ಚೌಕೀದಾರ್ ಮೋದಿಜೀ ಯಡಿಯೂರಪ್ಪ ಪ್ರಾಮಾಣಿಕರಾ,ರಫೇಲ್ ಹಗರಣ ನಡೆದಿಲ್ವಾ: ಸಿದ್ದರಾಮಯ್ಯ ಪ್ರಶ್ನೆ

ಉಡುಪಿ:ನಾನು ತಿನ್ನುವುದಿಲ್ಲ ಇನ್ನೊಬ್ಬರು ತಿನ್ನಲು ಬಿಡುವುದಿಲ್ಲ ಎನ್ನುವ ಚೌಕೀದಾರ್ ಮೋದಿ ಅವರೇ ರಫೇಲ್ ಹಗರಣದ ಬಗ್ಗೆ ಏನು ಹೇಳುವಿರಿ. ಯಡಿಯೂರಪ್ಪ ಪ್ರಾಮಾಣಿಕರಾ? ಭ್ರಷ್ಟಾಚಾರದ ವಿರುದ್ಧ ಮಾತನಾಡಲು ಅವರಿಗೆ ನಾಚಿಕೆ ಆಗಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಶಿವಮೊಗ್ಗ ಲೋಕಸಭೆ ಕ್ಷೇತ್ರದ, ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡಿದ ಸಿದ್ದರಾಮಯ್ಯ,ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕರಾವಳಿ ಭಾಗದಲ್ಲಿ ಮತದಾರರು ನಮ್ಮ ಕೈ ಹಿಡಿಯಲಿಲ್ಲ. ನಾವು ಮಾಡಿದ ತಪ್ಪಾದರೂ ಏನು ? ನಮ್ಮ ಸರ್ಕಾರ ಜಾರಿಗೆ ತಂದ ಹಲವಾರು ಜನಪರ ಯೋಜನೆಗಳನ್ನು ದೇಶದ ಯಾವ ರಾಜ್ಯ ಸರ್ಕಾರಗಳೂ ಜಾರಿಗೆ ತರಲಿಲ್ಲ. ಕೇವಲ ಹಿಂದುತ್ವ ವಾದದಿಂದ ಬಡವರ ಹೊಟ್ಟೆ ತುಂಬುವುದೇ ಎಂದು‌ ಪ್ರಶ್ನಿಸಿದ್ರು.

ಸಂಸದರಾಗಿ ಯಡಿಯೂರಪ್ಪ ಅವರು ಒಂದು ದಿನವೂ ಬೈಂದೂರಿಗೆ ಬರಲಿಲ್ಲ.‌ಅಂತಹವರಿಗೆ ಮತ ಹಾಕಬೇಕೇ ?
ಹಿಂದಿನ ಶಾಸಕರಾದ ಗೋಪಾಲ ಪೂಜಾರಿ ಅವರು ಎರಡು ಸಾವಿರ ಕೋಟಿ ರೂ.ಗಳ ಅನುದಾನವನ್ನು ಕ್ಷೇತ್ರಕ್ಕೆ ತಂದಿದ್ದರು. ಒಬ್ಬ ಶಾಸಕರಾಗಿ ಅವರು ಇನ್ನೇನು ಮಾಡಬೇಕಿತ್ತು. ಆದರೂ ಅವರಿಗೆ ಸೋಲಾಯಿತು. ವಿದ್ಯುನ್ಮಾನ ಮತ ಯಂತ್ರಗಳ ಬಗ್ಗೆ ನನಗೆ ಈಗಲೂ ಅನುಮಾನ ಇದೆ ಎಂದ್ರು.

ಯಡಿಯೂರಪ್ಪ ಅವರು ಒಬ್ಬರೇನಾ ಹಿಂದೂ. ನಾನು ಹಿಂದೂ ಅಲ್ಲವೇ ? ಹಿಂದುತ್ವದ ಹೆಸರಲ್ಲಿ ಜನರನ್ನು ದಾರಿ ತಪ್ಪಿಸುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಅದಕ್ಕೆ ಮರುಳಾಗಬಾರದು.ಎರಡು ಕೋಟಿ ಯುವಕರಿಗೆ ಉದ್ಯೋಗ ಕೊಡಿಸುವುದಾಗಿ ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದರು. ಒಬ್ಬರಿಗಾದರೂ ಉದ್ಯೋಗ ಬಂದಿದೆಯೇ ? ಇರುವ ಉದ್ಯೋಗವೂ ಸನ್ನಿವೇಶ ನಿರ್ಮಾಣ ಆಗಿದೆ. ಮನ್ ಕೀ ಬಾತ್ ಹೆಸರಲ್ಲಿ ನರೇಂದ್ರ ಮೋದಿಯವರು ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ.ಕೊಟ್ಟ ಭರವಸೆಗಳ ಪೈಕಿ ಒಂದನ್ನೂ ಕೇಂದ್ರ ಸರ್ಕಾರ ಈಡೇರಿಸಿಲ್ಲ. ಯಾವ ಆಧಾರದ ಮೇಲೆ ಯಡಿಯೂರಪ್ಪ ಇಲ್ಲಿಗೆ ಬಂದು ಮತ ಕೇಳುತ್ತಾರೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ದಲಿತರು, ಹಿಂದುಳಿದವರು, ಅಲ್ಪ ಸಂಖ್ಯಾತರ ಮೇಲೆ ದೌರ್ಜನ್ಯ ಹೆಚ್ಚಾಗಿದೆ‌ ಎಂದ್ರು.

ಕರಾವಳಿ ಭಾಗದ ಜನ ಯಾವ ಕಾರಣಕ್ಕೆ ಬಿಜೆಪಿಗೆ ವೋಟು ಕೊಟ್ಟರು ಎಂಬುದು ಅರ್ಥವಾಗುತ್ತಿಲ್ಲ. ನಿಮ್ಮ ದನ ಕರುಗಳು ಕೊಟ್ಟಿಗೆಗೆ ಬರಬೇಕೇ, ಹೆಣ್ಣು ಮಕ್ಕಳು ಸುರಕ್ಷಿತವಾಗಿ ಮನೆ ಸೇರಬೇಕೇ ? ಹಾಗಿದ್ದರೆ ಬಿಜೆಪಿಗೆ ಮತ ಕೊಡಿ ಎಂದು ಈ ಭಾಗದಲ್ಲಿ ಪ್ರಚಾರ ಮಾಡಿದರು. ಈಗ ಸಮ್ಮಿಶ್ರ ಸರ್ಕಾರ ಇದೆ. ಹಾಗಾದರೆ ದನ ಕರುಗಳು ಕೊಟ್ಟಿಗೆಗೆ ಬರುತ್ತಿಲ್ಲವೇ ? ಹೆಣ್ಣು ಮಕ್ಕಳು ಸುರಕ್ಷಿತವಾಗಿಲ್ಲವೇ ? ಚುನಾವಣೆಗೆ ಮುನ್ನ ಜನರಿಗೆ ನೀಡಿದ್ದ ಭರವಸೆಗಳ ಪೈಕಿ ಒಂದನ್ನೂ ಈಡೇರಿಸಿಲ್ಲ.‌ ಚುನಾವಣೆ ಸಂದರ್ಭದಲ್ಲಿ ಪೊಳ್ಳು ಭರವಸೆಗಳನ್ನು ನೀಡಬೇಕಾಗುತ್ತದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರೇ ಹೇಳಿದ್ದಾರೆ. ಇದಕ್ಕಿಂತ ಇನ್ನೇನು ಬೇಕು ಎಂದು ಹರಿಹಾಯ್ದರು.

ವಿಧಾನಸಭೆ ಚುನಾವಣೆಯಲ್ಲಿ ನಮಗೆ ಮತ ಕೊಡಲಿಲ್ಲ. ಈ ಮರು ಚುನಾವಣೆಯಲ್ಲಾದರೂ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಅವರನ್ನು ಗೆಲ್ಲುಸಿ. ಇದರಿಂದ ಬಂಗಾರಪ್ಪ ಅವರ ಆತ್ಮಕ್ಕೆ ಶಾಂತಿ ಸಿಗುತ್ತದೆ. ಮಾಡಿದ ಕೆಲಸಕ್ಕೆ ಕೂಲಿ ಕೊಡಿ ಎಂದು ಮನವಿ ಮಾಡಿದರೂ ಮತದಾರರು ಮನಸು ಮಾಡಲಿಲ್ಲ. ಈಗ ಬಡ್ಡಿ ಸಮೇತ ಕೂಲಿ ಕೊಡಿ ಎಂದು ಪ್ರಾರ್ಥಿಸುತ್ತೇನೆ ಎಂದ್ರು.

ಬರಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯ ಯುದ್ದೋಪಾದಿಯಲ್ಲಿ ನಡೆಯಲಿ: ಬಂಡೆಪ್ಪ ಖಾಶೆಂಪೂರ

ಬೀದರ್: ಬರ ಘೋಷಣೆಯಾಗಿರುವ ತಾಲೂಕುಗಳಲ್ಲಿ ಪರಿಹಾರ ಕಲ್ಪಿಸುವ ಕಾರ್ಯ ಯುದ್ದೋಪಾದಿಯಲ್ಲಿ ನಡೆಯಬೇಕು. ಕೇಂದ್ರ ಸ್ಥಾನದಲ್ಲಿದ್ದುಕೊಂಡು 24 ತಾಸುಗಳ ಕಾಲವೂ ಜಾಗೃತರಾಗಿ ಅಗತ್ಯ ಪೂರ್ವಸಿದ್ದತೆಗಳನ್ನು ಕೈಗೊಳ್ಳಬೇಕು ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಂಡೆಪ್ಪ ಖಾಶೆಂಪೂರ ಅವರು ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅ.25 ರಂದು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬರ ಪರಿಹಾರ ಕಾರ್ಯಗಳ ಬಗ್ಗೆ ಚರ್ಚಿಸಿದರು.
ಬರ ಎದುರಾಗಿದೆ ಎಂದು ಹಳ್ಳಿಗಳ ಜನರು ಬೇರೆಡೆ ಉದ್ಯೋಗ ಅರಸಿ ಹೋಗಬಾರದು. ಅಲ್ಲಿಯೇ ಉದ್ಯೋಗ ಸೃಷ್ಟಿಸಿ. ಉದ್ಯೊಗ ಖಾತರಿ ಯೋಜನೆಯಡಿ ಜನತೆಗೆ ಕೆಲಸ ಕೊಡಿಸಿ ಎಂದು ಸಚಿವರು ಸೂಚಿಸಿದರು. ಬರ ಬಂದು ಕೆಲವು ಹಳ್ಳಿಗಳಲ್ಲಿ ಜನರು ಸುಸ್ತಾಗಿದ್ದಾರೆ. ಈ ಬಗ್ಗೆ ತಾವು ಕೂಡ ಗಮನ ಹರಿಸಿ ಎಂದು ಬೀದರ ಹಾಗೂ ಬಸವಕಲ್ಯಾಣ ಸಹಾಯಕ ಆಯುಕ್ತರಿಗೆ ತಿಳಿಸಿದರು.

