ಬಿಜೆಪಿ ನಾಯಕರ ವಿರುದ್ಧ ಭ್ರಷ್ಟಾಚಾರ ಆರೋಪ ಬಂದಾಗ ಐಟಿ, ಇಡಿ ಎಲ್ಲಿದ್ದವು?: ಡಿ.ಕೆ. ಶಿವಕುಮಾರ್ ಪ್ರಶ್ನೆ

ನವದೆಹಲಿ:‘ಆಪರೇಷನ್ ಕಮಲ, ಸಮ್ಮಿಶ್ರ ಸರ್ಕಾರ ಬೀಳಿಸಿ ಬಿಜೆಪಿ ಸರ್ಕಾರ ರಚಿಸುವಲ್ಲಿ ಬಿಜೆಪಿ ನಾಯಕರು ಹಣ ಖರ್ಚು ಮಾಡಿದ ಬಗ್ಗೆ ಆರೋಪ ಕೇಳಿ ಬಂದಾಗ ಆದಾಯ ತೆರಿಗೆ, ಜಾರಿ ನಿರ್ದೇಶನಾಲಯ ಸಂಸ್ಥೆಗಳು ಎಲ್ಲಿದ್ದವು? ಬಿಜೆಪಿಯವರ ವ್ಯವಹಾರಗಳೆಲ್ಲಾ ಸರಿಯಾಗಿದ್ದಾವಾ..?’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಅವರ ನಿವಾಸ, ಕಚೇರಿ ಮೇಲೆ ಇಡಿ ಅಧಿಕಾರಿಗಳ ದಾಳಿ ಸಂಬಂಧ ನವದೆಹಲಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಿವಕುಮಾರ್,‘ನಮ್ಮ ಪಕ್ಷದ ಶಾಸಕರಾದ ಜಮೀರ್ ಅಹ್ಮದ್ ಅವರ ಮನೆ, ಕಚೇರಿ ಮೇಲಿನ ಇ.ಡಿ. ದಾಳಿ ಖಂಡನೀಯ. ಕಾನೂನು ಪ್ರಕಾರ ಅದನ್ನು ಎದುರಿಸಲು ಜಮೀರ್ ಅವರು ಸಮರ್ಥರಿದ್ದಾರೆ. ಎರಡು ವರ್ಷಗಳ ಹಿಂದೆ ಇ.ಡಿ. ಅಧಿಕಾರಿಗಳು ಜಮೀರ್ ಅವರಿಗೆ ನೋಟೀಸ್ ಜಾರಿ ಮಾಡಿ, ಅವರನ್ನು ಕರೆಸಿ ವಿಚಾರಣೆ ಮಾಡಿದ್ದಾರೆ. ಅವರ ಪ್ರಶ್ನೆಗಳಿಗೆ ಉತ್ತರ ನೀಡಿರುವುದಾಗಿ ಜಮೀರ್ ಅವರೇ ನನಗೆ ತಿಳಿಸಿದ್ದರು. ಈಗಿನ ಸಂದರ್ಭದಲ್ಲಿ ದಾಳಿ ಅಗತ್ಯ ಇರಲಿಲ್ಲ. ಯಾವ ರೀತಿ ಈ ಕಿರುಕುಳ ನೀಡಲಾಗುತ್ತದೆ ಎಂಬುದು ನನಗೂ ಗೊತ್ತಿದೆ ಎಂದ್ರು.

‘ಜಮೀರ್ ಹೇಳಿಕೆಗಳು ಮುಗಿದಿರುವಾಗ ಅವರ ನಿವಾಸ ಹಾಗೂ ಆಪ್ತರ ಮನೆಗಳ ಮೇಲೆ ದಾಳಿ ಮಾಡಿ, ಕಿರುಕುಳ ನೀಡುತ್ತಿರುವುದು ಖಂಡನೀಯ. ಆದಾಯ ತೆರಿಗೆ, ಜಾರಿ ನಿರ್ದೇಶನಾಲಯ, ಎಸಿಬಿ ನಿಜಕ್ಕೂ ಕಾರ್ಯಪ್ರವೃತ್ತವಾಗಿದ್ದರೆ, ಮಾಜಿ ಸಚಿವ ಶ್ರೀನಿವಾಸಗೌಡರು ವಿಧಾನಸಭೆಯಲ್ಲಿ ಆಪರೇಷನ್ ಕಮಲದ ವಿಚಾರವಾಗಿ ಸಿ.ಪಿ. ಯೋಗೇಶ್ವರ್ ಹಾಗೂ ಅಶ್ವಥ್ ನಾರಾಯಣ ಅವರು 30 ಕೋಟಿ ಹಣದ ಆಮಿಷ ನೀಡಿ, 5 ಕೋಟಿ ಹಣವನ್ನು ನನ್ನ ಮನೆಯಲ್ಲಿ ಇಟ್ಟು ಹೋಗಿದ್ದರು ಎಂದು ಆರೋಪ ಮಾಡಿದಾಗ ಈ ಇಲಾಖೆಗಳು ಎಲ್ಲಿ ಹೋಗಿದ್ದವು. ಸಿ.ಪಿ. ಯೋಗೇಶ್ವರ್ ಮನೆ ಮಾರಿ 9 ಕೋಟಿ ಹಣ ಖರ್ಚು ಮಾಡಿ ಸರ್ಕಾರ ರಚನೆ ಮಾಡಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಅವರು ಹೇಳಿದಾಗ ಈ ಇಲಾಖೆಗಳು ಏನಾಗಿದ್ದವು ಎಂದು ಪ್ರಶ್ನಿಸಿದ್ರು‌

‘ಅವರ ಮೇನೆ ಮೇಲೆ ದಾಳಿ ಆದವಾ? ಅವರಿಗೆ ಈ ತನಿಖಾ ಸಂಸ್ಥೆಗಳಿಂದ ನೋಟೀಸ್ ಜಾರಿಯಾಯ್ತಾ? ವಿಧಾನಸಭೆಯಲ್ಲೇ ನೀಡಿದ ಹೇಳಿಕೆಗಿಂತ ಬೇರೆ ಸಾಕ್ಷಿ ಏನು ಬೇಕಿತ್ತು..? ಇವುಗಳು ಭ್ರಷ್ಟಾಚಾರ, ಹಣ ಅವ್ಯವಹಾರದ ಪ್ರಕರಣಗಳಲ್ಲವೇ? ಯಾಕೆ ಈ ಬಗ್ಗೆ ಪ್ರಕರಣಗಳು ದಾಖಲಾಗಲಿಲ್ಲ. ನಾನು ಅವರ ವೈಯಕ್ತಿಕ ವ್ಯವಹಾರಗಳ ಬಗ್ಗೆ ಮಾತನಾಡುತ್ತಿಲ್ಲ. ಅವರ ಬಾಯಿಂದ ಬಂದ ನುಡಿಮುತ್ತುಗಳನ್ನೇ ಆಧರಿಸಿ ಪ್ರಶ್ನೆ ಮಾಡುತ್ತಿದ್ದೇನೆ.’
‘ಯಾರ್ಯಾರ ಅನುಕೂಲಕ್ಕೆ ಹೇಗೆ ಬೇಕೋ, ಹಾಗೆ ಈ ಸಂಸ್ಥೆಗಳು ನಡೆದುಕೊಳ್ಳುತ್ತಿವೆ. ಅಧಿಕಾರ ಇದೆ ಎಂದು ಈ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಈ ವಿಚಾರವಾಗಿ ಕಾನೂನು ರೀತಿಯಲ್ಲಿ ಜಮೀರ್ ಅವರು ಉತ್ತರ ನೀಡಲಿದ್ದಾರೆ. ಅವರಿಗೆ ಆ ಶಕ್ತಿ ಇದೆ. ಆದರೆ ಕಾಂಗ್ರೆಸ್ ನಾಯಕರಿಗೆ ಒಂದು ಕಾನೂನು, ಬಿಜೆಪಿಯವರಿಗೆ ಇನ್ನೊಂದು ಕಾನೂನು ಎಷ್ಟು ಸರಿ? ಬಿಜೆಪಿಯವರೆಲ್ಲಾ ಬಹಳ ಸಾಚಾತನದಲ್ಲಿ ವ್ಯವಹಾರ ಮಾಡುತ್ತಿದ್ದಾರಾ..? ಏಕೆ ಈ ತಾರತಮ್ಯ ಆಗುತ್ತಿದೆ ಎಂದು ಕಿಡಿಕಾರಿದ್ರು.

