ಸನ್ನಡತೆಯ ಆಧಾರದ ಮೇಲೆ ಬಂಧಿಗಳ ಅವಧಿ ಪೂರ್ವ ಬಿಡುಗಡೆ ಕಾರ್ಯಕ್ರಮ

ಬೆಂಗಳೂರು: ಕಾರಾಗೃಹ ಇಲಾಖೆವತಿಯಿಂದ ಸೆಪ್ಟೆಂಬರ್ 9 ರಂದು ಬೆಳಿಗ್ಗೆ 11.30 ಗಂಟೆಗೆ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಬಂಧಿಗಳ ಸನ್ನಡತೆಯ ಆಧಾರದ ಮೇಲೆ ಅವಧಿಪೂರ್ವ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಪಾಲ್ಗೊಳ್ಳಲಿದ್ದಾರೆ.  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೋಕಸಭಾ ಸದಸ್ಯ ಡಿ.ಕೆ. ಸುರೇಶ್ ಅವರು ವಿಶೇಷ ಅತಿಥಿಗಳಾಗಿ ಭಾಗವಹಿಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಂಗಳೂರು ದಕ್ಷಿಣದ ಶಾಸಕ ಎಂ. ಕೃಷ್ಣಪ್ಪ ಅವರು ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಬಿಡಿಎ ಫ್ಲ್ಯಾಟ್ ಖರೀದಿದಾರರಿಗೆ ಹೊಸ ಆಫರ್: 1 ಫ್ಲ್ಯಾಟ್ ಖರೀದಿಗೆ ಶೇ.5, 10ಕ್ಕಿಂತ ಹೆಚ್ಚು ಫ್ಲ್ಯಾಟ್ ಖರೀದಿಗೆ ಶೇ.10 ರಷ್ಟು ರಿಯಾಯಿತಿ

ಬೆಂಗಳೂರು: ಮೈಸೂರು ರಸ್ತೆ ಭಾಗದಲ್ಲಿ ಬಿಡಿಎ ನಿರ್ಮಿಸಿರುವ ಬಿಡಿಎ ಫ್ಲ್ಯಾಟ್ ಖರೀದಿಗೆ ಮುಂದಾಗುವ ಸಾರ್ವಜನಿಕರಿಗೆ ಶೇ.೫ ರಷ್ಟು ಹಾಗೂ ಒಮ್ಮೆಲೆ ೧೦ಕ್ಕೂ ಹೆಚ್ಚು ಫ್ಲ್ಯಾಟ್ ಖರೀದಿಸುವವರಿಗೆ ಶೇ.೧೦ ರಷ್ಟು ರಿಯಾಯಿತಿ ನೀಡಲು ನಿರ್ಧರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು.

ಬಿಡಿಎ ಕಚೇರಿಯಲ್ಲಿ ನಡೆದ ಬಿಡಿಎ ಆಡಳಿತ ಮಂಡಳಿ ಸಭೆ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಡಾ.ಜಿ.ಪರಮೇಶ್ವರ್, ಮೈಸೂರು ರಸ್ತೆ ಭಾಗದಲ್ಲಿ ಅಪಾರ್ಟ್‌ಮೆಂಟ್ ನಿರ್ಮಿಸಿದ್ದು, ಇಲ್ಲಿ ಫ್ಲ್ಯಾಟ್‌ಗಳ ಖರೀದಿಗೆ ಮುಂದಾಗುವವರಿಗೆ ಆಫರ್ ನೀಡಲು ತೀರ್ಮಾನಿಸಲಾಗಿದೆ. ಇದರಿಂದ ಶೀಘ್ರವೇ ಅಪಾರ್ಟ್‌ಮೆಂಟ್ ಖರೀದಿಯಾದರೆ‌ ಮುಂದಿನ ಪ್ರಾಜೆಕ್ಟ್ ಕೈಗೊಳ್ಳಲು ಸಾಧ್ಯ. ಹೀಗಾಗಿ ರಿಯಾಯಿತಿ ಘೋಷಿಸಿದ್ದೇವೆ ಎಂದರು.