ಬರಪೀಡಿತ ಹಳ್ಳಿಗಳಲ್ಲಿ ಕುಡಿವ ನೀರು ಕಲ್ಪಿಸಲು ಮೊದಲ ಆದ್ಯತೆ ಕೊಡಿ. ಸಮಸ್ಯೆಯನ್ನು ಆಯಾ ಶಾಸಕರ ಗಮನಕ್ಕೆ ತಂದು ಬೋರವೆಲ್ ಹಾಕಿಸಲು ಕ್ರಮ ವಹಿಸಿ ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

*ಡಂಗೂರ ಹೊಡೆಸಿ* : ಕೆಲಸ ಕೊಡಿಸಿ ಎಂದು ಬರಪೀಡಿತ ಹಳ್ಳಿಗಳ ಜನರು ಸಚಿವರು ಹಾಗು‌ ಶಾಸಕರ ಹತ್ತಿರ ಕೇಳಿ ಬರುವುದು ನಿಲ್ಲಬೇಕು. ಈ ಹಿನ್ನೆಲೆಯಲ್ಲಿ ಆಯಾ ಹಳ್ಳಿಗಳಲ್ಲಿ ನಾಳೆಯಿಂದಲೇ ಡಂಗೂರ ಹೊಡೆಸಿ ಕೆಲಸ ಕೊಡುತ್ತೇವೆ ಎಂದು ಜನತೆಗೆ ತಿಳಿಸಿ. ಕಾಮಗಾರಿಗಳ ವಿವರವನ್ನು ಆಯಾ ಪಂಚಾಯಿತಿಗಳ ನೋಟಿಸ್ ಬೋರ್ಡನಲ್ಲಿ ಹಾಕಿರಿ ಎಂದು ಸಚಿವರು ತಾಪಂ ಇಒಗಳಿಗೆ ನಿರ್ದೇಶನ ನೀಡಿದರು.

*50 ಹಳ್ಳಿಗಳಲ್ಲಿ ಸಮಸ್ಯೆ* : ಈ ಸಂಬಂಧ ಅಧಕಾರಿಗಳೊಂದಿಗೆ ಸಭೆ ನಡೆಸಲಾಗಿದೆ.ಬೀದರ ತಾಲೂಕಿನ 50 ಹಳ್ಳಿಗಳಲ್ಲಿ ಕುಡಿವ ನೀರಿನ ಕೊರತೆ ಸೇರಿದಂತೆ ಕೆಲ ಸಮಸ್ಯೆ ಇರುವುದು ಕಂಡು ಬಂದಿದೆ ಎಂದು ಬೀದರ ತಹಸೀಲ್ದಾರ, ತಾಪಂ ಇಒ ಹಾಗೂ ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

*ಅಧಿಕಾರಿಗಳ ಕಾರ್ಯವೈಖರಿಗೆ ಅಸಮಾಧಾನ:* ಸಮಸ್ಯೆ ಇದೆ ಅಂತ ಕೆಲ ಹಳ್ಳಿಗಳ ಗ್ರಾಮಸ್ಥರು ಮನೆಗೆ ಬರುತ್ತಿದ್ದಾರೆ. ಅಧಿಕಾರಿಗಳಿದ್ದೂ ಜನ ನಮ್ಮ ಹತ್ತಿರ ಸಮಸ್ಯೆ ಹೇಳಿ ಬರುವಂತಾಗಬಾರದು. ಬರ ಘೋಷಣೆಯಾಗಿ ತಿಂಗಳಾದರೂ ಹುಮನಾಬಾದ್ ತಾಲೂಕಿನ ಒಂದೂ ಹಳ್ಳಿಯಲ್ಲಿ ಬೋರವೆಲ್ ಹಾಕಿಸಿಲ್ಲ ಎನ್ನುವುದು ಸರಿಯಲ್ಲ ಎಂದು ಸಚಿವರು ಅಧಿಕಾರಿಗಳ ಕಾರ್ಯವೈಖರಿಗೆ
ಅಸಮಾಧಾನ ವ್ಯಕ್ತಪಡಿಸಿದರು. ಸಮಸ್ಯೆ ಇದ್ದರೂ ಸಂಬಂಧಿಸಿದ ಶಾಸಕರು ಹತ್ತಿರ ತಾವೇಕೆ ಹೋಗಿಲ್ಲ. ಅವರೊಂದಿಗೆ ಯಾಕೆ ಸಭೆ ನಡೆಸಿಲ್ಲ ಎಂದು ಅಧಿಕಾರಿಗಳಿಗೆ ಪ್ರಶ್ನಿಸಿದರು.

*ತಿಂಗಳ ಬಳಿಕ ಸಮಸ್ಯೆ ಆಗಬಹುದು* :
ಔರಾದ ತಾಲೂಕಿನಲ್ಲಿ ಸದ್ಯಕ್ಕೆ ಯಾವ ಹಳ್ಳಿಯಲ್ಲೂ ಕುಡಿವ ನೀರಿನ ಸಮಸ್ಯೆ ಇಲ್ಲ. ತಿಂಗಳ ಬಳಿಕ ಸಮಸ್ಯೆ ಆಗಬಹುದು ಎಂದು ಔರಾದ ತಹಸೀಲ್ದಾರ ತಿಳಿಸಿದರು.
*ಅಧಿಕಾರಿಗಳಿಗೆ ಎಚ್ಚರಿಕೆ* : ಎಂಟು ದಿನಗಳ ಬಳಿಕ ನಾನು ಹಳ್ಳಿಗಳಿಗೆ ಭೇಟಿ ನೀಡುವೆ. ಆ ವೇಳೆ ಬರಪೀಡಿತ ಹಳ್ಳಿಯ ಜನ ಕೆಲಸ ನೀಡಿಲ್ಲ ಎಂದು ಅಳಲು ತೋಡಿಕೊಂಡರೆ ಆ ಕೂಡಲೇ ಸಂಬಂಧಿಸಿದ ಪಂಚಾಯಿತಿಯ ಪಿಡಿಒ ಅವರನ್ನು ಅಮಾನತುಗೊಳಿಸಲಾಗುವುದು. ಕುಡಿವ ನೀರು ಸಿಗುತ್ತಿಲ್ಲ ಎಂದು ಯಾರಾದರು ಹೇಳಿದರೆ ತಮ್ಮ ಮೇಲೆ ಕೂಡ ಅಮಾನತಿಗೆ ಕ್ರಮವಹಿಸಲಾಗುವುದು ಎಂದು ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

*ಹಣಕ್ಕೆ ಕೊರತೆಯಿಲ್ಲ* : ಈಗ ಜನತೆ ಬೆಳೆ ಕಟಾವಿನಲ್ಲಿ ತೊಡಗಿದ್ದಾರೆ. ಇದು ಮುಗಿದ ಬಳಿಕ ಜನರು ಕೆಲಸ ಕೇಳಬಹುದು. ತಾವು ಬೇರೆ ಬೇರೆ ಹೋಬಳಿಗಳಲ್ಲಿ ನಡೆಸಿದ ಜನಸ್ಪಂದನ ಸಭೆಯಲ್ಲಿ ಜನರಿಂದ ಕೆಲಸದ ಬೇಡಿಕೆ ಬಂದಿರುವುದಿಲ್ಲ. ಜನರು ಕೆಲಸ ಕೇಳಿ ಬಂದರೆ ಕೂಡಲೆ ಸ್ಪಂದಿಸುವುತ್ತೇವೆ. ಹಣದ ಕೊರತೆ ಇಲ್ಲ ಎಂದು ಜಿಲ್ಲಾಧಿಕಾರಿಗಳಾದ ಡಾ.ಹೆಚ್.ಆರ್. ಮಹಾದೇವ ಅವರು ತಿಳಿಸಿದರು.

*ಕ್ರಮ ವಹಿಸಲಾಗಿದೆ* : ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಾಂತೇಶ ಬೀಳಗಿ ಅವರು ಮಾತನಾಡಿ, ಬರದ ಹಿನ್ನೆಲೆಯಲ್ಲಿ ತುರ್ತು ಆಗಬೇಕಾದ ಕೆಲಸದ ಪಟ್ಟಿಯನ್ನು ಮಾಡಿಕೊಂಡು ಆದ್ಯತೆಯ ಮೇರೆಗೆ ಕುಡಿವ ನೀರು ಕೊಡುವ, ಉದ್ಯೋಗ ನೀಡುವ ನಾನಾ ಕಾರ್ಯಗಳನ್ನು ಜನತೆಗೆ ಕಾಣುವ ರೀತಿಯಲ್ಲಿ ಕೈಗೆತ್ತಿಕೊಳ್ಳುತ್ತಿದ್ದೇವೆ ಎಂದು ತಿಳಿಸಿದರು.

*ಮೇವಿನ ತೊಂದರೆ ಇಲ್ಲ :*
ಮೇವಿನ ತೊಂದರೆ ಇಲ್ಲ ಸದ್ಯ. ಮೇವಿನ ಬೀಜ ವಿತರಣೆಗೆ ಕ್ರಮ ವಹಿಸಲಾಗಿದೆ. ಜಾನುವಾರುಗಳಿಗೆ ಕುಡಿವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಪಶುಪಾಲನಾ ಇಲಾಖೆಯ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಬೀದರ ಹಾಗೂ ಬಸವಕಲ್ಯಾಣ ಸಹಾಯಕ ಆಯುಕ್ತರು, ತಹಸೀಲ್ದಾರರು ಹಾಗು ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ಲೀಡ್ ತಂದರೆ ಸಚಿವ ಸ್ಥಾನ, ಇಲ್ಲದಿದ್ದರೆ ನಿಗಮ ಮಂಡಳಿಯೂ ಇಲ್ಲ: ಬಳ್ಳಾರಿ ಶಾಸಕರಿಗೆ ಶಾಕ್ ನೀಡಿದ ಸಿದ್ಧು

ಬಳ್ಳಾರಿ: ಉಪ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿರುವ ಬಿಜೆಪಿ ಮತ್ತು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟ ಎರಡೂ ಸಹ ಗೆಲುವಿಗಾಗಿ ಟೊಂಕ ಕಟ್ಟಿ ನಿಂತಿವೆ. ಅದರಲ್ಲೂ ಕಾಂಗ್ರೆಸ್ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಗಿಂತ 30 ಸಾವಿರ ಲೀಡ್ ತಂದು ಕೊಡುವಂತೆ ತನ್ನ ಶಾಸಕರಿಗೆ ಟಾರ್ಗೆಟ್ ನೀಡಿದೆ. ಲೀಡ್ ತಂದ ಶಾಸಕರಿಗೆ ಸಚಿವ ಸಂಪುಟ ವಿಸ್ತರಣೆ ವೇಳೆ ಆದ್ಯತೆ ನೀಡಲಾಗುವುದು. ಇಲ್ಲದಿದ್ದರೆ ನಿಗಮ ಮಂಡಳಿಯ ನಿರೀಕ್ಷೆಯನ್ನು ಇಟ್ಟುಕೊಳ್ಳ ಬೇಡಿ ಎನ್ನುವ ಮೂಲಕ ಶಾಸಕರಿಗೆ ಶಾಕ್ ನೀಡಿದೆ.

