Guidelines to prevent and contain the spread of mutant variant of conrona virus soon: Health Minister Dr.K.Sudhakar

0

Bengaluru, December 26, Saturday:Health department will discuss with home minsitry regarding prevention and containment of new variant of corona virus and come up with guildelines, said Health Minister Dr.K.Sudhakar.

Speaking to the media Minister also said that there will be new guidelines for new year celebrations and he will conduct a meeting with Home Department regarding this soon.

Responding about vaccine trails, Dr.Sudhakar said that third stage trials are being conducted including in our state. Anyone can voluteer to take the vaccine at this stage. I have personally appealed to many frontline warriors especially medical students to volunteer for trials.

1,638 out of 2,500 returness from the UK have been tested and 14 of them have been found positive. Their swab samples have been sent to NIMHNAS for gene sequencing to find out whether it is new strain of the virus. This process needs 48 hours. Once we get the reports it will be sent to central government. About 38,500 people have returned from UK to India. ICMR will collate reports from all states and then come up with a report, Dr.Sudhakar explained.

All necessary precautions are being taken at Airports. We have also made arrangements to test people who does not have negative report at Airports itself, Minister added.

ಎಚ್ಡಿಕೆ ಈಗಲೂ ನನ್ನ ಸ್ನೇಹಿತರೆ: ಡಿಕೆಶಿ

ಬೆಂಗಳೂರು:  ಕುಮಾರಸ್ವಾಮಿ ಅವರು ಈ ಹಿಂದೆ ಮಾತ್ರ ನನ್ನ ಸ್ನೇಹಿತರಾಗಿರಲಿಲ್ಲ. ಈಗಲೂ ಅವರು ನನ್ನ ದೋಸ್ತಿಯೇ. ಮುಂದೆಯೂ ಇರುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ರು.

ಬೆಂಗಳೂರಿನಲ್ಲಿಂದು ಸುದ್ಧಿಗಾರರೊಂದಿಗೆ ಮಾತನಾಡಿದ ಡಿಕೆಶಿ,  ಮಾಧ್ಯಮದವರು ಯಾವ ಆಧಾರದ ಮೇಲೆ ಡಿಕೆಶಿ-ಎಚ್ಡಿಕೆ ಹಳೇ ದೋಸ್ತಿ ಅಂತಾ ಹೇಳುತ್ತೀರಿ? ನೀವು ಇಬ್ಬರ ಮಧ್ಯೆ ದ್ವೇಷ ಇದೆ ಅಂತೀರಿ? ನಾನು ದ್ವೇಷ ಮಾಡುವ ಕಾಲ ಹೋಯ್ತು ಎಂದರು.

ಜೆಡಿಎಸ್ ಕೂಡ ಒಂದು ಪಕ್ಷ. ಅದರದೇ ಆದ ಸಂವಿಧಾನ, ಸಿದ್ಧಾಂತ ಇದೆ. ಅವರು ಹಾಗೂ ಬಿಜೆಪಿ ಹೇಗೆ ಒಪ್ಪಂದ ಮಾಡಿಕೊಳ್ಳುತ್ತಾರೋ ಅದು ಅವರಿಗೆ ಬಿಟ್ಟದ್ದು. ಬಿಜೆಪಿಯವರು ಅವರನ್ನು ಯಾವ ರೀತಿ ನೋಡುತ್ತಾರೋ ಗೊತ್ತಿಲ್ಲ. ನಾವಂತೂ ಆ ಪಕ್ಷವನ್ನು ಗೌರವದಿಂದ ನೋಡುತ್ತೇವೆ. ನಾನು ಬೇರೆ ಪಕ್ಷಗಳ ಬಗ್ಗೆ ಮಾತನಾಡಲ್ಲ. ಅವರು ಅನೇಕ ಬಾರಿ ಸರ್ಕಾರ ಮಾಡಿದ್ದಾರೆ. ನಾವು ಅವರ ಜತೆ ಸರ್ಕಾರ ಮಾಡಿದ್ದೇವೆ. ಅವರ ಬಗ್ಗೆ ಕೀಳಾಗಿ ಮಾತನಾಡಲು ನಾನು ಇಚ್ಚಿಸುವುದಿಲ್ಲ.