‘ಕಾನೂನು ಪ್ರಕಾರ ವಿಚಾರಣೆ ನಡೆಯಲಿ, ಅದನ್ನು ಪ್ರಶ್ನಿಸುವುದಿಲ್ಲ. ಈ ಹಿಂದೆ ಐಎಂಎ ವಿಚಾರವಾಗಿಯೇ ಇಡಿ ಅವರು ಕೊಟ್ಟ ನೋಟೀಸ್ ಗೆ ಜಮೀರ್ ಖಾನ್ ಅವರು ವಿಚಾರಣೆಗೆ ಹಾಜರಾಗಿ ಉತ್ತರ ನೀಡಿದ್ದಾರೆ. ಇದು ಮುಗಿದು ಎಷ್ಟೋ ದಿನ ಆಗಿದೆ. ಎಲ್ಲ ಮುಗಿದ ಮೇಲೆ ಈಗ ಐಎಂಎ ಪ್ರಕರಣದ ಹೆಸರಲ್ಲಿ ದಾಳಿ ಮಾಡುವ ಅಗತ್ಯ ಏನಿತ್ತು? ಇಷ್ಟು ದಿನ ಯಾಕೆ ಸುಮ್ಮನಿದ್ದರು?’
‘ಏಳು ಬಾರಿ ಶಾಸಕರಾಗಿದ್ದ ರೋಶನ್ ಬೇಗ್ ಅವರು ಏನಾಗಿದ್ದಾರೆ ಎಂಬ ವಿಚಾರವಾಗಿ ನಾನು ಈಗ ಮಾತನಾಡುವುದಿಲ್ಲ. ನಿರ್ದಿಷ್ಟ ವರ್ಗಕ್ಕೆ ತೊಂದರೆ ನೀಡಲು ಈ ರೀತಿ ದಾಳಿಗಳು ನಡೆಯುತ್ತಿವೆ ಎಂಬುದು ಸ್ಪಷ್ಟವಾಗುತ್ತಿದೆ ಎಂದ್ರು.

ಕೋವಿಡ್ ದುಸ್ಥಿತಿ ಬಗ್ಗೆ ಕಮಲ್ ನಾಥ್ ಜತೆ ಚರ್ಚೆ:

‘ಕಮಲ್ ನಾಥ್ ಅವರು ಮಧ್ಯ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿದ್ದು, ಕೋವಿಡ್ ಸಾವು-ನೋವುಗಳ ಬಗ್ಗೆ ಡೆತ್ ಆಡಿಟ್ ವಿಚಾರವಾಗಿ ಚರ್ಚೆ ಮಾಡಿದೆವು. ಮಧ್ಯಪ್ರದೇಶದಲ್ಲಿಯೂ ಸಾವಿನ ವಿಚಾರದಲ್ಲಿ ಸರ್ಕಾರ ಸುಳ್ಳು ಲೆಕ್ಕ ನೀಡುತ್ತಿದ್ದು, ನಾವು ರಾಜ್ಯದಲ್ಲಿ ಡೆತ್ ಆಡಿಟ್ ಮಾಡುವ ರೀತಿಯಲ್ಲಿ ಅವರು ಚಿತಾಗಾರದಲ್ಲಿ ಅಂತ್ಯಸಂಸ್ಕಾರಗೊಂಡ ಶವಗಳ ಲೆಕ್ಕ ಹಾಕುತ್ತಿದ್ದಾರೆ. ಇತರ ವಿಚಾರಗಳ ಬಗ್ಗೆಯೂ ನಾವು ಚರ್ಚೆ ಮಾಡಿದೆವು ಎಂದು ಮಾಹಿತಿ ನೀಡಿದ್ರು.

ಇನ್ನು ನೂರು ವರ್ಷವಾದ್ರೂ ತಮಿಳುನಾಡು ಅನುಮತಿ ನೀಡಲ್ಲ:

‘ಮೇಕೆದಾಟು ಯೋಜನೆ ರಾಜಕೀಯ ಇಚ್ಛಾಶಕ್ತಿ ವಿಚಾರ. ನಮ್ಮ ರಾಜ್ಯದಲ್ಲಿ ನಮ್ಮ ಹಣದಲ್ಲಿ ನಮ್ಮ ನೀರನ್ನು ಬಳಸಿಕೊಳ್ಳಲು ಈ ಯೋಜನೆ ರೂಪಿಸುತ್ತಿದ್ದೇವೆ. ನಾವು ಯಾರ ಪಾಲಿನ ನೀರನ್ನೂ ತಡೆಯುತ್ತಿಲ್ಲ. ನೀರು ಬಿಡುಗಡೆ ವಿಚಾರದಲ್ಲಿ ಕೇಂದ್ರದ ಸಮಿತಿಯದ್ದೇ ಪರಮಾಧಿಕಾರ. ಈ ಯೋಜನೆಗೆ ಕೆಲವು ಇಲಾಖೆಗಳ ಅನುಮತಿ ಬೇಕಿದೆ ಅಷ್ಟೇ. ಅದನ್ನು ಕೊಡಬೇಕಾದ್ದು ಕೇಂದ್ರ ಸರ್ಕಾರದ ಕರ್ತವ್ಯ. ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಡಬಲ್ ಇಂಜಿನ್ ಸರ್ಕಾರ ಇದೆ. ರಾಜ್ಯ ಸರ್ಕಾರ ಯಾವುದೇ ರೀತಿಯ ಒತ್ತಡ ಬೇಕಾದರೂ ಹಾಕಲಿ. ನಾವು ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಎಲ್ಲ ರೀತಿಯ ಸಹಕಾರ ನೀಡುತ್ತೇವೆ. ಅವರು ಕೂಡ ನೀರಾವರಿ ಸಚಿವರಾಗಿದ್ದವರು. ಅವರು ಕೂಡಲೇ ಗುದ್ದಲಿ ಪೂಜೆ ಮಾಡಿ ಕೆಲಸ ಆರಂಭಿಸಲಿ. ಅವರಿಗೆ ನಾವು ಬೆಂಬಲ ನೀಡುತ್ತೇವೆ. ಇದು ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ಯೋಜನೆಯೇ ಹೊರತು ನೀರಾವರಿ ಯೋಜನೆ ಅಲ್ಲ. ಈ ವಿಚಾರದಲ್ಲಿ ತಮಿಳುನಾಡು ಇವತ್ತಲ್ಲ ಇನ್ನೂ ನೂರು ವರ್ಷವಾದರೂ ಅನುಮತಿ ನೀಡುವುದಿಲ್ಲ. ಈ ಯೋಜನೆಯಿಂದ ಹೆಚ್ಚುವರಿ ನೀರು ಅಗತ್ಯದ ಸಮಯದಲ್ಲಿ ಅವರಿಗೇ ದೊರೆಯುತ್ತದೆ. ತಮಿಳುನಾಡಿನವರು ಏನಾದರೂ ಮಾಡಿಕೊಳ್ಳಲಿ. ಆದರೆ ಇಲ್ಲಿ ಆಡಳಿತ ಮಾಡುತ್ತಿರುವವರು ಏನು ಮಾಡುತ್ತಿದ್ದಾರೆ ಎಂಬುದು ಮುಖ್ಯವಾಗುತ್ತದೆ ಎಂದ್ರು.