ನಿನ್ನೆಯೆ ಪ್ರಚಾರ ಕಾರ್ಯ ಮುಗಿದರು ಹೊಸಪೇಟೆಯಲ್ಲೆ ಉಳಿದುಕೊಂಡ ಮಾಜಿ ಸಿಎಂ ಸಿದ್ದರಾಮಯ್ಯ ಕಳೆದ ರಾತ್ರಿ ಬಳ್ಳಾರಿಯ ಆರು ಕಾಂಗ್ರೆಸ್ ಶಾಸಕರ ಸಭೆ ನಡೆಸಿ ಶಾಸಕರಿಗೆ ಟಾರ್ಗೆಟ್ ನೀಡಿದ್ದಾರೆ. ಈ ವೇಳೆ ಬಳ್ಳಾರಿ ಚುನಾವಣೆ ಉಸ್ತುವಾರಿ ಡಿ.ಕೆ.ಶಿವಕುಮಾರ್ ಸಹ ಸಿದ್ಧರಾಮಯ್ಯ ಮಾತಿಗೆ ಸಹಮತ ವ್ಯಕ್ತಪಡಿಸಿದ್ದಾರೆ.

ಪ್ರತಿ ಶಾಸಕರಿಗು ತಮ್ಮ ತಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಕನಿಷ್ಟ 30 ಸಾವಿರ ಮತಗಳ ಲೀಡ್ ತಂದು ಕೊಡಬೇಕು. ಯಾರು ಹೆಚ್ಚು ಲೀಡ್ ಕೊಡ್ತಾರೋ ಅವರ ಹೆಸರನ್ನು ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಪರಿಗಣಿಸುವುದಾಗಿ ಶಾಕ್ ನೀಡಿದ್ದಾರೆ. ಮೊದಲ ಬಾರಿ ಗೆದ್ದ ಗಣೇಶ್ ಇರಬಹುದು. ನಾಲ್ಕನೆ ಬಾರಿ ಗೆದ್ದ ಪರಮೇಶ್ವರ್ ನಾಯಕ್ ಇರಬಹುದು ಎಲ್ಲರು ಒಂದೇ. ಚುನಾವಣೆಯನ್ನ ಪ್ರತಿಷ್ಟೆಯಾಗಿ ತಗೆದುಕೊಂಡು ಲೀಡ್ ಕೊಡಿ ಅಷ್ಟೆ ಎಂದು ಟಾರ್ಗೆಟ್ ಫಿಕ್ಸ್ ಮಾಡಿದ್ದಾರೆ.

ಬೇರೆ ಸಂದರ್ಭವಾಗಿದ್ದರೆ ಸೀನಿಯಾರಿಟಿ ಹಾಗೂ ಸಾಮರ್ಥ್ಯ ನೋಡಿ ಸಂಪುಟಕ್ಕೆ ಸೇರಿಸುವ ಪ್ರಯತ್ನ ಮಾಡಬಹುದಿತ್ತು. ಆದ್ರೆ, ಪರಿಸ್ಥಿತಿ ಈಗ ಹಾಗಿಲ್ಲ. ಮುಂದಿನ ಲೋಕಸಭಾ ಚುಬಾವಣಾ ದೃಷ್ಟಿಯಿಂದ ಈ ಉಪ ಚುನಾವಣೆ ಗೆಲ್ಲಲೇಬೇಕು. ನೀವುಗಳು ಒಗ್ಗಟ್ಟಿನಿಂದ ಇದ್ದಿದ್ದರೆ ಅಭ್ಯರ್ಥಿಯು ಬೇರೆಯವರಾಗಿರುತ್ತಿದ್ದರು. ನಿಮ್ಮ ಒಳ ಜಗಳದಿಂದಾಗಿ ಉಗ್ರಪ್ಪ ಅಭ್ಯರ್ಥಿಯಾಗಿದ್ದಾರೆ. ಇಲ್ಲಿ ಸೋತರೆ ರಾಷ್ಟ್ರ ಮಟ್ಟದಲ್ಲು ಬೇರೆ ಸಂದೇಶ ರವಾನೆಯಾಗಲಿದೆ. ಹಾಗಾಗಿ ಈ ಚುನಾವಣೆ ಗೆಲ್ಲಲೇಬೇಕು ಎಂದು ಕಡಕ್ಕಾಗಿ ಹೇಳಿದ್ದಾರೆ.

ಯಾರು ಹೆಚ್ಚು ಲೀಡ್ ಕೊಡ್ತಾರೋ ಎಲ್ಲಾ ಹೆಸರನ್ನು ಸಂಪುಟ ವಿದ್ತರಣೆಯಲ್ಲಿ ಪರಿಗಣಿಸಿ ಆದ್ಯತೆ ನೀಡುತ್ತೇವೆ. ಯಾರ ಕ್ಷೇತ್ರದಲ್ಲಿ ಬಿಜೆಪಿ ಲೀಡ್ ತಗೆದುಕೊಳ್ಳುತ್ತೋ ಅವರು ನಿಗಮ ಮಂಡಳಿ ಬಗ್ಗೆಯು ನಿರೀಕ್ಷೆ ಇಟ್ಟುಕೊಳ್ಳುವುದು ಬೇಡ ಎಂದಿದ್ದಾರೆ. ಸಿದ್ದರಾಮಯ್ಯ ಖಡಕ್ ವಾರ್ನಿಂಗ್ ಕಂಡು ಬಳ್ಳಾರಿ ಶಾಸಕರು ಫುಲ್ ಶಾಕ್‌ಗೆ ಒಳಗಾಗಿದ್ದಾರೆ. ಇಲ್ಲಾ ಸಾರ್ ಎಲ್ರೂ ಲೀಡ್ ಕೊಡ್ತಿವಿ ಎಂದಿದ್ದಾರೆ. ಏನಾಗುತ್ತೆ ಅನ್ನೋದು ರಿಸೆಲ್ಟ್ ಬಂದಮೇಲೆ‌ ಗೊತ್ತಾಗುತ್ತೆ ಆಮೇಲೆ ಮಾತಾಡ್ತೀನಿ. ಲೀಡ್ ಇಲ್ಲದಿದ್ರೆ ಯಾವ ಸ್ಥಾನಮಾನದ ಬಗ್ಗೆಯು ನಿರೀಕ್ಷೆ ಇಟ್ಟುಕೊಳ್ಳಬೇಡಿ ಎಂದು ಹೇಳಿ ಕಳುಹಿಸಿದ್ದಾರೆ. ಇದೀಗ ತಮ್ಮ ತಮ್ಮ ಕ್ಷೇತ್ರದಲ್ಲಿ ಲೀಡ್ ಕೊಡಲೇಬೇಕಾದ ಅನಿವಾರ್ಯತೆಗೆ ಬಳ್ಳಾರಿ ಕಾಂಗ್ರೆಸ್ ಶಾಸಕರು ಸಿಲುಕಿದ್ದಾರೆ.

ಮೈತ್ರಿ ಸರ್ಕಾರದ 5 ತಿಂಗಳ ಆಡಳಿತ: ಒಂದು ಅವಲೋಕನ

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರ ಐದು ತಿಂಗಳ ಆಡಳಿತ ಪೂರೈಸಿದೆ,ಮೈತ್ರಿಯ ಬಿಕ್ಕಟ್ಟು,ಸಂಪುಟ ಸಂಕಷ್ಟ, ಸಾಲಮನ್ನಾ ಒತ್ತಡದ ಜೊತೆ ಉಪ ಚುನಾವಣಾ ಸವಾಲು ಎದುರಾಗಿದೆ ಈ ಎಲ್ಲದರ ನಡುವೆಯೂ ಸರಕಾರ ಮಾಡಿರುವ ಕೆಲಸಗಳೇನು ಎನ್ನುವ ಸಣ್ಣ ವಿವರ ಇಲ್ಲಿದೆ.

1. 2018-19ನೇ ಸಾಲಿನ ಆಯವ್ಯಯ ಭಾಷಣಗಳಲ್ಲಿ ಮಾಡಿರುವ ಒಟ್ಟು 460 ಘೋಷಣೆಗಳಲ್ಲಿ ಬಹುತೇಕ ಘೋಷಣೆಗಳಿಗೆ ಸಂಬಂಧಿಸಿದಂತೆ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಅಂದರೆ ಈ ಕಾರ್ಯಕ್ರಮಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ.

*ರಾಜ್ಯದ ಹಣಕಾಸು ಸ್ಥಿತಿ:*ನಿಗದಿತ ಗುರಿಗಿಂತ ಶೇ. 11 ರಷ್ಟು ಹೆಚ್ಚು ತೆರಿಗೆ ಸಂಗ್ರಹ*
2. ರಾಜ್ಯದ ಹಣಕಾಸು ಸ್ಥಿತಿ ಉತ್ತಮವಾಗಿದ್ದು, ಸೆಪ್ಟೆಂಬರ್ ಅಂತ್ಯದ ವರೆಗೆ 75,634 ಕೋಟಿ ರೂ. ಗಳಷ್ಟು ವಿವಿಧ ತೆರಿಗೆಗಳ ಸಂಗ್ರಹವಾಗಿದ್ದು, ಶೇ. 11.4 ರಷ್ಟು ಹೆಚ್ಚಳವಾಗಿದೆ.
3. ಚುನಾವಣೆಯ ಹಿನ್ನೆಲೆಯಲ್ಲಿ ಆಯವ್ಯಯ ವೆಚ್ಚ ಸೆಪ್ಟೆಂಬರ್ ಅಂತ್ಯದ ವೇಳೆಗೆ ಶೇ. 38 ರಷ್ಟಾಗಿದ್ದು, 2013-14 ರಲ್ಲಿ ಈ ಅವಧಿಯಲ್ಲಿ ಶೇ. 37 ರಷ್ಟು ವೆಚ್ಚವಾಗಿತ್ತು. ಮಾರ್ಚ್ ವೇಳೆಗೆ ನಿರೀಕ್ಷಿತ ಗುರಿ ತಲುಪುವ ಆಶಾಭಾವನೆ ಇದೆ.