ಎಲ್ಲ ಪಾಲಿಕೆ ಚುನಾವಣೆಗಳಲ್ಲಿ ಪಕ್ಷದ ಚಿಹ್ನೆಯಿಂದಲೇ ಸ್ಪರ್ಧೆ: ಡಿಕೆಶಿ

ಬೆಂಗಳೂರು: ಬೆಳಗಾವಿ, ಧಾರವಾಡ ಪಾಲಿಕೆ ಚುನಾವಣೆ ನಡೆಸಲು ನ್ಯಾಯಾಲಯ ಸಮಯ ನಿಗದಿ ಮಾಡಿದೆ. ಇನ್ನು ಮುಂದೆ ಯಾವುದೇ ಪಾಲಿಕೆ ಚುನಾವಣೆ ನಡೆದರು ನಮ್ಮ ಪಕ್ಷದ ಚಿಹ್ನೆ ಮೂಲಕ ಸ್ಪರ್ಧಿಸಿ, ಪಕ್ಷದಿಂದ ಅಭ್ಯರ್ಥಿ ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ತಮ್ಮ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ ಶಿವಕುಮಾರ್, ಇಷ್ಟು ದಿನಗಳ ಕಾಲ ಬೆಳಗಾವಿ ಪಾಲಿಕೆಯಯಲ್ಲಿ ಕಾಂಗ್ರೆಸ್ ಸ್ಥಳೀಯ ಮಟ್ಟದಲ್ಲಿ ಹೊಂದಾಣಿಕೆ ಮಾಡಿಕೊಂಡು ತನ್ನ ಅಭ್ಯರ್ಥಿ ಹಾಕುತ್ತಿರಲಿಲ್ಲ. ಈ ಬಾರಿಯಿಂದ ಎಲ್ಲ ಪಾಲಿಕೆ ಚುನಾವಣೆಗಳಲ್ಲಿ ಪಕ್ಷದ ಚಿಹ್ನೆ ಮೂಲಕ ಸ್ಪರ್ಧಿಸಲಾಗುವುದು. ಎಲ್ಲ ವಾರ್ಡ್ ಮಟ್ಟದ ಸಮಿತಿ ಮಾಡಲು ಒಂದು ಸಮಿತಿ ರಚಿಸಲಾಗಿದೆ. ನಾವು ಚುನಾವಣೆಯಲ್ಲಿ ಗೆಲ್ಲುತ್ತೇವೋ, ಸೋಲುತ್ತೇವೋ ಅದು ನಂತರ. ನಮ್ಮ ಪಕ್ಷದ ಚಿಹ್ನೆಯಿಂದ ಸ್ಪರ್ಧಿಸುವುದು ಮುಖ್ಯ.

ಎಲ್ಲರ ಹಿತ ಗಮನದಲ್ಲಿಟ್ಟುಕೊಂಡು ತೀರ್ಮಾನಿಸಲಿ: ಸರ್ಕಾರ ಮಕ್ಕಳು ಮತ್ತು ಶಾಲೆ ವಿಚಾರದಲ್ಲಿ ಪ್ರತಿ ನಿಮಿಷವೂ ಗೊಂದಲದಲ್ಲಿದೆ. ನಮ್ಮ ಶಿಕ್ಷಣ ಸಚಿವರು ಸಿಎಂ, ಶಾಲೆ ಆಡಳಿತ ಮಂಡಳಿ, ಪೋಷಕರ ಜತೆ ಮಾತನಾಡುವುದಾಗಿ ಹೇಳುತ್ತಾರೆ. ಸರ್ಕಾರ ಮೊದಲು ಗೊಂದಲ ನಿವಾರಣೆ ಮಾಡಬೇಕು. ಇಷ್ಟು ದಿನ ಸಂಸ್ಥೆಗಳು ನಡೆಯುತ್ತಿರಲಿಲ್ಲ. ಶಿಕ್ಷಕರಿಗೂ ಸಂಬಳ ನೀಡಬೇಕು. ಇಲ್ಲಿ ಸಾಕಷ್ಟು ಸಮಸ್ಯೆಗಳಿವೆ.

ಶಾಲೆ ತೆರೆಯಬೇಕೋ ಬೇಡವೋ ಎಂಬುದರ ಬಗ್ಗೆ ತಜ್ಞರ ಜತೆ ಚರ್ಚೆ ಮಾಡಬೇಕು.  ರಾಜಕಾರಣಿಗಳು ಏನೇ ಅಭಿಪ್ರಾಯ ಹೇಳಿದರೂ ಅಂತಿಮವಾಗಿ ವಿದ್ಯಾರ್ಥಿಗಳು, ಶಾಲೆಗಳು ಹಾಗೂ ಶಿಕ್ಷಕರ ಹಿತ ಹಾಗೂ ಭವಿಷ್ಯ ಕಾಯಬೇಕು. ನಾವು ರಾಜಕೀಯ ಪಕ್ಷವಾಗಿ ನಮ್ಮ ಅಭಿಪ್ರಾಯ ಹೇಳುವುದಕ್ಕಿಂತ ಸರ್ಕಾರ ಈ ಬಗ್ಗೆ ತೀರ್ಮಾನ ಕೈಗೊಳ್ಳಬೇಕು ಹಾಗೂ ಆ ತೀರ್ಮಾನದಲ್ಲಿ ಸ್ಪಷ್ಟತೆ ಇರಬೇಕು.