ಡಾ.ಶಿವರಾಂ ಕಾರಂತರ ಬಡಾವಣೆ ೧೭ ಗ್ರಾಮಗಳಲ್ಲಿ 3564 ಎಕರೆ ಜಮೀನು ಸ್ವಾಧೀನ ಮಾಡಿ, ಸಾರ್ವಜನಿಕರಿಗೆ ನಿವೇಶನ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.‌ ಈ ಪ್ರಕರಣ ಕುರಿತು ಸುಪ್ರೀಂಕೋರ್ಟ್ ಮೂರು ತಿಂಗಳೊಳಗೆ ನೋಟಿಫೈ ಮಾಡಲು ಆದೇಶ ನೀಡಿತ್ತು. ಅಂತೆಯೇ, ನಿವೇಶನ ಹಂಚಿಕೆ ಸಂಬಂಧ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಿ, ಸಚಿವ ಸಂಪುಟದಿಂದ ಒಪ್ಪಿಗೆ ಪಡೆದುಕೊಳ್ಳಲಾಗುವುದು ಎಂದು ಹೇಳಿದರು.

ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣಕ್ಕೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ನಿರ್ಧರಿಸಲಾಗಿದೆ. ೬೫ ಕಿ.ಮೀ. ಉದ್ದದ ರಸ್ತೆ ನಿರ್ಮಾಣಕ್ಕೆ ೫ ಸಾವಿರ ಕೋಟಿ ರೂಪಾಯಿ ಅಂದಾಜು ಮಾಡಲಾಗಿದೆ. ಜೈಕಾ ಕಂಪನಿ ಸಹಯೋಗದೊಂದಿಗೆ ಈ ಯೋಜನೆ ಕಾರ್ಯಗತವಾಗಲಿದೆ ಎಂದು ತಿಳಿಸಿದರು.

ಹಳೇ ಮದ್ರಾಸ್ ರಸ್ತೆ ಕೋಣದಾಸಪುರದ ಬಳಿ ೧೬೫ ಎಕರೆಯಲ್ಲಿ ಇನೋವೇಟಿವ್ ಸಿಟಿ ನಿರ್ಮಾಣಕ್ಕೂ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಹಿಂದಿನ ಸರ್ಕಾರದಲ್ಲಿಯೇ ಈ ಸಂಬಂಧ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದೀಗ ಈ ಯೋಜನೆಯನ್ನು ಬಿಡಿಎ ಕೈಗೆತ್ತಿಕೊಂಡಿದ್ದು, ಆದಷ್ಟು ಶೀಘ್ರವೇ ಯೋಜನೆಯ ವರದಿ ಸಲ್ಲಿಸಲು ಸಂಬಂಧ ಪಟ್ಟ ಖಾಸಗಿ ಕಂಪನಿಗೆ ಸೂಚಿಸಲಾಗಿದೆ. ಇದರ ಡಿಪಿಆರ್ ಆದ ಮೇಲೆ ಅಂದಾಜು ವೆಚ್ಚ ತಿಳಿಯಲಿದೆ ಎಂದರು.

ಬನಶಂಕರಿ ೬ನೇ ಹಂತದಲ್ಲಿ ೬ ಎಕರೆಯಲ್ಲಿ ಪಿಪಿಪಿ ಮಾದರಿಯಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ ಕಟ್ಟಲು ತೀರ್ಮಾನಿಸಲಾಗಿದೆ.