*ಸಾಲ ಮನ್ನಾ ಯೋಜನೆ: ಬ್ಯಾಂಕುಗಳಿಂದ ಮಾಹಿತಿ ಸಂಗ್ರಹ- 15 ಬ್ಯಾಂಕುಗಳಿಂದ 10 ಲಕ್ಷ ರೈತರ ಬೆಳೆ ಸಾಲ ಮಾಹಿತಿ ಲಭ್ಯ*
4. ಸಾಲ ಮನ್ನಾ ಪ್ರಕ್ರಿಯೆ ಪ್ರಾರಂಭವಾಗಿದ್ದು, ಈಗಾಗಲೇ 15 ಬ್ಯಾಂಕುಗಳಿಂದ 10 ಲಕ್ಷ ರೈತರ ಬೆಳೆ ಸಾಲಗಳ ಮಾಹಿತಿ ಲಭ್ಯವಾಗಿದೆ.
5. ರೈತರಿಂದಲೂ ಮಾಹಿತಿ ಪಡೆಯಲಾಗುತ್ತಿದೆ. ಎಲ್ಲ ಅರ್ಹ ರೈತರಿಗೆ ಪ್ರಯೋಜನ ದೊರಕಿಸಲು ಸಾಲಗಳ ಮಾಹಿತಿಯನ್ನು ಭೂಮಿ ನಿರ್ವಹಣಾ ಕೋಶದ ನೆರವಿನಿಂದ ಅಭಿವೃದ್ಧಿ ಪಡಿಸಿದ ತಂತ್ರಾಂಶದ ಸಹಾಯದೊಂದಿಗೆ ಪರಿಶೀಲಿಸಲಾಗುತ್ತದೆ.
6. ಸಹಕಾರಿ ಬ್ಯಾಂಕುಗಳ ಅಧಿಕಾರಿಗಳಿಗೆ ಈಗಾಗಲೇ ತರಬೇತಿ ನೀಡಲಾಗಿದೆ. ವಾಣಿಜ್ಯ ಬ್ಯಾಂಕುಗಳ ಅಧಿಕಾರಿಗಳಿಗೆ ಮುಂದಿನವಾರ ತರಬೇತಿ ನೀಡಲಾಗುವುದು.
7. ಸಹಕಾರಿ ಬ್ಯಾಂಕುಗಳಲ್ಲಿ ಕಂದಾಯ ಇಲಾಖೆ ಅಭಿವೃದ್ಧಿ ಪಡಿಸಿರುವ ತಂತ್ರಾಂಶದಲ್ಲಿ ಮಾಹಿತಿ ಅಪ್‍ಲೋಡ್ ಮಾಡುವ ಕಾರ್ಯಕ್ರಮ ಪ್ರಗತಿಯಲ್ಲಿದೆ.
8. ಸರ್ಕಾರವು ಸಾಲಮನ್ನಾ ಯೋಜನೆಗೆ ಪ್ರತ್ಯೇಕ ಸಂಪನ್ಮೂಲ ಕ್ರೋಢೀಕರಣ ವ್ಯವಸ್ಥೆ ರೂಪಿಸಿದೆ. ಆಯವ್ಯಯದ ಇತರ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಇದರಿಂದ ಯಾವುದೇ ಅಡ್ಡಿಯಾಗುವುದಿಲ್ಲ ಎಂಬುದನ್ನು ಮತ್ತೊಮ್ಮೆ ಸ್ಪಷ್ಟ ಪಡಿಸಿದೆ.

*ರಾಷ್ಟ್ರಪತಿಗಳ ಅಂಗಳದಲ್ಲಿ ಋಣ ಪರಿಹಾರ ಕಾಯ್ದೆ 2018*
9. ಸಣ್ಣ ರೈತರು, ಕೃಷಿ ಕೂಲಿ ಕಾರ್ಮಿಕರು, ಸಣ್ಣ ಪುಟ್ಟ ವ್ಯಾಪಾರಿಗಳು, ಬಡ ಜನರಿಗೆ ಬಡ್ಡಿ ವ್ಯಾಪಾರಿಗಳು, ಲೇವಾದೇವಿದಾರರ ಕಿರುಕುಳದಿಂದ ಮುಕ್ತಿ ದೊರಕಿಸಲು ಋಣ ಪರಿಹಾರ ಕಾಯ್ದೆ 2018ನ್ನು ರೂಪಿಸಲಾಗಿದ್ದು, ರಾಷ್ಟ್ರಪತಿಗಳ ಅಂಕಿತವನ್ನು ನಿರೀಕ್ಷಿಸಲಾಗುತ್ತಿದೆ. ಕಾಯ್ದೆಯ ರೂಪುರೇಷೆಗಳನ್ನು ಗೌರವಾನ್ವಿತ ರಾಷ್ಟ್ರಪತಿಗಳಿಗೆ ಹಾಗೂ ಗೃಹ ಸಚಿವರಿಗೆ ಖುದ್ದು ಭೇಟಿ ಮಾಡಿ ವಿವರಿಸಲಾಗಿದೆ.

*ಕೊಡಗು ಅಭಿವೃದ್ಧಿಗೆ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಕೊಡಗು ಪುನರ್‍ನಿರ್ಮಾಣ ಪ್ರಾಧಿಕಾರ ರಚನೆ:*
10. ಇತ್ತೀಚೆಗೆ ಕೊಡಗು ಜಿಲ್ಲೆಯಲ್ಲಿ ಸಂತ್ರಸ್ತರೊಂದಿಗೆ ಸಂವಾದ ನಡೆಸಿದ್ದು, ಅವರ ಇಚ್ಛೆಗೆ ಅನುಗುಣವಾಗಿ ಮನೆ ನಿರ್ಮಿಸಿ ಕೊಡಲಾಗುವುದು.
11. ಈ ವರೆಗೆ ಕೊಡಗು ಜಿಲ್ಲೆಗೆ ರಾಜ್ಯ ಸರ್ಕಾರ 127 ಕೋಟಿ ರೂಪಾಯಿಗಳ ಅನುದಾನ ಬಿಡುಗಡೆ ಮಾಡಿದೆ.
12. ಪ್ರಕೃತಿಯ ಕೋಪಕ್ಕೆ ಜರ್ಝರಿತವಾಗಿರುವ ಕೊಡಗು ಜಿಲ್ಲೆಯ ಪುನರ್ ನಿಮಾಣ ಸರ್ಕಾರದ ಆದ್ಯತೆ. ಇದನ್ನು ತ್ವರಿತ ಗತಿಯಲ್ಲಿ ಅನುಷ್ಠಾನಗೊಳಿಸಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕೊಡಗು ಪುನರ್ ನಿರ್ಮಾಣ ಪ್ರಾಧಿಕಾರ ರಚನೆಯ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.
13. ಕೊಡಗು ಜಿಲ್ಲೆಯ ಸಂಕಷ್ಟಕ್ಕೆ ಸಾರ್ವಜನಿಕರು ಅಭೂತಪೂರ್ವ ಬೆಂಬಲ ನೀಡಿದ್ದು, ಈ ವರೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 187.16 ಕೋಟಿ ರೂ. ಗಳ ದೇಣಿಗೆ ಹರಿದುಬಂದಿದೆ. ಇನ್‍ಫೋಸಿಸ್ ಪ್ರತಿಷ್ಠಾನವು 25 ಕೋಟಿ ರೂ. ಗಳ ನೆರವು ನೀಡುವುದಾಗಿ ಪ್ರತಿಷ್ಠಾನದ ಅಧ್ಯಕ್ಷೆ ಶ್ರೀಮತಿ ಸುಧಾ ಮೂರ್ತಿ ಅವರು ಘೋಷಿಸಿದ್ದಾರೆ.

*ಯಶಸ್ವಿ ದಸರಾ: ಮುಂದಿನ ಬಾರಿ ಪ್ರವಾಸೋದ್ಯಮ ಕೇಂದ್ರಿತ ದಸರಾ- ನೀಲನಕ್ಷೆ ತಯಾರಿಗೆ ಸೂಚನೆ: ನವೆಂಬರ್ 1 ರಿಂದ ಜಾನಪದ ಜಾತ್ರೆಗೆ ಮರುಚಾಲನೆ*
14. ಮೈಸೂರು ದಸರಾ ಉತ್ಸವವನ್ನು ಅತ್ಯಂತ ಅರ್ಥಪೂರ್ಣವಾಗಿ, ಯಶಸ್ವಿಯಾಗಿ ನೆರವೇರಿಸಲಾಯಿತು. ದಸರಾ ಉತ್ಸವವನ್ನು ಉದ್ಘಾಟಿಸಿದ ಇನ್‍ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಅವರು 10 ದಿನಗಳಲ್ಲೂ ಮೈಸೂರಿನಲ್ಲೇ ಇದ್ದು ವಿವಿಧ ಕಾರ್ಯಕ್ರಮಗಳಲ್ಲಿ ಉತ್ಸಾಹದಿಂದ ಭಾಗವಹಿಸಿದ್ದು ಈ ಬಾರಿಯ ವಿಶೇಷ.
15. ಈ 10 ದಿನಗಳಲ್ಲಿ ಸುಮಾರು 50 ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ಭೇಟಿ ನೀಡಿರುವುದಾಗಿ ಅಂದಾಜಿಸಲಾಗಿದೆ. ದಸರಾ ಮೆರವಣಿಗೆಯನ್ನು ವೀಕ್ಷಿಸಲು 10-12 ಲಕ್ಷ ಪ್ರವಾಸಿಗರು ಆಗಮಿಸಿದ್ದರು.
16. ಮುಂದಿನ ವರ್ಷ ದಸರಾವನ್ನು ಇನ್ನಷ್ಟು ವೈವಿಧ್ಯಮಯವಾಗಿ, ಪ್ರವಾಸೋದ್ಯಮ ಕೇಂದ್ರಿತವಾಗಿ ರೂಪಿಸಲು ನೀಲನಕ್ಷೆ ಸಿದ್ಧಪಡಿಸುವಂತೆ ಮೈಸೂರು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ.
17. ಅಳಿವಿನಂಚಿಗೆ ಸರಿಯುತ್ತಿರುವ ಜಾನಪದ ಕಲೆಗಳನ್ನು ಮತ್ತೆ ಮುನ್ನೆಲೆಗೆ ತರಲು ಹಾಗೂ ಕಲಾವಿದರಿಗೆ ಬೆಂಬಲ ನೀಡಲು ನವೆಂಬರ್ 1 ರಿಂದ ಜಾನಪದ ಜಾತ್ರೆಯನ್ನು ಮತ್ತೆ ಪ್ರಾರಂಭಿಸಲಾಗುತ್ತಿದೆ. ರಾಜ್ಯದ ಆರು ಸ್ಥಳಗಳಲ್ಲಿ ಅಂದು ಜಾನಪದ ಜಾತ್ರೆ ಏರ್ಪಡಿಸಲಾಗುತ್ತಿದೆ.