ಪೋಷಕನಾಗಿ, ಶಿಕ್ಷಣ ಸಂಸ್ಥೆಯ ಭಾಗವಾಗಿ ನನಗೂ ಆತಂಕಗಳಿವೆ. ಸರ್ಕಾರ ಯಾವ ನಿರ್ಧಾರ ಕೈಗೊಳ್ಳುತ್ತದೆ ಎಂಬ ಗೊಂದಲ ಇದೆ.

ಸರ್ಕಾರದಲ್ಲಿ ದೊಡ್ಡ ಅನುಭವವಿರುವ ಪಂಡಿತರಿದ್ದಾರೆ. ಅವರಿಗೆ ನಾನ್ಯಾಕೆ ಸಲಹೆ ನೀಡಲಿ. ಅವರು ಏನು ಬೇಕಾದರೂ ತೀರ್ಮಾನ ಮಾಡಲಿ.

ನಾವು ಯಾವುದೇ ಸಲಹೆ ಕೊಟ್ಟರೂ ಅದರ ವಿರುದ್ಧವಾಗಿ ಸರ್ಕಾರ ತೀರ್ಮಾನ ತೆಗೆದುಕೊಳ್ಳುತ್ತದೆ. ಈ ಹಿಂದೆ ಅದನ್ನು ನೋಡಿದ್ದೇವೆ. ಅವರು ಜನರಿಗೆ ಕೊಟ್ಟ ಮಾತು ಉಳಿಸಿಕೊಂಡಿಲ್ಲ. ಅವರಿಗೆ ಅವರದೇ ಆದ ವೈಯಕ್ತಿಕ ಅಜೆಂಡಾ ಇದೆ. ಏನೇ ಆದರೂ ಅದಕ್ಕೆ ಕಾಂಗ್ರೆಸ್ ಹಾಗೂ ಡಿ.ಕೆ ಶಿವಕುಮಾರ್ ಕಾರಣ ಎಂದು ಹೇಳುತ್ತಾರೆ. ರೈತರು ಹೋರಾಟ ಮಾಡಿದರೆ ಕಾಂಗ್ರೆಸ್ ನವರು ಎತ್ತಿಕಟ್ಟಿದ್ದಾರೆ ಅಂತಾರೆ. ಒಟ್ಟಿನಲ್ಲಿ ಅವರು ನಮ್ಮನ್ನು ನೆನೆಸಿಕೊಳ್ಳುತ್ತಿರಬೇಕು ನೆನೆಸಿಕೊಳ್ಳಲಿ ಬಿಡಿ.

ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಮಾಡಲಾರೆ, ಶಿಡ್ಲಘಟ್ಟಕ್ಕೂ ನಾನೇ ಶಾಸಕನಿದ್ದಂತೆ: ಸುಧಾಕರ್

ಚಿಕ್ಕಬಳ್ಳಾಪುರ: ಬಿಜೆಪಿ ಪ್ರಾತಿನಿಧ್ಯ ಇಲ್ಲ ಎಂದು ಶಿಡ್ಲಘಟ್ಟ ಕ್ಷೇತ್ರದ ಜನತೆ ಕೊರಗುವ ಅಗತ್ಯವಿಲ್ಲ. ಚಿಕ್ಕಬಳ್ಳಾಪುರಕ್ಕೆ ನೀಡಿರುವ ಪ್ರಾಮುಖ್ಯತೆಯನ್ನೇ ಈ ಭಾಗಕ್ಕೂ ನೀಡಿ ಅಭಿವೃದ್ಧಿಪಡಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಭರವಸೆ ನೀಡಿದ್ದಾರೆ.

ನಮ್ಮನ್ನು ಗಮನಿಸಿಕೊಳ್ಳುವವರು ಯಾರೂ ಇಲ್ಲ, ಅಭಿವೃದ್ಧಿಯಿಂದ ಹಿನ್ನಡೆ ಆಗುತ್ತದೆ ಎಂಬ ಅನಾಥಪ್ರಜ್ಞೆಯನ್ನು ಶಿಡ್ಲಘಟ್ಟದ ಜನತೆ ಹೊಂದುವ ಅಗತ್ಯವಿಲ್ಲ. ಚಿಕ್ಕಬಳ್ಳಾಪುರದಂತೆ ಇಲ್ಲಿಗೂ ನಾನೇ ಶಾಸಕ, ನಾನೇ ಮಂತ್ರಿ ಎಂಬ ಮನೋಭಾವದಿಂದ ಅಭಿವೃದ್ಧಿ ಕೆಲಸ ಮಾಡುತ್ತೇನೆ. ಈ ವಿಷಯದಲ್ಲಿ ರಾಜಕಾರಣ ಮಾಡುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸುಧಾಕರ್‌ ಹೇಳಿದ್ದಾರೆ.

