Video-ಹಾವೇರಿ ಸಹಕಾರಿ ಸಕ್ಕರೆ ಕಾರ್ಖಾನೆ ಮುಚ್ಚಲು ಕಾಂಗ್ರೆಸ್ ಕೊಡುಗೆ ದೊಡ್ಡದು: ಸಿದ್ದರಾಮಯ್ಯಗೆ ಸಿಎಂ ತಿರುಗೇಟು…!

ಹುಬ್ಬಳ್ಳಿ:ಹಾವೇರಿಯ ಸಹಕಾರಿ ಸಕ್ಕರೆ ಕಾರ್ಖಾನೆ ಮುಚ್ಚಲು ಯಾರು ಕಾರಣ ಎನ್ನುವ ವಿವರವನ್ನು ಉಪ ಚುನಾವಣಾ ಪ್ರಚಾರದಲ್ಲಿಯೇ ಹೇಳುತ್ತೇನೆ ಎಂದು ಉದಾಸಿ, ಸಜ್ಜನರ್ ಸಕ್ಕರೆ ಕಾರ್ಖಾನೆ ನುಂಗಿ ನೀರು ಕುಡಿದರು ಎನ್ನುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಹುಬ್ಬಳ್ಳಿ ವಿಮಾನನಿಲ್ದಾಣದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು,ಇಂದು ಉಪ ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದೇನೆ. ಹಾನಗಲ್ ಮತ್ತು ಸಿಂದಗಿಯಲ್ಲಿ ಹೆಚ್ಚಿನ ಸಮಯ ಕೊಟ್ಟು ಪ್ರಚಾರ ನಡೆಸಲಿದ್ದೇನೆ.ಎರಡು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಅತಿ ಹೆಚ್ಚು ಮತಗಳಿಂದ ಗೆಲ್ಲುತ್ತಾರೆ ಎನ್ನುವ ಸಂಪೂರ್ಣ ವಿಶ್ವಾಸವಿದೆ ಎಂದ್ರು.

ಹಾವೇರಿ ಸಹಕಾರಿ ಸಕ್ಕರೆ ಕಾರ್ಖಾನೆಗೆ ತನ್ನದೇ ಆದ ಇತಿಹಾಸವಿದೆ. ಕಾರ್ಖಾನೆ ಮುಚ್ಚುವಲ್ಲಿ ಕಾಂಗ್ರೆಸ್ ಕೊಡುಗೆ ಬಹಳ ದೊಡ್ಡದಿದೆ. ಈಗಾಗಲೇ ಅಲ್ಲಿ ಎಲ್ಲ ಪರಿಶೀಲನೆ ನಡೆಸಿ ಕಬ್ಬು ಕರೆಯುವಂತೆ ವ್ಯವಸ್ಥೆ ಮಾಡಿದ್ದರೆ ಅದು ಹಿಂದೆ ಇದ್ದ ನಮ್ಮ ಸರ್ಕಾರ. ನಮ್ಮ ಸರ್ಕಾರ ಅಲ್ಲಿ ಎಲ್ಲ ಕೆಲಸ ಮಾಡಿದೆ ಆ ವಿವರವನ್ನು ನಾನು ಅಲ್ಲಿಗೆ ಹೋಗಿ ಅಲ್ಲಿಯೇ ಸಿದ್ದರಾಮಯ್ಯ ಆರೋಪಕ್ಕೆ ಉತ್ತರ ಕೊಡಲಿದ್ದೇನೆ ಎಂದ್ರು.

ಹಾನಗಲ್ ಗೆ 2400 ಕೋಟಿ ಅನುದಾನ ಕೊಟ್ಟಿದ್ದೆ, ಹಾನಗಲ್ ಅಳಿಯ ಎಷ್ಟು ಕೊಟ್ಟಿದ್ದಾರೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ ಆದರೆ
ಎಲ್ಲಿದೆ 2400 ಕೋಟಿ ಅಷ್ಟು ಹಣವನ್ನು ಯಾವುದಕ್ಕೆ ಕೊಟ್ಟಿದ್ದಾರೆ. ಹಾನಗಲ್ ಗೆ ಸಿದ್ದರಾಮಯ್ಯ ಎಷ್ಟು ಅನುದಾನ ಕೊಟ್ಟಿದ್ದರು ಎನ್ನುವ ವಿವರ ನೀಡಲಿ ನಾವೂ ಏನು ಮಾಡಿದ್ದೇವೆ ಎನ್ನುವ ವಿವರ ನೀಡಲು ಸಿದ್ದರಿದ್ದೇವೆ ಎಂದು ಸವಾಲೆಸೆದ್ರು.

ಉಪ ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಮೇಲಿನ ತೆರಿಗೆ ಕಡಿತದ ಕುರಿತು ಪರಿಶೀಲನೆ ನಡೆಸಲಾಗುತ್ತದೆ. ಎಲ್ಲವೂ ರಾಜ್ಯದ ಹಣಕಾಸು ಸ್ಥಿತಿಯ ಮೇಲೆ ಅವಲಂಭಿತವಾಗಿದೆ. ಹಣಕಾಸು ಸ್ಥಿತಿ ಉತ್ತಮವಾಗಿದ್ದು, ಆದಾಯ ಹೆಚ್ಚಾದಲ್ಲಿ ತೈಲದ ಮೇಲಿನ ತೆರಿಗೆ ಕಡಿತದ ಬಗ್ಗೆ ಚಿಂತನೆ ನಡೆಸಲಾಗುತ್ತದೆ ಎಂದ್ರು.

ವರ್ಲ್ಡ್ ದುಬೈ ಎಕ್ಸ್-ಪೋ,ನಾವೀನ್ಯತೆ, ತಂತ್ರಜ್ಞಾನ ಕ್ಷೇತ್ರಗಳಲ್ಲಿ ಬಾಂಧವ್ಯ ವೃದ್ಧಿಗೆ ಆಸಕ್ತಿ:ಅಶ್ವತ್ಥನಾರಾಯಣ 

ದುಬೈ: ನವೋದ್ಯಮಗಳ ತೊಟ್ಟಿಲಾಗಿರುವ ಕರ್ನಾಟಕವು ಸಂಯುಕ್ತ ಅರಬ್ ಸಂಸ್ಥಾನದಲ್ಲಿ (ಯುಎಇ) ತಂತ್ರಜ್ಞಾನವನ್ನು ಆಧರಿಸಿದ ಹಲವು ಕ್ಷೇತ್ರಗಳಲ್ಲಿ ಸಮರ್ಥ ಪರಿಹಾರಗಳನ್ನು ಒದಗಿಸಲು ಉತ್ಸುಕವಾಗಿದೆ ಎಂದು ಐಟಿ-ಬಿಟಿ ಹಾಗೂ ವಿಜ್ಞಾನ- ತಂತ್ರಜ್ಞಾನ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