*ಕೈಗಾರಿಕಾ ಕ್ಲಸ್ಟರ್‍ಗಳ ಸ್ಥಾಪನೆಗೆ ಉದ್ಯಮಿಗಳ ಬೆಂಬಲ- ವಿಷನ್ ಗ್ರೂಪ್‍ಗಳಿಂದ ಅಧ್ಯಯನ- ಶೀಘ್ರವೇ ವರದಿ ಸಲ್ಲಿಕೆ*
18. ರಾಜ್ಯ ಸರ್ಕಾರವು ‘ಕಾಂಪೀಟ್ ವಿತ್ ಚೈನಾ’ ಎಂಬ ಯೋಜನೆಯಡಿ 9 ಜಿಲ್ಲೆಗಳಲ್ಲಿ ವಿವಿಧ ಕೈಗಾರಿಕಾ ಕ್ಲಸ್ಟರ್‍ಗಳನ್ನು ಸ್ಥಾಪಿಸುತ್ತಿರುವ ಹಿನ್ನೆಲೆಯಲ್ಲಿ ಪ್ರತಿ ಕ್ಲಸ್ಟರ್‍ಗೆ ಸಂಬಂಧಿಸಿದಂತೆ ಮುಂಚೂಣಿಯ ಉದ್ಯಮಿಗಳನ್ನೊಳಗೊಂಡ ವಿಷನ್ ಗ್ರೂಪ್ ರಚಿಸಲಾಗಿದೆ.
19. ಈಗಾಗಲೇ ಅವರೊಂದಿಗೆ ಸಂವಾದ ನಡೆಸಲಾಗಿದೆ. ಈ ತಂಡದ ಸದಸ್ಯರು, ಆಯಾ ಜಿಲ್ಲೆಗಳಿಗೆ ಭೇಟಿ ನೀಡಿ, ಉದ್ಯಮ ಸ್ಥಾಪನೆಗೆ ಪೂರಕ ವಾತಾವರಣ ನಿರ್ಮಿಸಲು ಅಗತ್ಯ ಸಲಹೆ, ಮಾರ್ಗದರ್ಶನ ನೀಡಲಿದೆ. ಅದರಂತೆ ಸರ್ಕಾರ ಕ್ರಮ ಕೈಗೊಳ್ಳಲಿದೆ.
20. ಪ್ರತಿ ವಲಯದಲ್ಲಿ 5000 ಕೋಟಿ ರೂ. ಹೂಡಿಕೆ ನಿರೀಕ್ಷೆಯಿಂದ ತಲಾ ಒಂದು ಲಕ್ಷ ಉದ್ಯೋಗ ಸೃಷ್ಟಿಯ ಗುರಿ ಹೊಂದಲಾಗಿದೆ.

*ಬೆಂಗಳೂರು ಅಭಿವೃದ್ಧಿಗೆ ವಿಶೇಷ ಆದ್ಯತೆ: ಪೆರಿಫೆರಲ್ ರಿಂಗ್ ರಸ್ತೆ, ಎಲಿವೇಟೆಡ್ ಕಾರಿಡಾರ್ ಯೋಜನೆ ಜಾರಿಗೆ ಸಿದ್ಧತೆ- ಸಾರ್ವಜನಿಕ ಅಭಿಪ್ರಾಯ ಸಂಗ್ರಹದ ನಂತರ ಯೋಜನೆ ಜಾರಿ*
21. ಸಂಚಾರ ದಟ್ಟಣೆ ನಿವಾರಣೆಗೆ ರಸ್ತೆಗಳ ದುರಸ್ತಿ, ಅಭಿವೃದ್ಧಿ, ಮೇಲು ಸೇತುವೆ ನಿರ್ಮಾಣ, ಮೆಟ್ರೋ 3ನೇ ಹಂತದ ಯೋಜನೆಯ ಕಾರ್ಯಸಾಧ್ಯತೆ ಪರಿಶೀಲನೆ, ಎಲೆವೇಟೆಡ್ ಕಾರಿಡಾರ್ ನಿರ್ಮಾಣ ಇತ್ಯಾದಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ.
22. ಉಪಮುಖ್ಯಮಂತ್ರಿಗಳು ನಿಯಮಿತವಾಗಿ ಬೆಂಗಳೂರು ಅಭಿವೃದ್ಧಿಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆಗಳನ್ನು ನಡೆಸುವುದಲ್ಲದೆ, ಖುದ್ದು ಸ್ಥಳ ಪರಿಶೀಲನೆ ನಡೆಸುವ ಮೂಲಕ ಅಧಿಕಾರಿಗಳಿಗೆ ಚುರುಕು ಮುಟ್ಟಿಸಿದ್ದಾರೆ
23. ಎಲಿವೇಟೆಡ್ ಕಾರಿಡಾರ್: ಬೆಂಗಳೂರು ನಗರದ ಸಂಚಾರ ದಟ್ಟಣೆ ಕಡಿಮೆಗೊಳಿಸಲು 14540 ಕೋಟಿ ರೂ ಅಂದಾಜು ವೆಚ್ಚದಲ್ಲಿ ಒಟ್ಟು 102 ಕಿಲೋಮೀಟರ್ ಉದ್ದದ ಆರು ಕಾರಿಡಾರ್‍ಗಳನ್ನು ಐದು ಹಂತಗಳಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ.
24. ಪ್ರಸ್ತುತ ಈ ಯೋಜನೆಯ ಎನ್ವಿರಾನ್‍ಮೆಂಟ್ ಇಂಪ್ಯಾಕ್ಟ್ ಅಸೆಸ್‍ಮೆಂಟ್ ವರದಿ ತಯಾರಿಸಲಾಗುತ್ತಿದೆ.
25. ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಲಾಗುವುದು; ನಂತರವೇ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು.
26. ಪೆರಿಫೆರಲ್ ರಿಂಗ್ ರಸ್ತೆ: ಸುಮಾರು 6500 ಕೋಟಿ ರೂ. ವೆಚ್ಚದಲ್ಲಿ ಪೆರಿಫೆರಲ್ ರಿಂಗ್ ರಸ್ತೆ ನಿರ್ಮಿಸಲು ಉದ್ದೇಶಿಸಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ ಈ ಯೋಜನೆ ಅನುಷ್ಠಾನಗೊಳಿಸಲು ಉದ್ದೇಶಿಸಿದೆ. ಈ ಯೋಜನೆಗೆ ಹೈಬ್ರಿಡ್ ಆನ್ಯುಟಿ ಮಾದರಿಯಲ್ಲಿ ಸಂಪನ್ಮೂಲ ಕ್ರೋಢೀಕರಣ ಮಾಡಲಾಗುವುದು.
27. ಭೂಸ್ವಾಧೀನ ಪ್ರಕ್ರಿಯೆಗೆ ಇಂದು ಅತಿ ಹೆಚ್ಚು ಅನುದಾನ ಅಗತ್ಯವಿದೆ. ಇದನ್ನು ಕಡಿಮೆಗೊಳಿಸಲು ಇರುವ ವಿವಿಧ ಸಾಧ್ಯತೆಗಳನ್ನು ಪರಿಶೀಲಿಸಲಾಗುತ್ತಿದೆ. ಮುಂದಿನ ಮೂರು ತಿಂಗಳಲ್ಲಿ ಟೆಂಡರ್ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು.
28. ಘನತ್ಯಾಜ್ಯದ ವೈಜ್ಞಾನಿಕ ವಿಲೇವಾರಿಗೆ ಇರುವ ಅಡೆತಡೆಗಳನ್ನು ನಿವಾರಿಸಲು ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು.

*ಸುಸ್ಥಿರ ಕೃಷಿಗೆ ಇಸ್ರೇಲ್ ಮಾದರಿ ಕೃಷಿ ಪದ್ಧತಿ: ನವೆಂಬರ್ 1 ರಂದು ಸಮಿತಿ ವರದಿ ಸಲ್ಲಿಕೆ*
29. ಇಸ್ರೇಲ್ ಮಾದರಿ ಕೃಷಿ ಪದ್ಧತಿ: ಈ ಯೋಜನೆಯನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸುವ ಬಗ್ಗೆ ಅಧ್ಯಯನ ನಡೆಸಿ, ಅನುಷ್ಠಾನದ ವಿಧಾನದ ಕುರಿತು ವರದಿ ನೀಡಲು ಸಹಕಾರ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿದ್ದು, ಈ ಸಮಿತಿಯು ನವೆಂಬರ್ 1 ರಂದು ವರದಿ ಸಲ್ಲಿಸಲಿದೆ.
30. ಈಗಾಗಲೇ ಕೃಷಿ ಸಚಿವರು, ತೋಟಗಾರಿಕೆ ಸಚಿವರು ಹಾಗೂ ಅಧಿಕಾರಿಗಳನ್ನೊಳಗೊಂಡ ನಿಯೋಗವು ಸೆಪ್ಟೆಂಬರ್ ತಿಂಗಳಿನಲ್ಲಿ ಇಸ್ರೇಲ್‍ಗೆ ಭೇಟಿ ನೀಡಿ ಅಧ್ಯಯನ ನಡೆಸಿದೆ.
31. ಸಮಿತಿಯು 7 ಸಭೆಗಳನ್ನು ನಡೆಸಿದೆಯಲ್ಲದೆ 7 ಬಾರಿ ಕ್ಷೇತ್ರ ಭೇಟಿ ಮಾಡಿದ್ದು, ಕೃಷಿ ಮತ್ತು ತೋಟಗಾರಿಕಾ ಸಚಿವರೊಂದಿಗೆ ಶಿಫಾರಸಿನ ಕುರಿತು ಚರ್ಚೆ ನಡೆಸಿದೆ. ನವೆಂಬರ್ 1 ರಂದು ವರದಿ ಸಲ್ಲಿಸಲಿದ್ದು, ನವೆಂಬರ್ ತಿಂಗಳಲ್ಲಿಯೇ ಸಚಿವ ಸಂಪುಟ ಸಭೆಯಲ್ಲಿಯೂ ಈ ಕುರಿತು ಚರ್ಚಿಸಿ, ಯೋಜನೆ ಅನುಷ್ಠಾನಕ್ಕೆ ಕ್ರಮ ವಹಿಸಲಾಗುವುದು.