ಗ್ರಾಮಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಸುಧಾಕರ್, ತಾಲ್ಲೂಕಿನಲ್ಲಿ ಬಿಜೆಪಿ ಶಾಸಕರಿಲ್ಲ ಎಂಬ ಕಾರಣಕ್ಕೆ ಅಭಿವೃದ್ಧಿ ಕೆಲಸಗಳಲ್ಲಿ ರಾಜಕಾರಣ ಬೆರೆಸುತ್ತಿಲ್ಲ. ಸ್ವಂತ ಕ್ಷೇತ್ರದಂತೆ ಶಿಡ್ಲಘಟ್ಟವನ್ನೂ ಪರಿಗಣಿಸಿದ್ದೇನೆ. ಇಲ್ಲಿನ ಕೆರೆಗಳಿಗೂ ಈಗಾಗಲೇ ನೀರು ಹರಿಸಲಾಗುತ್ತಿದೆ. ನೀರು ತುಂಬಿಸುವ ಆರಂಭಿಕ ಸಭೆಯಲ್ಲಿ ಮಾಜಿ ಶಾಸಕರಾದ ರಾಜಣ್ಣ ಅವರು ತಾಲ್ಲೂಕಿನ ಕೆರೆಗಳಿಗೆ ನೀರು ತುಂಬಿಸುವಂತೆ ಪಟ್ಟು ಹಿಡಿದಿದ್ದರು. ಅವರು ಶಾಸಕರಾಗಿದ್ದಾಗ ಇದ್ದ ಪರಿಸ್ಥಿತಿಗೂ ಈಗಿನ ಸ್ಥಿತಿಗೂ ಸಾಕಷ್ಟು ವೆತ್ಯಾಸ ಇರುವುದು ಈಗಾಗಲೇ ಜನರಿಗೆ ಮನವರಿಕೆ ಆಗಿದೆ ಎಂದರು.

ನೀರು ಕೊಟ್ಟವರನ್ನು, ಅನ್ನ ನೀಡಿದವರನ್ನು, ಅಕ್ಷರ ಕೊಟ್ಟವರನ್ನು ಯಾರೂ ಕೂಡ ಮರೆಯಬಾರದು ಎಂದು ಹಿರಿಯರು ಹೇಳುತ್ತಾರೆ. ಹೀಗಾಗಿ ರಾಜಣ್ಣ ಮತ್ತು ಬಿಜೆಪಿ ಪಕ್ಷವನ್ನು ಜನತೆ ಮತ್ತು ಕಾರ್ಯಕರ್ತರು ಬೆಂಬಲಿಸಿ ಮುಂಬರುವ ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು. ಆ ಮೂಲಕ ಮುಂಬರುವ ದಿನಗಳಲ್ಲಿ ಪಕ್ಷಕ್ಕೆ ಭದ್ರ ಬುನಾದಿ ಹಾಕಬೇಕು ಎಂದು ಮನವಿ ಮಾಡಿದರು.

ಕಾಂಗ್ರೆಸ್‌ ಸಮಾಧಿ ತೋಡಿಕೊಂಡಿದೆ: ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿಯನ್ನು ಇಡೀ ಜಗತ್ತೇ ಮೆಚ್ಚಿಕೊಂಡಿದೆ. ದೇಶಾದ್ಯಂತ ಜನರು ಮೋದಿ ಅವರ ಸರ್ಕಾರದ ಹಗರಣ ಮುಕ್ತ ಆಡಳಿತದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ. ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಿ ಪ್ರತಿದಿನ ಒಂದಲ್ಲಾ ಒಂದು ಹಗರಣದಿಂದ ಜನ ರೋಸಿ ಹೋಗಿದ್ದರು. ಹೀಗಾಗಿಯೇ ಒಂದೊಂದೇ ರಾಜ್ಯಗಳಲ್ಲಿ ಕಾಂಗ್ರೆಸ್‌ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಮೊನ್ನೆ ರಾಜ್ಯ ವಿಧಾನಪರಿಷತ್ತಿನಲ್ಲಿ ಅವರ ನಡುವಳಿಕೆ ಗಮನಿಸಿದ ಮೇಲೆ ಅವರನ್ನು ಬೇರೆ ಯಾವುದೇ ಪಕ್ಷ ವಿರೋಧಿಸುವ ಅಥವಾ ಹಿಂದಿಕ್ಕುವ ಅಗತ್ಯವಿಲ್ಲ ಅವರ ಸಮಾಧಿ ಅವರೇ ತೋಡಿಕೊಳ್ಳುತ್ತಿರುವುದು ಖಾತರಿಯಾದಂತಾಗಿದೆ ಎಂದು ಲೇವಡಿಯಾಡಿದರು.