ಶನಿವಾರ ಇಲ್ಲಿ ಆರಂಭವಾದ `ವರ್ಲ್ಡ್ ದುಬೈ ಎಕ್ಸ್-ಪೋ-2020’ ಮೇಳದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ನಮ್ಮ ರಾಜ್ಯದ ನವೋದ್ಯಮಗಳು ಯುಎಇಯಲ್ಲಿ ಸಾಗಣೆ, ಆರೋಗ್ಯ ಸೇವೆ, ತ್ಯಾಜ್ಯ ನಿರ್ವಹಣೆ ಮತ್ತು ಮೂಲಸೌಲಭ್ಯ ಸೇರಿದಂತೆ ಹತ್ತಾರು ಕ್ಷೇತ್ರಗಳಲ್ಲಿ ನೆರವಿಗೆ ಬರಲಿವೆ’ ಎಂದರು.

ಉದ್ಘಾಟನಾ ಕಾರ್ಯಕ್ರಮ ದಲ್ಲಿ ಬೃಹತ್ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಸೇರಿದಂತೆ ‌ಇತರ ಹಿರಿಯ ಅಧಿಕಾರಿಗಳು ಇದ್ದರು.

ದುಬೈ ಎಕ್ಸ್ ಪೋ-2020ರಲ್ಲಿ ಭಾಗವಹಿಸಿ, ರಾಜ್ಯಕ್ಕೆ ಉದ್ಯಮಿಗಳನ್ನು ಹೂಡಿಕೆ ಮಾಡುವಂತೆ ಆಹ್ವಾನಿಸಲು ಬಂದಿರುವ ಕರ್ನಾಟಕ ಸರಕಾರದ ನಿಯೋಗದಲ್ಲಿ ಅಶ್ವತ್ಥನಾರಾಯಣ ಅವರೂ ಇದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಭಾರತವನ್ನು 5 ಟ್ರಿಲಿಯನ್ ಡಾಲರ್ ಸಾಮರ್ಥ್ಯದ ಆರ್ಥಿಕ ಶಕ್ತಿಯಾಗಿ ಬೆಳೆಸುವ ದೂರದೃಷ್ಟಿಯನ್ನು ಇಟ್ಟುಕೊಂಡಿದ್ದಾರೆ. ಇದಕ್ಕೆ ಪೂರಕವಾಗಿ ಕರ್ನಾಟಕವು ತಂತ್ರಜ್ಞಾನವನ್ನು ಆಧರಿಸಿದ ಎಲ್ಲ ಉಪಕ್ರಮಗಳನ್ನೂ ಕೈಗೊಂಡಿದೆ. ಯುಎಇಯಲ್ಲಿರುವ ಉದ್ಯಮಿಗಳು ಕರ್ನಾಟಕಕ್ಕೆ ಬಂದು ಹೂಡಿಕೆ ಮಾಡಲು ಮುಕ್ತ ಸ್ವಾಗತವಿದೆ ಎಂದು ಸಚಿವರು ಈ ಸಂದರ್ಭದಲ್ಲಿ ಆಹ್ವಾನವಿತ್ತರು.

ಐಐಎಸ್ಸಿ, ಐಐಎಂ, ಐಐಐಟಿಯಂತಹ ಉನ್ನತ ಶಿಕ್ಷಣ ಸಂಸ್ಥೆಗಳನ್ನು ರಾಜ್ಯವು ಹೊಂದಿದೆ. ಇದರ ಜತೆಗೆ ಕರ್ನಾಟಕವು ಐಟಿ, ಬಿಟಿ, ಇಎಸ್ ಡಿಎಂ, ಅನಿಮೇಷನ್, ವಿಶುಯಲ್ ಎಫೆಕ್ಟ್ಸ್, ಗೇಮಿಂಗ್ ಮತ್ತು ಕಾಮಿಕ್ಸ್ ಇನ್ನೂ ಮುಂತಾದ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಕಾರ್ಯನೀತಿಗಳನ್ನು ಹೊಂದಿದೆ. ಅಲ್ಲದೆ, ನಮ್ಮಲ್ಲಿಗೆ ಬರುವ ಉದ್ದಿಮೆಗಳಿಗೆ ಆಕರ್ಷಕ ಸೌಲಭ್ಯಗಳು ಮತ್ತು ಪ್ರೋತ್ಸಾಹಗಳನ್ನು ನೀಡುವುದಕ್ಕೆ ರಾಜ್ಯ ಸರಕಾರವು ಒತ್ತು ಕೊಡುತ್ತದೆ ಎಂದು ಅವರು ವಿವರಿಸಿದರು.

ಯುಎಇಯಂತಹ ದೇಶಗಳೊಂದಿಗೆ ಹೊಂದಿರುವ ಸಹಭಾಗಿತ್ವದಿಂದಾಗಿ ಕರ್ನಾಟಕವು ಇಂದು ಜಾಗತಿಕ ಮಟ್ಟದ ಆವಿಷ್ಕಾರಗಳ ಆಗರವಾಗಿದೆ. ಉದ್ದಿಮೆಗಳಿಗೆ ಬೇಕಾದ ಎಲ್ಲ ಬೆಂಬಲವನ್ನೂ ರಾಜ್ಯವು ಒದಗಿಸುತ್ತಿದೆ.  ಇದಕ್ಕೆ ತಕ್ಕಂತೆ ದುಬೈನಲ್ಲಿ ನೆಲೆಯೂರಿರುವ ನವೋದ್ಯಮಗಳಲ್ಲಿ ಕರ್ನಾಟಕ ಮೂಲದ ಸ್ಟಾರ್ಟಪ್ ಗಳ ಸಂಖ್ಯೆ ದೊಡ್ಡದಿರುವುದು ಶ್ಲಾಘನೀಯ ಸಂಗತಿ ಎಂದು ಅಶ್ವತ್ಥನಾರಾಯಣ ಮೆಚ್ಚುಗೆ ವ್ಯಕ್ತಪಡಿಸಿದರು.