*ಶಿಕ್ಷಣಕ್ಕೆ ಆದ್ಯತೆ: ಸಾವಿರ ಕೋಟಿ ವೆಚ್ಚದಲ್ಲಿ ಶಾಲೆ-ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿ- ಕ್ರಿಯಾ ಯೋಜನೆಗೆ ಅನುಮೋದನೆ*
32. ಸಾವಿರ ಕೋಟಿ ರೂ. ವೆಚ್ಚದಲ್ಲಿ ಸರ್ಕಾರಿ ಶಾಲೆ-ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಕ್ರಮ ವಹಿಸಲಾಗುತ್ತಿದೆ.
33. ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳ ಮೂಲಸೌಲಭ್ಯಕ್ಕೆ 450 ಕೋಟಿ ರೂ. ಗಳ ಕ್ರಿಯಾಯೋಜನೆಗೆ ಮಂಜೂರಾತಿ ನೀಡಲಾಗಿದ್ದು, ಈ ವರ್ಷ 150 ಕೋಟಿ ಅನುದಾನವನ್ನು ಹಂತ ಹಂತವಾಗಿ ಬಿಡುಗಡೆ ಮಾಡಲಾಗುವುದು. 1521 ಶಾಲೆ/ ಪದವಿಪೂರ್ವ ಕಾಲೇಜುಗಳಲ್ಲಿ 2711 ಕೊಠಡಿಗಳು, 86 ಪ್ರಯೋಗಾಲಯಗಳು ಹಾಗೂ 154 ಶೌಚಾಲಯ ನಿರ್ಮಿಸಲು ಉದ್ದೇಶಿಸಲಾಗಿದೆ.
34. 66 ಸರ್ಕಾರಿ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್‍ಗಳು, 8 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಮೂಲಸೌಕರ್ಯಕ್ಕೆ 470.37 ಕೋಟಿ ರೂ. ಗಳ ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಗಿದೆ.
35. ಪದವೀಧರರ ಎಂಪ್ಲಾಯೇಬಿಲಿಟಿ ಅನುಪಾತ ಅತಿ ಕಡಿಮೆ ಇರುವುದನ್ನು ಗಮನಿಸಿರುವ ಸರ್ಕಾರ ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ಮೂರು ಕೌಶಲ್ಯಾಧಾರಿತ ವಿಶ್ವವಿದ್ಯಾಲಯ ಸ್ಥಾಪನೆಗೆ ತೀರ್ಮಾನ ಕೈಗೊಂಡಿದೆ. ಆಯವ್ಯಯದಲ್ಲಿ 9 ಕೋಟಿ ರೂ. ಅನುದಾನ ನಿಗದಿ ಪಡಿಸಲಾಗಿದೆ. ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ.

‘ಶಾಲಾ ಸಂಪರ್ಕ ಸೇತು’ ಹೊಸ ಯೋಜನೆ
36. ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ ತೋಡು, ಹಳ್ಳ-ಕೊಳ್ಳಗಳನ್ನು ದಾಟಲು ಬಳಸುವ ಅಪಾಯಕಾರಿ ಸ್ಥಿತಿಯಲ್ಲಿರುವ ಸಣ್ಣ ತೂಗುಸೇತುವೆ, ಕಾಲು ಸಂಕಗಳ ಬದಲಿಗೆ ಶಾಶ್ವತ ಸೇತುವೆಗಳನ್ನು ನಿರ್ಮಿಸಲು ಶಾಲಾ ಸಂಪರ್ಕ ಸೇತು ಯೋಜನೆಯನ್ನು ಹೊಸದಾಗಿ ರೂಪಿಸಲಾಗಿದೆ.
37. ಮೊದಲ ಹಂತದಲ್ಲಿ ಕರಾವಳಿ ಭಾಗದ 3 ಜಿಲ್ಲೆಗಳು ಹಾಗೂ ಮಲೆನಾಡು ಭಾಗದ 4 ಜಿಲ್ಲೆಗಳ ಒಟ್ಟು 444 ತೂಗುಸೇತುವೆಗಳನ್ನು ಗುರುತಿಸಲಾಗಿದ್ದು, ಅಲ್ಲಿ ಶಾಶ್ವತ ಸಂಪರ್ಕ ಸೇತುವೆ ನಿರ್ಮಿಸಲಾಗುವುದು.
38. ಇದಕ್ಕಾಗಿ ಪ್ರಸಕ್ತ ವರ್ಷ 100 ಕೋಟಿ ರೂ. ಅನುದಾನ ಒದಗಿಸಲಾಗಿದೆ.
39. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಚುರುಕು: ರಾಜ್ಯದಲ್ಲಿ ಪ್ರಗತಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳಲು ಇರುವ ಅಡೆತಡೆಗಳನ್ನು ನಿವಾರಿಸಲು ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಮನ್ವಯ ಸಭೆಗಳನ್ನು ಕಾಲ ಕಾಲಕ್ಕೆ ನಡೆಸಲಾಗುತ್ತಿದೆ. ಭೂಸ್ವಾಧೀನ ಪ್ರಕ್ರಿಯೆ, ವಿದ್ಯುತ್ ಕಂಬಗಳ ಸ್ಥಳಾಂತರ ಮತ್ತಿತರ ಸಮಸ್ಯೆಗಳನ್ನು ಸಮನ್ವಯ ವಹಿಸಿ ಶೀಘ್ರವಾಗಿ ಪರಿಹರಿಸಿ ಕ್ರಮ ಕೈಗೊಳ್ಳಲು ಇದರಿಂದ ಅನುಕೂಲವಾಗಿದೆ.
40. ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಹಂತ 3 ರ ಕಾಮಗಾರಿಗಳು ಅಂತಿಮ ಹಂತದಲ್ಲಿದ್ದು, ಹಂತ 4 ರಡಿ 3,500 ಕೋಟಿ ರೂ ವೆಚ್ಚದಲ್ಲಿ 2720 ಕಿ.ಮೀ. ಉದ್ದದ ರಸ್ತೆ ಸುಧಾರಣೆ ಕೈಗೊಳ್ಳಲು ಉದ್ದೇಶಿಸಿದೆ.

*ದೆಹಲಿ ಭೇಟಿ: ಕೇಂದ್ರದಿಂದ ಹೆಚ್ಚಿನ ನೆರವು ಪಡೆಯುವ ಪ್ರಯತ್ನ, ವಿವಿಧ ಸಮಸ್ಯೆಗಳಿಗೆ ಪರಿಹಾರ*
41. ಒಟ್ಟು ಏಳು ಬಾರಿ ದೆಹಲಿಗೆ ಭೇಟಿ ನೀಡಿದ್ದು, ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಹಲವಾರು ವಿಷಯಗಳಲ್ಲಿ ರಾಷ್ಟ್ರಪತಿಗಳು, ಪ್ರಧಾನಮಂತ್ರಿಗಳು ಹಾಗೂ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ. ಈ ನಿಟ್ಟಿನಲ್ಲಿ ಕೇಂದ್ರದಿಂದ ಉತ್ತಮ ಸ್ಪಂದನೆ ದೊರೆತಿದೆ.
42. ಬೆಂಗಳೂರು ನಗರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ರಕ್ಷಣಾ ಇಲಾಖೆಯ ಭೂಮಿ ಹಸ್ತಾಂತರಕ್ಕೆ ಇರುವ ತೊಡಕುಗಳನ್ನು ಕೇಂದ್ರ ರಕ್ಷಣಾ ಸಚಿವರಿಗೆ ಮನವರಿಕೆ ಮಾಡಿ, ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಸಿ, ಇರುವ ತೊಡಕುಗಳನ್ನು ನಿವಾರಿಸಲಾಗಿದೆ.
43. ಮೊದಲ ಬಾರಿಗೆ ಹೆಸರು ಬೆಳೆಗೆ ಸಕಾಲದಲ್ಲಿ ಬೆಂಬಲ ಬೆಲೆ ಖರೀದಿ ಕೇಂದ್ರ ಸ್ಥಾಪಿಸಲು ಸಾಧ್ಯವಾಗಿದೆ.
44. ಅಲ್ಲದೆ ಹಿಂದಿನ ಬಾಕಿ 954 ಕೋಟಿ ರೂ. ಬಿಡುಗಡೆಗೂ ಅಗತ್ಯ ದಾಖಲೆ, ಮಾಹಿತಿಗಳನ್ನು ಒದಗಿಸಲಾಗಿದ್ದು, ಶೀಘ್ರವೇ ಈ ಮೊತ್ತ ಬಿಡುಗಡೆಯಾಗುವ ನಿರೀಕ್ಷೆ ಇದೆ.
45. ರಾಜ್ಯದಲ್ಲಿರುವ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ, ಮೆಗಾ ಡೈರಿ ಸ್ಥಾಪನೆಗೆ ನೆರವು, ಕೃಷಿ ಮಾರುಕಟ್ಟೆ ಉನ್ನತೀಕರಣ ಮತ್ತಿತರ ವಿಷಯಗಳ ಕುರಿತು ಕೇಂದ್ರದಿಂದ ಸಕಾರಾತ್ಮಕ ಸ್ಪಂದನೆ ವ್ಯಕ್ತವಾಗಿದೆ.
46. ಇದಲ್ಲದೆ ಇತ್ತೀಚೆಗೆ ಮೈಸೂರು ದಸರಾ ಉತ್ಸವಕ್ಕೆ ಆಗಮಿಸಿದ್ದ ಕೇಂದ್ರ ಸಚಿವ ಸುರೇಶ್ ಪ್ರಭು ಅವರನ್ನು ಭೇಟಿ ಮಾಡಿ, ರಾಜ್ಯದ ಕಾಫಿ, ತಂಬಾಕು ಹಾಗೂ ಏಲಕ್ಕಿ ಬೆಳೆಗಾರರ ಸಮಸ್ಯೆಗಳ ಕುರಿತು ಚರ್ಚಿಸಿದ್ದು, ಇವುಗಳ ಪರಿಹಾರಕ್ಕೆ ಕೇಂದ್ರ ಸಚಿವರಿಂದ ಸಕಾರಾತ್ಮಕ ಸ್ಪಂದನೆ ದೊರೆತಿದೆ.