ಶಿಡ್ಲಘಟ್ಟ ತಾಲ್ಲೂಕಿನ ರೈತರಲ್ಲಿ ದೊಡ್ಡ ಮಟ್ಟದ ರಾಜಕೀಯ ಪ್ರಜ್ಞೆ ಇದೆ. ಹಳ್ಳಿಯಿಂದ ದಿಲ್ಲಿವರೆಗಿನ ಬೆಳವಣಿಗೆಗಳನ್ನು ಅವರು ಚೆನ್ನಾಗಿ ಅರಿತಿದ್ದಾರೆ. ಹೀಗಾಗಿ ಅವರಿಗೆ ರಾಜಕಾರಣದ ಬೆಳವಣಿಗೆಗಳನ್ನು ಮನವರಿಕೆ ಮಾಡಿಕೊಡುವ ಅಗತ್ಯವಿಲ್ಲ. ಕಾಂಗ್ರೆಸ್‌ ಪಕ್ಷವನ್ನು ತಿರಸ್ಕರಿಸುವ ದಿಟ್ಟಿ ನಿಲುವನ್ನು ಈಗಾಗಲೇ ಅವರು ತೆಗೆದುಕೊಂಡಿದ್ದಾರೆ. ಇನ್ನೂ ಜೆಡಿಎಸ್‌ ಪಕ್ಷದ ಬಹುತೇಕ ಎಲ್ಲ ಮುಖಂಡರು ಮತ್ತು ಕಾರ್ಯಕರ್ತರು ರಾಜಣ್ಣ ಅವರ ಜತೆ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಪಕ್ಷದ ತತ್ವ,ಸಿದ್ಧಾಂತಗಳನ್ನು ಒಪ್ಪಿ ಬಂದಿರುವ ಎಲ್ಲರನ್ನೂ ಮುಕ್ತ ಮನಸ್ಸಿನಿಂದ ಬರಮಾಡಿಕೊಂಡು ಎಲ್ಲರೂ ಒಗ್ಗಟ್ಟಿನಿಂದ ಚುನಾವಣೆಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿ ಪಕ್ಷ ಬೆಂಬಲಿಸುವ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಅವರು ಕರೆ ನೀಡಿದರು.

ರೇಷ್ಮೆ ಬೆಳೆಗಾರರಿಗೆ ನೆರವು: ಶಿಡ್ಲಘಟ್ಟ ತಾಲ್ಲೂಕಿನಲ್ಲಿ ದೊಡ್ಡ ಪ್ರಮಾಣದಲ್ಲಿ ರೇಷ್ಮೆ ಬೆಳೆ ಬೆಳೆಯಲಾಗುತ್ತಿದೆ. ಈ ಭಾಗದ ಬೆಳೆಗಾರರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಸಿಗಬೇಕಿರುವ ಎಲ್ಲ ನೆರವನ್ನೂ ದೊರಕಿಸಲು ಕೋಲಾರ ಸಂಸದರ ಜತೆ ಕಾರ್ಯಪ್ರವೃತ್ತರಾಗುವುದಾಗಿ ಭರವಸೆ ನೀಡಿದ ಸಚಿವರು, ಮುಂದಿನ ದಿನಗಳಲ್ಲಿ ರೇಷ್ಮೆ ಬೆಳೆಗಾರರಿಗೆ ಉನ್ನತಮಟ್ಟದ ಮಾಹಿತಿ ಮತ್ತು ನೆರವು ದೊರಕಿಸುವ ನಿಟ್ಟಿನಲ್ಲಿ ತಜ್ಞರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಧಿಕಾರಿಗಳನ್ನು ಇಲ್ಲಿಗೆ ಕರೆತಂದು ಕಾರ್ಯಾಗಾರ ಆಯೋಜಿಸಲಾಗುವುದು ಎಂದೂ ಪ್ರಕಟಿಸಿದರು.

ಕಾಂಗ್ರೆಸ್ ಸಾರಿಗೆ ನೌಕರರ ಪರವಾಗಿದೆ: ಡಿಕೆಶಿ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ರಾಜ್ಯ ಹಾಗೂ ನಗರ ರಸ್ತೆ ಸಾರಿಗೆ ಸಂಸ್ಥೆ ನೌಕರರ ಪರವಾಗಿ ಕಾಂಗ್ರೆಸ್ ನಿಲ್ಲಲಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.

ತಮ್ಮನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸಬೇಕು ಎಂಬುದು ಸೇರಿದಂತೆ ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ರಾಜ್ಯ ರಸ್ತೆ ಸಾರಿಗೆ ಹಾಗೂ ನಗರ ಸಾರಿಗೆ ಸಂಸ್ಥೆಗಳ ನೌಕರರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಬೆಂಗಳೂರಿನ ಬನಶಂಕರಿ ಬಸ್ ನಿಲ್ದಾಣದಲ್ಲಿ ಶನಿವಾರ ಮಧ್ಯಾಹ್ನ ಭೇಟಿ ಮಾಡಿ ಅವರ ಅಹವಾಲು ಆಲಿಸಿದರು. ಈ ಸಂದರ್ಭದಲ್ಲಿ ಶಾಸಕಿ ಸೌಮ್ಯರೆಡ್ಡಿ, ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷರಾದ ಪುಟ್ಟಸ್ವಾಮಿ ಗೌಡರು, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಕಾಂತ್ ಅವರು, ದೊಡ್ಡ ಆಲಹಳ್ಳಿ ಕಾಂಗ್ರೆಸ್ ಮುಖಂಡರಾದ ಬಾಬು ಅವರು ಇದ್ದರು.