ಅನ್ಯಾಯಕ್ಕೊಳಗಾದವರಿಗೆ ಸರ್ಕಾರ ನ್ಯಾಯ ಒದಗಿಸಲಿ:

‘ಐಎಂಎ ವಿಚಾರದಲ್ಲಿ ಯಾರು ಹಣ ಕಳೆದುಕೊಂಡಿದ್ದಾರೆ, ಯಾರಿಗೆ ಅನ್ಯಾಯ ಆಗಿದೆ ಅವರೆಲ್ಲರಿಗೂ ನ್ಯಾಯ ಒದಗಿಸಬೇಕು ಎಂದು ಕಾಂಗ್ರೆಸ್ ಪಕ್ಷ ಒತ್ತಾಯ ಮಾಡುತ್ತಿದೆ. ಈಗಾಗಲೇ ನಮ್ಮ ಸಮ್ಮಿಶ್ರ ಸರ್ಕಾರ ಇದ್ದ ಸಮಯದಲ್ಲಿ ತನಿಖೆಗೆ ಆದೇಶ ಮಾಡಿದ್ದೆವು. ಇದರಲ್ಲಿ ಯಾರೇ ಆಗಲಿ ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ನೊಂದವರಿಗೆ ಮತ್ತೆ ಹಣ ಸಿಗುವಂತಾಗಬೇಕು ಎಂದು ಸರ್ಕಾರವನ್ನು ಒತ್ತಾಯ ಮಾಡುತ್ತೇನೆ.”ಸಂಪುಟ ವಿಸ್ತರಣೆ ವಿಚಾರದ ಬಗ್ಗೆ ಒಂದು ಮಾತಿನಲ್ಲಿ ಹೇಳುವುದಾದರೆ, ‘There is no Royalty on loyalty’ ಎಂಬಂತಾಗಿದೆ.”ಸರ್ಕಾರ ಹೇಳಿದ ಮೇಲೆ ನಾವು ಲಸಿಕೆ ಪಡೆದಿದ್ದೇವೆ. ಆದರೆ ಈಗ ನಮ್ಮ ಮಕ್ಕಳು ಹೊರ ದೇಶಗಳಿಗೆ ವಿದ್ಯಾಭ್ಯಾಸಕ್ಕೆ ಹೋಗುವಾಗ ತೊಂದರೆ ಆಗುತ್ತಿದೆ. ಕೇಂದ್ರ ಸರ್ಕಾರ ಈ ಬಗ್ಗೆ ಗಮನಹರಿಸಬೇಕು ಎಂದ್ರು.

ಕೊಳ್ಳೇಗಾಲದ ಶಾಸಕ ಎನ್. ಮಹೇಶ್ ಬಿಜೆಪಿ ಸೇರ್ಪಡೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ಸರಕಾರ ಬದ್ಧ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ತುಳಿತಕ್ಕೆ ಒಳಗಾದವರಿಗೆ ಸ್ವಾಭಿಮಾನದ ಬದುಕು ಸಿಗಲಿದೆ. ಯಡಿಯೂರಪ್ಪ ಅವರ ನೇತೃತ್ವದಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿ ಆಗಲಿದೆ ಎಂಬ ವಿಶ್ವಾಸದೊಂದಿಗೆ ಕೊಳ್ಳೇಗಾಲದ ಶಾಸಕ ಮಹೇಶ್ ಅವರು ಬಿಜೆಪಿ ಸೇರಿದ್ದಾರೆ. ರಾಜ್ಯದ ಸಮಗ್ರ ಅಭಿವೃದ್ಧಿಯ ಆಶಯವನ್ನು ರಾಜ್ಯ ಸರಕಾರ ಈಡೇರಿಸಲಿದೆ. ಆ ಭಾಗದಲ್ಲಿ ಸಾಮರಸ್ಯ, ಸಹೋದರತ್ವ ಭಾವನೆ ಇರುವ ಸಾಮಾಜಿಕ ನೆಲೆಗಟ್ಟು ಸ್ಥಾಪನೆ ಆಗಲಿದೆ ಎಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ನಡೆದ ಕೊಳ್ಳೇಗಾಲ ಶಾಸಕ ಶ್ರೀ ಎನ್.ಮಹೇಶ್ ಅವರ ಭಾರತೀಯ ಜನತಾ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಮಹೇಶ್ ಅವರು ಪಕ್ಷದ ಜೊತೆ ಮತ್ತು ಯಡಿಯೂರಪ್ಪ ಅವರ ಜೊತೆಗೆ ಹೊಂದಿರುವ ಸಂಬಂಧ ಮತ್ತು ಅನುಭವ ಇವತ್ತು ಅವರ ಈ ನಿರ್ಣಯಕ್ಕೆ ಪೂರಕವಾಗಿದೆ. ಅವರನ್ನು ಪಕ್ಷಕ್ಕೆ ಹೃದಯಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದೊಂದು ಉತ್ತಮ ಬೆಳವಣಿಗೆ ಎಂದು ಮುಖ್ಯಮಂತ್ರಿಯವರು ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾತನಾಡಿ, ಎನ್.ಮಹೇಶ್ ಅವರ ಸೇರ್ಪಡೆಯ ಶುಭ ಕ್ಷಣ ಈಗ ಬಂದಿದೆ. ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿಗೆ ಬರುವುದರ ಮುನ್ಸೂಚನೆ ಇದಾಗಿದೆ ಎಂದು ತಿಳಿಸಿದರು.ರಾಜ್ಯದಲ್ಲಿ ದಲಿತ ಸಮೂಹ ಬಿಜೆಪಿ ಪರವಾಗಿದೆ ಎಂಬ ಸಂದೇಶ ಪ್ರಧಾನಿಯವರಾದ ನರೇಂದ್ರ ಮೋದಿ ಅವರನ್ನು ತಲುಪಲು ನಮ್ಮ ಎಲ್ಲಾ ಕಾರ್ಯಕರ್ತರು ಶ್ರಮಿಸಬೇಕಿದೆ ಎಂದು ಅವರು ತಿಳಿಸಿದರು. ಮಹೇಶ್ ಅವರ ಸೇರ್ಪಡೆಯಿಂದ ಪಕ್ಷಕ್ಕೆ ಹೆಚ್ಚಿನ ಬಲ ಬಂದಂತಾಗಿದೆ ಎಂದರು.

ಮುಂದಿನ ದಿನಗಳಲ್ಲಿ ಪಕ್ಷದ ಬಲವರ್ಧನೆಗೆ ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದೇನೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಕನಿಷ್ಠ 135 ಸ್ಥಾನ ಗೆದ್ದು ಸ್ವಂತ ಬಲದಿಂದ ಅಧಿಕಾರಕ್ಕೆ ಬರಬೇಕೆಂಬ ಸಂಕಲ್ಪ ನಮ್ಮದಾಗಿದೆ. ಅದಕ್ಕಾಗಿ ಎಲ್ಲರೂ ಶ್ರಮಿಸಬೇಕು. ನಳಿನ್‍ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಪಕ್ಷ ಬಲಪಡಿಸುವ ಕೆಲಸ ಮಾಡೋಣ ಎಂದು ತಿಳಿಸಿದರು.

