ವಿದ್ಯುತ್ ಉತ್ಪಾದನೆ ಸ್ವಾವಲಂಬನೆ: ಅಧಿಕಾರಿಗಳೊಂದಿಗೆ ಸಿಎಂ ಚರ್ಚೆ

0
137

ಬೆಂಗಳೂರು: ಸೌರ ವಿದ್ಯುತ್ ಉತ್ಪಾದನೆಯಲ್ಲಿ ರಾಜ್ಯ ಈಗಾಗಲೇ 2022 ರ ಉತ್ಪಾದನಾ ಸಾಮರ್ಥ್ಯದ ಗುರಿಯನ್ನು ತಲುಪಿದೆ. ಇತರ ನವೀಕರಿಸಬಹುದಾದ ಇಂಧನಗಳ ಉತ್ಪಾದನೆಯಲ್ಲೂ ಶೀಘ್ರವೇ ನಿಗದಿತ ಗುರಿ ಸಾಧಿಸಲಾಗುವುದು ಎಂದು ಅಧಿಕಾರಿಗಳು ಸಿಎಂಗೆ ಮಾಹಿತಿ ನೀಡಿದ್ದಾರೆ.

ರಾಜ್ಯದ ವಿದ್ಯುತ್ ವಲಯದ ಸ್ಥಿತಿ-ಗತಿಗಳ ಕುರಿತು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಅಧಿಕಾರಿಗಳ ಸಭೆ ನಡೆಸಿ ಪರಿಶೀಲಿಸಿದರು. ಸಭೆಯಲ್ಲಿ ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಸಿಎಂ ಎಸಿಎಸ್ ರಮಣರೆಡ್ಡಿ, ಕಾರ್ಯದರ್ಶಿ ಸೆಲ್ವಕುಮಾರ್, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐಎಸ್ ಎನ್ ಪ್ರಸಾದ್ ಸಭೆಯಲ್ಲಿ ಭಾಗವಹಿಸಿದ್ದರು.

ಯಲಹಂಕದಲ್ಲಿ ಅನಿಲ ಆಧಾರಿತ 370 ಮೆಗಾವ್ಯಾಟ್ ವಿದ್ಯುತ್ ಘಟಕ ಸ್ಥಾಪನೆ, ಶಿವನ ಸಮುದ್ರದಲ್ಲಿ ರನ್ ಆಫ್ ದಿ ರಿವರ್ ಯೋಜನೆ ಜಾರಿ, ಸೇರಿ ಒಟ್ಟು 10 ಕ್ಕೂ ಹೆಚ್ಚು ವಿದ್ಯುತ್ ಉತ್ಪಾದನಾ ಘಟಕಗಳ ಸ್ಥಾಪನೆ ಹಾಗೂ ಕಾರ್ಯ ನಿರ್ವಹಣೆ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಕೇಂದ್ರ ಸರ್ಕಾರ ರೂಪಿಸಿರುವ ಇಂಧನ ನೀತಿಗೆ ಅನುಗುಣವಾಗಿ ರಾಜ್ಯದ ವಿದ್ಯುತ್ ಯೋಜನೆಗಳನ್ನು ಪರಿಷ್ಕೃತ ಗೊಳಿಸಿ ಜಾರಿಗೊಲಿಸುವ ಕುರಿತು ಚರ್ಚಿಸಲಾಯಿತು.

- Call for authors -

LEAVE A REPLY

Please enter your comment!
Please enter your name here