ತುಮಕೂರು ರಸ್ತೆ ದಾಸನಪುರ ಹಳ್ಳಿದಲ್ಲಿ ವಿಲ್ಲಾ ಕಟ್ಟಿದ್ದೇವೆ. ಇದಕ್ಕೆ ಬೇಡಿಕೆ ಹೆಚ್ಚುತ್ತಿದೆ. ಹೀಗಾಗಿ‌ ಮುಂದಿನ ದಿನಗಳಲ್ಲಿ ೨೫೦ ಕೋಟಿ ರು. ವೆಚ್ಚದಲ್ಲಿ ಇನ್ನಷ್ಟು ವಿಲ್ಲಾ ಕಟ್ಟಲು ಮಂಜೂರಾತಿ ಕೊಟ್ಟಿದ್ದೇವೆ ಎಂದು ಮಾಹಿತಿ ನೀಡಿದರು.

೨೫ಕ್ಕೆ ಕೆಂಪೇಗೌಡ ನಿವೇಶನ ಹಂಚಿಕೆ

ಇದೇ ವೇಳೆ ಮಾತನಾಡಿದ ಪರಮೇಶ್ವರ್, ಕೆಂಪೇಗೌಡ ಬಡಾವಣೆಯಲ್ಲಿನ ೫ ಸಾವಿರ ನಿವೇಶನವನ್ನು ಸೆ.25ಕ್ಕೆ ಲಾಟರಿ ಮೂಲಕ ಹಂಚಿಕೆ ಮಾಡಲು ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿದರು.

ಉಡುಪಿ  ಶ್ರೀಕೃಷ್ಣನ ದರ್ಶನ ಪಡೆದ  ಸಿಎಂ!

ಉಡುಪಿ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ಬೆಳಿಗ್ಗೆ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ದೇವರ ದರ್ಶನ ಪಡೆದರು.

ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಕರಾವಳಿ ಭಾಗಕ್ಕೆ ಭೇಟಿ ನೀಡಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಮಠದ ಪರ್ಯಾಯ ಮಠಾಧೀಶ ಪಲಿಮಾರು ವಿದ್ಯಾಧೀಶ ತೀರ್ಥ ಸ್ವಾಮಿಗಳ ಆಶೀರ್ವಾದ ಪಡೆದರು.

ಸ್ಥಳೀಯ ಸಂಸ್ಥೆಯಲ್ಲೂ ಮೈತ್ರಿ ಮುಂದುವರಿಕೆ: ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ಬೆಂಗಳೂರು: ಸ್ಥಳೀಯ ಸಂಸ್ಥೆಯಲ್ಲೂ ಕಾಂಗ್ರೆಸ್ ಹಾಗೂ ಜೆಡಿಎಸ್‌ ಮೈತ್ರಿ ಮುಂದುವರೆಸಲು ನಿರ್ಧರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು.

ಸದಾಶಿವನಗರ ಬಿಡಿಎ ಕಚೇರಿಯಲ್ಲಿ ಎಲ್ಲ ಸಚಿವರು ಹಾಗೂ ಕಾಂಗ್ರೆಸ್ ಮುಖಂಡರು ಭೇಟಿ ಮಾಡಿ ಚರ್ಚಿಸಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು , ಸ್ಥಳೀಯ ಚುನಾವಣೆಯಲ್ಲಿ ಬಹುತೇಕ ಕಡೆ ಕಾಂಗ್ರೆಸ್ ಗೆಲುವು ಪಡೆದಿದೆ.‌ ಕೆಲವೆಡೆ ಅತಂತ್ರ ಸ್ಥಿತಿ ಇದೆ. ಹೀಗಾಗಿ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡು ಅಲ್ಲಿಯೂ ನಾವೇ ಅಧಿಕಾರ ರಚಿಸಲು ನಿರ್ಧರಿಸಿದ್ದೇವೆ ಎಂದರು.