ಕರ್ನಾಟಕವು ಭಾರತದ ಪ್ರಗತಿಪರ ರಾಜ್ಯಗಳಲ್ಲಿ ಒಂದಾಗಿದ್ದು, ಅತ್ಯುತ್ತಮವಾದ ತಂತ್ರಜ್ಞಾನ ಮತ್ತು ಡಿಜಿಟಲ್ ಕಾರ್ಯ ಪರಿಸರವನ್ನು ಹೊಂದಿದೆ. ದೇಶದ ಒಟ್ಟು ಆದಾಯಕ್ಕೆ ರಾಜ್ಯವು ವಾರ್ಷಿಕ 220 ಶತಕೋಟಿ ಡಾಲರ್ ಕೊಡುಗೆ ನೀಡುತ್ತಿದ್ದು, ಐಟಿ, ಬಿಟಿ, ಐಟಿ ಆಧಾರಿತ ಸೇವೆಗಳು, ಎಲೆಕ್ಟ್ರಾನಿಕ್ಸ್, ಮಶೀನ್ ಟೂಲ್ಸ್ ಮತ್ತು ವೈಮಾಂತರಿಕ್ಷ ಕ್ಷೇತ್ರಗಳಲ್ಲಿ ಪ್ರಥಮ ಸ್ಥಾನದಲ್ಲಿದೆ ಎಂದು ಅವರು ವಿವರಿಸಿದರು.

ಭಾರತವು ತನ್ನ ನೆರೆಹೊರೆಯ ದೇಶಗಳೊಂದಿಗೆ ಬಾಂಧವ್ಯ ವೃದ್ಧಿಗೆ ಆದ್ಯ ಗಮನ ನೀಡಿದ್ದು, ಪಶ್ಚಿಮ ಏಷ್ಯಾದ ರಾಷ್ಟ್ರಗಳೊಂದಿಗಿನ ಸಂಬಂಧವನ್ನು ಹೊಸ ಸ್ತರಕ್ಕೆ ಕೊಂಡೊಯ್ಯುತ್ತಿದೆ. ಅದರಲ್ಲೂ ಹೂಡಿಕೆ, ತಂತ್ರಜ್ಞಾನ ಮತ್ತು ಜ್ಞಾನಾಧಾರಿತ ಆರ್ಥಿಕತೆಗಳಲ್ಲಿ ಹೆಚ್ಚಿನ ಸಹಕಾರ ವಿಸ್ತರಣೆಯಾಗಿದೆ. ಯುಎಇ ಜತೆಯಲ್ಲಿ ಕರ್ನಾಟಕವು ಈ ಹಾದಿಯಲ್ಲಿ ಹೆಜ್ಜೆ ಇಡಲು ಆಸಕ್ತವಾಗಿದೆ ಎಂದು ಸಚಿವರು ಹೇಳಿದರು.

ಐಪಿಎಲ್ ನೆನಪಿಸಿಕೊಂಡ ಸಚಿವರು!
ದುಬೈ ಎಕ್ಸ್-ಪೋ ಮೇಳವು ಭಾರತದ ಪ್ರಾಚೀನ ಸಂಸ್ಕೃತಿಯನ್ನು ಮತ್ತು ಆಧುನಿಕ ತಂತ್ರಜ್ಞಾನದಲ್ಲಿ ಸಾಧಿಸಿರುವ ಪಾರಮ್ಯವನ್ನು ಪ್ರದರ್ಶಿಸಲು ಅವಕಾಶ ಮಾಡಿಕೊಟ್ಟಿದೆ ಎಂದ ಸಚಿವರು, ನಿನ್ನೆಯಷ್ಟೇ ದುಬೈನಲ್ಲಿ ಮುಗಿದ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯನ್ನೂ ನೆನಪಿಸಿಕೊಂಡರು! ಇದನ್ನು ಪ್ರಸ್ತಾಪಿಸಿದ ಅವರು, `ಜಗತ್ತು ಈಗ ಕೊರೋನಾ ಸಂಕಷ್ಟದಲ್ಲಿದೆ. ಇಂತಹ ಸಂದರ್ಭದಲ್ಲಿ ದುಬೈ ನಮ್ಮ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಿದ್ದಕ್ಕೆ ನಾವು ಕೃತಜ್ಞರಾಗಿದ್ದೇವೆ. ಇದರ ಫೈನಲ್ ಪಂದ್ಯ ನಿನ್ನೆಯಷ್ಟೇ ಮುಗಿದಿದೆ. ಈಗಿನ ಕಷ್ಟದ ಸಮಯದಲ್ಲಿ ದುಬೈ ಈ ಪಂದ್ಯಗಳ ಆತಿಥ್ಯವನ್ನು ವಹಿಸಿಕೊಂಡಿದ್ದು ಖುಷಿಯ ಸಂಗತಿಯಾಗಿದ್ದು, ಒಂದು ಸಕಾರಾತ್ಮಕ ಸಂಕೇತವಾಗಿ ಹೊರಹೊಮ್ಮಿದೆ,’ ಎಂದು ಗುಣಗಾನ ಮಾಡಿದರು.

ಕೈಮಗ್ಗ ನಿಗಮದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಇದ್ದರು. ಬೃಹತ್ ಕೈಗಾರಿಕೆ, ಐಟಿ ಬಿಟಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣರೆಡ್ಡಿ, ನಿರ್ದೇಶಕಿ ಮೀನಾ ನಾಗರಾಜ ಕೂಡ ಇದ್ದರು.

Video-ಬಿಜೆಪಿ ಶಾಸಕ ಶಿವರಾಜ್ ಪಾಟೀಲ್ ಅಖಂಡ ಕರ್ನಾಟಕಕ್ಕೆ ಧಕ್ಕೆ ತಂದಿದ್ದಾರೆ:ಡಿಕೆ ಶಿವಕುಮಾರ್