ಪಕ್ಷದ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಮಾತನಾಡಿ, ಬಿಎಸ್‍ಪಿಯನ್ನು ರಾಜ್ಯದಲ್ಲಿ ಕಟ್ಟಿ ಬೆಳೆಸಿದ ಶಾಸಕ ಎನ್. ಮಹೇಶ್ ಅವರು ಈಗ ಬಿಜೆಪಿ ಸೇರಿದ್ದಾರೆ. ನರೇಂದ್ರ ಮೋದಿಯವರ ಆಡಳಿತ, ರಾಜ್ಯದಲ್ಲಿ ಯಡಿಯೂರಪ್ಪ ಅವರ ಆಡಳಿತ, ಬಿಜೆಪಿ ಚಿಂತನೆ, ವಿಚಾರಧಾರೆಗಳನ್ನು ಮೆಚ್ಚಿ ಬಿಜೆಪಿಗೆ ಸೇರಿದ್ದು ಅವರಿಗೆ ಸ್ವಾಗತ ಎಂದರು.
ಅವರ ಮೂಲಕ ಬಿಜೆಪಿಗೆ ಇನ್ನಷ್ಟು ಶಕ್ತಿ ತುಂಬುವ ಕೆಲಸ ಆಗಬೇಕು. ರಾಜ್ಯದಲ್ಲಿ ಪರಿವರ್ತನೆಯ ಗಾಳಿ ಬೀಸುತ್ತಿದೆ. ಬೇರೆ ಬೇರೆ ಪಕ್ಷಗಳ ಹತ್ತಾರು ಜನರು ಬಿಜೆಪಿ ಸೇರಲು ಸಿದ್ಧರಾಗಿದ್ದಾರೆ. ಕೇಂದ್ರದಲ್ಲಿ ನರೇಂದ್ರ ಮೋದಿಯವರ ಏಳು ವರ್ಷಗಳ ಅಭಿವೃದ್ಧಿ ಕಾರ್ಯ, ಯಡಿಯೂರಪ್ಪ ಮತ್ತು ಶ್ರೀ ಬಸವರಾಜ ಬೊಮ್ಮಾಯಿ ಅವರ ಜನಪರ ಆಡಳಿತವನ್ನು ಮೆಚ್ಚಿಕೊಂಡು ಅನೇಕರು ಬಿಜೆಪಿ ಸೇರಲು ಉತ್ಸುಕತೆ ತೋರಿದ್ದಾರೆ ಎಂದು ತಿಳಿಸಿದರು.

ಡಾ. ಬಾಬಾಸಾಹೇಬ್ ಅಂಬೇಡ್ಕರರಿಗೆ ನ್ಯಾಯ ನೀಡುವ ಕಾರ್ಯವನ್ನು ಬಿಜೆಪಿಯ ಕೇಂದ್ರ ಸರಕಾರ ಮಾಡಿದೆ. ಇದನ್ನು ಗಮನಿಸಿ ದಲಿತ ಸಮುದಾಯವು ಈಗ ಬಿಜೆಪಿಯತ್ತ ಸಹಜವಾಗಿಯೇ ಆಕರ್ಷಿತವಾಗುತ್ತಿದೆ ಎಂದು ಅವರು ವಿವರಿಸಿದರು.

ಶಾಸಕ ಎನ್.ಮಹೇಶ್ ಮಾತನಾಡಿ, ರಾಷ್ಟ್ರದ 130 ಕೋಟಿ ಜನರ ಅಭಿವೃದ್ಧಿಗಾಗಿ ಬಿಜೆಪಿ ಪ್ರಯತ್ನಿಸುತ್ತಿದೆ. ಆ ವಿಚಾರವನ್ನು ಗಮನಿಸಿ ನಾನು ಬಿಜೆಪಿ ಸೇರುತ್ತಿದ್ದೇನೆ. ಇದಕ್ಕೆ ಮತ್ತೊಂದು ಪ್ರೇರಕ ಶಕ್ತಿ ಡಾ. ಬಿ.ಆರ್.ಅಂಬೇಡ್ಕರ್ ಅವರು. ಬಿಜೆಪಿ ಈಗ ಪ್ರಬುದ್ಧ ಮನಸ್ಥಿತಿಯೊಂದಿಗೆ ರಾಷ್ಟ್ರವನ್ನು ಸಮಗ್ರ ಅಭಿವೃದ್ಧಿ ಕಡೆ ಒಯ್ಯುತ್ತಿದೆ. ಅದೂ ನನ್ನ ಬಿಜೆಪಿ ಸೇರ್ಪಡೆಗೆ ಕಾರಣ ಎಂದರು.

ಮಾಜಿ ಸಿಎಂ ಯಡಿಯೂರಪ್ಪ ಅವರ ನನಗೆ ನೈತಿಕ ಸ್ಥೈರ್ಯ ತುಂಬಿದ್ದಾರೆ. ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರು ನನಗೆ ಹಲವಾರು ವರ್ಷಗಳಿಂದ ಪರಿಚಿತರು. ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಮತ್ತು ಪಕ್ಷದ ಎಲ್ಲಾ ಮುಖಂಡರ ಜೊತೆ ಸೇರಿ ಪಕ್ಷದ ಸಂಘಟನೆಗೆ ಶ್ರಮಿಸಲಿದ್ದೇನೆ ಎಂದು ಅವರು ತಿಳಿಸಿದರು.

ಇಪ್ಪತ್ತೊಂಬತ್ತು ಶಾಸಕರ ಸೇರ್ಪಡೆಯೊಂದಿಗೆ ಮೂವತ್ತಕ್ಕೆ ಏರಿದ ಬಸವರಾಜ ಬೊಮ್ಮಾಯಿ ಸಂಪುಟ ಬಲ

ಬೆಂಗಳೂರು, ಆಗಸ್ಟ್ 4  :ಇಪ್ಪತ್ತೊಂಬತ್ತು ಶಾಸಕರ ಸೇರ್ಪಡೆಯೊಂದಿಗೆ ಬಸವರಾಜ ಬೊಮ್ಮಾಯಿ ನೇತೃತ್ವದ ಕರ್ನಾಟಕ ಸರ್ಕಾರದ ಸಂಪುಟ ಬಲ ಇಂದು ಮೂವತ್ತಕ್ಕೆ ಏರಿದೆ.

ರಾಜಭವನದ ಗಾಜಿನ ಮನೆಯಲ್ಲಿ ಇಂದು ಮಧ್ಯಾಹ್ನ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಗೋವಿಂದ ಮುಕ್ತಪ್ಪ ಕಾರಜೋಳ, ಕೆ.ಎಸ್. ಈಶ್ವರಪ್ಪ, ಆರ್. ಅಶೋಕ್, ಬಿ. ಶ್ರೀರಾಮುಲು, ವಿ. ಸೋಮಣ್ಣ, ಉಮೇಶ್ ವಿಶ್ವನಾಥ ಕತ್ತಿ. ಎಸ್. ಅಂಗಾರ, ಜೆ. ಸಿ. ಮಾಧುಸ್ವಾಮಿ, ಅರಗ ಜ್ಞಾನೇಂದ್ರ, ಡಾ. ಸಿ.ಎನ್. ಅಶ್ವತ್ಥನಾರಾಯಣ, ಸಿ.ಸಿ. ಪಾಟೀಲ್, ಆನಂದ್ ಸಿಂಗ್, ಕೋಟಾ ಶ್ರೀನಿವಾಸ ಪೂಜಾರಿ, ಪ್ರಭು ಚವ್ಹಾಣ್, ಮುರುಗೇಶ್ ರುದ್ರಪ್ಪ ನಿರಾಣಿ, ಅರೆಬೈಲ್ ಶಿವರಾಂ ಹೆಬ್ಬಾರ್, ಎಸ್.ಟಿ. ಸೋಮಶೇಖರ್, ಬಿ.ಸಿ. ಪಾಟೀಲ್, ಬಿ. ಎ. ಬಸವರಾಜ ( ಬೈರತಿ ಬಸವರಾಜ್ ), ಡಾ. ಕೆ. ಸುಧಾಕರ್, ಕೆ. ಗೋಪಾಲಯ್ಯ, ಶಶಿಕಲಾ ಜೊಲ್ಲೆ, ಎನ್. ನಾಗರಾಜ್ ( ಎಂ.ಟಿ.ಬಿ. ನಾಗರಾಜ್ ) ಕೆ.ಸಿ. ನಾರಾಯu ಗೌಡ, ಬಿ.ಸಿ. ನಾಗೇಶ್, ವಿ. ಸುನೀಲ್ ಕುಮಾರ್, ಹಾಲಪ್ಪ ಆಚಾರ್, ಶಂಕರ್ ಪಾಟೀಲ್ ಮುನೇನಕೊಪ್ಪ ಹಾಗೂ ಮುನಿರತ್ನ ಅವರು ಅಧಿಕಾರ ಪದ ಮತ್ತು ಗೋಪ್ಯತಾ ಪ್ರಮಾಣ ವಚನವನ್ನು ಸ್ವೀಕರಿಸುವುದರೊಂದಿಗೆ ಜುಲೈ 28 ರಂದು ಅಸ್ತಿತ್ವಕ್ಕೆ ಬಂದ ಬಸವರಾಜ ಬೊಮ್ಮಾಯಿ ಅವರ ಏಕ-ಸದಸ್ಯ ಸಚಿವ ಸಂಪುಟ ಪೂರ್ಣ ಪ್ರಮಾಣದ ರೂಪ ಪಡೆಯಿತು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ಸದಸ್ಯರಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಸುಮಾರು 75 ನಿಮಿಷಗಳ ಕಾಲ ನಡೆದ ಈ ಪ್ರಮಾಣ ವಚನ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಭಾರತೀಯ ಜನತಾ ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್, ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಂಸದ ಡಾ ಉಮೇಶ್ ಜಾಧವ್ ಒಳಗೊಂಡಂತೆ ಗಣ್ಯಾತಿ ಗಣ್ಯರು ಈ ಸಮಾರಂಭದಲ್ಲಿ ಹಾಜರಿದ್ದು, ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದರು.