ಈ ವೇಳೆ ಮಾತನಾಡಿದ ಡಿ.ಕೆ. ಶಿವಕುಮಾರ್,
‘ರಾಜ್ಯದಲ್ಲಿ ಎಲ್ಲೆಲ್ಲಿ ನೀವು ಮುಷ್ಕರ ಮಾಡುತ್ತಿದ್ದೀರೋ ಅಲ್ಲೆಲ್ಲ ಪಕ್ಷ ನಿಮ್ಮ ಪರವಾಗಿದೆ ಎಂದು ಹೇಳಲು ಸಾಂಕೇತಿಕವಾಗಿ ಇಲ್ಲಿಗೆ ಬಂದಿದ್ದೇನೆ.

ಕಾಂಗ್ರೆಸ್ ಕೂಡ ಸರ್ಕಾರ ನಡೆಸಿದೆ. ಸಾಕಷ್ಟು ಬದಲಾವಣೆ ತರಲು ಪ್ರಯತ್ನಿಸಿದೆ. ನೀವು ಹಗಲು-ರಾತ್ರಿ ಜನರ ಸೇವೆಗೆ ಶ್ರಮಿಸುತ್ತಿದ್ದೀರಿ. ನಿಮ್ಮ ಒತ್ತಡ ಏನು ಎಂಬುದರ ಬಗ್ಗೆ ಅರಿವಿದೆ. ಕೊರೋನಾ ಸಮಯದಲ್ಲಿ ತಾವು ಪಟ್ಟ ಶ್ರಮ, ಮಾಡಿದ ತ್ಯಾಗವನ್ನು ಯಾರೂ ಮರೆಯಲು ಸಾಧ್ಯವಿಲ್ಲ.

ಅನೇಕರು ವೇತನೆ ಸಿಗದೆ ಎಷ್ಟು ತೊಂದರೆ ಅನುಭವಿಸಿದ್ದೀರಿ ಅಂತಲೂ ಗೊತ್ತಿದೆ. ನಾನು, ನಮ್ಮ ವಿರೋಧ ಪಕ್ಷದ ನಾಯಕರು ಈ ವಿಚಾರದಲ್ಲಿ ಹೋರಾಟ ಮಾಡಿದ್ದೇವೆ. ರಾಜ್ಯ ಸರ್ಕಾರ 5 ಸಾವಿರ ರುಪಾಯಿ ನೆರವು ಕೊಡುತ್ತೇವೆ ಎಂದು ಹೇಳಿತು. ಜತೆಗೆ 1600 ಕೋಟಿ ರುಪಾಯಿ ಕೊರೊನಾ ಪ್ಯಾಕೇಜ್ ಘೋಷಿಸಿತು. ಕೇಂದ್ರದವರು 20 ಲಕ್ಷ ಕೋಟಿ ರುಪಾಯಿ ನೆರವು ಎಂದರು. ಆದರೆ 5 ಸಾವಿರ ರುಪಾಯಿ ನೆರವು ಕೊಡಲು ಈ ಸರ್ಕಾರಕ್ಕೆ ನೀಡಲು ಸಾಧ್ಯವಾಗಿಲ್ಲ.

ಇಂದು ನಿಮ್ಮ ನೋವನ್ನು ವ್ಯಕ್ತಪಡಿಸಿದ್ದೀರಿ. ನಿಮ್ಮ ನೋವಿಗೆ ಮಂತ್ರಿಗಳು ಸ್ಪಂದಿಸಿಲ್ಲ. ಮುಖ್ಯಮಂತ್ರಿಗಳು ಕೇಳುತ್ತಿಲ್ಲ. ಸರ್ಕಾರದ ಪರವಾಗಿ ಶಾಸಕರೂ ಬಂದಿಲ್ಲ. ಅವರು ಎಲ್ಲಿದ್ದಾರೆ ಎಂದು ಹುಡುಕುವ ಪರಿಸ್ಥಿತಿ ಬಂದಿದೆ.

ನಾನು ಇಂಧನ ಮಂತ್ರಿಯಾಗಿದ್ದಾಗ ಕೆಇಬಿಯವರಿಗೆ ವೇತನ ಭತ್ಯೆ ಹೆಚ್ಚಿಸಲಾಗಿತ್ತು. ಕೆಇಬಿ ಬೋರ್ಡ್ ನಲ್ಲಿ ಲೈನ್ ಮೆನ್ ಹಾಗೂ ಇಂಜಿನಿಯರ್ ಗಳ ಪರವಾಗಿ ಇಬ್ಬರು ಪ್ರತಿನಿಧಿಗಳು ಇರುತ್ತಾರೆ. ಸಭೆಯಲ್ಲಿ ಅವರು ಅವರ ಪರವಾಗಿ ಧ್ವನಿ ಎತ್ತುತ್ತಿದ್ದರು.