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ, ಎಲ್ಲಾ ಜಿಲ್ಲಾ ಸಚಿವರುಗಳು ತಮ್ಮ‌ ಕ್ಷೇತ್ರಗಳಿಗೆ ತೆರಳುವಂತೆಯೂ ಸೂಚನೆ ನೀಡಲಾಗಿದೆ. ಕೆಲ ಜಿಲ್ಲೆಗಳಲ್ಲಿ ಅತಿವೃಷ್ಠಿ, ಅನಾವೃಷ್ಠಿ ಇದೆ. ಈ ಬಗ್ಗೆ ಹೆಚ್ಚು ಗಮನ ನೀಡಿ, ಸಮಸ್ಯೆ ಆಲಿಸಲು ಜಿಲ್ಲೆಗಳಿಗೆ ತೆರಳುವಂತೆ ಹೇಳಲಾಗಿದೆ. ಹಾಗೆಯೇ, ಚುನಾವಣೆ ಸಂಬಂಧ ಈಗಿಂದಲೇ ತಯಾರಿ ನಡೆಸಲು ನಿರ್ದೇಶನ ನೀಡಿದ್ದೇವೆ ಎಂದರು.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವರಾದ ಡಿ.ಕೆ. ಶಿವಕುಮಾರ್, ಜಮೀರ್ ಅಹಮದ್, ಶಿವಾನಂದ ಪಾಟೀಲ್, ಕೃಷ್ಣ ಭೈರೇಗೌಡ, ಪ್ರಿಯಾಂಕ ಖರ್ಗೆ ಇತರರು ಇದ್ದರು.

ಹಲವು ಸರ್ಕಾರಿ ಕಚೇರಿಗಳು ಉತ್ತರ ಕರ್ನಾಟಕಕ್ಕೆ ಸ್ಥಳಾಂತರ : ಸಚಿವ ಕೃಷ್ಣಬೈರೇಗೌಡ

ಬೆಂಗಳೂರು:ಹಲವು ವರ್ಷಗಳ ಬೇಡಿಕೆಯಂತೆ ಹಲವು ಸರ್ಕಾರಿ ಕಛೇರಿಗಳನ್ನು ಉತ್ತರ ಕರ್ನಾಟಕಕ್ಕೆ ಸ್ಥಳಾಂತರ ಇಂದಿನ ಸಚಿವ ಸಂಪುಟದ ಸಭೆಯಲ್ಲಿ ತತ್ವಿಕವಾಗಿ ಒಪ್ಪಿಗೆ ನೀಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಕಾನೂನು, ಸಂಸದೀಯ ವ್ಯವಹಾರ ಸಚಿವ ಕೃಷ್ಣಬೈರೇಗೌಡ ರವರು ಹೇಳಿದ್ದಾರೆ.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಚಿವ ಸಂಪುಟ ಸಭೆಯ ನಂತರ ಮಾಹಿತಿ ನೀಡಿದ ಅವರು ಉತ್ತರ ಕರ್ನಾಟಕ ಯಾವ ಜಿಲ್ಲೆಗಳಲ್ಲಿ ಯಾವ ಇಲಾಖೆಗಳನ್ನು ಸ್ಥಳಾಂತರಿಸಬೇಕು ಎಂಬುದರ ಬಗ್ಗೆ ಅಂತಿಮವಾಗಿ ತೀರ್ಮಾನಗಳ ಕೈಗೊಳ್ಳಲು ಸಚಿವ ಸಂಪುಟದ ಉಪ ಸಮಿತಿಯನ್ನು ರಚಿಸಲಾಗುವುದು. ಮೊದಲ ಹಂತದಲ್ಲಿ ಕೆಬಿಜೆಎನ್‍ಎಲ್ (ಕೃಷ್ಣ ಭಾಗ್ಯ ಜಲ ನಿಗಮ) ಕರ್ನಾಟಕ ನೀರಾವರಿ ನಿಗಮ, ಕರ್ನಾಟಕ ಕಬ್ಬು ಅಭಿವೃದ್ಧಿ ನಿರ್ದೇಶನಾಲಯ, ಕರ್ನಾಟಕ ವಿದ್ಯುತ್ ಮಗ್ಗ ನಿರ್ದೇಶನಾಲಯ, ಕೆಯುಎಸ್‍ಡಬ್ಲ್ಯೂಡಿಬಿ (ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ) ಗಳನ್ನು ಉತ್ತರ ಕರ್ನಾಟಕಕ್ಕೆ ಸ್ಥಳಾಂತಿರಲಸು ಸಚಿವ ಸಂಪುಟ ತಾತ್ವಿಕ ಒಪ್ಪಿಗೆ ನೀಡಿದೆ. ಇಬ್ಬರು ಮಾಹಿತಿ ಆಯುಕ್ತರಲ್ಲಿ ಒಬ್ಬ ಮಾಹಿತಿ ಆಯುಕ್ತರನ್ನು ಹಾಗೂ ಮಾನವಹಕ್ಕುಗಳ ಒಬ್ಬ ಸದಸ್ಯರನ್ನು ಉತ್ತರ ಕರ್ನಾಟಕ ಜಿಲ್ಲೆಗೆ ಸ್ಥಳಾಂತರಿಸಲು ನಿರ್ಣಯ ಕೈಗೊಳ್ಳಲಾಗಿದೆ. ಈ ವಿಷಯ ಸಂಪುಟ ಸಭೆಯ ಪಟ್ಟಿಯಲ್ಲಿ ಇಲ್ಲದಿದ್ದರು, ಮುಖ್ಯ ಕಾರ್ಯದರ್ಶಿಗಳು ಮಂಡಿಸಿದ ನಿರ್ಣಯದ ಮೇಲೆ ನಿರ್ಧಾರ ಕೈಗೊಳ್ಳಲಾಯಿತು ಎಂದು ಅವರು ತಿಳಿಸಿದರು.