ಗಮನಾರ್ಹ ಅಂಶಗಳು !

ಪ್ರಮಾಣ ವಚನ ಸ್ವೀಕರಿಸಲು ಆಗಮಿಸಿದ ಬಹುತೇಕ ಶಾಸಕರು ತಮ್ಮ ಕೊರಳಿಗೆ ಕೇಸರಿ ಅಂಗ ವಸ್ತ್ರವನ್ನು ತೊಟ್ಟಿದ್ದರು.

ಬಂಜಾರ ಸಮುದಾಯದ ಆಕರ್ಷಕ ಉಡುಗೆ ತೊಟ್ಟ ಪ್ರಭು ಚವ್ಹಾಣ್ ಅವರು ತಮ್ಮ ಉಡುಗೆ-ತೊಡುಗೆಯಿಂದ ಎಲ್ಲರ ಗಮನ ಸೆಳೆದರು.

ಶಶಿಕಲಾ ಅಣ್ಣಾ ಸಾಹೇಬ ಜೊಲ್ಲೆ ಅವರು ಏಕೈಕ ಮಹಿಳಾ ಸದಸ್ಯೆಯಾಗಿ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದರು.

ಎಲ್ಲಾ ಸಚಿವರೂ ಕನ್ನಡ ಭಾಷೆಯಲ್ಲಿಯೇ ಹಾಗೂ ದೇವರ ಹೆಸರಿನಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದ್ದು ಒಂದು ವಿಶೇಷವಾದರೆ ಮುರುಗೇಶ್ ನಿರಾಣಿ ಹಾಗೂ ಶಂಕರ್ ಪಾಟೀಲ್ ಮುನೇನ ಕೊಪ್ಪ ಅವರು ದೇವರ ಜೊತೆಗೆ ರೈತರ ಹೆಸರು ಸೇರಿಸಿ ಪ್ರಮಾಣ ವಚನ ಸ್ವೀಕರಿಸಿದರು.

ಅರೆಬೈಲ್ ಶಿವರಾಂ ಹೆಬ್ಬಾರ್ ಹಾಗೂ ಶಶಿಕಲಾ ಜೊಲ್ಲೆ ಅವರು ದೇವರ ಜೊತೆಗೆ ಕ್ಷೇತ್ರದ ಜನರ ಹೆಸರಲ್ಲೂ ಪ್ರಮಾಣ ಮಾಡಿದರು.

ಆನಂದ್ ಸಿಂಗ್ ಅವರು ವಿಜಯನಗರದ ಪಂಪ ವಿರೂಪಾಕ್ಷ ಮತ್ತು ತಾಯಿ ಭುವನೇಶ್ವರಿ ಹೆಸರಿನಲ್ಲಿ ಹಾಗೂ ಬಿ ಸಿ. ಪಾಟೀಲ್ ಅವರು ಜಗಜ್ಯೋತಿ ಬಸವೇಶ್ವರ ಹಾಗೂ ರೈತರ ಹೆಸರಿನಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ಪ್ರಭು ಚೌವ್ಹಾಣ್ ಅವರು ಗೋಮಾತೆ ಹಾಗೂ ಸಂತ ಸೇವಾಲಾಲ್ ಅವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಪ್ರಮಾಣ ವಚನ ಸ್ವೀಕರಿಸಿದ ಎಲ್ಲಾ ಸಚಿವರಿಗೂ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿ ಹೂ-ಗುಚ್ಛ ನೀಡಿ ಖುದ್ದು ಅಭಿನಂದಿಸಿ ಶುಭ ಹಾರೈಸಿದರು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿ ಕುಮಾರ್ ಅವರು ಕಾರ್ಯಕ್ರಮವನ್ನು ನಿರೂಪಿಸಿ ನಿರ್ವಹಿಸಿದರು.

ಮಧ್ಯಾಹ್ನ 2.15 ಕ್ಕೆ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭದ ನೇರ ಪ್ರಸಾರ ವೀಕ್ಷಿಸಿ

ಮಧ್ಯಾಹ್ನ 2.15 ಕ್ಕೆ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭದ ನೇರ ಪ್ರಸಾರ ವೀಕ್ಷಿಸಿ..

 