ಸರ್ಕಾರದ ಎಲ್ಲ ಶಾಸಕರುಗಳಿಗೆ, ಮಂತ್ರಿಗಳಿಗೆ ನಿಮ್ಮ ಪರವಾಗಿ ಮನವಿ ಮಾಡುತ್ತೇನೆ. 1.25 ಲಕ್ಷ ಸಾರಿಗೆ ನೌಕರರು ಇದ್ದಾರೆ. 40 ಕೋಟಿ ಜನರಿಗೆ ಸೇವೆ ನೀಡುತ್ತಿದ್ದಾರೆ. ಅವರಿಗೆ ನೀವು ರಕ್ಷಣೆ ನೀಡಬೇಕು.

ನಿಮ್ಮ ಹೋರಾಟ, ನಿಮ್ಮ ನೋವಿನಲ್ಲಿ ಕಾಂಗ್ರೆಸ್ ಜತೆಗಿದೆ ಎಂದು ಹೇಳುತ್ತೇನೆ. ನಿಮ್ಮ ಪ್ರತಿನಿಧಿಗಳು ನಮ್ಮ ಕಚೇರಿಗೆ ಬರಲಿ. ನಿಮ್ಮ ಹೋರಾಟಕ್ಕೆ ಹೇಗೆ ಕೈಜೋಡಿಸಬೇಕು ಎಂಬುದನ್ನು ಚರ್ಚೆ ಮಾಡುತ್ತೇನೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ, ನಿಮ್ಮ ಸಂಸ್ಥೆಗಳ ಆಡಳಿತ ಮಂಡಳಿಯಲ್ಲಿ ನಿಮ್ಮ ಪ್ರತಿನಿಧಿಗಳಾಗಿ ಇಬ್ಬರನ್ನು ನೇಮಕ ಮಾಡುತ್ತೇವೆ. ನಿಮ್ಮ ಧ್ವನಿಯಾಗಿ ಆಡಳಿತ ಮಂಡಳಿಯಲ್ಲಿ ಯಾರಾದರೂ ಇರಬೇಕು. ನಿಮ್ಮ ನೋವು ಏನು ಎಂಬುದು ಅವರಿಗೂ ಅರಿವಾಗಬೇಕು. ಇದಕ್ಕೆ ಪರಿಹಾರ ಕಂಡು ಹಿಡಿಯಬೇಕು. ಸಾರಿಗೆ ಮಂತ್ರಿಗಳು ಅಡ್ರೆಸ್ ಗೆ ಇಲ್ಲ ಎಂದು ಮಾಧ್ಯಮಗಳು ಪ್ರಸಾರ ಮಾಡುತ್ತಿವೆ. ಬೇರೆ ಮಂತ್ರಿಗಳು ಕೂಡ ನಿಮ್ಮ ಮನವಿ ಆಲಿಸಲು ಬರಬಹುದಿತ್ತು. ಆದರೆ ಅವರೂ ಬಂದಿಲ್ಲ. ಹಾಗಾಗಿ ಕೂಡಲೇ ಈ ಇಲಾಖೆಗೆ ಸಂಬಂಧಿಸಿದ ಈ ಪ್ರತಿಭಟನಾನಿರತ ನೌಕರರ ಒಕ್ಕೂಟದ ಪ್ರತಿನಿಧಿಗಳ ಜತೆ ಮಾತನಾಡಿ ಈ ಸಮಸ್ಯೆ ಬಗೆಹರಿಸಿ, ನ್ಯಾಯ ಕೊಡಿ ಎಂದು ನಾನು ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ.’