ಬೆಂಗಳೂರು: ಬಿಜೆಪಿಗೆ ಅಖಂಡ ರಾಜ್ಯದ ಬಗ್ಗೆ ಕನಿಷ್ಠ ಕಾಳಜಿ, ಗೌರವವೂ ಇಲ್ಲ. ಇದ್ದಿದ್ದರೆ ರಾಜ್ಯದ ಭಾಗವನ್ನು ತೆಲಂಗಾಣಕ್ಕೆ ಸೇರಿಸಿ ಎಂದು ಹೇಳುತ್ತಿರಲಿಲ್ಲ. ಅಖಂಡ ಕರ್ನಾಟಕಕ್ಕೆ ಧಕ್ಕೆ ತಂದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಸಿಂದಗಿ ಕಾಂಗ್ರೆಸ್ ಕಚೇರಿ ಬಳಿ ಡಿ.ಕೆ. ಶಿವಕುಮಾರ್ ಮಾತನಾಡುತ್ತಾ ನಮ್ಮ ಎಂ.ಬಿ ಪಾಟೀಲ್, ಶಿವಾನಂದ ಪಾಟೀಲ್, ಕಾರ್ಯಾಧ್ಯಕ್ಷರು ಸೇರಿದಂತೆ ಹಲವು ನಾಯಕರು ಇಲ್ಲೇ ಇದ್ದು ಪ್ರಚಾರ ಮಾಡುತ್ತಿದ್ದಾರೆ. ಅಗತ್ಯ ಬಿದ್ದರೆ ನಾನು ಕೂಡ ಇಲ್ಲೇ ವಾಸ್ತವ್ಯ ಹೂಡಿ ಪ್ರಚಾರ ಮಾಡುತ್ತೇನೆ. ಇಲ್ಲಿನ ಮತದಾರರಲ್ಲಿ ಬಹಳ ಉತ್ಸಾಹ ಕಾಣುತ್ತಿದೆ. ರಾಜ್ಯ ಬಿಜೆಪಿ ಸರ್ಕಾರದ ಆಡಳಿತದಲ್ಲಿ ರಸಗೊಬ್ಬರದಿಂದ ಹಿಡಿದು ಒ್ರತಿಯೊಂದರಲ್ಲೂ ಕಾಳಸಂತೆಯದೇ ದರ್ಬಾರು. ಇದರಿಂದ ರೈತರಿಗೆ, ಅಡುಗೆ ಅನಿಲ, ಅಡುಗೆ ಎಣ್ಣೆ ಹೆಚ್ಚಳದಿಂದ ಮಹಿಳೆಯರಿಗೆ, ಉದ್ಯೋಗವಿಲ್ಲದೆ ಯುವಕರಿಗೆ ಸೇರಿದಂತೆ ಎಲ್ಲರಿಗೂ ಬೆಲೆ ಏರಿಕೆ ಬಿಸಿ ತಟ್ಟಿದೆ ಎಂದ್ರು.

ಜನ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲು ಕಾಯುತ್ತಿರುವ ಅವಕಾಶ ಈಗ ಸಿಕ್ಕಿದೆ. ಈ ಅವಕಾಶವನ್ನು ಸಿಂದಗಿ ಹಾಗೂ ಹಾನಗಲ್ ಮತದಾರರು ಬಳಸಿಕೊಳ್ಳುತ್ತಾರೆ. ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ ಎಂಬ ವಿಶ್ವಾಸವಿದೆ. ನಮ್ಮಲ್ಲಿ ಯಾವುದೇ ಗೊಂದಲವಿಲ್ಲ, ಎಲ್ಲರೂ ಒಟ್ಟಾಗಿ ಚುನಾವಣೆ ಎದುರಿಸುತ್ತಿದ್ದೇವೆ ಎಂದ್ರು.

ಇನ್ನು ಬಿಜೆಪಿ ಶಾಸಕ ಶಿವರಾಜ್ ಪಾಟೀಲ್ ತಮ್ಮ ಕ್ಷೇತ್ರವನ್ನು ತೆಲಂಗಾಣಕ್ಕೆ ಸೇರಿಸಬೇಕೆಂದು ನೀಡಿರುವ ಹೇಳಿಕೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ‘ಈ ಹಿಂದೆ ಉಮೇಶ್ ಕತ್ತಿ ಅವರು ಪ್ರತ್ಯೇಕ ರಾಜ್ಯದ ಬಗ್ಗೆ ಮಾತನಾಡಿದ್ದರು. ಈಗ ಶಿವರಾಜ್ ಪಾಟೀಲ್ ಈ ರೀತಿ ಹೇಳಿಕೆ ನೀಡಿದ್ದಾರೆ. ಇದು ಬಿಜೆಪಿ ಸಂಸ್ಕೃತಿ. ಬಿಜೆಪಿಗೆ ಅಖಂಡ ರಾಜ್ಯದ ಬಗ್ಗೆ ಕನಿಷ್ಠ ಕಾಳಜಿ, ಗೌರವವೂ ಇಲ್ಲ. ಇದ್ದಿದ್ದರೆ ರಾಜ್ಯದ ಭಾಗವನ್ನು ತೆಲಂಗಾಣಕ್ಕೆ ಸೇರಿಸಿ ಎಂದು ಹೇಳುತ್ತಿರಲಿಲ್ಲ. ಅಖಂಡ ಕರ್ನಾಟಕಕ್ಕೆ ಧಕ್ಕೆ ತಂದಿದ್ದಾರೆ. ನಾವು ರಾಜ್ಯದಲ್ಲಿ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಅಭಿವೃದ್ಧಿ ಕಾರ್ಯ ಮಾಡಿದ್ದೇವೆ. ಶಿವರಾಜ್ ಪಾಟೀಲ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಬೇಕು. ಶಾಸಕ ಸ್ಥಾನಕ್ಕೆ ಅವರ ರಾಜೀನಾಮೆ ಪಡೆಯಬೇಕು. ಇಲ್ಲದಿದ್ದರೆ ಅವರ ಹೇಳಿಕೆಗೆ ಬಿಜೆಪಿ ಪಕ್ಷದ ಬೆಂಬಲ ಇದೆ, ಪಕ್ಷದಲ್ಲಿ ಆಂತರಿಕವಾಗಿ ಈ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದೇ ಅರ್ಥ. ನಾವು ಇದರ ವಿರುದ್ಧ ಹೋರಾಟ ಮಾಡುತ್ತೇವೆ ಎಂದ್ರು.

ಮುಖ್ಯಮಂತ್ರಿ ಬೊಮ್ಮಾಯಿ ಅವರು ನೈತಿಕ ಪೊಲೀಸ್ ಗಿರಿ ಬಗ್ಗೆ ಮಾತನಾಡಿದ್ದಾರೆ. ಅವರ ಹೇಳಿಕೆ ಅವಮಾನಕಾರಿ, ಖಂಡನೀಯ. ಇದಕ್ಕೆ ಅವರು ಕ್ಷಮೆ ಕೊರಬೇಕು ಎಂದು ಆಗ್ರಹಿಸಿದ್ರು.

ಕುಮಾರಸ್ವಾಮಿ ಅವರ ಸರಣಿ ಟ್ವೀಟ್ ವಿಚಾರವಾಗಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ‘ಸಿದ್ದರಾಮಯ್ಯ ಅವರ ಹಾದಿಯಾಗಿ ನಮ್ಮ ಪಕ್ಷದ ನಾಯಕರು ಯಾರನ್ನೂ ಮುಗಿಸುವುದಿಲ್ಲ. ಒಬ್ಬರು ಮತ್ತೊಬ್ಬ ನಾಯಕರನ್ನು ಬೆಳೆಸುವ ಹಾಗೂ ಸಮಾಜಕ್ಕೆ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದಾರೆ. ಕುಮಾರಸ್ವಾಮಿ ಅವರು ರಾಜಕೀಯವಾಗಿ ಮಾತನಾಡಿರಬೇಕು. ಅದರಲ್ಲಿ ವಾಸ್ತವಾಂಶ ಇಲ್ಲ ಎಂದ್ರು.