ಸಿಎಂ ನೇರವಾಗಿ ಕರೆ ಮಾಡಿ ಪ್ರಮಾಣ ವಚನಕ್ಕೆ ಆಹ್ವಾನ ನೀಡಿರುವ ಶಾಸಕರ ಪಟ್ಟಿ

1.ಕೆ.ಎಸ್.ಈಶ್ವರಪ್ಪ -ಶಿವಮೊಗ್ಗ

2.ಆರ್.ಅಶೋಕ್- ಪದ್ಮನಾಭ ನಗರ

3.ಬಿ.ಸಿ. ಪಾಟೀಲ್ – ಹಿರೇಕೆರೂರು

4.ಡಾ.ಸಿ.ಎನ್.ಅಶ್ವತ್ಥ ನಾರಾಯಣ – ಮಲ್ಲೇಶ್ವರ

5.ಉಮೇಶ್ ಕತ್ತಿ- ಹುಕ್ಕೇರಿ

6.ಎಸ್.ಟಿ.ಸೋಮಶೇಖರ್- ಯಶವಂತಪುರ

7.ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ

8.ಬೈರತಿ‌ ಬಸವರಾಜ – ಕೆ ಆರ್ ಪುರಂ

9.ಮುರುಗೇಶ್ ನಿರಾಣಿ – ಬಿಳಿಗಿ

10.ಶಿವರಾಂ ಹೆಬ್ಬಾರ್- ಯಲ್ಲಾಪುರ

11.ಶಶಿಕಲಾ ಜೊಲ್ಲೆ- ನಿಪ್ಪಾಣಿ

12.ಕೆಸಿ ನಾರಾಯಣ್ ಗೌಡ – ಕೆ‌ಆರ್ ಪೇಟೆ

13.ಸುನೀಲ್ ಕುಮಾರ್ – ಕಾರ್ಕಳ

14.ಅರಗ ಜ್ಞಾನೇಂದ್ರ – ತೀರ್ಥ ಹಳ್ಳಿ

15.ಗೋವಿಂದ ಕಾರಜೋಳ-ಮುಧೋಳ

16.ಮುನಿರತ್ನ- ಆರ್ ಆರ್ ನಗರ

17.ಎಂ.ಟಿ.ಬಿ ನಾಗರಾಜ್ – ಎಂ ಎಲ್ ಸಿ

18.ಗೋಪಾಲಯ್ಯ- ಮಹಾಲಕ್ಷ್ಮಿ ಲೇಔಟ್

19.ಮಾಧುಸ್ವಾಮಿ- ಚಿಕ್ಕನಾಯಕನಹಳ್ಳಿ

20.ಹಾಲಪ್ಪ ಆಚಾರ್ – ಯಲ್ಬುರ್ಗ

21.ಶಂಕರ್ ಪಾಟೀಲ್ ಮುನೇನಕೊಪ್ಪ – ನವಲುಗುಂದ

22.ಕೋಟಾ ಶ್ರೀನಿವಾಸ ಪೂಜಾರಿ – ಎಂ ಎಲ್ ಸಿ

23.ಪ್ರಭು ಚೌವ್ಹಾಣ್ – ಔರಾದ್

24.ವಿ ಸೋಮಣ್ಣ – ಗೋವಿಂದ್ ರಾಜನಗರ

25.ಎಸ್ ಅಂಗಾರ-ಸುಳ್ಯ

26.ಆನಂದ್ ಸಿಂಗ್ – ಹೊಸಪೇಟೆ

27.ಸಿ ಸಿ‌ ಪಾಟೀಲ್ – ನರಗುಂದ

28.ಬಿಸಿ ನಾಗೇಶ್ – ತಿಪಟೂರು

29.ಬಿ.ಶ್ರೀ ರಾಮುಲು- ಮೊಳಕಾಲುಮ್ಮೂರು

ಸ್ವಯಂ ಘೋಷಿತ ಆಸ್ತಿ ತೆರಿಗೆ: ತಪ್ಪು ಘೋಷಣೆ ದಂಡ-ಬಡ್ಡಿಗೆ ವಿನಾಯಿತಿ ನೀಡಲು ಬಿಬಿಎಂಪಿಗೆ ಸಲಹೆ

ಬೆಂಗಳೂರು: ನಗರದಲ್ಲಿ ಸ್ವಯಂ ಘೋಷಿತ ಆಸ್ತಿ ತೆರಿಗೆ ಪದ್ಧತಿಯಡಿ ವಲಯ ವರ್ಗೀಕರಣವನ್ನು ತಪ್ಪಾಗಿ ಘೋಷಿಸಿಕೊಂಡು ದಂಡ ಮತ್ತು ಬಡ್ಡಿ ಸುಳಿಗೆ ಸಿಲುಕಿರುವ ಆಸ್ತಿ ಮಾಲೀಕರಿಗೆ ವಿನಾಯಿತಿ ನೀಡುವಂತೆ ಮಲ್ಲೇಶ್ವರದ ಶಾಸಕರೂ ಆದ ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಬಿಬಿಎಂಪಿಗೆ ಸಲಹೆ ನೀಡಿದರು.

ಈ ವಿಷಯಕ್ಕೆ ಸಂಬಂಧಿಸಿ ಮಂಗಳವಾರ ಬಿಬಿಎಂಪಿ ಅಧಿಕಾರಿಗಳ ಜತೆ ಚರ್ಚೆ ನಡೆಸಿದ ಅವರು, ಕೋವಿಡ್‌ ಮತ್ತು ಲಾಕ್‌ಡೌನ್‌ ಕಾರಣದಿಂದ ಆಸ್ತಿ ಮಾಲೀಕರು ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಹೀಗಾಗಿ ದಂಡ ಮತ್ತು ಬಡ್ಡಿಗೆ ಗುರಿಯಾದ ಆಸ್ತಿ ಮಾಲೀಕರಿಗೆ ವಿನಾಯಿತಿ ನೀಡಬೇಕು. ಈ ಬಗ್ಗೆ ಮರು ಪರಿಶೀಲನೆ ಮಾಡುವಂತೆ ಸೂಚಿಸಿದರು.

ನಗರದಲ್ಲಿ ಒಟ್ಟು 22 ಲಕ್ಷ ಆಸ್ತಿಗಳಿದ್ದು, 78,000 ಆಸ್ತಿಗಳ ಮಾಲೀಕರು 2016ರಲ್ಲಿ ವಲಯ ವರ್ಗೀಕರಣವನ್ನು ತಪ್ಪಾಗಿ ಘೋಷಿಸಿಕೊಂಡಿದ್ದಾರೆ. ಇದರಿಂದಾಗಿ ಬಿಬಿಎಂಪಿಗೆ ಸುಮಾರು 116 ಕೋಟಿ ರೂಪಾಯಿ ಆದಾಯ ಖೋತಾ ಆಗಿದೆ. ಈ ವಿಷಯವನ್ನು ಯೋಜನೆ ಜಾರಿ‌ ಮಾಡಿದಾಗಲೇ ಆಸ್ತಿ ಮಾಲೀಕರಿಗೆ ಮನವರಿಕೆ ಮಾಡಬೇಕಿತ್ತು. ಹಾಗೆ ಮಾಡದೇ 2016ರಿಂದ ಅನ್ವಯವಾಗುಂತೆ ಇದರ ಮೇಲೆ ಬಡ್ಡಿ (89 ಕೋಟಿ ರೂಪಾಯಿ) ಮತ್ತು ಮಾಡಿದ ತಪ್ಪಿಗೆ ದಂಡ (232 ಕೋಟಿ ರೂಪಾಯಿ) ವಿಧಿಸುವುದು ತಪ್ಪಾಗುತ್ತದೆ. ಇದರ ಬದಲು ಬಡ್ಡಿ ಮತ್ತು ದಂಡದ ಮೊತ್ತಕ್ಕೆ ವಿನಾಯಿತಿ ಕೊಟ್ಟು, ಆಸ್ತಿ ತೆರಿಗೆಯನ್ನು ಮಾತ್ರ ಕಟ್ಟಿಸಿಕೊಳ್ಳುವ ವ್ಯವಸ್ಥೆ ಆದರೆ ಸೂಕ್ತ ಎಂದು ಅವರು ಅಧಿಕಾರಿಗಳ ಗಮನಕ್ಕೆ ತಂದರು.

ಈ ಬಗ್ಗೆ ನಗರಾಭಿವೃದ್ಧಿ ಇಲಾಖೆ ಜತೆಗೂ ಚರ್ಚೆ ನಡೆಸುವಂತೆ ಅಶ್ವತ್ಥನಾರಾಯಣ ಅವರು ಸೂಚಿಸಿದರು.  .

ಸಾರ್ವಜನಿಕರು ಆಸ್ತಿ ತೆರಿಗೆ ಮೇಲೆ ವಿಧಿಸುತ್ತಿರುವ ದಂಡ- ಬಡ್ಡಿಯ ಬಗ್ಗೆ ದೂರು ಸಲ್ಲಿಸಿದ್ದಾರೆ. ತಮ್ಮ ಕಷ್ಟಗಳನ್ನು ಹೇಳಿಕೊಂಡಿದ್ದಾರೆ. ಕಳೆದ ಎರಡು ವರ್ಷಗಳಿಂದ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಇದು ಗಾಯದ ಮೇಲೆ ಬರೆ ಎಳೆದಂತೆ ಆಗಿದೆ. ಇಂಥ ಸಮಯದಲ್ಲಿ ದುಪ್ಪಟ್ಟು ದಂಡ, ಬಡ್ಡಿ ವಿಧಿಸಿದರೆ ಜನರಿಗೆ ಕಷ್ಟವಾಗುತ್ತದೆ ಎಂದು ಅವರು ಹೇಳಿದರು.

ಸಭೆಯಲ್ಲಿ ಬಿಬಿಎಂಪಿ ಪಶ್ಚಿಮ ವಲಯದ ವಿಶೇಷ ಆಯುಕ್ತ ಬಸವರಾಜ್‌ ಹಾಗೂ ಕಂದಾಯ ವಿಭಾಗದ ಜಂಟಿ ಆಯುಕ್ತ ವೆಂಕಟಾಚಲಪತಿ ಮುಂತಾದ ಅಧಿಕಾರಿಗಳು ಇದ್ದರು.