ಸಚಿವ ಸಂಪುಟ ಸಭೆಯ ಇತರ ನಿರ್ಣಯಗಳು

1.ಐಇಎಸ್‍ಎ (ಇಂಡಿಯಾ ಎಲೆಕ್ಟ್ರಾನಿಕ್ ಮತ್ತು ಸೆಮಿಕಂಡ್ಟಕರ್ ಅಸೋಷಿಯೇಷನ್ ಸಂಸ್ಥೆಯ ಸಹಯೋಗದೊಂದಿಗೆ ಬೆಂಗಳೂರಿನಲ್ಲಿ ಸೆಮಿಕಂಡ್ಟಕರ್ ಫಾಭ್ಯಲೆಸ್ ಆಕ್ಸಲರೇಟರ್ ಲ್ಯಾಬ್ (ಎಸ್‍ಎಫ್‍ಎಎಲ್) ಸ್ಥಾಪನೆ. ಇದು ದೇಶದಲ್ಲೇ ಪ್ರಥಮವಾಗಿದ್ದು ಒಟ್ಟು 56.31 ಕೋಟಿ ರೂ ವೆಚ್ಚದಲ್ಲಿ ಸ್ಥಾಪನೆಯಾಗುತ್ತದೆ. ಇದರಲ್ಲಿ 21.53 ಕೋಟಿ ರೂ. ಕರ್ನಾಟಕ ಸರ್ಕಾರದ ಪಾಲು.

2.ಬೆಟ್ತಿ ನದಿಗೆ ನಿರ್ಮಾಣ ಮಾಡಲಾಗುತ್ತಿರುವ ಸೇತುವೆಗೆ 14 ಕೋಟಿ ರೂ. ಗಳ ವೆಚ್ಚಕ್ಕೆ ಅನುಮೋದನೆ ನೀಡಲಾಗಿತ್ತು. ಇದನ್ನು 23.06 ಕೋಟಿಗೆ ಒಪ್ಪಿಗೆ ನೀಡಲಾಗಿದೆ.