ಸಲೀಂ ಹಾಗೂ ಉಗ್ರಪ್ಪ ಅವರ ಸಂಭಾಷಣೆಗೆ ಸಂಬಂಧಿಸಿದಂತೆ ಸಾಕ್ಷ್ಯ ಸಿಕ್ಕರೆ ಪ್ರಕರಣ ದಾಖಲಿಸಿಕೊಳ್ಳುತ್ತೇವೆ ಎಂಬ ಸಚಿವ ಕಾರಜೋಳ ಅವರ ಹೇಳಿಕೆಗೆ ಉತ್ತರಿಸಿದ ಅವರು, ‘ಈ ವಿಚಾರದಲ್ಲಿ ಸಮಯ ವ್ಯರ್ಥ ಮಾಡುವುದೇಕೆ? ಕೂಡಲೇ ಪ್ರಕರಣ ದಾಖಲಿಸಿಕೊಳ್ಳಲಿ’ ಎಂದರು.

1 ರಿಂದ 5ರ ವರೆಗೆ ಶಾಲೆ ಆರಂಭಕ್ಕೆ ಶಿಕ್ಷಣ ಇಲಾಖೆ ತೀರ್ಮಾನಿಸಿದೆ:ಬಿಸಿ ನಾಗೇಶ್

ಬೆಂಗಳೂರು: 1 ರಿಂದ 5ನೇ ತರಗತಿ ಶಾಲೆ ತೆರೆಯುವ ವಿಚಾರ ಸಂಬಂಧ ಇನ್ನೆರಡು ದಿನಗಳಲ್ಲಿ ನಿರ್ಧಾರ ಮಾಡಲಾಗುತ್ತದೆ.ಮುಖ್ಯಮಂತ್ರಿಗಳು ಸಭೆ ನಿಗಧಿ ಮಾಡ್ತಾರೆ. ಅಲ್ಲಿ ಶಾಲೆ ಆರಂಭಿಸುವ ಬಗ್ಗೆ ನಿರ್ಧಾರ ಮಾಡ್ತೇವೆ.ಶನಿವಾರ ಭಾನುವಾರ ತರಗತಿ ನಡೆಸುವ ಬಗ್ಗೆ ಚಿಂತನೆ ಇದೆ. ಆದರೆ ಪಠ್ಯ ಕಡಿತ ಬಗ್ಗೆ ಯಾವುದೇ ಪ್ರಸ್ತಾಪ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಬಿ.ಸಿ. ನಾಗೇಶ್ ಅವರು ತಿಳಿಸಿದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು, 1 ರಿಂದ 5ರ ವರೆಗೆ ಶಾಲೆ ಆರಂಭಕ್ಕೆ ಶಿಕ್ಷಣ ಇಲಾಖೆ ತೀರ್ಮಾನ ಮಾಡಿದೆ‌.ಒಂದರಿಂದ ಐದನೇ ತರಗತಿ ಆರಂಭಕ್ಕೆ ಅಗತ್ಯವುಳ್ಳ ಎಲ್ಲಾ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಬಿ.ಇ. ಒ.ಗಳು, ಡಿ.ಡಿ.ಪಿ.ಐಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ.
ಆದರೆ ತಾಂತ್ರಿಕ ಸಲಹಾ ಸಮಿತಿ ಏನು ಹೇಳುತ್ತೇ ಎಂಬುದನ್ನು ನೋಡಬೇಕು.ಒಂದು ವೇಳೆ ಅವ್ರು ಹಂತ ಹಂತವಾಗಿ ಶಾಲೆ ಆರಂಭಿಸಿ ಅಂದರೆ,1 ರಿಂದ 2 ಹಾಗೂ 3 ರಿಂದ‌ 5ನೇ ತರಗತಿ ವರೆಗೆ ಶಾಲೆ ಆರಂಭಿಸುವ ಬಗ್ಗೆ ನಿರ್ಧಾರ ಮಾಡ್ತೇವೆ‌.ಒಂದು ವೇಳೆ ಈ ರೀತಿ ನಿರ್ಧಾರ ಆದರೂ ಸಮಯ ಜಾಸ್ತಿ ತಗೊಳಲ್ಲ‌.ಒಂದು ಹತ್ತು ದಿನಗಳಲ್ಲಿ ಉಳಿಕೆ ತರಗತಿ ಗಳ ಬಗ್ಗೆ ಆರಂಭಿಸುವ ಬಗ್ಗೆ ನಿರ್ಧಾರ ಮಾಡ್ತೇವೆ
ಸದ್ಯಕ್ಕೆ ಇದುವರೆಗೂ ಶಾಲೆ ಆರಂಭಿಸುವ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಸಲಹೆ ಪಡೆದಿಲ್ಲ.ಸಿಎಂ ಸಭೆಗೆ ಸಮಯ ಕೊಟ್ಟ ಕೂಡಲೇ, ತಜ್ಞರಿಂದ ಅಭಿಪ್ರಾಯ ಪಡೆಯುತ್ತೇವೆ. ಆ ನಂತರ ಶಾಲೆ ಆರಂಭಿಸುವ ಬಗ್ಗೆ ಅಂತಿಮ ನಿರ್ಧಾರ ಮಾಡ್ತೇವೆ ಈಗಾಗಲೇ ಶಾಲೆ ಆರಂಭಕ್ಕೆ ಶಿಕ್ಷಣ ಇಲಾಖೆ ಎಲ್ಲಾ ರೀತಿಯ ಸಿದ್ದತೆ ನಡೆಸಿದೆ ಎಂದ್ರು.