ನೌಕರರ ಜತೆ ಸರ್ಕಾರ ಕೂತು ಚರ್ಚಿಸಬೇಕು: ಮೊದಲು ನೌಕರರ ಅಳಲು ಎನು ಎಂದು ಕರೆದು ಚರ್ಚಿಸಬೇಕಿತ್ತು. ನಿಮ್ಮ ಪರಿಸ್ಥಿತಿಯನ್ನು ನೀವು ಅವರಿಗೆ ವಿವರಿಸಬೇಕು ಆಗ ಅವರಿಗೂ ಮನವರಿಕೆಯಾಗಿ ಪರಿಹಾರ ಕಂಡುಕೊಳ್ಳಲು ನೆರವಾಗುತ್ತದೆ. ಯಾರು ಕೂಡ ಸುಮ್ಮನೆ ಬೇಡಿಕೆ ಇಡುವುದಿಲ್ಲ. ಮುಖ್ಯಮಂತ್ರಿಗಳು ಕೂಡಲೇ ಪ್ರತಿಭಟನಾನಿರತ ನೌಕರರ ಜತೆ ಚರ್ಚೆ ನಡೆಸಬೇಕು. ಆಡಳಿತ ನಿಮ್ಮ ಕೈಯಲ್ಲಿದೆ. ನೀವು ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಬೇಕು. ಈ ಹಿಂದೆ ಪ್ರತಿಭಟನೆಗಳು ನಡೆಯುತ್ತಿದ್ದಾಗ ನೀವೇನು ಮಾಡುತ್ತಿದ್ದಿರಿ? ಸಂಸ್ಥೆಯ ವಿವಿಧ ವಲಯವಾರು ಮಂಡಳಿಗಳಲ್ಲಿ ಕಡ್ಡಾಯವಾಗಿ ಸಾರಿಗೆ ನೌಕರರ ಪ್ರತಿನಿಧಿಗಳನ್ನು ನೇಮಕ ಮಾಡಬೇಕು. ಆಗ ಅವರ ಸಮಸ್ಯೆ ಏನು? ಇವರ ಸಮಸ್ಯೆ ಏನು? ಎಂಬುದು ಇಬ್ಬರಿಗೂ ಅರಿವಾಗುತ್ತದೆ. ಕೊರೋನಾ ಸಮಯದಲ್ಲಿ ನೀವು ಕೊಟ್ಟ ಮಾತಿನಂತೆ ನಡೆದುಕೊಳ್ಳಿ. ಅದೇ ರೀತಿ ಚಾಲಕರು, ವೃತ್ತಿಆಧಾರಿತ ವರ್ಗದವರಿಗೂ ಸರ್ಕಾರ ನೀಡಬೇಕಾದ ಪರಿಹಾರ ಬಾಕಿ ಇದೆ. ಅದನ್ನು ಆದಷ್ಟು ಬೇಗ ನೀಡಬೇಕು.

ಟೀ ಅಂಗಡಿಗೆ ಲಾರಿ ಡಿಕ್ಕಿ: ನಾಲ್ವರ ದುರ್ಮರಣ

ಚಿಕ್ಕಬಳ್ಳಾಪುರ: ಬೆಂಗಳೂರಿನಿಂದ ಅತಿವೇಗದಲ್ಲಿ ಬರುತ್ತಿದ್ದ ಲಾರಿಯೊಂದು ಹಂಪ್ ನಿಂದ ಹಾರಿ ಕಾಂಡಿಮೆಂಟ್ಸ್ ಅಂಗಡಿಗೆ ನುಗ್ಗಿದ ಪರಿಣಾಮ ಟೀ ಕುಡಿಯುತ್ತಿದ್ದ ನಾಲ್ವರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಲ್ಲದೆ, ರಸ್ತೆ ಬದಿ ಇದ್ದ ಮೂರು ಕಾರುಗಳೂ ಜಖಂ ಆಗಿವೆ.

ರಾಷ್ಟ್ರೀಯ ಹೆದ್ದಾರಿ 7ರ ಚದುಲಪುರ ಗೇಟ್ ಬಳಿ ಕೃಷ್ಣ ಕಾಂಡಿಮೆಂಟ್ಸ್ ಮುಂದೆ ಟೀ ಕುಡಿಯುತ್ತಿದ್ದವರ ಮೇಲೆ ಯಮನಂತೆ ಬಂದೆರಗಿದ ಲಾರಿ ನಾಲ್ವರ ಪ್ರಾಣ ತೆಗೆದಿದೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.

ಅಪಘಾತದಲ್ಲಿ ಬೆಂಗಳೂರು ಮೂಲದ ವಕೀಲ ಯಮುನಾಚಾರಿ, ಕಲಾಂಜಿಯಮ್, ದೊಡ್ಡಬಳ್ಳಾಪುರ ಮೂಲದ ನಿತೀಶ್ ಗೌಡ, ಚಿಕ್ಕಬಳ್ಳಾಪುರ ತಾಲ್ಲೂಕಿನ ಗವಿಗಾನಹಳ್ಳಿಯ ವೆಂಕಟೇಶ್ ಮೃತಪಟ್ಟಿದ್ದಾರೆ. ಇನ್ನೂ ರಸ್ತೆ ಬದಿ ನಿಂತಿದ್ದ ಎರಡು ಕಾರುಗಳಿಗೆ ಲಾರಿ ಡಿಕ್ಕಿ ಹೊಡೆದು ಕಾರುಗಳು ನಜ್ಜುಗುಜ್ಜಾಗಿವೆ.

ಘಟನೆಯ ಮಾಹಿತಿ ಬಂದ ತಕ್ಷಣ ಸ್ಥಳಕ್ಕೆ ನಂದಿಗಿರಿಧಾಮ ಠಾಣೆಯ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ನಂದಿಗಿರಿಧಾಮ ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ದಾಖಲಾಗಿದೆ.