ಬಿಜೆಪಿ ಭ್ರಷ್ಟ ಪಕ್ಷ, ಈ ಪಕ್ಷದಿಂದ ಅಭಿವೃದ್ಧಿ ನಿರೀಕ್ಷೆ ಸಾಧ್ಯವಿಲ್ಲ; ಸಿದ್ದರಾಮಯ್ಯ

ಬೆಂಗಳೂರು: ಕಳೆದ ಬಾರಿ ಬೆಂಗಳೂರಿನ 28 ಕ್ಷೇತ್ರಗಳ ಪೈಕಿ ಹದಿನಾರು ಸ್ಥಾನ ಗೆದ್ದಿದ್ದೆವು, ಮುಂದಿನ ಬಾರಿ ಕನಿಷ್ಟ 25 ಕ್ಷೇತ್ರಗಳಲ್ಲಿ ಗೆಲ್ಲಬೇಕು. ಹಾಗಾಗಿ ಪದ್ಮನಾಭ ನಗರದಲ್ಲಿ ಜನ ಬದಲಾವಣೆ ಮಾಡಬೇಕು.ಬಿಜೆಪಿ ಭ್ರಷ್ಟ ಪಕ್ಷ, ಈ ಪಕ್ಷದಿಂದ ಅಭಿವೃದ್ಧಿ ನಿರೀಕ್ಷೆ ಸಾಧ್ಯವಿಲ್ಲ. ಹಾಗಾಗಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕರೆ ನೀಡಿದ್ರು.

ಪದ್ಮನಾಭ ನಗರದಲ್ಲಿ ಆಯೋಜಿಸಿದ್ದ ದಿನಸಿ ಕಿಟ್ ಗಳ ವಿತರಣಾ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮಾತನಾಡಿ, ಬೆಂಗಳೂರಿನ ಬಹುತೇಕ ಕೇಂದ್ರಗಳಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಬಡಜನರಿಗೆ ನೆರವಾಗುವ ಕೆಲಸವನ್ನು ಮಾಡಿದ್ದಾರೆ, ಅದರಂತೆ ಇಂದು ನಮ್ಮ ಪಕ್ಷದ ಹಿರಿಯ ಮುಖಂಡರಾದ ಹರಿಪ್ರಸಾದ್ ಅವರ ನೇತೃತ್ವದಲ್ಲಿ ಪದ್ಮನಾಭ ನಗರದ ಬಡಜನರಿಗೆ ಉಚಿತ ಆಹಾರದ ಕಿಟ್ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಹರಿಪ್ರಸಾದ್ ಅವರ ಜನಪರ ಕಾಳಜಿಗೆ ನನ್ನ ಧನ್ಯವಾದಗಳು ಎಂದ್ರು.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು, ಬಹುಕಾಲದಿಂದ ಬೆಂಗಳೂರಿನಲ್ಲಿ ರಾಜಕಾರಣ ಮಾಡಿದವರು ಹರಿಪ್ರಸಾದ್ ಅವರು. ಅವರಿಗೆ ನಗರದ ಒಂದೊಂದು ಇಂಚು ಸಹ ಗೊತ್ತಿದೆ, ಅಷ್ಟರ ಮಟ್ಟಿಗೆ ಅರಿತಿದ್ದಾರೆ. ಆಡಳಿತ ಪಕ್ಷದವರಿಗಿಂತ ಕಾಂಗ್ರೆಸ್ ಪಕ್ಷದ ನಾಯಕರು, ಕಾರ್ಯಕರ್ತರು ಕೊರೊನಾ ಕಾಲದಲ್ಲಿ ಬಡಜನರಿಗೆ ನೆರವಾಗಿದ್ದಾರೆ ಎಂಬುದು ಶ್ಲಾಘನೀಯ. ನಮ್ಮ ನಾಯಕಿಯಾದ ಶ್ರೀಮತಿ ಸೋನಿಯಾ ಗಾಂಧಿಯವರು ಕರ್ನಾಟಕ ಕಾಂಗ್ರೆಸ್ ಮುಖಂಡರೊಂದಿಗೆ ಸಭೆ ನಡೆಸಿ, ಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸುವಂತೆ ಮನವಿ ಮಾಡಿದ್ದರು. ಅಂದಿನಿಂದ ಇಡೀ ರಾಜ್ಯದ 224 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪಕ್ಷ ಜನರ ಕಷ್ಟಕ್ಕೆ ಸ್ಪಂದಿಸುತ್ತಾ ಬಂದಿದೆ ಎಂದ್ರು.

ಕೊರೊನಾ ಎರಡನೇ ಅಲೆಯಲ್ಲಿ ಸಾವಿರಾರು ಜನ ಸಾವಿಗೀಡಾದರು. ಇದಕ್ಕೆ ಯಾರು ಕಾರಣ? ಅಧಿಕಾರದಲ್ಲಿರುವ ಪಕ್ಷದ ನಾಯಕರ ಬೇಜಾವಾಬ್ದಾರಿ ಕಾರಣವಾಗುತ್ತದೆ. ಪದ್ಮನಾಭ ನಗರದಲ್ಲಿ ಕೊರೊನಾ ಸೋಂಕಿಗೆ ಯಾರಾದರೂ ಬಲಿಯಾಗಿದ್ದರೆ ಅದಕ್ಕೆ ಕ್ಷೇತ್ರದ ಶಾಸಕ ಆರ್. ಅಶೋಕ್ ಕಾರಣ. ಸರ್ಕಾರದ ಭಾಗವಾಗಿ ಸಚಿವರಾಗಿ ಅವರು ಕೆಲಸ ಮಾಡುತ್ತಿದ್ದರು. ಅನೇಕ ಬಾರಿ ಕ್ಷೇತ್ರದಿಂದ ಗೆದ್ದಿದ್ದಾರೆ, ಕೊರೊನಾ ಸೋಂಕಿತರಿಗೆ ಆಹಾರ, ಔಷಧಿ, ಆಸ್ಪತ್ರೆ ಒದಗಿಸಬೇಕಾಗಿದ್ದು ಅವರ ಕರ್ತವ್ಯವಲ್ಲವೆ?
ಇಲ್ಲಿ ಸಾರ್ವಜನಿಕ ಸ್ಥಳದಲ್ಲಿ ಸಭೆ ಮಾಡಲು ಅಶೋಕ್ ಅವರ ಅನುಮತಿ ಪಡೆಯಬೇಕು ಅಂತಾರೆ, ಇದೇನು ಅಶೋಕ್ ಅವರ ಸ್ವಂತ ಸ್ವತ್ತೇ? ಇಂತಹಾ ಅಸಂಬದ್ಧ ವಿಷಯಗಳಿಗೆ ಪೊಲೀಸ್ ಇಲಾಖೆ ಸೊಪ್ಪು ಹಾಕಬಾರದು, ಇನ್ನು ಒಂದೂವರೆ ವರ್ಷ ಕಳೆದರೆ ನಾವೇ ಅಧಿಕಾರಕ್ಕೆ ಬರುತ್ತೇವೆ. ಆಗ ಇದಕ್ಕೆಲ್ಲ ಉತ್ತರ ಕೊಡಬೇಕಾಗುತ್ತದೆ ಎಂದ್ರು.