ಪಠ್ಯ ಕ್ರಮ ಕಡಿಮೆ ಮಾಡುವುದಿಲ್ಲ:

ಪಠ್ಯ ಕ್ರಮ ಕಡಿಮೆ ಮಾಡುವ ಬಗ್ಗೆ ಯಾವುದೇ ಯೋಚನೆ ಇಲ್ಲ. ಶನಿವಾರ ಪೂರ್ಣದಿನ ಹಾಗೂ ಭಾನುವಾರ ತರಗತಿ ನಡೆಸಿ ಪಠ್ಯಕ್ರಮ ಪೂರ್ಣಗೊಳಿಸುವ ಕುರಿತಂತೆ ಪರಿಶೀಲಿಸಲಾಗುತ್ತಿದೆ. ಪರೀಕ್ಷೆಗೆ ಅಗತ್ಯವಿದ್ದಲ್ಲಿ ಪಠ್ಯಕ್ರಮವನ್ನು ಕಡಿಮೆ ಮಾಡುವ ಬಗ್ಗೆ ಜನವರಿ-ಫೆಬ್ರವರಿಯಲ್ಲಿ ನಿರ್ಧರಿಸಲಾಗುವುದು ಎಂದು ಸಚಿವ ಬಿಸಿ ನಾಗೇಶ್ ತಿಳಿಸಿದ್ರು.

Video-ಉಪಚುನಾವಣೆ,ಜನರಿಂದ ಅಭೂತಪೂರ್ವ ಬೆಂಬಲ:ಡಿಕೆ ಶಿವಕುಮಾರ್

ಕಲ್ಬುರ್ಗಿ:ಸಿಂದಗಿಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ನನ್ನ ಕಣ್ಣಾರೆ ಜನರ ಅಭೂತಪೂರ್ವ ಬೆಂಬಲ ನೋಡಿದೆ. ನಾನು ನನ್ನ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸುವಾಗ ಇದ್ದುದ್ದಕ್ಕಿಂತ ಹೆಚ್ಚಿನ ಪ್ರೋತ್ಸಾಹವನ್ನು ಇಲ್ಲಿನ ಜನ ಸಿಂದಗಿಯ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ ಅವರಿಗೆ ನೀಡಿದ್ದಾರೆ.

ನಮ್ಮ ಪಕ್ಷ ಉತ್ತಮ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ಕಣದಲ್ಲಿದ್ದ ಅನೇಕ ಅಭ್ಯರ್ಥಿಗಳು ಅಶೋಕ್ ಮನಗೂಳಿ ಅವರೇ ತಮ್ಮ ತಂದೆ ಸ್ಥಾನವನ್ನು ತುಂಬಬೇಕು ಎಂದು ಒಮ್ಮತದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯಲ್ಲಿರುವ ಕಾಂಗ್ರೆಸ್ ಪಕ್ಷದ ಸಮೂಹ ಅಶೋಕ್ ಮನಗೂಳಿ ಅವರ ಹಿಂದೆ ನಿಂತಿದೆ. ಮನಗೂಳಿ ಅವರಿಗಿಂತ ಹೆಚ್ಚಿನ ಮತಗಳ ಅಂತರದಲ್ಲಿ ನಮ್ಮ ಅಭ್ಯರ್ಥಿ ಗೆಲ್ಲುವ ವಿಶ್ವಾಸವಿದೆ. ಸಿಂದಗಿ ಕ್ಷೇತ್ರದ ಜನರ ಮೇಲೆ ನನಗೆ ಅಪಾರವಾದ ನಂಬಿಕೆ ಇದೆ. ಜನ ಬಿಜೆಪಿ ಆಡಳಿತ ನೋಡಿದ್ದಾರೆ. ಈಗ ಕಾಂಗ್ರೆಸ್ ಪಕ್ಷದ ಶಾಸಕರ ಆಡಳಿತದ ಅವಶ್ಯಕತೆ ಇದೆ ಎಂದು ಜನ ಭಾವಿಸಿದ್ದಾರೆ.

ಸಿಂದಗಿ ರೀತಿಯಲ್ಲೇ ಹಾನಗಲ್ ನಲ್ಲೂ ಜನ ಕಾಂಗ್ರೆಸ್ ಅಭ್ಯರ್ಥಿಗೆ ಉತ್ತಮ ಬೆಂಬಲ ನೀಡುತ್ತಿದ್ದಾರೆ. ಅಲ್ಲಿ ಬಿಜೆಪಿಯಲ್ಲಿನ ಗೊಂದಲವನ್ನು ಎಲ್ಲರೂ ನೋಡಿದ್ದಾರೆ. ಎರಡೂ ಕ್ಷೇತ್ರದಲ್ಲೂ ನಾವು ಶುಭ ಘಳಿಗೆಯಲ್ಲಿ ನಾಮಪತ್ರ ಸಲ್ಲಿಸಿದ್ದು, ಶುಭವಾರ್ತೆ ತೆಗೆದುಕೊಂಡು ಹೋಗುತ್ತೇವೆ.

*ನಮ್ಮದು ನೀತಿ ಮೇಲೆ ರಾಜಕಾರಣ:*

ಸಿಂದಗಿಯಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಅಭ್ಯರ್ಥಿ ಕಣಕ್ಕಿಳಿಸಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ನಾವು ಜಾತಿ ಮೇಲೆ ರಾಜಕಾರಣ ಮಾಡುವುದಿಲ್ಲ, ನೀತಿ ಮೇಲೆ ಮಾಡುತ್ತೇವೆ. ಅಲ್ಪಸಂಖ್ಯಾತರು ಪ್ರಜ್ಞಾವಂತ ಮತದಾರರು. ಯಾರಿಗೆ ಮತ ಹಾಕಿದರೆ ಅನುಕೂಲ ಎಂಬುದು ಅವರಿಗೆ ಗೊತ್ತಿದೆ. ಕೇವಲ ಒಂದು ವರ್ಗ ಎಂಬುದಿಲ್ಲ. ಎದುರಾಳಿ ಪಕ್ಷಗಳು ತಮ್ಮದೇ ಆದ ತಂತ್ರಗಾರಿಕೆ ಮಾಡುತ್ತವೆ. ಅದಕ್ಕೆ ಮತದಾರ ತಕ್ಕ ಹಾಗೂ ಸೂಕ್ಷ್ಮ ಉತ್ತರ ನೀಡುತ್ತಾನೆ.

ಕಾಂಗ್ರೆಸ್ ನಲ್ಲಿ ಅಲ್ಪಸಂಖ್ಯಾತರಿಗೆ ಮನ್ನಣೆ ಇಲ್ಲ ಎಂಬ ಸಿಎಂ ಇಬ್ರಾಹಿಂ ಅವರ ಹೇಳಿಕೆ ಬಗ್ಗೆ ಪ್ರಸ್ತಾಪಿಸಿದಾಗ, ಅವರ ಮಾತುಗಳನ್ನು ನಾನು ನೋಡಿಲ್ಲ, ಕೇಳಿಲ್ಲ. ಮಾಹಿತಿ ಪಡೆದು ನಂತರ ಪ್ರತಿಕ್ರಿಯೆ ನೀಡುತ್ತೇನೆ.