3.ರಾಮನಗರ ಪಟ್ಟಣದಲ್ಲಿ ವಿವಿಧ ಇಲಾಖೆಗಳ ಕಚೇರಿ ಸಂಕೀರ್ಣಕ್ಕಾಗಿ 30 ಕೋಟಿ ರೂ.ಗಳ ವೆಚ್ಚದ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿತ್ತು. ಅದನ್ನು ಪರಿಷ್ಕøರಿಸಿ 40.17 ಕೋಟಿ ವೆಚ್ಚದ ಕಾಮಗಾರಿಗಳಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

4.ರಾಮನಗರ ಮತ್ತು ಚನ್ನಪಟ್ಟಣ ನಡುವೆ ಬರುವ 16 ಗ್ರಾಮಗಳಿಗೆ ನೆಟ್‍ಕಲ್ ಜಲಾಶಯದಿಂದ ಕುಡಿಯುವ ನೀರು ಸರಬರಾಜು ಮಾಡಲು 450 ಕೋಟಿ ರೂ ವೆಚ್ಚದ ಯೋಜನೆಗೆ ಅನುಮೋದನೆ ನೀಡಲಾಗಿದೆ.

5.ಹಲವು ಖಾಸಗಿ ಸಂಸ್ಥೆಗಳಿಗೆ ಸೋಲಾರ್ ಪ್ಲಾಂಟ್ ನಿರ್ಮಾಣ ಮಾಡಲು ನೇರವಾಗಿ ರೈತರಿಂದ ಜಮೀನು ಖರೀದಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಅದರಲ್ಲಿ ವಾಸವದತ್ತ ಸಿಮೆಂಟ್ ಕಂಪನಿಗೆ ಸೇಡಂ ನಲ್ಲಿ 665 ಎಕರೆ, ಆದಾನಿ ಗ್ರೂಪ್ ನ ಮೆ. ಮಾರ್ಧಾ ಸೋಲಾರ್ ಪ್ರೈ. ಲಿ ಇವರಿಗೆ ಕೊಪ್ಪಳ ಜಿಲ್ಲೆಯ ಯಲಬುರ್ಗಿ ತಾಲ್ಲೂಕಿನಲ್ಲಿ 44 ಎಕರೆ, ವಿಜಯಪುರದಲ್ಲಿ 255 ಎಕರೆ, ಔರಾದ ತಾಲ್ಲೂಕಿನಲ್ಲಿ 282 ಎಕರೆ.

6. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಟಗರಾಪುರ ಮತ್ತು ಇತರೆ 19 ಗ್ರಾಮಗಳಿಗೆ ಹಾಗೂ ಯಳ್ಳಂದೂರು ತಾಲ್ಲೂಕಿನ 44 ಗ್ರಾಮಗಳಿಗೆ “ಬಹುಗ್ರಾಮ ಯೋಜನೆ” ಯಡಿ ಕುಡಿಯುವ ನೀರು ಸರಬರಾಜು ಯೋಜನೆಯನ್ನು ಡಿಬಿಓಟಿ ಆಧಾರದನ್ವಯ ಯೋಜನೆಯನ್ನು ಅನುಷ್ಠಾನಗೊಳಿಸಲು ಅನುಮೋದನೆಯನ್ನು ನೀಡಿದೆ. ಈ ಯೋಜನೆಗೆ 113.06 ಕೋಟಿ ವೆಚ್ಚ ಆಗಲಿದೆ.

7.ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಯಲಗಟ್ಟ ಮತ್ತು ಇತರೆ 10 ಗ್ರಾಮಗಳಿಗೆ “ಬಹುಗ್ರಾಮ ಯೋಜನೆ” ಯಡಿ ಶಾಶ್ವತ ಕುಡಿಯುವ ನೀರು ಸರಬರಾಜು ಯೋಜನೆಯನ್ನು ಅನುಷ್ಟಾನಗೊಳಿಸಲು 1623.30 ಲಕ್ಷ ವೆಚ್ಚದ ಕಾಮಗಾರಿಗೆ ಅನುಮೋದನೆ ನೀಡಿದೆ.