ಬಡಜನರ ತೆರಿಗೆ ಹಣದಲ್ಲಿ ಬಡವರಿಗೆ ಉಚಿತ ಅಕ್ಕಿ ಕೊಡಲು ಸರ್ಕಾರಕ್ಕೇನು ಸಮಸ್ಯೆ? ಬಡವರ ಹಣ ಯಾರಪ್ಪನ ಮನೆಯ ಸ್ವತ್ತಲ್ಲ, ಆ ಹಣವನ್ನು ಬಡವರಿಗಾಗಿಯೇ ಖರ್ಚು ಮಾಡುವುದರಲ್ಲಿ ಏನು ತಪ್ಪಿದೆ? ನಮ್ಮ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಏಳು ಕೆ.ಜಿ ಅಕ್ಕಿ ಕೊಡುತ್ತಿದ್ದೆವು, ಈ ಬಿಜೆಪಿ ಸರ್ಕಾರ ಅದಕ್ಕೆ ಕತ್ತರಿ ಹಾಕಿದೆ. ಇವರಿಗೆ ಬಡವರ ಅನ್ನ ಕಸಿಯುವ ಬುದ್ದಿ ಏಕೆ ಬಂದಿದೆ? ‌ಕೇಂದ್ರದಲ್ಲಿ ನರೇಂದ್ರ ಮೋದಿ, ರಾಜ್ಯದಲ್ಲಿ ಯಡಿಯೂರಪ್ಪ ಸರ್ಕಾರ ಬಂದರೆ ಸ್ವರ್ಗ ಸೃಷ್ಟಿಯಾಗುತ್ತೆ ಎಂದಿದ್ದರು. ಯಡಿಯೂರಪ್ಪ ಅವರ ಭ್ರಷ್ಟಾಚಾರ ಜಾಸ್ತಿಯಾದ ಕಾರಣ ಅಧಿಕಾರದಿಂದ ಕಿತ್ತು ಹಾಕಿದ್ದಾರೆ ಇದು ಸತ್ಯಸಂಗತಿ. ಆರ್.ಟಿ.ಜಿ.ಎಸ್ ಮೂಲಕ ಲಂಚ ಪಡೆದ ಭ್ರಷ್ಟ ರಾಜಕಾರಣಿ ಯಾರಾದ್ರೂ ಇದ್ದರೆ ಅದು ಯಡಿಯೂರಪ್ಪ ಮಾತ್ರ. ಈ ವಿಚಾರವನ್ನು ಹೇಳಲು ನಮ್ಮ ಕಾರ್ಯಕರ್ತರು ಹೆದರಬಾರದು ಎಂದ್ರು.

ಕರ್ನಾಟಕದಲ್ಲಿ ಕೇವಲ 36,000 ಜನ ಕೊರೊನಾದಿಂದ ಸಾವಿಗೀಡಾಗಿದ್ದಾರೆ ಎಂದು ಸರ್ಕಾರ ಸುಳ್ಳು ಹೇಳುತ್ತಿದೆ, ವಾಸ್ತವದಲ್ಲಿ ಸುಮಾರು 4 ಲಕ್ಷ ಮಂದಿ ಸತ್ತಿದ್ದಾರೆ. ಇಡೀ ದೇಶದಲ್ಲಿ ಕನಿಷ್ಠ 50 ಲಕ್ಷ ಮಂದಿ ಸತ್ತಿದ್ದಾರೆ. ನರೇಂದ್ರ ಮೋದಿಯವರು ಕೊರೊನಾ ರೋಗಕ್ಕೆ ತ್ವರಿತವಾಗಿ ಲಸಿಕೆ ನೀಡುವ ಬದಲು ಜನರಿಗೆ ಚಪ್ಪಾಳೆ ತಟ್ಟಲು, ಜಾಗಟೆ ಬಾರಿಸಲು ಹೇಳಿದರು. ವಿಜ್ಞಾನದ ಯುಗದಲ್ಲಿ ಇಂಥಾ ಮೌಢ್ಯ ಬಿತ್ತುವುದು ಎಷ್ಟು ಸರಿ? ಯುವಕರಿಗೆ ಉದ್ಯೋಗ ಇಲ್ಲ, ಬಡತನ ಪ್ರಮಾಣ ಮಿತಿಮೀರಿದೆ, ಹಸಿವಿನಿಂದ ಸತ್ತವರ ಬಗ್ಗೆ, ದೇಶದ ಡಿ.ಜಿ.ಪಿ ಬಗ್ಗೆ ನರೇಂದ್ರ ಮೋದಿಯವರು ಮಾತನಾಡಲ್ಲ, ಅದನ್ನು ಬಿಟ್ಟು ಪಾಕಿಸ್ತಾನ, ರಾಮಮಂದಿರ ಮುಂತಾದ ಭಾವನಾತ್ಮಕ ವಿಚಾರಗಳ ಬಗ್ಗೆಯಷ್ಟೇ ಜನರ ಗಮನ ಸೆಳೆಯುತ್ತಾರೆ. ವಾರ್ಷಿಕ ಎರಡು ಕೋಟಿ ಉದ್ಯೋಗ ಸೃಷ್ಟಿಯ ಭರವಸೆ ನೀಡಿ, ಏಳು ವರ್ಷದಲ್ಲಿ ಹನ್ನೆರಡು ಕೋಟಿ ಉದ್ಯೋಗ ನಷ್ಟವಾಗಿದೆ. ಮೋದಿ ಮೋದಿ ಎಂದು ಕುಣಿಯುತ್ತಿದ್ದವರಿಗೆ ಮೋದಿಯವರು ಮೂರು ನಾಮ ಹಾಕಿದ್ದಾರೆ ಎಂದ್ರು.

ಯಡಿಯೂರಪ್ಪ ಅವರಿಗೆ ಮುಂಬಾಗಿಲ ಮೂಲಕ ರಾಜಕಾರಣ ಮಾಡಿಯೇ ಗೊತ್ತಿಲ್ಲ. ಆಪರೇಷನ್ ಕಮಲ, ಕುದುರೆ ವ್ಯಾಪಾರದಂತ ಹಿಂಬಾಗಿಲ ರಾಜಕಾರಣ ಮಾಡೋಕೆ ಮಾತ್ರ ಗೊತ್ತಿದೆ. ಬಸವರಾಜ ಬೊಮ್ಮಾಯಿಯನ್ನು ಮುಖ್ಯಮಂತ್ರಿ ಮಾಡಿಸಿರುವುದೇ ಯಡಿಯೂರಪ್ಪ. ಹಾಗಾಗಿ ಬೊಮ್ಮಾಯಿಯವರು ಯಡಿಯೂರಪ್ಪ ಅವರ ರಬ್ಬರ್ ಸ್ಟಾಂಪ್ ರೀತಿ ಕೆಲಸ ಮಾಡದೆ ಸ್ವತಂತ್ರವಾಗಿ ಕೆಲಸ ಮಾಡೋಕಾಗುತ್ತಾ? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದಲಾವಣೆ ಆಗುತ್ತಾ ಇರಬೇಕು, ಅಪ್ಪ ಹಾಕಿದ ಆಲದ ಮರ ಎಂದು ನೇಣು ಹಾಕಿಕೊಳ್ಳೋಕೆ ಆಗುತ್ತಾ? ಹಾಗಾಗಿ ಮುಂದಿನ ಬಾರಿ ಜನರ ಹಿತ ಕಾಪಾಡಲು ವಿಫಲರಾಗಿರುವ ಅಶೋಕ್ ಅವರನ್ನು ಸೋಲಿಸಿ, ನಮ್ಮ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಅಂತ ಕ್ಷೇತ್ರದ ಜನರಲ್ಲಿ ಮನವಿ ಮಾಡುತ್ತೇನೆ. ಈ ಬಾರಿ ಉತ್ತಮ ಅಭ್ಯರ್ಥಿಯನ್ನು ಪಕ್ಷದ ಪರವಾಗಿ ಹಾಕುತ್ತೇವೆ ಎಂದ್ರು.

ಬಿಜೆಪಿ ಬಂಡವಾಳ ಶಾಹಿಗಳ ಪಕ್ಷ, ಕಾಂಗ್ರೆಸ್ ಬಡವರ ಪರವಾದ ಪಕ್ಷ. ಗರೀಭಿ ಹಠಾವೋ ಘೋಷಣೆ ಮಾಡಿದ್ದು ಇಂದಿರಾಗಾಂಧಿ, ಕಾರ್ಖಾನೆಗಳನ್ನು ಸ್ಥಾಪಿಸಿ ಉದ್ಯೋಗ ಸೃಷ್ಟಿ ಮಾಡಿದವರು ನೆಹರು, ದೂರಸಂಪರ್ಕ ಅಭಿವೃದ್ಧಿ ಮಾಡಿದವರು ರಾಜೀವ್ ಗಾಂಧಿ, ದೇಶಕ್ಕೆ ಬಿಜೆಪಿಯ ಕೊಡುಗೆ ಏನು? ಸರ್ಕಾರಿ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡುತ್ತಿರೋದು ಬಿಜೆಪಿಯವರು ಎಂದ್ರು.