*ವಿಶೇಷ ಘಟಕ ಯೋಜನೆಯಡಿ ದಾಖಲೆಯ 29 ಸಾವಿರ ಕೋಟಿ ಅನುದಾನ ನಿಗದಿ*
47. ಎಸ್‍ಸಿಪಿ / ಟಿಎಸ್‍ಪಿ ಯೋಜನೆಯಡಿ ದಾಖಲೆಯ 29 ಸಾವಿರ ಕೋಟಿ ರೂ. ಅನುದಾನ ನಿಗದಿಪಡಿಸಲಾಗಿದೆ. ಅನುದಾನದ ಸದ್ಬಳಕೆಗೆ ಮೊದಲ ಬಾರಿ ಸ್ಪಷ್ಟ ಮಾರ್ಗಸೂಚಿ ರಚನೆ ಮಾಡಲಾಗಿದ್ದು, ಅನುದಾನ ವೆಚ್ಚ ಮಾಡದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು ಮಾಡುವ ನಿಯಮವನ್ನು ಈ ಬಾರಿ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದೆ.
48. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಆನ್‍ಲೈನ್‍ನಲ್ಲಿ ವಿದ್ಯಾರ್ಥಿ ವೇತನ ಪಾವತಿಗೆ ಕ್ರಮ ವಹಿಸಲಾಗಿದ್ದು, ಇದರಿಂದ 56.69 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ.
ಬಡ ಗರ್ಭಿಣಿ, ಬಾಣಂತಿಯರಿಗೆ ಮಾಸಿಕ ಸಾವಿರ ರೂ. ನೆರವು
49. ಬಿಪಿಎಲ್ ಕುಟುಂಬಗಳ ಮಹಿಳೆಯರಿಗೆ ಹೆರಿಗೆಗೆ ಮುನ್ನ 3 ತಿಂಗಳು ಹಾಗೂ ಹೆರಿಗೆ ನಂತರ 3 ತಿಂಗಳು ಒಟ್ಟು 6 ತಿಂಗಳ ಕಾಲ ಮಾಸಿಕ ಸಾವಿರ ರೂ. ನೆರವು ನೀಡುವ ಮುಖ್ಯಮಂತ್ರಿಗಳ ಮಾತೃಶ್ರೀ ಯೋಜನೆ ನವೆಂಬರ್ 1 ರಿಂದ ಜಾರಿಗೆ ಬರಲಿದೆ. 350 ಕೋಟಿ ರೂ. ಅನುದಾನ ಮೀಸಲಿರಿಸಿದೆ.

*ಜನತಾ ದರ್ಶನ- 17 ಸಾವಿರಕ್ಕೂ ಹೆಚ್ಚು ಅರ್ಜಿ ಸ್ವೀಕಾರ, ಶೇ. 50ರಷ್ಟು ಇತ್ಯರ್ಥ*
50. ಜೂನ್ 1 ರಿಂದ ಈ ವರೆಗೆ ಸಾರ್ವಜನಿಕರಿಂದ 17,723 ಮನವಿಗಳನ್ನು ಸ್ವೀಕರಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಜನತಾ ದರ್ಶನ ನಡೆಸುವ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ಹೊರಡಿಸಲಾಗಿದ್ದು, ಹಲವು ಜಿಲ್ಲಾಧಿಕಾರಿಗಳು ಕ್ರಮ ವಹಿಸಿದ್ದಾರೆ.
51. ಕಳೆದ 4 ತಿಂಗಳಲ್ಲಿ ಸ್ವೀಕರಿಸಿದ ಮನವಿಗಳಲ್ಲಿ ಶೇ. 50 ರಷ್ಟು ಇತ್ಯರ್ಥಪಡಿಸಲಾಗಿದೆ.
52. ಬೆಂಗಳೂರಿನಲ್ಲಿ ಸೆಪ್ಟೆಂಬರ್ ಕೊನೆಯ ವಾರ ಉದ್ಯೋಗ ಮೇಳ ಯಶಸ್ವಿಯಾಗಿ ಏರ್ಪಡಿಸಲಾಯಿತು.
53. ಎಲ್ಲ ಜಿಲ್ಲೆಗಳಲ್ಲೂ ಉದ್ಯೋಗ ಮೇಳ ಏರ್ಪಡಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.
54. ಈ ವರೆಗೆ 10ಕ್ಕೂ ಹೆಚ್ಚು ಜಿಲ್ಲೆಗಳಿಗೆ ಭೇಟಿ ನೀಡಿದ್ದು, 6 ಜಿಲ್ಲಾಡಳಿತಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಇತರ ಎಲ್ಲ ಜಿಲ್ಲೆಗಳಿಗೂ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಲಾಗುವುದು.

ದೈವ ಪ್ರೇಕರಣೆಯಿಂದ ಪದವಿ ಸಿಕ್ಕಿದೆ, ಐದು ವರ್ಷ ನಾನೇ ಸಿಎಂ: ಎಚ್ಡಿಕೆ

ಬೆಂಗಳೂರು: ಇದು ನನಗೆ ದೇವರ ಕೊಟ್ಟ ಅಧಿಕಾರ. ದೇವರ ಪ್ರೇರಣೆಯಿಂದ ನಾನು ಮುಖ್ಯಮಂತ್ರಿ ಆಗಿದ್ದೇನೆ 5 ವರ್ಷ ನಾನು ಸಿಎಂ ಆಗಿರುತ್ತೇನೆ ಎಂದು ಸಿಎಂ ಎಚ್.ಡಿ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೈತ್ರಿ ಸರ್ಕಾರದ ಸಾಧನೆಗಳು ಹಾಗು ಸವಾಲುಗಳ ಕುರಿತು ಪ್ರೆಸ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಎಚ್ಡಿಕೆ ಕಾಂಗ್ರೆಸ್ ಸಹಕಾರದೊಂದಿಗೆ ನಾನು ಈ ರಾಜ್ಯದ ಸಿಎಂ ಆಗಿದ್ದೇನೆ ಮೈತ್ರಿ ಸರ್ಕಾರದ ನಾಯಕತ್ವ ನಾನು ವಹಿಸಿಕೊಂಡಿದ್ದೇನೆ ಬಜೆಟ್ ನಲ್ಲಿ ಘೋಷಣೆಯಾದ ಬಹುತೇಕ ಯೋಜನೆಗಳು ಆದೇಶವಾಗಿದೆ ಕೆಲವೊಂದು ಯೋಜನಗೆಳು ಕಾರ್ಯಗತವಾಗುತ್ತಿದೆ ರೈತರ ಸಾಲಮನ್ನಾ ಬಗ್ಗೆ ಸೂಕ್ತ ತೀರ್ಮಾನವಾಗಿದೆ ಆರ್ಥಿಕ ಶಿಸ್ತು ಗಮನದಲ್ಲಿಟ್ಟುಕೊಂಡು ಸಾಲಮನ್ನಾ ಮಾಡಲಾಗಿದೆ ಸರ್ಕಾರಿ ಶಾಲೆ ಸುಧಾರಿಸಲು ಸೂಕ ಕ್ರಮ ತೆಗದುಕೊಳ್ಳಲಾಗಿದೆ ಇದಕ್ಕಾಗಿ ೧೨೦೦ ಕೋಟಿ ಹಣ ಬಿಡುಗಡೆಯಾಗಿದೆ ಸರ್ಕಾರದಲ್ಲಿ ಹಣದ ಕೊರತೆ ಇಲ್ಲ
ಹೆಚ್ಚುವರಿಯಾಗಿ ಲೋಕೋಪಯೋಗಿ, ಸಣ್ಣ ನೀರಾವರಿ ಇಲಾಖೆ ಸೇರಿದಂತೆ ಕೆಲವೊಂದು ಇಲಾಖೆ ಹಣ ಕೇಳುತ್ತಿದೆ ಎಂದ್ರು.

ಬಿಜೆಪಿಯವ್ರು ಶ್ವೇತಪತ್ರ ಹೊರಡಿಸಿ‌ ಎನ್ನುತ್ತಾರೆ ಸರಕಾರ ಟೆಕಾಫ್ ಆಗಿಲ್ಲ, ಕೋಮಾದಲ್ಲಿದೆ ಎನ್ನುತ್ತಾರೆ ಟೀಕೆ ಮಾಡುವುದು ಅವರ ಕರ್ತವ್ಯ ನಿರಿಕ್ಷೆಗೂ ಹೆಚ್ಚು ಹಣವನ್ನ ನಾವು ನೀಡುತ್ತಿದ್ದೇವೆ ೧ ಕೋಟಿ ೪ ಲಕ್ಷ ಅನ್ನಭಾಗ್ಯ ಯೋಜನೆ ಫಲಾನುಭವಿ ಇದ್ರು ಈಗ ೧ ಕೋಟಿ ೨೯ ಲಕ್ಷ ಆಗಿದ್ದಾರೆ ೭ಕೆಜಿ ಅಕ್ಕಿ ನೀಡಲು ಹೆಚ್ಚುವರಿ ೧೯೦೦ ಕೋಟಿ ರೂ ನೀಡಬೇಕಾಗಿದೆ ಹಿಂದಿನ ಸರ್ಕಾರದ ಘೋಷಣೆಯಿಂದ ಅಭಿವೃದ್ಧಿಗೆ ಹಣ ನೀಡಲ್ಲ ಎನ್ನಲು ಸಾಧ್ಯವಿಲ್ಲ ಎಲ್ಲ ಕ್ಷೇತ್ರದಲ್ಲಯೂ ಮತ್ತೆ ಹಣ ನೀಡುತ್ತಿದ್ದೇವೆ ಎಂದ್ರು.

ಬೆಂಗಳೂರಿನ ಫೆರಿಫಿರಲ್ ರಸ್ತೆ ನಿರ್ಮಾಣಕ್ಕೆ ಸರ್ಕಾರ ಬದ್ಧ
ಫೆರಿಪಿರಲ್ ರಸ್ತೆ ನಿರ್ಮಾಣಕ್ಕೆ ಸರಕಾರ ಜೀವ ಕೊಡಲಿದೆ ೧೨ ವರ್ಷಗಳಿಂದ ಇದು ನೆನಗುದಿಗೆ ಬಿದ್ದಿದೆ ಮುಂದಿನ ಕ್ಯಾಬಿನೆಟ್ ನಲ್ಲಿ ಈ ಬಗ್ಗೆ ತೀರ್ಮಾನ ಮಾಡಿ ಇನ್ನೊಂದು ತಿಂಗಳಲ್ಲಿ ಟೆಂಡರ್ ಕರೆಯಲಾಗುತ್ತದೆ ಈ ಯೋಜನೆಗೆ ೬೦೦೦ ಕೋಟಿ ನೀಡುತ್ತೇವೆ ಎಲಿವೇಟಡ್ ರಸ್ತೆ ನಿರ್ಮಾಣಕ್ಕೂ ಸರ್ಕಾರ ಬದ್ದವಾಗಿದೆ ಎಂದ್ರು.