*ಮನಗೂಳಿ ಅವರು ಭೇಟಿಯಾಗಿದ್ದಕ್ಕೆ ಅವರ ಪುತ್ರನೇ ಸಾಕ್ಷಿ:*

ಮನಗೂಳಿ ಅವರು ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ್ದು ಸುಳ್ಳು ಎಂಬ ಕುಮಾರಸ್ವಾಮಿ ಅವರ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಮನಗೂಳಿ ಅವರು ಇಂದು ನಮ್ಮ ಜತೆ ಇಲ್ಲ. ಅವರು ಬಂದು ನಮ್ಮ ಮಗನನ್ನು ನಿಮ್ಮ ಮಡಿಲಿಗೆ ಹಾಕುತ್ತಿದ್ದೇನೆ ಎಂದು ಹೇಳಿದ್ದು ನಿಜ. ಅದಕ್ಕೆ ಅವರ ಪುತ್ರ ಅಶೋಕ್ ಮನಗುಳಿ ಅವರೇ ಸಾಕ್ಷಿ. 15 ದಿನ ಮೊದಲು ಭೇಟಿ ಮಾಡಿದ್ದರು ಎಂದರೆ ಮೀಟರ್ ಹಾಕಿ, ಲೆಕ್ಕ ಮಾಡಿ ಹೇಳಲು ಆಗುತ್ತಾ? ಅವರು ಬಂದಿದ್ದು ನಿಜ. ಮಗನ ಬಗ್ಗೆ ಹೇಳಿದ್ದೂ ನಿಜ. ಬೇಕಿದ್ದರೆ ಅಶೋಕ್ ಮನಗೂಳಿ ಅವರನ್ನೇ ಕೇಳಿ’ ಎಂದರು.

ಕೈ ಬಾಯಿ ಶುದ್ಧವಾಗಿರುವ ಶ್ರೀನಿವಾಸ್ ಮಾನೆಯಂತಹ ಶಾಸಕರು ಕ್ಷೇತ್ರಕ್ಕೆ ಬೇಕೋ? ಭ್ರಷ್ಟ ಶಿವರಾಜ್ ಸಜ್ಜನರ್ ಬೇಕೋ?:ಸಿದ್ದರಾಮಯ್ಯ

ಹಾವೇರಿ: ಉದಾಸಿ ಮತ್ತು ಶಿವರಾಜ್ ಸಜ್ಜನರ್ ಇಬ್ಬರೂ ಸೇರಿ ಹಾವೇರಿಯ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ನುಂಗಿ ನೀರುಕುಡಿದರು. ಖಾಲಿ ಸಕ್ಕರೆ ಚೀಲಗಳನ್ನು ಬಿಡದೆ ಮಾರಾಟ ಮಾಡಿದ್ದಾರೆ. ಈಗ ಕಾರ್ಖಾನೆ ಖಾಸಗಿಯವರ ಪಾಲಾಗಿದೆ. ಇಂಥವರು ಈಗ ಬಿಜೆಪಿ ಅಭ್ಯರ್ಥಿಯಾಗಿ ನಿಮ್ಮ ಬಳಿ ಮತ ಕೇಳುತ್ತಾರೆ, ಮತ ನೀಡುತ್ತೀರೋ, ಬಿಡುತ್ತೀರೋ ಕ್ಷೇತ್ರದ ಜನರೇ ಯೋಚನೆ ಮಾಡಬೇಕು ಎಂದು ವಿರೋಧಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸಂಬಂಧ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀನಿವಾಸ್ ಮಾನೆ ಅವರ ಪರ ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮಲಗುಂದದಲ್ಲಿ ಪ್ರಚಾರ ಭಾಷಣ ಮಾಡುತ್ತಾ ಕೈ ಬಾಯಿ ಶುದ್ಧವಾಗಿರುವ ಶ್ರೀನಿವಾಸ್ ಮಾನೆಯಂತಹ ಶಾಸಕರು ಕ್ಷೇತ್ರಕ್ಕೆ ಬೇಕೋ? ಭ್ರಷ್ಟ ಶಿವರಾಜ್ ಸಜ್ಜನರ್ ಬೇಕೋ? ತೀರ್ಮಾನಿಸಿ ಎಂದ್ರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜನ ಯಾವೊಂದು ಪಕ್ಷಕ್ಕೂ ಸ್ಪಷ್ಟ ಬಹುಮತ ನೀಡಿರಲಿಲ್ಲ, ನಾವು ಹೆಚ್ಚು ಸ್ಥಾನ ಗೆದ್ದಿದ್ದರೂ ಕೋಮುವಾದಿಗಳ ಕೈಗೆ ಅಧಿಕಾರ ಹೋಗಬಾರದು ಎಂದು ಜೆಡಿಎಸ್ ಗೆ ಬೆಂಬಲ ನೀಡಿದೆವು. ಯಡಿಯೂರಪ್ಪ ಆಪರೇಷನ್ ಕಮಲ ಮಾಡಿ ಕಾಂಗ್ರೆಸ್- ಜೆಡಿಎಸ್ ನ ಹದಿನೇಳು ಶಾಸಕರನ್ನು ಖರೀದಿ ಮಾಡಿ, ಸರ್ಕಾರ ಮಾಡಿದ್ರೂ ಹೆಚ್ಚು ದಿನ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿ ಇರಲಿಲ್ಲ. ಈಗ ಬಸವರಾಜ ಬೊಮ್ಮಾಯಿಯವರು ಕೈಕಾಲು ಹಿಡಿದು ಚುನಾವಣಾ ಪ್ರಚಾರಕ್ಕೆ ಬರುವಂತೆ ಗೋಗರೆದಿದ್ದಾರೆ. ಹಾಗಾಗಿ ಈ ಕಡೆ ಬರಬಹುದು ಎಂದ್ರು.

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಾವು ನೀಡುತ್ತಿದ್ದ ಅನ್ನಭಾಗ್ಯದ ಅಕ್ಕಿ ಪ್ರಮಾಣವನ್ನು ಕಡಿತ ಮಾಡಿದರು. ಬಡವರ ಹೊಟ್ಟೆ ಮೇಲೆ ಹೊಡೆಯುವಂತಾ ನೀಚ ಬುದ್ದಿ ಯಾಕೆ ಮಾಡಬೇಕು? ಶಾಲೆ ಮತ್ತು ಅಂಗನವಾಡಿ ಮಕ್ಕಳಿಗೆ ಹಾಲು ಕೊಡ್ತಿದ್ವಿ, ಈಗ ಅದು ಇದೆಯಾ? ಸಾಲಮನ್ನಾ, ಇಂದಿರಾ ಕ್ಯಾಂಟೀನ್, ಭಾಗ್ಯಜ್ಯೋತಿ, ಉಚಿತ ಮನೆಗಳು, ಶೂಭಾಗ್ಯ, ಶಾದಿಭಾಗ್ಯ, ಕೃಷಿಭಾಗ್ಯ ಇವುಗಳಲ್ಲಿ ಯಾವ ಯೋಜನೆ ಈಗಿದೆ? ಎಲ್ಲವನ್ನೂ ನಿಲ್ಲಿಸಿದ್ದಾರೆ ಎಂದ್ರು.