8.”ಚೈನಾ ದೇಶದೊಂದಿಗೆ ಸಕರಾತ್ಮಕ ಸ್ಪರ್ಧೆ” ಎಂಬ ಕಾರ್ಯಕ್ರಮವನ್ನು ಅನುಷ್ಟಾನಗಗೊಳಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಆಯಾಯ ಪ್ರದೇಶದ ಸಂಪನ್ಮೂಲ ಮತ್ತು ವೃತ್ತಿಕೌಶಲ್ಯಗಳನ್ನು ಆಧರಿಸಿ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸಲಾಗುವುದು. ರಾಜ್ಯದ ಕಲಬುರಗಿ, ಚಿತ್ರದುರ್ಗ, ಹಾಸನ, ಕೊಪ್ಪಳ, ಮೈಸೂರು, ಒಳ್ಳಾರಿ, ಚಿಕ್ಕಬಳ್ಳಾಪುರ, ಬೀದರ್ ಮತ್ತು ತುಮಕೂರು ಜಿಲ್ಲೆಗಳಲ್ಲಿ ನಾನಾ ಉದ್ಯಮಗಳ ಸ್ಥಾಪನೆಗೆ ಅನುಕೂಲವಾಗುವಂತೆ 9 ಕ್ಲಸ್ಟರ್ ಮಾದರಿಗಳನ್ನು ರಚಿಸಲು ಒಪ್ಪಿಗೆ ನೀಡಲಾಯಿತು. ಇದಕ್ಕೆ ಪೂರಕವಾಗಿ ವಿಷನ್ ಗ್ರೂಪ್ ನ್ನು ರಚಿಸಲಾಗುವುದು. ಇದಕ್ಕಾಗಿ 5000 ಕೋಟಿ ವೆಚ್ಚವಾಗುತ್ತದೆ. ಮುಂದಿನ ನಾಲ್ಕು ವರ್ಷದಲ್ಲಿ ಶೇರು ಬಂಡವಾಳದ ರೂಪದಲ್ಲಿ ಸರ್ಕಾರ 2 ಸಾವಿರ ಕೋಟಿ ನೀಡುತ್ತದೆ ಹಾಗೂ ಖಾಸಗಿ ಸಂಸ್ಥೆಗಳನ್ನು 3 ಸಾವಿರ ಕೋಟಿ ಬಂಡವಾಳ ಹೂಡಬೇಕಾಗುತ್ತದೆ.

9.ಮೊಬೈಲ್ ಆಪ್ ಮೂಲಕ ಬೆಳ ಸಮೀಕ್ಷೆ ಮಾಡಲು ಯೋಜನೆಯೊಂದನ್ನು ರೂಪಿಸಲಾಗಿದೆ. ಸರ್ಕಾರಿ ಮತ್ತು ಖಾಸಗಿ ರೈತರು ಒಳಗೊಂಡಂತೆ ಮೊಬೈಲ್ ಆಪ್‍ಗಳ ಮೂಲಕ ರೈತರು ಯಾವ ಸಂಗಾಮಿ ಬೆಳೆಗಳನ್ನು ಹಾಕಿದ್ದಾರೆ ಎಂಬುದನ್ನು ಈ ಮೂಲಕ ಮೊಬೈಲ್ ಆಪ್ ಮೂಲಕ ಖಚಿತ ಅಂಕಿ ಅಂಶಗಳನ್ನು ಸಂಗ್ರಹಿಸಬಹುದಾಗಿದೆ. 25 ಕೋಟಿ ವೆಚ್ಚದಲ್ಲಿ ಈ ಬೆಳೆ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಾಗುವುದು.

10. ಹಾಸನದಲ್ಲಿ ಹೊಳೇನರಸಿಪುರದ ಹರದನಹಳ್ಳಿಯಲ್ಲಿ ವಸತಿಯುಕ್ತ ಸರ್ಕಾರಿ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸ್ಥಾಪನೆ ಮಾಡಲು 15 ಕೋಟಿ ರೂ.ಗಳ ಯೋಜನೆ ಒಪ್ಪಿಗೆ ನೀಡಲಾಗಿದೆ.
.