ನನ್ನ ಕಚೇರಿಯಲ್ಲಿ ಪೇಮೆಂಟ್ ಸೀಟ್ ಇಲ್ಲ ಓನ್ಲಿ ಮೇರಿಟ್ ಸೀಟ್ ಮೇರಿಟ್ ಇದ್ದವರನ್ನ ಮಾತ್ರ ವರ್ಗಾವಣೆ ಮಾಡಲಾಗುತ್ತಿದೆ.ಅಕ್ರಮ ಬಾರ್ , ಮಟ್ಕಾ ,ಕ್ಲಬ್ ದಂಧೆ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಇಂಥವರನ್ನ ಬಲಿಯಾಕಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದು ಅಧಿಕಾರಿಗಳಿಗೆ ಮುಕ್ತ ಅವಕಾಶ ಕೊಡಲಾಗಿದೆ ಎಲ್ಲ ರಸ್ತೆಗಳಲ್ಲಿ ಸಿಸಿ ಟಿವಿ ಅಳವಡಿಕೆಗೆ ಕ್ರಮ ಕೈಗೊಂಡಿದ್ದು ಕೆಲವೊಂದು ರಸ್ತೆಗಳಲ್ಲಿ ಕಸ ನೋಡಿದ್ರೆ ನಾಚಿಕೆಯಾಗುತ್ತೆ ಇದು ನನ್ನ ಗಮನಕ್ಕೆ ಬಂದಿದೆ ಈ ಬಗ್ಗೆ ಸೂಕ್ತ ತೀರ್ಮಾನ ಮಾಡುತ್ತೇನೆ ಎಂದ್ರು.

ಕೊಡಗು ಸಂತಸ್ಥರಿಗೆ ಸರ್ಕಾರ ಸ್ಪಂದಿಸಿದೆ ಕೊಡಗು ಜನರ ಪುನರುಜ್ಜೀವನಕ್ಕೆ ಕ್ರಮ ತೆಗದುಕೊಳ್ಳಲಾಗಿದೆ ಒಂದು ಮನೆಗೆ ೧೦ ಲಕ್ಷ ವೆಚ್ಚದಲ್ಲಿ ನಿರ್ಮಾಣ ಎರಡು ಬೆಡ್ ರೂಂ ಇರುವ ಮನೆಗಳ ನಿರ್ಮಾಣ ೧೦೦೦ ಮನೆಗಳು ನಿರ್ಮಾಣಕ್ಕೆ ಸೂಚನೆ ನೀಡಿದ್ದೇನೆ ಎಂದ್ರು.

ನಾನು ಟೆಂಪಲ್ ರನ್ ಮಾತ್ರ ಮಾಡುತ್ತಿಲ್ಲ ರಾಜ್ಯದ ಅಭಿವೃದ್ಧಿ ಬಗ್ಗೆ ಗಮನ ಕೊಟ್ಟಿದ್ದೇನೆ ನಾನು ಸಿಎಂ ಆದ ಮೇಲೆ ಟೆಂಪಲ್ ರನ್ ಮಾಡುತ್ತಿಲ್ಲ ಮೊದಲಿನಿಂದಲೂ ನಾನು ಟೆಂಪಲ್ ರನ್ ಮಾಡುತ್ತಿದ್ದೇನೆ ಟೆಂಪಲ್ ರನ್ ಜೊತೆ ಪ್ರಧಾನಿ, ಕೇಂದ್ರ ಮಂತ್ರಿಗಳನ್ನ ಭೇಟಿಯಾಗುತ್ತಿದ್ದೇನೆ ರಾಜ್ಯದ ಅಭಿವೃದ್ಧಿ ಬಗ್ಗೆ ಕೇಂದ್ರ ಮಂತ್ರಿಗಳನ್ನ ಭೇಟಿಯಾಗೋದು ತಪ್ಪಾ? ಅವ್ರ ಬಳಿ ಡೀಲ್ ಮಾಡೋದಕ್ಕೆ ಪದೇ ಪದೇ ಹೋಗ್ತಿದ್ದಾರೆ ಎಂದು ಹೇಳುತ್ತಾರೆ ಟೀಕೆ ಮಾಡಬೇಕೆಂದು ಟೀಕೆ ಮಾಡೋದು ಬೇಡ
೫ ತಿಂಗಳಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ ಎಂದ್ರು.

ಐದು ಕ್ಷೇತ್ರ ಉಪಚುನಾವಣೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಗೆಲ್ಲಲ್ಲಿದೆ ಕಾಂಗ್ರೆಸ್- ಜೆಡಿಎಸ್ ವಿಶ್ವಾಸದಿಂದ ಕೆಲಸ ಮಾಡುತ್ತಿದೆ ಸಣ್ಣಪುಟ್ಟ ಸಮಸ್ಯೆ ಇರೋದು ಸಹಜ‌ ಇದರಿಂದ ಮೈತ್ರಿ ಸರ್ಕಾರಕ್ಕೆ ಧಕ್ಕೆ ಆಗಲ್ಲ ಹೊಸ ರಾಜಕೀಯ ಪರಿವರ್ತನೆ ಕರ್ನಾಟಕದಿಂದ ಪ್ರಾರಂಭವಾಗಲಿದೆ ಕರ್ನಾಟಕದ ರಾಜಕಾರಣ ಮುಂದಿನ ಲೋಕಸಭೆ ಚುನಾವಣೆ ಮೇಲೆ ನೇರ ಪರಿಣಾಮ ಬೀರಲಿದೆ ಎಂದ್ರು.

ನಾನೆಷ್ಟು ಕಠೋರ ಅಂತಾ ತೋರಿಸಿಕೊಡಬೇಕಾಗಲಿದೆ:ಜೆಡಿಎಸ್ ಎಂಎಲ್ಎಗೆ ಡಿವಿಎಸ್ ತರಾಟೆ

ಬೆಂಗಳೂರು: ಸದಾ ಹಸನ್ಮುಖಿಯಾಗಿ ನಗುನಗುತ್ತಾ ಮಾತನಾಡುವ ಕೇಂದ್ರ ಸಚಿವ ಡಿ.ವಿ ಸದಾನದಗೌಡ ಇಂದು ಫುಲ್ ಗರಂ ‌ಆಗುದ್ರು.ನಾನು ಎಷ್ಟೇ ನಗು ನಗುತ್ತಾ ಇರಬಹುದು, ಆದರೆ ಅಷ್ಟೇ ಕಠೋರವಾಗಿದ್ದಾರೆ ಅಂತಾ ತೋರಿಸಿ ಕೊಡುತ್ತೇನೆ ಎಂದು ಜೆಡಿಎಸ್ ಶಾಸಕ ಮಂಜುನಾಥ್ ಗೆ ಎಚ್ಚರಿಕೆ ನೀಡಿದ್ದಾರೆ.

ದಾಸರಹಳ್ಳಿ ಕ್ಷೇತ್ರದ ಮಲ್ಲಸಂದ್ರ ವಾರ್ಡ್​ನಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ಅಮೃತ್ ಯೋಜನೆಯ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆಯನ್ನು ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ನೆರವೇರಿಸಿದರು. ನಂತರ ಮಾತನಾಡಿದ ಅವರು, ನನ್ನ ಮನಸ್ಸಿಗೆ ಇತ್ತೀಚಿನ ದಿನಗಳಲ್ಲಿ ಬಹಳ‌ ನೋವಾದ ಸಂಗತಿಗಳಿವೆ. ನಾನು ಒಂದು ಡೈರಿ ಇಟ್ಟುಕೊಂಡಿದ್ದೇನೆ,ಯಾವ್ಯಾವ ಅಧಿಕಾರಿಗಳು ಏನೇನು ಮಾಡಿದ್ದಾರೆ ಅಂತಾ ಅವರ ಹೆಸರು ನೋಟ್ ಮಾಡಿಕೊಂಡಿದ್ದೇನೆ. ಅಧಿಕಾರ ಶಾಶ್ವತ ಅಲ್ಲ, ದಿನ ಬಂದಾಗ ಅದನ್ನು ಬಿಚ್ಚಿಡುತ್ತೇವೆ. ನಾವೇನು ಸುಮ್ಮನೆ ಬಿಡ್ತೀವಿ ಅಂತಾ ಅಂದುಕೊಳ್ಳೋದು ಬೇಡ. ಕೇಂದ್ರ ಸರ್ಕಾರದ ಅನುದಾನವನ್ನು ದಾಸರಹಳ್ಳಿಯಲ್ಲಿ ಸರಿಯಾಗಿ ಬಳಕೆ ಮಾಡಿಕೊಳ್ಳುತ್ತಿಲ್ಲ, ಇದು ಒಂದು ರೀತಿಯಲ್ಲಿ ಇಗೋ ಪ್ರಾಬ್ಲಂ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಲೋಕಸಭಾ ಸದಸ್ಯರ ಅನುದಾನದ ಬಗ್ಗೆ ಬೋರ್ಡ್ ಹಾಕಿದರೆ ಕಿತ್ತು ಹಾಕುತ್ತಾರೆ. ಈ ರೀತಿ ಸಣ್ಣ ರಾಜಕಾರಣ ಮಾಡುವವರು ಸಮಾಜ ಸುಧಾರಣೆ ಮಾಡುವವರಲ್ಲ. ಅವರು ಯಾವುದೋ ಒಂದು ಅಡ್ಡದಾರಿಯಿಂದ ಅಧಿಕಾರಕ್ಕೆ ಬಂದಿರಬಹುದು. ಅಧಿಕಾರಕ್ಕೆ ಬಂದ ಕೂಡಲೇ ಇಡೀ ಊರನ್ನು ಅವರಿಗೇ ಬರೆದುಕೊಟ್ಟಿಲ್ಲ. ನಮ್ಮ ಪಕ್ಷಕ್ಕೂ ಇಲ್ಲಿ 75 ಸಾವಿರ ವೋಟ್ ಸಿಕ್ಕಿದೆ, ನಮ್ಮ ಕಾರ್ಯಕರ್ತರನ್ನು ರಕ್ಷಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಜೆಡಿಎಸ್ ಶಾಸಕ ಮಂಜುನಾಥ್ ವಿರುದ್ಧ ಹರಿಹಾಯ್ದರು.

ನಾಲ್ಕು ತಿಂಗಳಲ್ಲಿ ದಾಸರಹಳ್ಳಿ ಅಭಿವೃದ್ಧಿ ಎಷ್ಟು ಕುಂಠಿತ ಆಗಿದೆ ಅಂತ ಆ ಶಾಸಕರನ್ನೇ ಕೇಳಿ, ನಾನು ಅವರ ಹೆಸರು ಕೂಡಾ ಹೇಳಲ್ಲ. ‌ಸದಾನಂದ ಗೌಡ ಎಷ್ಟೇ ನಗು ನಗುತ್ತಾ ಇರಬಹುದು, ಆದರೆ ಸದಾನಂದ ಗೌಡ ಅಷ್ಟೇ ಕಠೋರವಾಗಿದ್ದಾರೆ ಅಂತಾ ತೋರಿಸಿ ಕೊಡುತ್ತೇನೆ. ಒಬ್ಬ ಕೇಂದ್ರ ಸಚಿವ ಎಲ್ಲರಿಗೂ ಫೋನ್ ಮಾಡಿ ಕಾರ್ಯಕ್ರಮಕ್ಕೆ ಕರೆಯಲು ಆಗಲ್ಲ, ಅದೆಲ್ಲವೂ ಅಧಿಕಾರಿಗಳ ಕೆಲಸ ಎಂದರು.