ನಾನು ಮುಖ್ಯಮಂತ್ರಿ ಆಗಿದ್ದಾಗ ಹದಿನೈದು ಲಕ್ಷ ಮನೆ ನೀಡಿದ್ದೆ. ಹಾವೇರಿಯ ಬಡ ಜನರಿಗೆ ಬಿಜೆಪಿ ಸರ್ಕಾರ ಒಂದೇ ಒಂದು ಮನೆಯನ್ನು ಕಟ್ಟಿಸಿ ಕೊಟ್ಟಿದೆಯಾ? ಕುರಿ, ಹಸು, ಎತ್ತುಗಳು ಸತ್ತಾಗ ಪರಿಹಾರ ನೀಡುವ ಅನುಗ್ರಹ ಯೋಜನೆ ಈಗಿಲ್ಲ, ಇದರಿಂದ ಹಿಂದುಳಿದ ವರ್ಗಗಳ ಜನ ಎಷ್ಟು ನಷ್ಟ ಅನುಭವಿಸಿದ್ದಾರೆಂದು ಸರ್ಕಾರಕ್ಕೆ ಗೊತ್ತೇ? ಇಷ್ಟೆಲ್ಲಾ ಮಾಡಿದ್ರೂ ಬಿಜೆಪಿಗೆ ಮತ ನೀಡಬೇಕಾ? ಇದೂ ಸಾಕಾಗಿಲ್ಲ ಅಂತ ಕೊಳವೆ ಬಾವಿಗೆ ಮೀಟರ್ ಹಾಕಿ ರೈತರ ಬದುಕು ಕಸಿಯಲು ಹೊರಟಿದ್ದಾರೆ ಎಂದು ಟೀಕಿಸಿದ್ರು.

ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ಹಸಿವಿನಿಂದ ನರಳುತ್ತಿರುವ ದೇಶಗಳ ಪಟ್ಟಿಯಲ್ಲಿ ಭಾರತ 101 ಸ್ಥಾನಕ್ಕೆ ಕುಸಿದಿದೆ. ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾ ನಮಗಿಂತ ಉತ್ತಮ ಸ್ಥಾನದಲ್ಲಿ ಇದ್ದಾವೆ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಹಸಿವಿನ ಸೂಚ್ಯಂಕದಲ್ಲಿ ಭಾರತ 55ನೇ ಸ್ಥಾನದಲ್ಲಿ ಇತ್ತು. ಇದೇನಾ ಮೋದಿಯ ಅಚ್ಚೇದಿನ್? ರಸಗೊಬ್ಬರ, ಸಿಮೆಂಟ್, ಕಬ್ಬಿಣ, ಸಿಲಿಂಡರ್, ಪೆಟ್ರೋಲ್, ಡೀಸೆಲ್, ಆಸ್ಪತ್ರೆ ಬಿಲ್, ಅಡುಗೆ ಎಣ್ಣೆ ಬೆಲೆ ಏನಾಗಿದೆ? ಬಡವರು ಕೊಳ್ಳಲು ಸಾಧ್ಯವೇ? ಈ ಉಪ ಚುನಾವಣೆಯಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ, ಇದು ನಿಜವೇ ಆದರೂ ಇಷ್ಟೆಲ್ಲಾ ಅನ್ಯಾಯ ಮಾಡಿರುವ ಬಿಜೆಪಿಗೆ ಬುದ್ದಿ ಕಲಿಸಬೇಕಲ್ಲವೇ? ಅದಕ್ಕಾಗಿಯಾದರೂ ನಮ್ಮ ಅಭ್ಯರ್ಥಿ ಶ್ರೀನಿವಾಸ್ ಮಾನೆ ಅವರಿಗೆ ಮತ ನೀಡಿ ಗೆಲ್ಲಿಸಿ ಎಂದು ಕೈಮುಗಿದು ಮನವಿ ಮಾಡಿದ್ರು.

ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ 46 ರೂಪಾಯಿ ಇದ್ದ ಡೀಸೆಲ್ ಬೆಲೆ ಇಂದು 100 ರೂಪಾಯಿ ಆಗಿದೆ, ಪೆಟ್ರೋಲ್ ಬೆಲೆ 72 ರೂಪಾಯಿ ಇಂದ 110 ರೂಪಾಯಿ ಆಗಿದೆ, ಅಡುಗೆ ಎಣ್ಣೆ 80 ರೂಪಾಯಿ ಇತ್ತು, 200 ರೂಪಾಯಿ ಆಗಿದೆ. ಇವ್ರೆಲ್ಲಾ ಇನ್ನೂ ಅಧಿಕಾರದಲ್ಲಿ ಇರಬೇಕಾ? ನಾವು ಅಧಿಕಾರಕ್ಕೆ ಬಂದರೆ ಉಚಿತವಾಗಿ ಹತ್ತು ಕೆ.ಜಿ ಅಕ್ಕಿ ಕೊಡ್ತೀವಿ. ಅಗತ್ಯ ವಸ್ತುಗಳ ಬೆಲೆ ಕಡಿಮೆ ಮಾಡ್ತೀವಿ. ಹಾಗಾಗಿ ಕಾಂಗ್ರೆಸ್ ಗೆ ಮತ ನೀಡಬೇಕು.ಗೌರಾಪುರ ಗುಡ್ಡದ 21 ಎಕರೆಯನ್ನು ಸರ್ಕಾರ ಅಗ್ಗದ ಬೆಲೆಗೆ ಶಿವರಾಜ್ ಸಜ್ಜನರ್ ಗೆ ಕೊಟ್ಟಿದೆ. ಗುಡ್ಡ ನುಂಗಲು ಹೊರಟಿರುವವರು ಸಜ್ಜನರೋ? ದುರ್ಜನರೋ? ಇಂಥವರಿಗೆ ಮತ ನೀಡುತ್ತೀರಾ ಎಂದು ಇನ್ನೊಮ್ಮೆ ಯೋಚಿಸಿ ಎಂದ್ರು.