ಶಿರಾಡಿ ಘಾಟ್, ಲಘು ವಾಹನಗಳಿಗೆ ಸಂಚಾರ ಮುಕ್ತ: ದ.ಕ. ಜಿಲ್ಲಾಧಿಕಾರಿ ಆದೇಶ!

0

ದಕ್ಷಿಣ ಕನ್ನಡ : ಶಿರಾಡಿ ಘಾಟಿ ರಸ್ತೆಯನ್ನು ಲಘು ವಾಹ‌ನಗಳ ಸಂಚಾರಕ್ಕೆ ತಕ್ಷಣದಿಂದಲೇ ಮುಕ್ತ ಮಾಡಿ ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.

ಇತ್ತೀಚೆಗೆ ಶಿರಾಡಿ ಘಾಟಿ ರಸ್ತೆಯಲ್ಲಿ ಭೂಕುಸಿತ ಹಿನ್ನೆಲೆಯಲ್ಲಿ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿತ್ತು. ಪ್ರಸಕ್ತ ಭೂ ಕುಸಿತ ಸ್ಥಳಗಳನ್ನು ದುರಸ್ತಿ ಮಾಡಲಾಗಿದ್ದು, ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಬಹುದು ಎಂದು ರಾಷ್ಟ್ರೀಯ ಹೆದ್ದಾರಿ ಇಲಾಖೆ ವರದಿ ನೀಡಿತ್ತು. ಈ ಬಗ್ಗೆ ಜಿಲ್ಲಾಧಿಕಾರಿಗಳು ಸ್ಥಳ ತನಿಖೆ ನಡೆಸಿ , ವರದಿ ನೀಡಲು ರಾಷ್ಟ್ರೀಯ ಹೆದ್ದಾರಿ ಕಾರ್ಯಕಾರಿ ಅಭಿಯಂತರರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಹಾಗೂ ಪುತ್ತೂರು ಉಪವಿಭಾಗಾಧಿಕಾರಿಗಳ ತಂಡ ನೇಮಿಸಿದ್ದರು.
ಈ ತಂಡವು ನೀಡಿದ ವರದಿಯನ್ವಯ ಜಿಲ್ಲಾಧಿಕಾರಿಗಳು, ಶಿರಾಡಿ ಘಾಟಿ ರಸ್ತೆಯಲ್ಲಿ ಕೆಲವು ಸ್ಥಳಗಳಲ್ಲಿ ವಾಹನಗಳ ಏಕಮುಖ ಸಂಚಾರಕ್ಕೆ ಅವಕಾಶ ನೀಡಿ ಕಾರು, ಜೀಪು, ದ್ವಿಚಕ್ರ ವಾಹನಗಳು, ಟೆಂಪೋ ಟ್ರಾವೆಲರ್, ಮ್ಯಾಕ್ಸಿಕ್ಯಾಬ್ ವಾಹನಗಳ ಸಂಚಾರಕ್ಕೆ ಅನುವು ಮಾಡಿದ್ದಾರೆ.
ಆದರೆ, ಶಿರಾಡಿ ಘಾಟಿ ರಸ್ತೆ ಇನ್ನೂ ಸಂಪೂರ್ಣ ಯಥಾಸ್ಥಿತಿ ಗೆ ಬಾರದಿರುವುದರಿಂದ ಎಲ್ಲಾ ವಿಧದ ಬಸ್ಸುಗಳು, ಲಾರಿ, ಟ್ಯಾಂಕರ್, ಕಂಟೈನರ್ ಗಳು ಸೇರಿದಂತೆ ಭಾರೀ ವಾಹನಗಳ ಸಂಚಾರವನ್ನು ಮುಂದಿನ ಆದೇಶದವರೆಗೆ ನಿರ್ಬಂಧಿಸಲಾಗಿದೆ.