ ವಿಕಾಸ ಸೌಧದಲ್ಲಿ ಸಭೆ ನಡೆಸಿದರು.

ಸಭೆ ನಂತರ ಮಾತನಾಡಿದ ಸಚಿವರು ಕರ್ನಾಟಕಕ್ಕೆ ಹೊಸ ರಾಜ್ಯ ಮತ್ತು ದೇಶದಿಂದ ಬಂದು ಕ್ವಾರಂಟೈನ್ ನಲ್ಲಿ ಇರುವವರಿಂದ ಪ್ರಕರಣ ಬೆಳಕಿಗೆ ಬರುತ್ತಿದೆ
ರಾಜ್ಯದಲ್ಲಿ ದಾಖಲಾಗಿರುವ 800ರಿಂದ 900 ಪ್ರಕರಣಗಳು ಬೇರೆ ರಾಜ್ಯದಿಂದ ಇಲ್ಲಿಗೆ ಬಂದವರೇ ಆಗಿದ್ದಾರೆ ಕೊರೋನ ನಿಯಂತ್ರಣ ಮಾಡುವಲ್ಲಿ ಬೆಂಗಳೂರು ಎಲ್ಲ ಮಹಾನಗರಕ್ಕೆ ಹೋಲಿಸಿದರೆ ನಂ.1 ಸ್ಥಾನದಲ್ಲಿ ಇದೆ ಡಾ.ಮಂಜುನಾಥ್ ಮತ್ತು ತಂಡಕ್ಕೆ ವಿಶೇಷ ಅಭಿನಂದನೆ ಸಲ್ಲಿಸುತ್ತೇನೆ ರಾಜ್ಯದಲ್ಲಿ ಟೆಸ್ಟಿಂಗ್ ಲ್ಯಾಬ್ ಹೆಚ್ಚಾಗಿದೆ. ಕರೋನ ಪರೀಕ್ಷೆಗಳ ಪ್ರಮಾಣವೂ ಹೆಚ್ಚಿದೆ. ಹೈಡ್ರೊಕ್ಲೊರೋಕ್ವಿನ್, ಪ್ಯಾರಾಸಿಟಮಾಲ್ ಮಾತ್ರೆಗಳೂ ಅಗತ್ಯಕ್ಕಿಂತ ಹೆಚ್ಚಿದೆ ಎಂದರು.

ವಲಸಿಗರನ್ನು ಅವರ ರಾಜ್ಯಕ್ಕೆ ಕಳುಹಿಸಲು ರಾಜ್ಯ ಸಿದ್ದ ಇದೆ. ಆದ್ರೆ ಆಯಾ ರಾಜ್ಯಗಳೂ ಇವರನ್ನು ಬಿಟ್ಟುಕೊಳ್ಳಲು ಒಪ್ಪಬೇಕು ಹೀಗಾಗಿ ಒಂದಷ್ಟು ಗೊಂದಲ ಇದೆ ರಸಗೊಬ್ಬರದ ದಾಸ್ತಾನು ಸಹ ಅಗತ್ಯದ ಪ್ರಮಾಣದಲ್ಲಿ ಇದೆ ಪಿಪಿಒ ಕಿಟ್ ಗಳು ಅಗತ್ಯವಾದಷ್ಟು ಇದೆ ಅಂತ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ. ಜತೆಗೆ ಹೋಟೆಲ್ ಗಳನ್ನು ತೆರೆಯಬೇಕು ಎಂಬ ಬೇಡಿಕೆಯೂ ಇದೆ ಈ ಬಗ್ಗೆ ಕೇಂದ್ರದ ಜತೆ ಮಾತನಾಡಿ ಕೂಡಲೆ ವ್ಯವಸ್ಥೆ ಮಾಡಿಸುತ್ತೇನೆ ಎಂದರು.

ಕೋವಿಡ್ ನಿಯಂತ್ರಣದಲ್ಲಿ ಬೆಂಗಳೂರು ಮಾದರಿ ನಗರ,ರಾಜ್ಯದ ಸ್ಥಿತಿಗತಿ ಸುತ್ತಾ ಒಂದು ಸುತ್ತು

 

ಬೆಂಗಳೂರು: ಕೋವಿಡ್ ನಿಯಂತ್ರಣದಲ್ಲಿ ದೇಶದಲ್ಲೇ ಅತ್ಯುತ್ತಮ ತೋರಿದ ನಾಲ್ಕು ನಗರಗಳ ಪಟ್ಟಿಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರು‌ ಸ್ಥಾನ ಪಡೆದುಕೊಂಡಿದ್ದು ರಾಜ್ಯದ ಕೋವಿಡ್ ನಿರ್ವಹಣೆಯಲ್ಲಿ ಹೆಮ್ಮೆ ಪಡುವ ಸಾಧನೆ ಮಾಡಿದೆ.

ಬೆಂಗಳೂರು ಮಾದರಿ ನಗರ ಎನ್ನುವ ಘೋಷಣೆ ಹೊರಬೀಳುತ್ತಿದ್ದಂತೆ ಮುಖ್ಯಮಂತ್ರಿ ಸೇರಿದಂತೆ ಸಚಿವರು ಸಂತಸ ವ್ಯಕ್ತಪಡಿಸಿದ್ದು ಕೊರೊನಾ ವಾರಿಯರ್ಸ್‌ ಗೆ ಅಭಿನಂದನೆ ಸಲ್ಲಿಕೆ ಮಾಡಿದ್ದಾರೆ.

ರಾಜ್ಯದಲ್ಲಿನ ಕೋವಿಡ್-19 ಸ್ಥಿತಿ-ಗತಿ ಕುರಿತು ಕೆಲವು ಅಂಕಿ ಅಂಶಗಳನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಬಿಡುಗಡೆ ಮಾಡಿದ್ದಾರೆ. ಅದರ ಸಮಗ್ರ ಮಾಹಿತಿ ಇಲ್ಲಿದೆ.

* ರಾಜ್ಯದಲ್ಲಿ 10 ಲಕ್ಷ ಜನಗಳ ಪೈಕಿ 32.05 ವ್ಯಕ್ತಿಗಳಿಗೆ ಕೋವಿಡ್ ಸೋಂಕು ತಗುಲಿದೆ. ಇಡೀ ದೇಶದಲ್ಲಿ ನಮ್ಮ ರಾಜ್ಯ ಸೋಂಕಿತರ ಪ್ರಮಾಣ ದೃಷ್ಟಿಯಿಂದ 13 ನೇ ಸ್ಥಾನದಲ್ಲಿದೆ.

* ಇಂದು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾದವರ ಸಂಖ್ಯೆ : 51.

ಇದುವರೆವಿಗೆ 705 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.

* ಇಂದು ಸಂಭವಿಸಿರುವ ಎರಡು (2) ಸಾವುಗಳೂ ಸೇರಿದಂತೆ ಇದುವರೆವಿಗೆ ಕೊವಿಡ್19 ಸಂಬಂಧಿತ ಒಟ್ಟು 44 ಸಾವುಗಳು ಸಂಭವಿಸಿವೆ.

* ಒಟ್ಟು 2182 ಪಾಸಿಟಿವ್ ಪ್ರಕರಣಗಳ ಪೈಕಿ 44 ಸಾವುಗಳು ಸಂಭವಿಸಿದ್ದು,ರಾಜ್ಯದಲ್ಲಿನ_ಕೋವಿಡ್19 ಸಂಬಂಧಿತ ಸಾವಿನ_ಪ್ರಮಾಣ 2%.

(ಪ್ರತಿ ಸಾವೂ ಸಹ ಆ ಕುಟುಂಬಗಳಿಗೆ ಭರಿಸಲಾರದ ನೋವು ತರುತ್ತವೆ).

* ಇಡೀ ದೇಶದಲ್ಲಿ ಅತ್ಯಂತ ಕಡಿಮೆ ಪ್ರಮಾಣದ ಸಾವು ಸಂಭವಿಸಿರುವ ರಾಜ್ಯಗಳಲ್ಲಿ ನಮ್ಮ ರಾಜ್ಯವೂ ಒಂದು.

* ಇಂದಿನ 1431 ಕೋವಿಡ್ 19 ಪಾಸಿಟಿವ್ ಪ್ರಕರಣಗಳ ಪೈಕಿ 27 ಮಂದಿ ಅಂದರೆ ಕೇವಲ 1.18% ಮಾತ್ರ ICU ನಲ್ಲಿದ್ದಾರೆ.

ಉಳಿದ 1414 ವ್ಯಕ್ತಿಗಳು ವಿವಿಧ ಆಸ್ಪತ್ರೆಗಳ ಐಸೋಲೇಷನ್ ವಾರ್ಡ್ ಗಳಲ್ಲಿದ್ದು ಅವರ ಸ್ಥಿತಿ ಸ್ಥಿರವಾಗಿದೆ‌, ಯಾರೊಬ್ಬರೂ ವೆಂಟಿಲೇಟರ್ ಸಹಾಯದಲ್ಲಿಲ್ಲ.‌

* ರಾಜ್ಯದಲ್ಲಿ ಕೋವಿಡ್ 19 ರ ರೋಗಿಗಳಿಗಾಗಿ ಮೀಸಲಿಟ್ಟಿರುವ ಹಾಸಿಗೆಗಳ ಸಂಖ್ಯೆ : 28686.
ಇಂದು ಇರುವ ಸಕ್ರಿಯ ಪಾಸಿಟಿವ್ ಪ್ರಕರಣಗಳು (Active Positive cases) ; 1431.

ಅಂದರೆ ಆಸ್ಪತ್ರೆಗಳಲ್ಲಿ ಇರುವ Bed Occupancy ಪ್ರಮಾಣ : 4.9%

* ಇಂದು 93 ಹೊಸ ಪ್ರಕರಣ ಗಳು ವರದಿಯಾಗಿವೆ. ಇವರ ಪೈಕಿ 76 ಮಂದಿ ಹೊರ ರಾಜ್ಯ ಹಾಗೂ ಹೊರ ದೇಶಗಳಿಂದ ಬಂದಿರುವವರು.‌ ಅಂದರೆ ಶೇಕಡ 81.7 ವ್ಯಕ್ತಿಗಳು ಹೊರಗಿನಿಂದ ಸೋಂಕು ತಂದಿರುವವರು.‌

* ರಾಜ್ಯದಲ್ಲಿ ಇದುವರೆಗೆ 2,19,894 ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಇದರಲ್ಲಿ ಪಾಸಿಟಿವ್ ಪ್ರಕರಣಗಳು 2,182. ಅಂದರೆ ರಾಜ್ಯದಲ್ಲಿ ಪಾಸಿಟಿವಿಟಿ ಪ್ರಮಾಣ : 0.99%.